Breaking News

ಬೆಂಗಳೂರು

ಕಳೆದ 24 ಗಂಟೆಯಲ್ಲಿ 5,000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತೆ 5,000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಂದರೆ 5,076 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 5,28,150 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 47,945 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.70ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,19,264 …

Read More »

ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ಸಿಎಂ ಕಚೇರಿಯಲ್ಲಿ ಕೆಲಸ

ಬೆಂಗಳೂರು: ಕರಾವಳಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ತಮ್ಮ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ಘೋಷಣೆ ಮಾಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ಸಿಎಂ ಬೊಮ್ಮಾಯಿ ಅವರು ಈ ಮಹತ್ವ ಘೋಷಣೆ ಮಾಡಿದ್ದಾರೆ.ತಮ್ಮ ಭಾಷಣವನ್ನು ಮುಗಿಸಿ ವೇದಿಕೆಯ ಮೇಲೆ ಕುತಿದ್ದ ಸಿಎಂ ಬಳಿಕ ಪುನಃ ಬಂದು ಈ ಘೋಷಣೆಯನ್ನು ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದ ನೆರವು ನೀಡುತ್ತೇವೆ. …

Read More »

ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದು ವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕಲಬುರಗಿ ಜಿಲ್ಲೆಗಳಿಗೆ ಇದೇ 10ರಂದು ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ಇದೇ 11ರಂದು ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಯೆಲ್ಲೊ ಅಲರ್ಟ್‌ ನೀಡಲಾಗಿದೆ.

Read More »

ರಾಜ್ಯದ ಜನತೆಗೆ ಮತ್ತೊಂದು ಶಾಕ್

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದರುರಾಗಿದ್ದು, ಕಳೆದ ಎರಡು ತಿಂಗಳ ಅವಧಿಯಲ್ಲಿ ಅಕ್ಕಿಯ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. 1-2 ರೂ. ನಂತೆ ಏರಿಕೆಯಾಗುತ್ತಿದ್ದ ಅಕ್ಕಿ ಬೆಲೆ ಕಳೆದ ಎರಡು ತಿಂಗಳ ಅವಧಿಯಲ್ಲಿ 8-10 ರೂ.ವರೆಗೆ ಏರಿಕೆಯಾಗಿದೆ. ಈ ಮೂಲಕ ಜನಸಾಮನ್ಯರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಸ್ಟೀಮ್ ರೈಸ್ ದರ ಕೆಜಿಗೆ 38 ರಿಂದ 48 ರೂ. ಏರಿಕೆಯಾದರೆ, ಸೋನಾಮಸೂರಿ 52 …

Read More »

ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನ : ಸಿಎಂ

ಬೆಂಗಳೂರು :  ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನಿಸಲಾಗಿದ್ದು, ಮುಂದಿನ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ, ಕಾಯ್ದೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಕೇಂದ್ರದ ಭೂ ಸಂಪರ್ಕ ಮತ್ತು ಹೆದ್ದಾರಿಗಳ ಸಚಿರ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಸಿಎಂ ನಂತ್ರ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಬಿಬಿಎಂಪಿ, ಬಿಡಿಎ, ಬಿಎಂಆರ್ ಡಿಎ, …

Read More »

ಉಮೇಶ್ ಕತ್ತಿ ನಿಧನಕ್ಕೆ 3 ದಿನಗಳ ಕಾಲ ಶೋಕಾಚರಣೆ ಮಾಡಬೇಕಾಗಿತ್ತು : ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಆಹಾರ ಸಚಿವರಾಗಿದ್ದ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದು, ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ದಿನದ ಶೋಕಾಚರಣೆಗೆ ಸೂಚನೆ ನೀಡಿದೆ. ಈ ಕುರಿತಂತೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಮೇಶ್ ಕತ್ತಿ ಅವರು ಹಾಲಿ ಸಚಿವರಾಗಿದ್ದರು. ಹೀಗಾಗಿ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಮಾಡಬೇಕಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಗಾಗಿ ಬೆಳಗಾವಿಗೆ ತೆರಳುವ …

Read More »

ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ : ಡಿಕೆಶಿ

ಬೆಂಗಳೂರು : ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.‘ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. 25ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು. ಇದ್ದುದನ್ನು ಇದ್ದಂತೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ್ ಕತ್ತಿ ಅವರು ಜನರ ಸಮಸ್ಯೆ, …

Read More »

ಉಮೇಶ ಕತ್ತಿ ನಿಧನಕ್ಕೆ ಮೋದಿ ಸಂತಾಪ

ಬೆಂಗಳೂರು: ರಾಜ್ಯ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.ಕರ್ನಾಟಕ ರಾಜ್ಯದಲ್ಲಿ 8 ಶಾಸಕ ಹಾಗೂ 4 ಬಾರಿ ಸಚಿವರಾಗಿದ್ದ ಉಮೇಶ್ ಕತ್ತಿ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ್​ ಕತ್ತಿಯೊಬ್ಬರು ಅನುಭವಿ ನಾಯಕರಾಗಿದ್ದರು. ಕರ್ನಾಟಕದ ಅಭಿವೃದ್ಧಿ ಸಾಕಷ್ಟು ಕೊಡುಗೆ ಕೊಟ್ಟವರು. ಅವರ ನಿಧನ ನನಗೆ ನೋವುಂಟು ಮಾಡಿದೆ. ಅವರ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು …

Read More »

ಸಕಲ ಸರ್ಕಾರಿ ಗೌರವಗಳೊಂದಿಗೆ ಉಮೇಶ ಕತ್ತಿ ಅಂತ್ಯಕ್ರಿಯೆ

ಬೆಂಗಳೂರು: ನಿನ್ನೆ ಮಂಗಳವಾರ ರಾತ್ರಿ ನಿಧನರಾದ ಅರಣ್ಯ ಸಚಿವ ಉಮೇಶ ಕತ್ತಿಯವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಇಂದು ಶೋಕಾಚರಣೆ ಹಾಗೂ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು‌ ಆದೇಶ ಹೊರಡಿಸಲಾಗಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

Read More »

ಬೆಂಗಳೂರಿನಲ್ಲಿ ಇನ್ನೂ 3 ದಿನ ಸಾಧಾರಣ ಮಳೆಯಾಗುವ ನಿರೀಕ್ಷೆ

ಬೆಂಗಳೂರು :  ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ಈ ಹಿಂದೆ ಸುರಿದ ಮಳೆಯ ಪರಿಣಾಮದಿಂದ ಆದ ಅನಾಹುತಗಳೇ ಇನ್ನೂ ಸರಿಯಾಗಿಲ್ಲ. ಬೆಂಗಳೂರಿನಲ್ಲಿ ಇನ್ನೂ 3 ದಿನ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಇಂದಿನಿಂದ (ಸೆ. 7) ಸೆ. 9ರವರೆಗೆ ಹಳದಿ ಅಲರ್ಟ್  ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ …

Read More »