BigTv News
October 2, 2022
Breaking News, ಬೆಂಗಳೂರು
ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ, ಯೋಗ ಕ್ಷೇಮ ವಿಚಾರಿಸಿದರು.ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡ ಅವರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲೇ ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.
Read More »
BigTv News
September 30, 2022
Breaking News, ಬೆಂಗಳೂರು
ಚಾಮರಾಜನಗರ: ರಾಜ್ಯದಲ್ಲಿ ಗುಂಡ್ಲುಪೇಟೆಯಿಂದ ಭಾರತ್ ಜೋಡೋ ಪಾದಯಾತ್ರೆ ಶುರುವಾಗಿದೆ. ಈ ಪಾದಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಹೌದು, ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ ರಾಜ್ಯದ ಪ್ರಮುಖ ನಾಯಕರಾದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಎಂಬಿ ಪಾಟೀಲ್, ಪರಮೇಶ್ವರ ಮತ್ತು ಇನ್ನೂ ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಪ್ರಮುಖ ರಸ್ತೆಯಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ. ಇಂದಿನಿಂದ ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ. ಪಾದಯಾತ್ರೆ ಸಾಗುವ ಸ್ಥಳದಲ್ಲಿ …
Read More »
BigTv News
September 30, 2022
Breaking News, ಬೆಂಗಳೂರು
ಬೆಂಗಳೂರು: PSI ನೇಮಕಾತಿ ಹಗರಣ ಸಂಬಂಧ ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಸಿಐಡಿ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ. ಪಿಎಸ್‌ಐ ಪರೀಕ್ಷಾ ನೇಮಕಾತಿ ಜಾಲದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ತನಿಖಾಧಿಕಾರಿ ಡಿವೈಎಸ್ಪಿ ಬಿ.ಕೆ.ಶೇಖರ್ ಇಂದು ನ್ಯಾಯಾಲಯಕ್ಕೆ ಅಮೃತ್ ಪಾಲ್ ವಿರುದ್ಧ 1,406 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದರು. ಈ ಮುನ್ನ ಸಿಐಡಿ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ ಪ್ರಮುಖ ಆರೋಪಿಯಾಗಿರುವ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ …
Read More »
BigTv News
September 30, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಅ. 3 ರಿಂದ ಐದು ದಿನಗಳ ಕಾಲ ದಸರಾ ರಜೆ ಇರಲಿದ್ದು, ರಜೆ ಕಾಲದಲ್ಲಿ ಕಾರ್ಯನಿರ್ವಹಿಸುವ ನ್ಯಾಯ ಪೀಠಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ರಚಿಸಿದ್ದಾರೆ. ಅ. 3 ರಿಂದ 7 ರವರೆಗೆ ರಜಾ ಕಾಲದಲ್ಲಿ ನ್ಯಾಯಮೂರ್ತಿಗಳಾದ ಎಸ್. ಸುನಿಲ್ ದತ್ ಯಾದವ್, ಟಿ.ಜಿ. ಶಿವಶಂಕರೇಗೌಡ ಅವರ ನೇತೃತ್ವದ ರಜಾ ಕಾಲದ ವಿಭಾಗಿಯ ಪೀಠ ಎಂಟನೇ ಕೋರ್ಟ್ ಹಾಲ್ ನಲ್ಲಿ ವಿಚಾರಣೆ ನಡೆಸಲಿದೆ. …
Read More »
BigTv News
September 30, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಡೆಸಿದ್ದ ಪೇ ಸಿಎಂ ಅಭಿಯಾನದ ಭಾಗವಾಗಿ ಬೆಂಗಳೂರಿನ ಹಲವು ಕಡೆ ಪೇ ಸಿಎಂ ಪೋಸ್ಟರ್ ಅಂಟಿಸಿದ್ದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಅಪರಾಧ ವಿಭಾಗದ ಸಿಸಿಬಿ ಪೊಲೀಸರು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಪದಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದಂತಹ ‘ಪೇ ಸಿಎಂ ಪೋಸ್ಟರ್ ಪ್ರಕರಣ’ ವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಕಮೀಷನರ್ ಪ್ರತಾಪ್ ರೆಡ್ಡಿ ಆದೇಶ …
Read More »
BigTv News
September 26, 2022
Breaking News, ಬೆಂಗಳೂರು
ಬೆಂಗಳೂರು- ಕಳೆದ ಎರಡು ವಾರಗಳಲ್ಲಿ ಬಿಡುವು ಕೊಟ್ಟಿದ್ದ ಮಳೆ ನಿನ್ನೆಯಿಂದ ಮತ್ತೆ ಪ್ರಾರಂಭವಾಗಿದ್ದು, ಇನ್ನು ಮೂರು ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ.ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ಎರಡು ವಾರಗಳಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಬಿಡುವು ಕೊಟ್ಟಿದ್ದು, ಆದರೆ ಉತ್ತರ …
Read More »
BigTv News
September 25, 2022
Breaking News, ಬೆಂಗಳೂರು
ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಶುರುವಾಗಿದೆ. ಕಬ್ಬನ್ ಪಾರ್ಕ್, ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ, ಡಬಲ್ ರೋಡ್ ಸೇರಿದಂತೆ ಹಲವೆಡೆ ಮಳೆ ಆಗಿದ್ದು, ಮಳೆಯಿಂದ ಬೈಕ್ ಸವಾರರು, ಪಾದಚಾರಿಗಳು ಪರದಾಡಿದ್ದಾರೆ. ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆ ರಾಜ್ಯದಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಸಾಧ್ಯತೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಮೋಡ ಕವಿದ ವಾತಾವರಣವಿದ್ದು, …
Read More »
BigTv News
September 25, 2022
Breaking News, ಬೆಂಗಳೂರು
ಬೆಂಗಳೂರು: ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್ ನಾಯಕರು ರಾಜ್ಯ ರಾಜಕೀಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್ ನಾಯಕರು ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ದೂಷಿಸಿದ್ದಾರೆ. ಇಡೀ ದೇಶದಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ನಾಯಕರು ಇಂತಹ ಕೀಳುಮಟ್ಟದ ರಾಜಕೀಯ ಮಾಡುವುದರಲ್ಲಿ ನಿಸ್ಸೀಮರೆಂದು ಸಾಬೀತು ಮಾಡುವ ಮೂಲಕ ಮತ್ತೊಮ್ಮೆ ಬೆತ್ತಲಾಗಿದ್ದಾರೆ. ಆದರೆ ಏನೇ ಮಾಡಿದರೂ …
Read More »
BigTv News
September 25, 2022
Breaking News, ಬೆಂಗಳೂರು
ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರು ನೇಮಕವಾಗಿದ್ದೇ ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗ.ಪೌಲ್ ಬಗ್ಗೆ ದೂರುಗಳಿದ್ದರೂ, ಪ್ರಮುಖ ಹುದ್ದೆ ನೀಡಿದ್ದರು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದರು. ಕಲಾಪ ಮುಂದೂಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದ ಅವರು, ಪಿಎಸ್‌ಐ ಹಗರಣ ಬಯಲಿಗೆ ಎಳೆದದ್ದೇ ಕಾಂಗ್ರೆಸ್. ಸಿಐಡಿ ದಾಳಿ ನಂತರ ಪೌಲ್ ಅವರನ್ನು ವರ್ಗಾವಣೆ ಮಾಡಿದ್ದರು. ಒತ್ತಡ ಹೆಚ್ಚಾದ …
Read More »
BigTv News
September 25, 2022
Breaking News, ಬೆಂಗಳೂರು
ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್. ಎಂ. ಕೃಷ್ಣ ಮೊದಲು ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಬಳಿಕ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಅಂತ ತಿಳಿದು ಬಂದಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Read More »