Breaking News

ಬೆಂಗಳೂರು

ಹಿರಿಯ ನಟ ಲೋಹಿತಾಶ್ವ ಆಸ್ಪತ್ರೆಗೆ ದಾಖಲು

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾತವಾಗಿದೆ. ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಮುಂದುವರಿದಿದೆ. ಟಿ.ಎಸ್. ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಅವರು ಐನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳು, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅವರು ಚಿತ್ರರಂಗದಲ್ಲಿ ತಮ್ಮ ಗಂಭೀರ ಧ್ವನಿಗೆ ಹೆಸರಾದವರು.. ಅವರ …

Read More »

ರಾಜ್ಯದ ಜನತೆಗೆ ಅಂಚೆ ಇಲಾಖೆಯಿಂದ ಸಿಹಿಸುದ್ದಿ

ಬೆಂಗಳೂರು : ರಾಜ್ಯದ ಜನತೆಗೆ ಅಂಚೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಮನೆಬಾಗಿಲಿಗೇ ಜನನ, ಮರಣ ಪತ್ರಗಳು ಬರಲಿವೆ. ಈ ಸಂಬಂಧ ಕಂದಾಯ ಇಲಾಖೆಯು ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಮನೆ ಬಾಗಿಲಿಗೆ ಪ್ರಮಾಣ ಪತ್ರ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಅಂಚೆ ಇಲಾಖೆಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ. ಹೀಗಾಗಿ ಇನ್ಮುಂದೆ ಸಾರ್ವಜನಿಕರು ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗಾಗಿ …

Read More »

ಆಟೋದಲ್ಲಿ ಬಂದು ಕೊಚ್ಚಿ ಕೊಲೆಗೈದು ಪರಾರಿ

ಬೆಂಗಳೂರು : ತಡರಾತ್ರಿ ಆಟೋದಲ್ಲಿ ಬಂದು ರಾಹುಲ್ ನನ್ನ ಕೊಚ್ಚಿ ಕೊಲೆಗೈದು ಪರಾರಿಯಾದ ಘಟನೆ ಬೈಯಪ್ಪನಹಳ್ಳಿಯ ಕೃಷ್ಣಯ್ಯನಪಾಳ್ಯದಲ್ಲಿ ನಡೆದಿದೆ. ರೌಡಿಶೀಟರ್ ರಾಹುಲ್ @ ಪಲ್ಲು ಕೊಲೆಯಾದ ವ್ಯಕ್ತಿ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆಗೈದಿರುವ ಆರೋಪಿಗಳು.ಇತ್ತೀಚಿಗಷ್ಟೇ ಜೈಲಿನಿಂದ ಹೊರಬಂದಿದ್ದ ರಾಹುಲ್. ಈ ಹಿಂದೆ ರೌಡಿಶೀಟರ್ ಪಾಲ್ ರವಿಯ ಹತ್ಯೆ ಕೇಸಲ್ಲಿ ಫಿಟ್ಟಾಗಿದ್ದ. ಅದೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ರಾಮಮೂರ್ತಿ ನಗರ ರೌಡಿ ಪಾಲ್ ರವಿ ಮರ್ಡರ್ ಕೇಸಲ್ಲಿ …

Read More »

ಟಿಪ್ಪು ಸುಲ್ತಾನ್‌ ಕನ್ನಡಿಗನಲ್ಲ: ಸಚಿವ ಆರ್‌.ಅಶೋಕ

ಬೆಂಗಳೂರು: ಸ್ಥಳೀಯರು ಅಥವಾ ಶೃಂಗೇರಿ ಮಠದ ಧರ್ಮದರ್ಶಿಗಳಿಂದ ಕೋರಿಕೆ ಬಂದರೆ ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ನಡೆಯುತ್ತಿರುವ ಟಿಪ್ಪು ಸುಲ್ತಾನ್‌ ಸಲಾಂ ಆರತಿ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಶೃಂಗೇರಿಯಲ್ಲಿ ಸಲಾಂ ಆರತಿ ನಿಲ್ಲಿಸುವಂತೆ ಈವರೆಗೆ ಯಾವುದೇ ಮನವಿ ಬಂದಿಲ್ಲ. ಅಂತಹ ಬೇಡಿಕೆ ಬಂದರೆ ಸಲಾಂ ಆರತಿ ನಿಲ್ಲಿಸುತ್ತೇವೆ’ ಎಂದರು. ‘ಟಿಪ್ಪು ಸುಲ್ತಾನ್‌ ಕನ್ನಡಿಗನಲ್ಲ. ಆತನ ಆಡಳಿತದ ಅವಧಿಯಲ್ಲಿ …

Read More »

ಪಿಎಸ್‌ಐ ನೇಮಕಾತಿ ಅಕ್ರಮ : ಪಿಎಸ್‌ಐ‌ ಬಂಧನ

ಬೆಂಗಳೂರು: 545 ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿದ್ದ ಕೆ.ಆರ್.ಪುರ ಸಂಚಾರ ಠಾಣೆ ಪಿಎಸ್‌ಐ ಸುಬ್ರಮಣಿ (35) ಅವರನ್ನು ಸಿಐಡಿ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಎಡಿಜಿಪಿ ಅಮ್ರಿತ್ ಪೌಲ್, ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ 60ಕ್ಕೂ ಹೆಚ್ಚು ಆರೋಪಿಗಳನ್ನು ಪ್ರಕರಣದಲ್ಲಿ ಈಗಾಗಲೇ ಬಂಧಿಸಲಾಗಿದೆ. ‘ಪಿಎಸ್‌ಐ ಅಕ್ರಮ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಸುಬ್ರಮಣಿ ತಲೆಮರೆಸಿಕೊಂಡಿದ್ದ. ಬೆಂಗಳೂರಿನಲ್ಲಿ ಗುರುವಾರ ಈತನನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗಾಗಿ …

Read More »

ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆ‌ ಸಾಧ್ಯತೆ

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಅ. 8ರವರೆಗೆ ಭಾರೀ ಮಳೆಯಾಗಲಿದೆ. ಆದರೆ, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಲಿದೆ. ಬೆಂಗಳೂರಿನ …

Read More »

ಹವಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ವರುಣಾರ್ಭಟಕ್ಕೆ ಈ ಬಾರಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಮುಂಗಾರು ಆರಂಭದ ಸಂದರ್ಭದಲ್ಲಿ ಸಕಾಲಕ್ಕೆ ಮಳೆಯಾಗದಿದ್ದರೂ ಸಹ ಆ ಬಳಿಕ ಬಿಟ್ಟೂಬಿಡದಂತೆ ಮಳೆ ಸುರಿದಿದ್ದು, ಬೆಳೆ ನಷ್ಟದ ಜೊತೆಗೆ ಆಸ್ತಿ ಹಾನಿಯೂ ಸಂಭವಿಸಿದೆ. ನಗರ ಪ್ರದೇಶದ ಜನತೆಯೂ ಸಹ ಮಳೆ ಅಬ್ಬರಕ್ಕೆ ಸಾಕಾಗಿ ಹೋಗಿದ್ದು, ಮಳೆ ಸುರಿದ ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಜೊತೆಗೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಪರಿತಪಿಸಿದ್ದರು.ಇದೀಗ ಹಬ್ಬದ ಸಂದರ್ಭದಲ್ಲಿ ಕಳೆದ ಎರಡು …

Read More »

ಬೆಂಗಳೂರಿನ ಹಲವಡೆ ಪಬ್, ರೆಸ್ಟೋರೆಂಟ್ ಗಳ ಮೇಲೆ ದಾಳಿ

ಬೆಂಗಳೂರು : ನಿಯಮ ಉಲ್ಲಂಘಿಸಿದ ಆರೋಪದ ಹಿನ್ನಲೆಯಲ್ಲಿ ಬೆಂಗಳೂರಿನ ಹಲವಡೆ ಪಬ್, ರೆಸ್ಟೋರೆಂಟ್ ಗಳ ಮೇಲೆ ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ. ಪಬ್ ಗಳಲ್ಲಿ ಅತಿಯಾದ ಡಿಜೆ ಸೌಂಡ್ ಹಾಕಿ ಮೋಜು ಮಸ್ತಿ ಮಾಡಲಾಗುತ್ತಿತ್ತು. ಅಪ್ರಾಪ್ತರಿಗೆ ಪಬ್ ಗೆ ಪ್ರವೇಶ, ಮದ್ಯ ಸೇವನೆಗೆಅವಕಾಶ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ನಿಯಮ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಬೋಟೈ, ಇಕಿಗೈ,ಸ್ಕೈ ಬಾರ್ ಗಳ ಮೇಲೆ ಕೇಂದ್ರ …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ನೈಋುತ್ಯ ಮುಂಗಾರು ಭರ್ಜರಿ ಮಳೆ ಸುರಿಸಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.20ರಷ್ಟು ಹೆಚ್ಚು ಮಳೆಯಾಗಿದೆ. ರಾಜ್ಯದ ಯಾವುದೇ ಜಿಲ್ಲೆ ಮತ್ತು ತಾಲೂಕಿನಲ್ಲಿ ಮಳೆಯ ಕೊರತೆ ಆಗಿಲ್ಲ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. ರಾಜ್ಯದ ವಾಡಿಕೆಯ ಮುಂಗಾರು ಮಳೆಯ ಪ್ರಮಾಣ 85.2 ಸೆಂ.ಮೀ. ಇದೆ. ಆದರೆ ಈ ಬಾರಿ 100.19 ಸೆಂ.ಮೀ. ಮಳೆ ಸುರಿಯುವ ಮೂಲಕ ಸುಮಾರು …

Read More »

ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಕಾಂಗ್ರೆಸ್ ಪಕ್ಷವೇ ಬೇಲ್ ನಲ್ಲಿದೆ. ಗಾಂಧಿ ಜಯಂತಿ ದಿನ ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ. ರಾಹುಲ್ ಗಾಂಧಿ, ಸೋನಿಯಾಗಾಂಧಿ, ಡಿ.ಕೆ. ಶಿವಕುಮಾರ್ ಬೇಲ್ ನಲ್ಲಿದ್ದಾರ. ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಎಟಿಎಂ ಆಗಿತ್ತು ಎಂದು ತಿರುಗೇಟು ನೀಡಿದ್ದಾರೆ. …

Read More »