Breaking News

ಬೆಂಗಳೂರು


ಮಾಂಡೌಸ್ ಚಂಡಮಾರುತ ಅಬ್ಬರ : ಶಾಲೆ, ಕಾಲೇಜು ರಜೆ

ಬೆಂಗಳೂರು : ರಾಜ್ಯದಲ್ಲಿ ಮಾಂಡೌಸ್ ಚಂಡಮಾರುತ ಅಬ್ಬರಿಸುತ್ತಿದ್ದು, ಇದರ ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ಬಗ್ಗೆ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾಡಳಿತ ಸೋಮವಾರವಾದ ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.ವ್ಯಾಪಕವಾಗಿ ಮಳೆ ಆಗುತ್ತಿರುವ ಕಾರಣ ವಿದ್ಯಾರ್ಥಿಗಳು ಬರುವುದು ಕಷ್ಟವಾಗಬಹುದು ಎಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರ …

Read More »

ಇಂದು ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ

ಬೆಂಗಳೂರು: ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಮಾಡೆಲ್ ಅವಿವಾ ಬಿದ್ದಪ್ಪಾ ಇಂದು ವಿವಾಹ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಖ್ಯಾತ ಫ್ಯಾಶನ್ ಡಿಸೈನರ್ ಪ್ರಕಾಶ್ ಬಿಡ್ಡಪ್ಪಾ ಪುತ್ರಿಯಾಗಿರುವ ಅವಿವಾ ಜೊತೆ ಅಭಿಷೇಕ್ ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದಕ್ಕೆ ಎಲ್ಲಾ ತಯಾರಿಗಳೂ ನಡೆದಿವೆ.ಕೇವಲ ಆಪ್ತರ ಬಳಗದವರಿಗೆ ಮಾತ್ರ ಸುಮಲತಾ ಅಂಬರೀಶ್ ಆಹ್ವಾನ ನೀಡಿದ್ದಾರೆ. ಇಂದು ವಿವಾಹ ದಿನಾಂಕವೂ ಘೋಷಣೆಯಾಗುವ ಸಾಧ‍್ಯತೆಯಿದೆ.

Read More »

ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗಲಿದ್ದು, 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. …

Read More »

ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ದರಾಮಯ್ಯ ಭರ್ಜರಿ ಸಿದ್ಧತೆ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೆ ಭರ್ಜರಿ ಸಿದ್ಧತೆ ಕೈಗೊಂಡಿದ್ದು, ರಾಜ್ಯದ 224 ಕ್ಷೇತ್ರಗಳಲ್ಲಿ ಬಸ್ ಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಯಶಸ್ಸಿನ ಬೆನ್ನಲ್ಲೇ ಸಿದ್ದರಾಮಯ್ಯ ಅವರು ರಥಯಾತ್ರೆಗೆ ಪ್ಲ್ಯಾನ್ ನಡೆಸಿದ್ದಾರೆ ಎನ್ನಲಾಗಿದ್ದು, ಇದಕ್ಕಾಗಿ ವಿಶೇಷ ವಾಹನವೂ ತಯಾರಾಗುತ್ತಿದೆ. ರಥಯಾತ್ರೆ ಮೂಲಕ ಸಿದ್ದರಾಮಯ್ಯ ಅವರು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಸಂಚಾರ ಮಾಡಿ ಈ …

Read More »

ಬೆಂಗಳೂರು ನಗರ ಜಿಲ್ಲಾಧಿಕಾರಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ

ಬೆಂಗಳೂರು: ಮತದಾರರ ದತ್ತಾಂಶ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲೇರಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ. ಮತದಾರರ ದತ್ತಾಂಶ ಕಳ್ಳತನ ಪ್ರಕರಣಕ್ಕೆ ಸಂಬಂಧ ಪೊಲೀಸರು ಸರ್ಕಾರೇತರ ಸಂಸ್ಥೆ ಚಿಲುಮೆಗೆ ಮಾಲೀಕರು ಸೇರಿದಂತೆ 13 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಗೆ ಮೊದಲು ಸಮನ್ಸ್ ನೀಡಲಾಗಿತ್ತು. ಅದೇ ನಿರೀಕ್ಷೆಯಲ್ಲಿದ್ದ ಬೆಂಗಳೂರು ನಗರದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ನಿರೀಕ್ಷಣಾ ಜಾಮೀನು ಕೋರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೆ. …

Read More »

ಕ್ರೀಡಾಪಟುಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಒಲಿಂಪಿಕ್ಸ್, ಪ್ಯಾರಾಲಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಸರ್ಕಾರ ಬಂಪರ್ ಕೊಡುಗೆ ನೀಡಿದೆ.ಒಲಂಪಿಕ್ಸ್ ಮತ್ತು ಪ್ಯಾರಾಲಂಪಿಕ್ಸ್ ನಲ್ಲಿ ಪದಕ ವಿಜೇತರಿಗೆ ಗ್ರೂಪ್ ಎ ವೃಂದದ ಸರ್ಕಾರಿ ಹುದ್ದೆ ನೀಡಲಾಗುವುದು. ಏಷ್ಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪದಕ …

Read More »

ಮತದಾರರ ಮಾಹಿತಿ ಕಳವು ಆರೋಪ  : ನಿರೀಕ್ಷಣಾ ಜಾಮೀನು ನಿರಾಕರಣೆ

ಬೆಂಗಳೂರು: ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು ಆರೋಪ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮತ್ತು ಸಂಸ್ಥೆಯ ಸಿಬ್ಬಂದಿಯಾದ ಜ್ಯೋತಿಲಕ್ಷ್ಮೀ ಮತ್ತು ಕೆಂಪೇಗೌಡ ಎಂಬುವರಿಗೆ ನಿರೀಕ್ಷಣಾ ಜಾಮೀನು ನೀಡಲು ನಗರದ 66ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ. ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ, ಸದ್ಯ ಸೇವೆಯಿಂದ ಅಮಾನತುಗೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮತ್ತು ಚಿಲುಮೆ ಸಂಸ್ಥೆಯ ಸಿಬ್ಬಂದಿಯಾದ ಜ್ಯೋತಿ ಲಕ್ಷ್ಮಿ,ಕೆಂಪೇಗೌಡ ಸಲ್ಲಿಸಿದ್ದ …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಡಿಸೆಂಬರ್ 12 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಚಂಡಮಾರುತದ ಪರಿಣಾಮ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮೈಸೂರು, ತುಮಕೂರಿನಲ್ಲಿ ಇಂದಿನಿಂದ ಐದು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆಯಿಂದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, …

Read More »

ಜ.8ರಂದು ಚಿತ್ರದುರ್ಗದಲ್ಲಿ ಬೃಹತ್‌ ‘ಐಕ್ಯತಾ ಸಮಾವೇಶ’

ಬೆಂಗಳೂರು: ದಲಿತರ ಬಗ್ಗೆ ತೋರಿಕೆಯ ಪ್ರೀತಿ ತೋರುವ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ಡ್ರಾಮಾಗಳಿಗೆ ಮರುಳಾಗಬೇಡಿ ಎಂದು ಕರೆ ನೀಡಲು ಮತ್ತು ನಿಮ್ಮ ಜತೆ ನಾವಿದ್ದೇವೆ ಎಂದು ಭರವಸೆ ನೀಡಲು ಜ.8ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟಜಾತಿ ಮತ್ತು ಪಂಗಡಗಳ ಬೃಹತ್‌ ‘ಐಕ್ಯತಾ ಸಮಾವೇಶ’ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ  ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ಮಾಜಿ ಸಚಿವರಾದ …

Read More »


ಅಪರಿಚಿತ ವ್ಯಕ್ತಿಯೋರ್ವನನ್ನು ಬರ್ಬರ ಕೊಲೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೆ.ಪಿ.ಅಗ್ರಹಾರದಲ್ಲಿ ನಡೆದಿದೆ. 30 ವರ್ಷದ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಕೆ.ಪಿ.ಅಗ್ರಹಾರದ ಹೇಮಂತ್ ಮೆಡಿಕಲ್ ಶಾಪ್ ಮುಂಭಾಗ ಈ ಘಟನೆ ನಡೆದಿದೆ.ತಡರಾತ್ರಿ ದುಷ್ಕರ್ಮಿಗಳು ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಕೃತ್ಯದಲ್ಲಿ ಮೂವರು ಪುರುಷರು, ಮೂವರು ಮಹಿಳೆಯರು ಭಾಗಿಯಾಗಿದ್ದು, ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ..

Read More »