Breaking News

ಬೆಂಗಳೂರು

ಇಂದಿನಿಂದ ಮತ್ತೆ ಪಂಚರತ್ನ ಯಾತ್ರೆ ಪ್ರಾರಂಭ

ಬೆಂಗಳೂರು: ಕೆಲ ದಿನಗಳ ಹಿಂದೆ ಆರಂಭಗೊಳ್ಳಬೇಕಿದ್ದಂತ ಜೆಡಿಎಸ್ ಪಂಚರತ್ನ ಯಾತ್ರೆಯು ಮಳೆಯಿಂದಾದ ಅಡ್ಡಿಯಿಂದಾಗಿ ಸ್ಥಗಿತಗೊಂಡಿತ್ತು. ಈಗ ಇಂದಿನಿಂದ ಮತ್ತೆ ಜೆಡಿಎಸ್ ಪಕ್ಷದ  ಪಂಚರತ್ನ ಯಾತ್ರೆ ಮುಂದುವರೆಯಲಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ  ಮಾಹಿತಿ ಹಂಚಿಕೊಂಡಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ನವೆಂಬರ್ 18 ರ ಶುಕ್ರವಾರದಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಿಂದ ಪಂಚರತ್ನ ರಥಯಾತ್ರೆ ಆರಂಭವಾಗಲಿದೆ. ಮುಳಬಾಗಿಲು ತಾಲೂಕಿನ ಊರುಕುಂಟೆ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದೇನೆ. ಬನ್ನಿ, ರಾಜ್ಯದ ಅಭಿವೃದ್ಧಿಗೆ …

Read More »

ಸಿದ್ದರಾಮಯ್ಯ ಕಾರ್ಯಕ್ರಮ : ಬ್ರಾಹ್ಮಣ ಕುರಿತು ಅವಹೇಳನಕಾರಿ ರಾಜ್ಯದಲ್ಲಿ ಪ್ರತಿಭಟನೆ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ‘ ಸಿದ್ದರಾಮಯ್ಯ 75’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಬ್ರಾಹ್ಮಣರನ್ನು ಗುರಿಯಾಗಿಸಿಕೊಂಡು ಅವಹೇಳನ ಮಾಡಲಾಗಿದೆ ಎಂದು ಬ್ರಾಹ್ಮಣ ಸಮುದಾಯದವರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯರ ಕಾರ್ಯಕ್ರಮದಲ್ಲಿ ಬ್ರಾಹ್ಮಣರ ಕುರಿತು ಅವಹೇಳನ ಹೇಳಿಕೆ ನೀಡಲಾಗಿದೆ., ಬ್ರಾಹ್ಮಣ ಸಮುದಾಯದವರನ್ನೇ ಗುರಿಯಾಗಿಸಿಕೊಂಡು ಮಾತನಾಡಲಾಗಿದೆ ಎಂದು ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನ.17 ರಂದು ( ನಾಳೆ) ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಸಿದ್ದರಾಮಯ್ಯ-75 ಪುಸ್ತಕ …

Read More »

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳಲ್ಲಿ ತಪ್ಪು ಮೌಲ್ಯಮಾಪನ : 9 ಅಧ್ಯಾಪಕರನ್ನು ಅಮಾನತು

ಬೆಂಗಳೂರು : 2022ರ ಏಪ್ರಿಲ್/ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳಲ್ಲಿ ತಪ್ಪು ಮೌಲ್ಯಮಾಪನಕ್ಕಾಗಿ ಸರ್ಕಾರಿ ಪಿಯು ಕಾಲೇಜುಗಳ ಒಂಬತ್ತು ಅಧ್ಯಾಪಕರನ್ನು ಅಮಾನತುಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಏತನ್ಮಧ್ಯೆ, ತಪ್ಪು ಮಾಡಿದ ಖಾಸಗಿ ಅನುದಾನರಹಿತ ಕಾಲೇಜಿನ ಒಬ್ಬ ಬೋಧಕನ ವಿರುದ್ಧ ಶಿಸ್ತು ಕ್ರಮಕ್ಕೆ ಇಲಾಖೆ ನಿರ್ದೇಶನ ನೀಡಿದೆ. ಕ್ರಿಯೆಯನ್ನು ಎದುರಿಸುತ್ತಿರುವ 10 ಅಧ್ಯಾಪಕರ ಪೈಕಿ, ತಲಾ ಐದು ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳಿಗೆ ಸೇರಿದವುಗಳಾಗಿವೆ. …

Read More »

ಮನೆ ನಿರೀಕ್ಷೆಯಲ್ಲಿ ಇದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ‘ಬೆಂಗಳೂರು ಅಮೃತೋತ್ಸವ ಮನೆ’ ಯೋಜನೆಯಡಿ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿ ಮನೆ ಖರೀದಿಸಲು ಪಾಲಿಕೆಯಿಂದ ಫಲಾನುಭವಿಯ ವಂತಿಕೆ ಅಥವಾ ಗರಿಷ್ಠ 5 ಲಕ್ಷ ರೂ. ಹೊಂದಾಣಿಕೆ ಮೊತ್ತವನ್ನು ಫಲಾನುಭವಿ ಹೆಸರಿನಲ್ಲಿ ಸಂಬಂಧಪಟ್ಟ ಇಲಾಖೆಗೆ ಪಾವತಿಸುವ ಯೋಜನೆಗೆ ದಿನಾಂಕ: 31-12-2022 ರವೆರೆ ಅರ್ಜಿ ಸಲ್ಲಿಸಬಹುದಾಗಿದೆ. ಆಸ್ತಕರು ಪಾಲಿಕೆಯ ವೆಬ್ ಜಾಲತಾಣವಾದ https://welfare.bbmpgov.in/ ಮುಖಾಂತರ ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ 30 ರೂ. ಶುಲ್ಕವನ್ನು …

Read More »

ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ ನಿಧನ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ (63) ಅವರು ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ. ಸಹಕಾರ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದರು. ಸಣ್ಣ ಸತ್ಯ, ಗರ ಸೇರಿದಂತೆ ಹಲವು …

Read More »

ಮೋದಿ ಸರ್ಕಾರ ಇಂದು ಇಡೀ ದೇಶವನ್ನೇ ನಾಶ ಮಾಡುತ್ತಿದೆ : ಎಂ. ವೀರಪ್ಪ ಮೊಯಿಲಿ

ಬೆಂಗಳೂರು: ‘ಕೆಟ್ಟ ಆಲೋಚನೆಗಳನ್ನು ಬೆಳೆಯಲು ಬಿಟ್ಟರೆ ಅದು ಇಡೀ ವ್ಯವಸ್ಥೆಯನ್ನು ನಾಶ ಮಾಡಲಿದೆ ಎಂದು ಜವಾಹರಲಾಲ್ ನೆಹರೂ ಹೇಳಿದ್ದರು. ಅದರಂತೆ ಮೋದಿ ಸರ್ಕಾರ ಇಂದು ಇಡೀ ದೇಶವನ್ನೇ ನಾಶ ಮಾಡುತ್ತಿದೆ’ ಎಂದು ಕಾಂಗ್ರೆಸ್‌ ಮುಖಂಡ ಎಂ. ವೀರಪ್ಪ ಮೊಯಿಲಿ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ನೆಹರೂ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನೆಹರೂ ಅವರು ವೈಜ್ಞಾನಿಕವಾಗಿ ಆಲೋಚನೆ ಮಾಡಬೇಕು ಎಂದು ವಿಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಿದರು. ದೇಶದ ಬಡತನ, …

Read More »

ಸಿದ್ದ ರಾಮಯ್ಯ ಯಾವ ಕ್ಷೇತ್ರದಲ್ಲಿ ನಿಂತರೂ ಡಿ.ಕೆ.ಶಿವಕುಮಾರ್ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ : ಬಿಜೆಪಿ ವಾಗ್ದಾಳಿ

ಬೆಂಗಳೂರು: ‘ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿ.ಕೆ.ಶಿವಕುಮಾರ್ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ರವಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಳೆದ ಚುನಾವಣೆಯಲ್ಲಿ ಗೆಲ್ಲಿಸಿ ಮಾನ ಕಾಪಾಡಿದ ಬಾದಾಮಿ ಕ್ಷೇತ್ರದ ಜನತೆಗೆ ಕೈ ಕೊಡುವುದು ಜನನಾಯಕನ ಲಕ್ಷಣವೇ? ರಾಜಕೀಯ ಸಂದಿಗ್ಧ ಕಾಲದಲ್ಲಿ ಮಾನ ಕಾಪಾಡಿದ ಜನತೆಗಿಂತ …

Read More »

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟನಲ್ಲಿ 487 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ಖಾಲಿ ಇರುವ ವಿವಿಧ 487 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾ ಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 19, 2022 ಕೊನೆಯ ದಿನವಾಗಿದೆ. ಶೈಕ್ಷಣಿಕವಿದ್ಯಾರ್ಹತೆ: KMF ಅಧಿಕೃತ …

Read More »

ಬೆಂಗಳೂರುನಲ್ಲಿ ವರುಣನ ಆರ್ಭಟ

ಬೆಂಗಳೂರು : ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ರಾಜಧಾನಿಯಲ್ಲಿ ಹಗಲಿಡೀ ಸುರಿದ ಮಳೆ ರಾತ್ರಿ ವೇಳೆ ಹಲವೆಡೆ ಬಿರುಸಾಗಿ ಸುರಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರ ಪರಿಣಾಮ ರಾಜಧಾನಿಗೂ ತಟ್ಟಿದ್ದು ಇನ್ನೂ ಮೂರು ದಿನ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More »

ಹಗರಣ, ಕರ್ತವ್ಯಲೋಪಗಳನ್ನು ಮುಚ್ಚಿಕೊಳ್ಳಲು ಮಹನೀಯರ ಪ್ರತಿಮೆಯ ಇಟ್ಟುಕೊಂಡು ರಾಜಕೀಯ : ಡಿಕೆಶಿ

ಬೆಂಗಳೂರು : ಚುನಾವಣೆ ಸಮಯದಲ್ಲಿ ಟ್ರಬಲ್ ಇಂಜಿನ್ ಬಿಜೆಪಿ ಸರಕಾರ ತನ್ನ ಭ್ರಷ್ಟಾಚಾರ , ಹಗರಣ, ಕರ್ತವ್ಯಲೋಪಗಳನ್ನು ಮುಚ್ಚಿಕೊಳ್ಳಲು ಮಹನೀಯರ ಪ್ರತಿಮೆಯ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಗಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬಿಜೆಪಿಯ ಭ್ರಷ್ಟಾಚಾರದ ಸಾಧನೆ ಹಾಗೂ ಅಸಲಿಯತ್ತು ಈಗಾಗಲೇ ರಾಜ್ಯದ ಜನರ ಮುಂದೆ ಬಯಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಕೆಂಪೇಗೌಡರ ಪ್ರತಿಮೆ ಅನಾವರಣ, …

Read More »