Breaking News

ಬೆಂಗಳೂರು

ಸಿಎಂಗೆ ತಿರುಗೇಟು ನೀಡಿದ  ಸಿ.ಎಂ.ಇಬ್ರಾಹಿಂ

ಬೆಂಗಳೂರು: ಬಾಯಿಯ ಬಂಡವಾಳ ಇಟ್ಟುಕೊಂಡೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಅವರ ಪರ ಭಾಷಣ ಮಾಡಿದಾಗ ನಮ್ಮ ಬಾಯಿಯೇ ಬಂಡವಾಳ ಆಗಿರಲಿಲ್ಲವೇ ಎಂದು ಜೆಡಿಎಸ್‌ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ತಿರುಗೇಟು ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಇಬ್ರಾಹಿಂಗೆ ಬಾಯಿಯೇ ಬಂಡವಾಳ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದರು. ಪಾದಯಾತ್ರೆಯಲ್ಲಿ ನನ್ನ ಕ್ಯಾಸೆಟ್‌ ಹಾಕಿಕೊಂಡು ಮತ ಕೇಳಲಿಲ್ಲವೇ? ಸುತ್ತೂರು ಮಠದ ಶ್ರೀಗಳ ಸಹಾಯ ಇಲ್ಲದೆ ವರುಣಾದಲ್ಲಿಯೂ ಜಯ ಗಳಿಸುವುದಿಲ್ಲ. ಸಿದ್ದರಾಮಯ್ಯರನ್ನು ನೋಡಿದರೆ ಅಯ್ಯೋ …

Read More »

ಶಾಸಕ ಸಹೋದರನ ಪುತ್ರ ಸಾವು ಪ್ರಕರಣ : ಕೊಲೆ ಮಾಡಿರುವ ಅನುಮಾನಗಳು ದಟ್ಟ

ಬೆಂಗಳೂರು :  ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಸಂಘಟನೆಯೊಂದು ವ್ಯವಸ್ಥಿತ ಸಂಚು ರೂಪಿಸಿ ಕೊಲೆ ಮಾಡಿರುವ ಅನುಮಾನಗಳು ದಟ್ಟವಾಗಿವೆ. ಅಕ್ಟೋಬರ್ 30ರಿಂದ ನಾಪತ್ತೆಯಾಗಿದ್ದ ಚಂದ್ರಶೇಖರ್ ಅವರ ಕಾರು ನಿನ್ನೆ ಹೊನ್ನಾಳ್ಳಿಯ ನ್ಯಾಮತಿ ಮಧ್ಯೆ ಸೊರಟುರು ಬಳಿ ತುಂಗಾ ಮೇಲ್ದಂಡೆಯ ಕಾಲುವೆಯಲ್ಲಿ ಪತ್ತೆಯಾಗಿದೆ.ಕ್ರೈನ್ ಬಳಸಿ ಕಾರನ್ನು ಮೇಲೆತ್ತಿದ್ದಾಗ ಹಿಂಬದಿ ಸೀಟಿನಲ್ಲಿ ಚಂದ್ರಶೇಖರ್ ಅವರ ಶವ ಪತ್ತೆಯಾಗಿದೆ. ಸುಮಾರು 20 ಅಡಿ ನಾಲೆಯಲ್ಲಿ …

Read More »

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಪ್ರಾರಂಭ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ವರುಣನ ಕೃಪೆ ಮುಂದುವರೆದಿದೆ. ಈ ಬಾರಿ ಹಿಂಗಾರು ಮಳೆ ಸ್ವಲ್ಪ ಬಿರುಸಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಜಿಟಿಜಿಟಿ ಮಳೆ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮುಂದಿನ 24 ಗಂಟೆಯಲ್ಲಿ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆ ಹಾಗೂ ಕೆಲವು ಭಾಗಗಳಲ್ಲಿ ಅಧಿಕ ಮಳೆಯಾಗುವ ಸಾದ್ಯತೆ ಇದೆ. ಕರಾವಳಿ ಜಿಲ್ಲೆಗಳ ಕೆಲವೊಂದು ಕಡೆ ಸಾಧಾರಣ ಮಳೆಯಾಗುವ …

Read More »

ಇನ್ಸ್‌ಪೆಕ್ಟರ್ ನಂದೀಶ್​ ಸಾವಿನ ಪ್ರಕರಣ: 6 ಜ‌ನ ಹಿರಿಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಂದೀಶ್​ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಚಿವರು ಹಾಗೂ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿ 6 ಜನರ ವಿರುದ್ಧ ದೂರು​ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಂ ಎಂಬುವವರು ಕೆ.ಆರ್.ಪುರ ಪೊಲೀಸ್​ ಠಾಣೆಯಲ್ಲಿ ಸಚಿವರಾದ ಆರಗ ಜ್ಞಾನೇಂದ್ರ, ಬೈರತಿ ಬಸವರಾಜು, ಬೆಂಗಳೂರು ಪೊಲೀಸ್​ ಕಮಿಷನರ್ ಪ್ರತಾಪ್​ ರೆಡ್ಡಿ, ಸಿಸಿಬಿ ಎಸಿಪಿ ರೀನಾ ಸುವರ್ಣ ಅವರ ವಿರುದ್ಧ ದೂರು ನೀಡಿದ್ದಾರೆ ಬೈರತಿ ಬಸವರಾಜ್ ಅವರ ಸಂಬಂಧಿಗಳ …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಇನ್ನೂ ಹಲವು ದಿನ ವರ್ಷಧಾರೆ ಸುರಿಯಲಿದೆ. ಗುರುವಾರ ಬೆಳ್ಳಂಬೆಳಗ್ಗೆ ಮಳೆ ಸಿಂಚನ ಆರಂಭವಾಗಿದ್ದು, ಶಾಲಾ ಕಾಲೇಜುಗಳಿಗೆ ತೆರಳುವ ಮಕ್ಕಳಿಗೆ, ಆಫೀಸಿಗೆ ತೆರಳುವವರಿಗೆ ತೊಂದರೆಯಾಗಿದೆ. ಬೆಂಗಳೂರು, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರಿ, ಚಾಮರಾಜನಗರ, ಕೊಡಗು ಮತ್ತು ಕೋಲಾರ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 5ರವರೆಗೆ ಈ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಇನ್ನು ಹಲವು ಭಾಗದಲ್ಲಿ ಮೋಡ ಕವಿದ ವಾತಾವರಣ …

Read More »

2025ರ ಜನವರಿಗೆ ಮುಂದಿನ ಆವೃತ್ತಿಯ ಜಾಗತಿಕ ಹೂಡಿಕೆದಾರರ ಸಮಾವೇಶ : ಸಿಎಂ

ಬೆಂಗಳೂರು: ‘ರಾಜ್ಯದಲ್ಲಿ ಮುಂದಿನ ಅವಧಿಗೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ನಂಬಿಕೆಯನ್ನು ಹೂಡಿಕೆದಾರರು ಹೊಂದಿರುವುದರಿಂದಲೇ ದೊಡ್ಡ ಪ್ರಮಾಣದ ಹೂಡಿಕೆ ಹರಿದುಬಂದಿದೆ. ಈ ವಿಶ್ವಾಸ ನಮಗೂ ಇದೆ. ಹೀಗಾಗಿಯೇ 2025ರ ಜನವರಿಗೆ ಮುಂದಿನ ಆವೃತ್ತಿಯ ಜಾಗತಿಕ ಹೂಡಿಕೆದಾರರ ಸಮಾವೇಶವನ್ನೂ ಘೋಷಿಸುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಂದಿನ ಅವಧಿಗೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದು ನಮ್ಮ ದೃಢ ವಿಶ್ವಾಸ. ನಾವು ಅಧಿಕಾರಕ್ಕೆ ಬಂದು ಈಗ ಒಡಂಬಡಿಕೆ ಮಾಡಿಕೊಂಡಿರುವ …

Read More »

ಮಳೆರಾಯನ್ನ ಆರ್ಭಟಕ್ಕೆ ಸುಸ್ತಾದ ಬೆಂಗಳೂರು ಜನ

ಬೆಂಗಳೂರು: ನಗರದಲ್ಲಿ ಕೆಲದಿನ ಗಳಿಂದ ಬಿಡುವು ನೀಡಿದ್ದ ಮಳೆ, ಧಾರಾಕಾರವಾಗಿ ಸುರಿಯಿತು. ಮಂಗಳವಾರ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಕಾಣಿಸಿಕೊಂಡು, ಸಂಜೆ ವೇಳೆ ಜೋರು ಮಳೆಯಾಯಿತು. ರಾಜ್ಯೋತ್ಸವ ದಿನವಾಗಿದ್ದರಿಂದ ನಗರದ ಹಲವೆಡೆ ಸಾರ್ವಜನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಜೋರು ಮಳೆಯಿಂದಾಗಿ ಕಾರ್ಯಕ್ರಮಗಳ ಆರಂಭಕ್ಕೆ ತೊಂದರೆ ಉಂಟಾಯಿತು. ಕೆಲವರು ಸುರಿಯುವ ಮಳೆಯಲ್ಲೇ ಕಾರ್ಯಕ್ರಮ ನಡೆಸಿದರು. ಮೆಜೆಸ್ಟಿಕ್, ಗಾಂಧಿನಗರ, ಸಂಪಂಗಿ ರಾಮನಗರ, ಶಾಂತಿನಗರ, ವಿಲ್ಸನ್ ಗಾರ್ಡನ್, ಲಾಲ್‌ಬಾಗ್, ರಿಚ್ಮಂಡ್ ಟೌನ್, ಅಶೋಕನಗರ, ಎಂ.ಜಿ.ರಸ್ತೆ, ಶಿವಾಜಿನಗರ, …

Read More »

ರಂಭಾ ಕಾರು ಅಪಘಾತ : ಮಗಳ ಸ್ಥಿತಿ ಗಂಭೀರ

ಬೆಂಗಳೂರು: ಬಹುಭಾಷಾ ನಟಿ ರಂಭಾ ಕಾರು ಅಪಘಾತಕ್ಕೀಡಾಗಿದ್ದು, ನಟಿ ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಮಗಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿ ರಂಭಾ ವಿವಾಹದ ಬಳಿಕ ವಿದೇಶದಲ್ಲಿ ವಾಸವಾಗಿದ್ದು, ಅಲ್ಲಿಯೇ ಅವರ ಕಾರು ಅಪಘಾತವಾಗಿದೆ.ಈ ಕುರಿತು ರಂಭಾ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಕ್ಕಳನ್ನು ಶಾಲೆಯಿಂದ ಕರೆತರುತ್ತಿದ್ದಾಗ ತಮ್ಮ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ತಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಆದರೆ ಮಗಳು ಸಶಾ ಗಂಭೀರವಾಗಿ ಗಾಯಗೊಂಡಿದ್ದು, …

Read More »

ಮಳೆರಾಯನ ಆರ್ಭಟಕ್ಕೆ ತತ್ತರಿಸಿದ ಜನೆತೆಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ಅಬ್ಬರಿಸಿದ್ದು, ಇದರಿಂದ ಜನ ತತ್ತರಿಸಿ ಹೋಗಿದ್ದರು. ಧಾರಾಕಾರವಾಗಿ ಸುರಿದ ಮಳೆಯ ಕಾರಣಕ್ಕೆ ಹಳ್ಳ ಕೊಳ್ಳಗಳು, ಕೆರೆ ನದಿಗಳು ತುಂಬಿ ಹರಿದಿದ್ದು, ರಸ್ತೆಗಳು ಜಲಾವೃತವಾಗಿದ್ದವು. ಅಲ್ಲದೇ ನೂರಾರು ಎಕರೆ ಪ್ರದೇಶದ ಹೊಲಗದ್ದೆಗಳಲ್ಲಿ ನೀರು ನಿಂತ ಪರಿಣಾಮ ಬೆಳೆ ಹಾನಿಯೂ ಸಂಭವಿಸಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಮಳೆ ಬಿಡುವ ನೀಡಿದ್ದು, ಇದೀಗ ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ …

Read More »

ಕೆಆರ್‌ಎಸ್ ಪಕ್ಷದಿಂದ 13 ದಿನಗಳ ಕಾಲ ರಾಜ್ಯೋತ್ಸವ ಆಚರಣೆ

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ (ಕೆಆರ್‌ಎಸ್) ಒಂದು ತಿಂಗಳ ಕಾಲ ಕನ್ನಡೋತ್ಸವದ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ‘ಕೆಆರ್‌ಎಸ್ ಪಕ್ಷದ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ 13 ದಿನಗಳ ಕಾಲ ರಾಜ್ಯದಾದ್ಯಂತ ಪ್ರವಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕವನ್ನು ಏಕೀಕರಣ ಮಾಡಿದ ಮಹನೀಯರ ಜನ್ಮಭೂಮಿಗೆ ಭೇಟಿ ನೀಡಿ , ಅವರನ್ನು ಸ್ಮರಿಸಿ ಜನಜಾಗೃತಿ ಮೂಡಿಸ ಲಾಗುವುದು’ ಎಂದು ಪಕ್ಷದ ಕಾರ್ಯದರ್ಶಿ ಬಿ.ಎಸ್ ಮಲ್ಲಿಕಾರ್ಜುನ …

Read More »