Breaking News

ಬೆಂಗಳೂರು

ಪಿಎಸ್ ಐ ಹಗರಣ : ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸರಕಾರಕ್ಕೆ ಕಲಬುರಗಿ ಹೈಕೋರ್ಟ್  ನೋಟಿಸ್ ಜಾರಿ

ಬೆಂಗಳೂರು: ಪಿಎಸ್ಸೈ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಆರೋಪಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸರಕಾರಕ್ಕೆ ಕಲಬುರಗಿ ಹೈಕೋರ್ಟ್  ನೋಟಿಸ್ ಜಾರಿ ಮಾಡಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಿಎಸ್ಸೈ ಪರೀಕ್ಷೆ ವೇಳೆ ಕೆಲ ಅಭ್ಯರ್ಥಿಗಳ ಓಎಂಆರ್ ಶೀಟ್ ತಿದ್ದಿಸಿದ್ದಲ್ಲದೇ, ಇನ್ನು ಕೆಲ ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ನೀಡಿ ಅಕ್ರಮ …

Read More »

ಹವಾಮಾನ ಇಲಾಖೆಯಿಂದ ಮಳೆ ಕುರಿತು ಮಹತ್ವದ ಸೂಚನೆ

ಬೆಂಗಳೂರು : ನಗರದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಕೊಂಚ ಕಡಿಮೆಯಾಗಿತ್ತು.ಆದರೆ, ನಾಳೆಯಿಂದ (ಡಿ. 5) ಮತ್ತೆ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಡಿಸೆಂಬರ್ 5ರಿಂದ ಕರ್ನಾಟಕದ  ಬಹುತೇಕ ಜಿಲ್ಲೆಗಳಲ್ಲಿ ಮತ್ತೊಂದು ಸುತ್ತಿನ ಮಳೆ ಆರಂಭವಾಗಲಿದೆ ಎಂಬ ಮುನ್ಸೂಚನೆಯಿದೆ. ಇಂದು ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಡಿ. 5ರಿಂದ ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ …

Read More »


ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರ ಸ್ಥಿತಿ ಗಂಭೀರ

ಬೆಂಗಳೂರು : ನಗರದ ಬೆಂಗಳೂರಿನಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ದುರಂತವೊಂದು ಸಂಭವಿಸಿದ್ದು, ಇಬ್ಬರು ಬಾಲಕರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ನಂದಿನಿಲೇಔಟ್ ನಲ್ಲಿ ಪಾರಿವಾಳ ಹಿಡಿಯೋ ಭರದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ಸಂಜೆ 6.30 ರ ಸುಮಾರಿಗೆ ಅವಘಡ ಸಂಭವಿಸಿದ್ದು, ಚಂದ್ರು (10), ಸುಪ್ರೀತ್ (12) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಚಂದ್ರು ಹಾಗೂ ಸುಪ್ರೀತ್ ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಸುತ್ತೂಲೆ

ಬೆಂಗಳೂರು: ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಅಂಡಮಾನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಅದು ಕ್ರಮೇಣ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮಳೆ ಸುರಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಪೂರ್ವದ ಅಲೆಯಿಂದಾಗಿ ಮುಂದಿನ 4-5 ದಿನಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಪತ್ರಿಕಾ ಪ್ರಕಟಣೆ …

Read More »


ಕರ್ತವ್ಯ ನಿರತ ಪೊಲೀಸ್​ ಪೇದೆ ಸಾವು

ಕೋಲಾರ: ಕರ್ತವ್ಯ ನಿರತ ಪೊಲೀಸ್​ ಪೇದೆ ಹೃದಯಾಘಾತದಿಂದ ಠಾಣೆಯಲ್ಲೇ ಮೃತಪಟ್ಟಿರುವ ಘಟನೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಸುರೇಶ್ (48) ಮೃತಪಟ್ಟ ಮುಖ್ಯಪೇದೆ. ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಸುರೇಶ್ ಅವರಿಗೆ ಬೆಳಗ್ಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ, ಅಷ್ಟರಲ್ಲಾಗಲೇ ಸುರೇಶ್​ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.ಘಟನಾ ಸ್ಥಳಕ್ಕೆ ಕೆಜಿಎಫ್ ಎಸ್ಪಿ ಧರಣಿದೇವಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Read More »


ಹಸೆಮಣೆ ಏರಲು ಸಜ್ಜಾದ ಅಭಿಷೇಕ್ ಅಂಬರೀಷ್

ಬೆಂಗಳೂರು: ದಿವಂಗತ ನಟ ರೆಬಲ್ ಸ್ಟಾರ್ ಅಂಬರೀಷ್ ಮತ್ತು ಸಂಸದೆ ಸುಮಲತಾ ಪುತ್ರ ಅಭಿಷೇಕ್ ಅಂಬರೀಷ್ ಅವರು ಶೀಘ್ರದಲ್ಲೇ ಸಪ್ತಪದಿ ತುಳಿಯಲಿದ್ದಾರೆ. ಡಿಸೆಂಬರ್ 2ನೇ ವಾರದಲ್ಲಿ ಅಭಿಷೇಕ್ ಅವರ ನಿಶ್ಚಿತಾರ್ಥ ಖ್ಯಾತ ಮಾಡೆಲ್ ಒಬ್ಬರ ಜೊತೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅಭಿಷೇಕ್ ಅಂಬರೀಷ್ ಅವರ ಮದುವೆ ಅದಾಗಲೇ ನಿಶ್ಚಯವಾಗಿದ್ದು, ನಿಶ್ಚಿತಾರ್ಥ ಸಮಾರಂಭ ಡಿಸೆಂಬರ್ ಎರಡನೇ ವಾರದಲ್ಲಿ ಪ್ಯಾಲೇಸ್ ಗ್ರೌಂಡ್ ನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಫ್ಯಾಷನ್ ಲೋಕದ …

Read More »

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ನಿಧನ

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್(64) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಕ್ರಮ್ ಕಿರ್ಲೋಸ್ಕರ್ ಭಾರತದ ವಾಹನೋದ್ಯಮದ ದಿಗ್ಗಜರಲ್ಲಿ ಒಬ್ಬರು. ವಿಕ್ರಮ್ ಕಿರ್ಲೋಸ್ಕರ್ ಅವರು ತೀವ್ರ ಹೃದಯಾಘಾತದಿಂದ ಬಳಲುತ್ತಿದ್ದರು. ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ ಗಳಲ್ಲಿ ನಿಧನದ ಸುದ್ದಿಯನ್ನು ದೃಢಪಡಿಸಿದೆ. ನವೆಂಬರ್ 29, 2022 ರಂದು ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ಶ್ರೀ ವಿಕ್ರಮ್ ಎಸ್.ಕಿರ್ಲೋಸ್ಕರ್ ಅವರ ಅಕಾಲಿಕ ನಿಧನವನ್ನು ತಿಳಿಸಲು ನಾವು ತುಂಬಾ …

Read More »


ಚೆನ್ನೈನ ಯುಎಸ್ ಕಾನ್ಸುಲೇಟ್‌ನ ಅಧಿಕಾರಿ ಮಾಜಿ ಪ್ರಧಾನಿ ಭೇಟಿ

ಬೆಂಗಳೂರು: ಚೆನ್ನೈನ ಯುಎಸ್ ಕಾನ್ಸುಲೇಟ್‌ನ ರಾಜಕೀಯ ಮತ್ತು ಆರ್ಥಿಕ ಮುಖ್ಯಸ್ಥರಾದ ವಿರ್ಸಾ ಪರ್ಕಿನ್ಸ್ ಅವರು ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ನಿನ್ನೆ ಸಂಜೆ ಆಗಮಿಸಿ, ಗೌಡರ ಆರೋಗ್ಯ ವಿಚಾರಿಸಿದ ನಂತರ ಕೆಲ ಸಮಯ ಚರ್ಚಿಸಿದರು. ವಿರ್ಸಾ ಪರ್ಕಿನ್ಸ್ ಅವರನ್ನು ಭೇಟಿಯಾಗಿದ್ದು ಸಂತೋಷವಾಯಿತು ಎಂದು ಹೇಳಿದ ಗೌಡರು, ತಮ್ಮ ಆತ್ಮಚರಿತ್ರೆ ಪುಸ್ತಕವನ್ನು ವಿರ್ಸಾ ಪರ್ಕಿನ್ಸ್ ಅವರಿಗೆ ನೀಡಿದರು.

Read More »

ಮೋಜು ಮಸ್ತಿಗಾಗಿ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ನಗರದ ಮೋಜು ಮಸ್ತಿಗಾಗಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಂಜಿತ್ ಹಾಗೂ ಅಜಿತ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು, ವಿದ್ಯಾರಣ್ಯಪುರ, ಕೊಡಿಗೇಹಳ್ಳಿ, ಯಶವಂತಪುರ, ನಂದಿನಿ ಲೇಔಟ್, ಸಂಜಯನಗರ ವ್ಯಾಪ್ತಿ ಸೇರಿದಂತೆ ಹಲವೆಡೆ ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 2.80 ಲಕ್ಷ ‌ಮೌಲ್ಯದ ಐದು ಬೈಕ್, 1.40 ಲಕ್ಷ ‌ಮೌಲ್ಯದ …

Read More »

ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ 2 ದಿನಗಳಿಂದ ತುಂತುರು ಮಳೆಯಾಗುತ್ತಿದ್ದು, ನವೆಂಬರ್ 28ರವರೆಗೆ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆ ಹೆಚ್ಚಾಗಲಿದೆ. ಇಂದು (ಭಾನುವಾರ) ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಗುರದಿಂದ …

Read More »