Breaking News

ಬೆಂಗಳೂರು

17 ಮಂದಿ ಡಿವೈಎಸ್ಪಿ ವರ್ಗಾವಣೆ ಗೊಳಿಸುವಂತೆ ಗೃಹ ಇಲಾಖೆ ಆದೇಶ

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮುಂದುವರಿದಿದ್ದು,  17 ಮಂದಿ ಡಿವೈಎಸ್ಪಿ (ಸಿವಿಎಲ್‌) ಗಳನ್ನು ವರ್ಗಾವಣೆ ಗೊಳಿಸಿ ಗೃಹ ಇಲಾಖೆ ಆದೇಶಿಸಿದೆ. ವಿಶೇಷವೆಂದರೆ 17 ಮಂದಿ ಪೈಕಿ ಇಬ್ಬರನ್ನು ಹೊರತುಪಡಿಸಿ 15 ಮಂದಿಯನ್ನು ಕರ್ನಾಟಕ ಲೋಕಾ ಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಎ.ಆರ್‌.ಭರತ್‌ ರೆಡ್ಡಿ, ಬಿ. ಉಮಾಶಂಕರ್‌, ಮಂಜುನಾಥ ಕೆ.ಗಂಗಲ್‌, ಎಂ.ಎಸ್‌.ಸುರೇಶ್‌ ರೆಡ್ಡಿ, ವಿಜಯ್‌ ಬಿರಾದಾರ್‌, ಸಿ.ಎಸ್‌.ಮಲ್ಲಿಕಾರ್ಜುನ, ಹನುಮಂತರಾಯ ಶ್ರೀಮಂತರಾಯ, ಕೆ.ಟಿ.ಮಾಥು ಥಾಮಸ್‌, ಉಮೇಶ್‌ ಈಶ್ವರ ನಾಯಕ್‌, ಕೆ.ಸಿ.ಪ್ರಕಾಶ್‌, ಎಚ್‌.ಟಿ. …

Read More »

ಪುಡಿ ರೌಡಿಗಳ ಅಟ್ಟಹಾಸ : ವ್ಯಾಪಾರಿಗಳ ಮೇಲೆ ಹಲ್ಲೆಗೆ ಯತ್ನ

ಬೆಂಗಳೂರು: ಪುಡಿ ರೌಡಿಗಳ ಅಟ್ಟಹಾಸ ಮುಂದುವರೆದಿದೆ. ಹಫ್ತಾ ನೀಡದ ಕಾರಣ ವ್ಯಾಪಾರಿಯ ಮೇಲೆ ಲಾಂಗ್ ಬೀಸಿದ್ದಾರೆ. ಮೀನು ವ್ಯಾಪಾರಿ ಮೇಲೆ ಲಾಂಗ್ ಬೀಸಿ ಹಲ್ಲೆಗೆ ಯತ್ನಿಸಲಾಗಿದೆ. ಬಾಣಸವಾಡಿಯ ಜೈಭಾರತ್ ನಗರದಲ್ಲಿ ಘಟನೆ ನಡೆದಿದೆ. ಸುರೇಶ್ ಎಂಬಾತ ಹಫ್ತಾ ಕೇಳಿದ್ದು, ಕೊಡದ ಕಾರಣ ಲಾಂಗ್ ಬೀಸಿ ಆತನನ್ನು ಬೆದರಿಸಿ ಪುಡಿರೌಡಿಗಳು ಪುಂಡಾಟಿಕೆ ಮೆರೆದಿದ್ದಾರೆ. ನಿನ್ನೆ ರಾತ್ರಿ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಯ ದೃಶ್ಯಗಳು ಸಿಸಿ ಟಿವಿ ಕ್ಯಾಮರಾದಲ್ಲಿ …

Read More »

ಡಿ. 21ರಿಂದ ಎರಡು ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರ : ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 21ರಿಂದ ಎರಡು ದಿನಗಳ ಕಾಲ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರದಲ್ಲಿ ಮಳೆಯಾಗಲಿದೆ. ಬಾಗಲಕೋಟೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, …

Read More »

ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಪ್ರಯೋಜನಗಳನ್ನು ಪಡೆದುಕೊಳ್ಳಿ : ಜಿಲ್ಲಾಧಿಕಾರಿ ಆರ್.ಲತಾ

ಬೆಂಗಳೂರು : ಜಿಲ್ಲೆಯ ಪ್ರತಿ ಗ್ರಾಮಗಳನ್ನು ಸಂಪೂರ್ಣ ಸ್ವಾವಲಂಬಿ ಮತ್ತು ಮಾದರಿ ಗ್ರಾಮಗಳನ್ನಾಗಿಸುವ ವಿನೂತನ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ” ಕಾರ್ಯಕ್ರಮದಲ್ಲಿ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಕ್ತವಾಗಿ ಸಲ್ಲಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಮೂಲಕ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು. ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ, ಕೋರಮಂಗಲ ಗ್ರಾಮದಲ್ಲಿ ಇಂದು ಹಮ್ಮಿಕೊಳ್ಳಲಾದ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ” ಎಂಬ ಜಿಲ್ಲಾ …

Read More »

ಬೆಂಗಳೂರು ನಗರಕ್ಕೆ ಹೊಸ ಜಿಲ್ಲಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಕೆ

ಬೆಂಗಳೂರು ನಗರಕ್ಕೆ ಹೊಸ ಜಿಲ್ಲಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಕೆ ಬೆಂಗಳೂರು :  ಕರ್ನಾಟಕ ಸರ್ಕಾರ ಬೆಂಗಳೂರು ನಗರಕ್ಕೆ ಹೊಸ ಜಿಲ್ಲಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿದೆ.ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಕೆ. ಶ್ರೀನಿವಾಸ್ ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದರು. ಕರ್ನಾಟಕ ಸರ್ಕಾರ ಶನಿವಾರ ರಾತ್ರಿ ಹೊಸ ಜಿಲ್ಲಾಧಿಕಾರಿ ನೇಮಕದ ಕುರಿತು ಆದೇಶ ಹೊರಡಿಸಿದೆ. ಹಿಂದುಳಿದ ವರ್ಗಗಳ ಆಯುಕ್ತರಾಗಿದ್ದ ಕೆ. ಎ. ದಯಾನಂದ (ಐಎಎಸ್ 2012ನೇಬ …

Read More »

ಅಲೆಮಾರಿ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ, ಪಂಡಗ ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ, ಪ್ರತ್ಯೇಕ ಪರಿಶಿಷ್ಟ ಜಾತಿ, ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶಿಸಿದೆ. ಈ ಮೂಲಕ ಎಸ್ಸಿ, ಎಸ್ಟಿ ಸಮುದಾಯದ ಅಲೆಮಾರಿ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಪ್ರತಿ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಅದರಲ್ಲಿ ಸಮಾಜ ಕಲ್ಯಾಣ ಇಲಾಖೆ …

Read More »

ಬಿಜೆಪಿ ವಿರುದ್ಧ ಅವಹೇಳನಕಾರಿ ಮಾಡಿದ ಡಿಕೆಶಿ

ಬೆಂಗಳೂರು: ಮತದಾರರ ಮಾಹಿತಿಕಳವು, 40 ಪರ್ಸೆಂಟ್‌ ಕಮಿ ಷನ್‌, ನಿರಂತರ ಭ್ರಷ್ಟಾಚಾರ ಮತ್ತು ಹಗರಣಗಳನ್ನು ಮುಚ್ಚಿ ಹಾಕಲು ಬಿಜೆಪಿಯು ಮಂಗಳೂರು ಕುಕ್ಕರ್‌ಬ್ಲಾಸ್ಟ್‌ ಪ್ರಕರಣವನ್ನು ಬಳಸಿತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದು, ವಿವಾದಕ್ಕೀಡಾಗಿದೆ. ಡಿ.ಕೆ. ಶಿವಕುಮಾರ್‌ ಮೇಲೆ ಮುಗಿಬಿದ್ದ ಬಿಜೆಪಿ ನಾಯಕರು, ಅವರು ಜನತೆಯ ಕ್ಷಮೆ ಕೋರ ಬೇಕು. ಉಗ್ರರ ಪರ ಅನು ಕಂಪದ ಇಂಥ ಹೇಳಿಕೆ ಪೊಲೀಸರ ಮನ ಸ್ಥೈರ್ಯ ಕುಗ್ಗಿಸುವಂಥದ್ದು. ಈ ಮೂಲಕ ರಾಷ್ಟ್ರೀಯ ಭದ್ರ ತೆಗೆ …

Read More »

ತಂದೆ, ತಾಯಿಯನ್ನು ಹಾಸ್ಟೀಲ್ ಗೆ
ಗೊಗರೇದ ಕರೆದ ಮಗ  : ವಿದ್ಯಾರ್ಥಿ ದುರಂತ ಅಂತ್ಯ

ಬೆಂಗಳೂರು: ಬನ್ನೇರುಘಟ್ಟ ಸಮೀಪದ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬನ ಶವ ಕತ್ತು ಕೊಯ್ದುಕೊಂಡ‌ ಸ್ಥಿತಿಯಲ್ಲಿ ಹಾಸ್ಟೆಲ್​ನಲ್ಲಿ ಪತ್ತೆಯಾಗಿದ್ದು, ತಂದೆ-ತಾಯಿ ಬರಲಿಲ್ಲ ಎಂಬ ವಿಚಾರವೇ ಸಾವಿಗೆ ಕಾರಣವಾಯ್ತು ಎನ್ನಲಾಗಿದೆ. ಕೇರಳದ ಕೋಳಿಕೋಡ್ ಜಿಲ್ಲೆಯ ಪದಿನಿ ಜರಿಯಾ ಗ್ರಾಮದ ನಿಧಿನ್ (19) ಮೃತ ದುರ್ದೈವಿ. ಎಎಂಸಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ಕೋರ್ಸಿಗೆ ಡಿ.1ರಂದು ಅಡ್ಮಿಶನ್​ ಪಡೆದಿದ್ದ. ಈ ವೇಳೆ ಈತನ ತಂದೆ-ತಾಯಿ ಬಂದಿರಲಿಲ್ಲವಂತೆ. ಸಹೋದರನ ಜತೆ ಬಂದು ಕಾಲೇಜಿಗೆ ದಾಖಲಾಗಿದ್ದ. ದುಬೈನಲ್ಲಿ …

Read More »

ಡಿ. 19 ರಿಂದ 2 ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು: ಡಿಸೆಂಬರ್ 19ರಿಂದ 2 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಬೆಂಗಳೂರಿನ ಸುತ್ತಮುತ್ತಲಿನಲ್ಲಿ ಒಂದರಿಂದ ಎರಡು ಸೆಂ ಮೀ ಮಳೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೊಡ ಕವಿದ ವಾತಾವರಣ ಇರಲಿದ್ದು …

Read More »

ರಾಜ್ಯದ ಜನೆತೆಗೆ ಸಿಹಿ ಸುದ್ದಿ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಇವತ್ತು ಒಂದೇ ದಿನ 114 ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮ್ಮ ಕ್ಲಿನಿಕ್ ಗಳಿಗೆ ಚಾಲನೆ ನೀಡಲಿದ್ದಾರೆ. 12 ರೀತಿಯ ಆರೋಗ್ಯ ಸೇವೆಗಳು ‘ನಮ್ಮ ಕ್ಲಿನಿಕ್’ ನಲ್ಲಿ ಉಚಿತವಾಗಿ ದೊರೆಯಲಿವೆ.ದೇಶದ ಇತಿಹಾಸದಲ್ಲಿ ಅತಿ ಹೆಚ್ಚು ಸಂಖ್ಯೆಯ ಕ್ಲಿನಿಕ್ ಗಳನ್ನು ಒಟ್ಟಿಗೆ ಆರಂಭಿಸಿದ ಹೆಗ್ಗಳಿಕೆಗೆ ಕರ್ನಾಟಕ ಸರ್ಕಾರ ಪಾತ್ರವಾಗಲಿದೆ. ಹುಬ್ಬಳ್ಳಿಯ ರೇಣುಕಾ ನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ಲಿನಿಕ್ …

Read More »