BigTv News
October 29, 2022
Breaking News, ಬೆಂಗಳೂರು
ಬೆಂಗಳೂರು: ಕೆ. ಆರ್. ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ನಂದೀಶ್ ಮಾನಸಿಕವಾಗಿ ನೊಂದು ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಗೂ ಅವರ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದು ಉತ್ತರ ಭಾರತದ ಅಧಿಕಾರಿಗಳ ದರ್ಪದಿಂದ ಹಾಗೂ ಸರ್ಕಾರದಿಂದಲೇ ಆಗಿರುವ ಕಗ್ಗೊಲೆಯೇ ಹೊರತು …
Read More »
BigTv News
October 29, 2022
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ. ಆದರೂ, ಇಂದಿಗೂ ಅಪ್ಪು ನಮ್ಮ ನಡುವೆ ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಆಗುವುದಿಲ್ಲ. ತಮ್ಮ ಸರಳತೆ ಮತ್ತು ಮಾನವೀಯ ಗುಣಗಳಿಂದಲೇ ಅಸಂಖ್ಯಾತ ಅಭಿಮಾನಿಗಳ ಮನದಲ್ಲಿ ಅಪ್ಪು ಮನೆ ಮಾಡಿದ್ದಾರೆ. ಇಂದು ಅಪ್ಪು ಅವರ ಒಂದನೇ ವರ್ಷದ ಪುಣ್ಯ ಸ್ಮರಣೆ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋ ಬಳಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ರ …
Read More »
BigTv News
October 29, 2022
Breaking News, ಬೆಂಗಳೂರು
ಬೆಂಗಳೂರು: ಕರುನಾಡಿನ ಪ್ರತಿಯೊಬ್ಬರು ಕೂಡ ಅಂದುಕೊಂಡಿರುತ್ತಾರೆ. ಯಾಕೆಂದರೆ ನಮಗ್ಯಾರಿಗೂ ಅಪ್ಪು ನಮ್ಮ ಜೊತೆ ಇಲ್ಲ ಎಂದು ನೆನೆಪಿಸಿಕೊಳ್ಳುವುದಕ್ಕೂ ಇಷ್ಟವಿಲ್ಲ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇನ್ನೂ ನಮ್ಮ ಜೊತೆಯೆ ಇದ್ದಾರೆ. ಅಭಿಮಾನಿಗಳ ಹೃದಯ ಸಿಂಹಾಸನವೇರಿ ಕೂತಿದ್ದಾರೆ. ಕಳೆದ ವರ್ಷ ಈ ದಿನದಂದು ರಾಜ್ಯಕ್ಕೆ ಬರಸಿಡಿಲು ಬಡಿದಿತ್ತು. ನಮ್ಮ ಪ್ರೀತಿಯ ಪವರ್ ಸ್ಟಾರ್ ಅವರನ್ನು ನಾವು ಕಳೆದುಕೊಂಡಿದ್ದೀವಿ. ಹೃದಯಾಘಾತದಿಂದ ಅಪ್ಪು ಬಾರದ ಲೋಕಕ್ಕೆ ಹೊರಟಿದ್ದರು. ಆ ಕರಾಳ ದಿನ ಮತ್ತೆ …
Read More »
BigTv News
October 28, 2022
Breaking News, ಬೆಂಗಳೂರು
ಬೆಂಗಳೂರು : ಇಂದು ಹೆಚ್.ಡಿ ಕುಮಾರಸ್ವಾಮಿ ಕನಸಿನ ಕೂಸು ‘ಪಂಚರತ್ನ’ ರಥ ಯಾತ್ರೆಗೆ ಸಾಂಕೇತಿಕ ಚಾಲನೆ ಸಿಗಲಿದೆ. ಇಂದು ಬೆಳಗ್ಗೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಬೆಂಗಳೂರಿನಲ್ಲಿ ಪಂಚರತ್ನ ರಥ ಯಾತ್ರೆಗೆ ಹೆಚ್.ಡಿ ಕುಮಾರಸ್ವಾಮಿ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಜೆಡಿಎಸ್ ಮುಖಂಡರು, ಶಾಸಕರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ವಿಧಾನ ಸಭೆ ಚುನಾವಣೆ ಸಮೀಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ತಯಾರಿ ಜೋರಾಗಿದೆ. ಕಾಂsಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ಜನರನ್ನು ತಲುಪುತ್ತಿದ್ದು …
Read More »
BigTv News
October 28, 2022
Breaking News, ಬೆಂಗಳೂರು
ಬೆಂಗಳೂರು : ಇಂದು ರಾಜ್ಯಾದ್ಯಂತ ಪುನೀತ್ ರಾಜ್‌ಕುಮಾರ್ ನಟನೆಯ ‘ಗಂಧದ ಗುಡಿ’ ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರಿನ ಥಿಯೇಟರ್‌ಗಳಲ್ಲಿ ಫಸ್ಟ್ ಶೋ ಆರಂಭವಾಗಿದೆ. ಇಂದು ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಎಲ್ಲರೂ ಗಂಧದ ಗುಡಿ ಸಾಕ್ಷ್ಯಾಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಎಲ್ಲಾ ಥಿಯೇಟರ್‌ಗಳ ಎದುರು ಪುನೀತ್ ರಾಜ್‌ಕುಮಾರ್ ಅವರ ಕಟೌಟ್‌ಗಳು ರಾರಾಜಿಸುತ್ತಿದ್ದು, ಅಭಿಮಾನಿಗಳು ಅವುಗಳಿಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ 225ಕ್ಕೂಹೆಚ್ಚು ಸ್ಕ್ರೀನ್‌ಗಳಲ್ಲಿ ಚಿತ್ರ ರಿಲೀಸ್ ಆಗ್ತಿದೆ.
Read More »
BigTv News
October 27, 2022
Breaking News, ಬೆಂಗಳೂರು
ಬೆಂಗಳೂರು: ಜಾತ್ಯತೀತ ಜನತಾದಳದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಎರಡು ದಿನಗಳ ಕಾಲ (ಅ.27-28) ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕವೂ ಸೇರಿ 13 ರಾಜ್ಯಗಳಿಂದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಭಾಗಿಯಾಗಲಿದ್ದಾರೆ ಎಂದರು. ಈ ಕಾರ್ಯಕಾರಣಿ ಸಭೆಯಲ್ಲಿ ರಾಷ್ಟ್ರದ ರಾಜ್ಯದ ರಾಜಕೀಯ ಬೆಳವಣಿಗೆ, ಆರ್ಥಿಕ ವಿಚಾರಗಳು, ಕೋಮು ಸಂಘರ್ಷದ ವಿಷಯಗಳ …
Read More »
BigTv News
October 27, 2022
Breaking News, ಬೆಂಗಳೂರು
ಬೆಂಗಳೂರು: ನ. 11 ರಂದು KIAB ಬಳಿ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ನಡೆಯಲಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರು ಕಾರ್ಯಕ್ರಮದ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿಯವರು ಕಾರ್ಯಕ್ರಮದ ಕುರಿತಾಗಿ ಚರ್ಚೆ ನಡೆಸುವರು. ನ. 11ರಂದು ಇತರೆ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತಾಗಿ ಪ್ರಧಾನಿ ಚರ್ಚೆ ನಡೆಸಲಿದ್ದಾರೆ. ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸುವವರು. …
Read More »
BigTv News
October 23, 2022
Breaking News, ಬೆಂಗಳೂರು
ಬೆಂಗಳೂರು : ಪುನೀತ್ ಅಭಿಮಾನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದ ಪುನೀತ ಪರ್ವ ಕಾರ್ಯಕ್ರಮವನ್ನು ಟಿವಿಯಲ್ಲಿ ನೋಡುವಾಗಲೇ ಅಭಿಮಾನಿ ಹೃದಯಾಘಾತಕ್ಕೊಳಗಾಗಿದ್ದಾರೆ. ನಿನ್ನೆ ಮನೆಯಲ್ಲಿ ಪುನೀತ ಪರ್ವ ಕಾರ್ಯಕ್ರಮ ನೋಡುವಾಗಲೇ ಹೃದಯಾಘಾತದಿಂದ ಸಾವು ಸಂಭವಿಸಿದೆ. ಪುನೀತ್ ಪರ್ವ ಕಾರ್ಯಕ್ರಮ ನೋಡುವಾಗ ಎಂಥ ಮನುಷ್ಯ ಸತ್ತು ಹೋದ್ರು ಎಂದು ಅಭಿಮಾನಿ ಕಣ್ಣೀರಿಟ್ಟಿದ್ದರು. ಮಲ್ಲೇಶ್ವರಂನ ಲಿಂಕ್ ರೋಡ್ ನಲ್ಲಿ ಇರುವ ಪುನೀತ್ ಅಭಿಮಾನಿಯನ್ನು ಹೃದಯಾಘಾತವಾದ ತಕ್ಷಣವೇ ಕೆ.ಸಿ.ಜನರಲ್ ಆಸ್ಪತ್ರೆಗೆ …
Read More »
BigTv News
October 21, 2022
Breaking News, ಬೆಂಗಳೂರು
ಬೆಂಗಳೂರು : ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರಾಗಿದೆ. ಇಂದಿನಿಂದ 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಕೂಡ ಹಳದಿ ಎಚ್ಚರಿಕೆ ನೀಡಲಾಗಿದೆ. ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಹಲವು ಜಿಲ್ಲೆಗಳಿಗೆ ಹಳದಿ …
Read More »
BigTv News
October 21, 2022
Breaking News, ಬೆಂಗಳೂರು
ಬೆಂಗಳೂರು: ನಗರದಲ್ಲಿ ರಸ್ತೆಗಳು ಸಾಕಷ್ಟು ಹಾಳಾಗಿದೆ. ಎಲ್ಲೆಂದರಲ್ಲಿ ಗುಂಡಿಗಳೇ ಎದ್ದು ಕಾಣುತ್ತಿದೆ. ಇದರಿಂದ ಸಾಕಷ್ಟು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಶೀಘ್ರವೇ ಎಲ್ಲ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ಭವನದಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ ಮಾರ್ಗ ಮಧ್ಯದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read More »