Breaking News

ಬೆಂಗಳೂರು

ರಾಜ್ಯದಲ್ಲಿ ಮಳೆ ಮುಂದಿನ 4 ದಿನ ಇನ್ನಷ್ಟು ಬಿರುಸು

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಇನ್ನಷ್ಟು ಬಿರುಸುಗೊಳ್ಳಲಿದೆ. ಶನಿವಾರವೂ ವಿವಿಧ ಜಿಲ್ಲೆಗಳಲ್ಲಿ ಜೋರಾಗಿ ಮಳೆಯಾಗಿದ್ದು, ಮಾನ್ವಿ 19, ಮದ್ದೂರು 10, ಶಿರಾ 9, ರಾಮನಗರ 9, ರಾಯಚೂರು, ಬಳ್ಳಾರಿಯ ಕೊಟ್ಟೂರು, ಶ್ರೀರಂಗಪಟ್ಟಣ ಮತ್ತು ಬೆಂಗಳೂರು ತಲಾ 7 ಸೆಂಮೀ ಬಿದ್ದಿದೆ. ಚಿಕ್ಕಮಗಳೂರು, ಚಾಮರಾಜನಗರ, ಕೋಲಾರದಲ್ಲಿ ಮುಂದಿನ 4 ದಿನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರಿನಲ್ಲಿ ಆ.29ರಿಂದ ಆ.31ರವರೆಗೆ ಭಾರಿ ಮಳೆ ಬೀಳುವ …

Read More »

ಪಿಎಸ್​ಐ ಹಗರಣ : ರಾಜ್ಯಕ್ಕೆ ಮೊದಲ ರ‍್ಯಾಂಕ್ ಅಭ್ಯರ್ಥಿ ಬಂಧನ

ಬೆಂಗಳೂರು: ಪಿಎಸ್​ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಹನುಮಂತ ಅವರನ್ನು ಬಂಧಿಸಿದ್ದಾರೆ. 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ  ಸಂಬಂಧಿಸಿದಂತೆ 17ನೇ ಆರೋಪಿಯಾಗಿರುವ ರಚನಾ ಹನುಮಂತಳನ್ನು ಸಿಐಡಿ (CID) ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದಿದೆ. ನೇಮಕಾತಿಯ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ರಚನಾ ಹನುಮಂತ ಮೊದಲ ರ‍್ಯಾಂಕ್ ಪಡೆದಿದ್ದರು. ಅಕ್ರಮ ಪ್ರಕರಣ …

Read More »

ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು: ನಗರದ ಹಲವೆಡೆ ಗಾಳಿ ಸಹಿತ ಮಳೆ  ಪುನಾರಂಭವಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತ್ಯಾಗರಾಜನಗರ, ಬಸವನಗುಡಿ, ಬನಶಂಕರಿ, ಕಾರ್ಪೊರೇಷನ್​, ಕೆ.ಆರ್.ಮಾರ್ಕೆಟ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್ ಮತ್ತು ಶಾಂತಿನಗರ ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ. ಮಳೆಗೆ ವಾಹನ ಸವಾರರು ಪರದಾಡುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನೈರುತ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆ ರಾಜ್ಯದಲ್ಲಿ ಇನ್ನು 5 ದಿನ ಭಾರಿ ಮಳೆಯಾಗಲಿದೆ ಎಂದು …

Read More »

ವಾಯುಭಾರ ಕುಸಿತ : ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಲ್ಲೂ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲೂ ಕಳೆದ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇಂದಿನಿಂದ ಆಗಸ್ಟ್​ 31ರವರೆಗೂ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ, …

Read More »

ಆರಗ ಜ್ಞಾನೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ಡಿಕೆಶಿ

ಬೆಂಗಳೂರು: ಬಿಡಿಎ ಅಭಿವೃದ್ಧಿಪಡಿಸಿದ ಆರ್‌ಎಂವಿ ಬಡಾವಣೆಯಲ್ಲಿ ಸುಪ್ರೀಂಕೋರ್ಟ್‌ ಆದೇಶ ಉಲ್ಲಂಘಿಸಿ ಬದಲಿ ನಿವೇಶನ ಪಡೆದಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದರು. ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ರಾಜಕೀಯ ಒತ್ತಡ ಇಲ್ಲದೇ ಯಾವುದೇ ಅಧಿಕಾರಿಗೂ ಏನನ್ನೂ ಮಾಡಲು ಸಾಧ್ಯವಿಲ್ಲ. ಫಲಾನುಭವಿಗಳು ಮೊದಲು ನೈತಿಕ ಹೊಣೆ ಹೊರಬೇಕು. ಫಲಾನುಭವಿಗಳು, ಸರ್ಕಾರದ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವವರು ಮೊದಲು ರಾಜೀನಾಮೆ …

Read More »

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ರಾಜ್ಯ ಸರಕಾರಕ್ಕೆ ಶುಕ್ರವಾರ ಅನುಮತಿ ನೀಡಿದೆ.ಆಗಸ್ಟ್‌ 31ರಿಂದ ನಿರ್ದಿಷ್ಟ ಅವಧಿಗೆ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ.ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಹೈಕೋರ್ಟ್ ಈ ತೀರ್ಪು ನೀಡಿದೆ. ನಿನ್ನೆ , ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರ, ವಕ್ಫ್ ಮಂಡಳಿ ಹಾಗೂ ಬಿಬಿಎಂಪಿಗೆ ನಿರ್ದೇಶನ ನೀಡಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠ, ಮೈದಾನವನ್ನು ಆಟದ …

Read More »

ಇಂದಿನಿಂದ ಆ. 31ರವರೆಗೂ ಮಳೆ‌ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ಕರ್ನಾಟಕದಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಇಂದಿನಿಂದ ಆಗಸ್ಟ್​ 31ರವರೆಗೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ. ಈ ಬಾರಿಯ ಗಣೇಶ ಚತುರ್ಥಿಯವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದು ಭಾರೀ ಮಳೆ …

Read More »

ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು : ಪರ್ಸೆಂಟೇಜ್‌ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮ್ಮನೆ ರಾಜಕೀಯ ಆರೋಪ ಮಾಡುತ್ತಿದ್ದಾರೆ. ಅವರೇನು ಸತ್ಯಹರಿಶ್ಚಂದ್ರರಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇನು ಸತ್ಯ ಹರಿಶ್ಚಂದ್ರರಾ? ಕಾಂಗ್ರೆಸ್‌ ಇದ್ದಾಗ ಎಲ್ಲಾ ಪ್ರಕರಣಗಳನ್ನು ತನಿಖೆ ಮಾಡುತ್ತಿದ್ದರೆ? ರಾಜಕೀಯವಾಗಿ ಮಾಡುತ್ತಿರುವ ಪ್ರಯತ್ನ ಇದಾಗಿದೆ. ಆಧಾರರಹಿತವಾಗಿ ಗುತ್ತಿಗೆದಾರರು ಸಹ ರಾಜಕಾರಣಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. …

Read More »

ರಸ್ತೆ ಗುಂಡಿಯಿಂದಾಗಿ ಬೈಕ್ ಸ್ಕಿಡ್ ಆಗಿ ಮತ್ತೊಂದು ಜೀವ ಬಲಿ

ಬೆಂಗಳೂರು : ಕಾಲೇಜಿಗೆ ತನ್ನ ಮಗಳನ್ನು ಬಿಟ್ಟು ವಾಪಾಸ್ ಆಗುತ್ತಿದ್ದ ವೇಳೆ ರಸ್ತೆ ಗುಂಡಿಯಿಂದಾಗಿ ಬೈಕ್ ಸ್ಕಿಡ್ ಆಗಿ ಮತ್ತೊಂದು ಜೀವ ಬಲಿಯಾದ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ. ಹೇರೋಹಳ್ಳಿ ಮುಖ್ಯ ರಸ್ತೆಯ ಗುಂಡಿಯಿಂದ ಸುಪ್ರೀತ್ (44) ಎಂಬ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಆಗಸ್ಟ್ 18ಕ್ಕೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ರಸ್ತೆ ಗುಂಡಿಯಿಂದಾಗಿ ಬೈಕ್ ಸ್ಕಿಡ್ ಆಗಿ ಸುಪ್ರೀತ್ ನೆಲಕ್ಕೆ ಬಿದ್ದಿದ್ದಿದ್ದಾರೆ. ಇನ್ನು, ಆಗಸ್ಟ್ 18ರಂದು ಬಿದ್ದು …

Read More »

ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್  ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದು ಬೆಂಗಳೂರು ನಗರ, ಬೆಂಗಳೂರು …

Read More »