Breaking News

ಬೆಂಗಳೂರು

ದತ್ತಾತ್ರೇಯ ಪೀಠದ ಪೂಜೆ ಕುರಿತು ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯ ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಧರ್ಮಗಳ ಸಂಪ್ರದಾಯಗಳಂತೆ ಪೂಜಾ ವಿಧಿವಿಧಾನ ನೆರವೇರಿಸಲು ಅವಕಾಶ ಕಲ್ಪಿಸಲು ಕೈಗೊಂಡಿರುವ ನಿರ್ಣಯದ ಕುರಿತು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ತಮ್ಮನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮುಸ್ಲಿಂ ಮೌಲ್ವಿ ಸೈಯದ್‌ ಗೌಸ್‌ …

Read More »

ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೌರ ಕಾರ್ಮಿಕರ ಕಾಯಂಗೆ ಸಂಬಂಧಿಸಿದಂತೆ ಇನ್ನೆರಡು ತಿಂಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಗೋವಿಂದ ಕಾರಜೋಳ, ನೇರ ಪಾವತಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಇನ್ನೆರಡು ತಿಂಗಳಲ್ಲಿ ಕಾಯಂಗೊಳಿಸಲಾಗುವುದು. ಸಫಾಯಿ ಕರ್ಮಚಾರಿ ಸಮಸ್ಯೆ ಪರಿಹಾರ ಆಗುವವರೆಗೂ ತಲಾ 2 ಸಾವಿರ ರೂ. ನೀಡುತ್ತಿದೆ. ನೌಕರರನ್ನು …

Read More »

ಮಳೆ ಕುರಿತು ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆ …

Read More »

ಭಾರತ್‌ ಜೋಡೋ ಯಾತ್ರೆ‌ವಹಿನ್ನೆಲೆ, 21 ದಿನಗಳ ಕಾಲ ರಾಹುಲ್‌ ಗಾಂಧಿ ಕರ್ನಾಟಕದಲ್ಲಿ ವಾಸ : ಡಿಕೆಶಿ

ಬೆಂಗಳೂರು: “ಭಾರತ್‌ ಜೋಡೋ ಯಾತ್ರೆ’ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರು 21 ದಿನಗಳ ಕಾಲ ಕರ್ನಾಟಕದಲ್ಲಿ ತಂಗಲಿದ್ದು, ಈ ಯಾತ್ರೆಯನ್ನು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ರೇಸ್‌ ಕೋರ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಯಾತ್ರೆ ಸಂಬಂಧ ಇಡೀ ದೇಶದ ಜನ ಕರ್ನಾಟಕದ ಕಡೆಗೆ ತಿರುಗಿ ನೋಡುವಂತೆ ಮಾಡಬೇಕು. ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ರಾಹುಲ್‌ ಗಾಂಧಿ ಅವರೊಂದಿಗೆ ಹೆಜ್ಜೆ …

Read More »

7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರನ್ನು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೇಲ್ವಕುಮಾರ್ ಅವರನ್ನು ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಆಹಾರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಅವರಿಗೆ ಕಂದಾಯ ಇಲಾಖೆಯ ಹೆಚ್ಚುವರಿ …

Read More »

ಮಾಜಿ ಸಿಎಂ ಮೇಲೆ ಮೊಟ್ಟೆ ಎಸೆ ಹಿನ್ನೆಲೆ ಮಡಿಕೇರಿ ಚಲೋಗೆ ಅಧಿಕೃತ ಸೂಚನೆ

ಬೆಂಗಳೂರು: ಮಡಿಕೇರಿ ಪ್ರವಾಸದ ವೇಳೆಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಹಿನ್ನೆಲೆ ಸಿದ್ದರಾಮಯ್ಯ ಬೆಂಬಲಿಗರು ಮಡಿಕೇರಿ ಚಲೋಗೆ ಅಧಿಕೃತ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ಚಲೋಗೆ ಕಾಂಗ್ರೆಸ್ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ. ತುಕಾರಾಮ್​ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದಾರೆ. ಕಾಂಗ್ರೆಸ್ ‌ ಆ. 26ರ ಬೆಳಗ್ಗೆ 10:30ಕ್ಕೆ ಪ್ರತಿಭಟನೆಗೆ ಕರೆ ನೀಡಿದೆ. ಮಡಿಕೇರಿಯ ಭಗವತಿ …

Read More »

ಧರ್ಮ ವಿಭಜನೆ ಬಗ್ಗೆ ಮನಃಪರಿವರ್ತನೆಯಾಗಿದ್ದರೆ ನಾನದನ್ನು ಸ್ವಾಗತಿಸುತ್ತೇನೆ : ಯಡಿಯೂರಪ್ಪ

ಬೆಂಗಳೂರು: ಧರ್ಮ ವಿಭಜನೆ ಮಾಡಲು ಮುಂದಾಗಿರುವುದು ತಪ್ಪು ಎಂದು ಮನಃಪರಿವರ್ತನೆಯಾಗಿದ್ದರೆ ನಾನದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ರಂಭಾಪುರಿ ಶ್ರೀಗಳ ನಡುವೆ ನಡೆದ ಮಾತುಕತೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶ್ರೀಗಳು ಮತ್ತು ಸಿದ್ದರಾಮಯ್ಯನವರ ನಡುವೆ ಏನು ಮಾತುಕತೆ ನಡೆದಿದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಆದರೆ ಒಂದು ವೇಳೆ ವೀರಶೈವ ಲಿಂಗಾಯಿತ ಧರ್ಮ ಪ್ರತ್ಯೇಕಿಸಲು ತಾನು ಮುಂದಾಗಿರುವುದು ತಪ್ಪು ಎಂದು …

Read More »

ಸೆಟ್ ನಲ್ಲಿ ಕಿರಿಕ್ ಮಾಡಿಕೊಂಡ ಅನಿರುದ್ಧ : 2 ವರ್ಷ ಬ್ಯಾನ್

ಝೀಕನ್ನಡದಲ್ಲಿ ಪ್ರಸಾರವಾಗುವ ಖ್ಯಾತಿ ಧಾರಾವಾಹಿ ಜೊತೆ ಜೊತೆಯಲ್ಲಿ ತಂಡದಲ್ಲಿಎಲ್ಲವೂ ಸರಿ ಇಲ್ಲಅನ್ನೋದು ಮತ್ತೆ ಸಾಭೀತಾಗಿದೆ. ಧಾರಾವಾಹಿಯ ಆರ್ಯವರ್ಧನ್ ಪಾತ್ರಧಾರಿ ಹಾಗೂ ತಂತ್ರಜ್ಞರ ಜೊತೆ ಕಿರಿಕ್ ಮಾಡಿಕೊಂಡಿದ್ದು ಇದೀಗ ನಟ ಅನಿರುದ್ಧ್ ಅವರನ್ನು2 ವರ್ಷಗಳ ಕಾಲ ಬ್ಯಾನ್ ಮಾಡಲಾಗಿದೆ. ‘ಜೊತೆ ಜೊತೆಯಲಿ’ ಧಾರಾವಾಹಿ ಚಿತ್ರೀಕರಣವನ್ನು ಅರ್ಧಕ್ಕೆ ಬಿಟ್ಟು ಹೋಗಿದ್ದ ಅನಿರುದ್ಧ್ ವಿರುದ್ಧ ಕಿರುತೆರೆ ನಿರ್ಮಾಪಕರ ಸಂಘಕ್ಕೆ ದೂರು ನೀಡಲಾಗಿತ್ತು.ಈ ಬಗ್ಗೆ ನಿರ್ಮಾಪಕರ ಸಂಘದಲ್ಲಿ ಚರ್ಚೆ ನಡೆದಿದ್ದು ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. …

Read More »

ಖ್ಯಾತ ಸಾಹಿತಿ, ಕವಿ, ಪತ್ರಕರ್ತ ಉದಯ ಧರ್ಮಸ್ಧಳ ನಿಧನ

ಬೆಂಗಳೂರು: ಖ್ಯಾತ ಸಾಹಿತಿ, ಕವಿ, ಪತ್ರಕರ್ತ ಹಾಗೂ ಕನ್ನಡಪರ ಹೋರಾಟಗಾರ ʻಉದಯ ಧರ್ಮಸ್ಧಳʼ ಅನಾರೋಗ್ಯದಿಂದಾಗಿ ಶುಕ್ರವಾರ ಸಂಜೆ ಕೊನೆಯುಸಿರೆಳೆದಿದ್ದಾರೆ. ಸದಾ ಕ್ರೀಯಾಶೀಲರಾಗಿದ್ದ 64 ವರ್ಷದ ಉದಯ ರವರು ಕಳೆದ ಮೂರು ದಶಕಗಳಿಗಿಂತಲೂ ಹೆಚ್ಟು ಕಾಲ ಕನ್ನಡ, ಕರ್ನಾಟಕ ಹಿತರಕ್ಷಣೆಗಾಗಿ ನಡೆದ ಚಳವಳಿಯಲ್ಲಿ ಭಾಗವಹಿಸುತ್ತಿದ್ದರು. ಧರ್ಮಸ್ಧಳ ಮೂಲವರಾದ ಇವರು ಹಲವು ವರ್ಷಗಳಿಂದ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲೇ ವಾಸವಿದ್ದಾರೆ.

Read More »

ಮೊಟ್ಟೆ ಎಸೆತ ಪ್ರಕರಣ, ಸಿದ್ದರಾಮಯ್ಯ ಅವರಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು : ಯಡಿಯೂರಪ್ಪ

ಬೆಂಗಳೂರು: ಮಡಿಕೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮೊಟ್ಟೆ ಎಸೆದ ಬಗ್ಗೆ ಬಿ.ಎಸ್​ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸರಿಯಲ್ಲ ಯಾವುದೇ ಕಾರಣಕ್ಕೂ ಈ ತರಹ ಘಟನೆ ನಡೆಯಬಾರದು. ಸಿದ್ದರಾಮಯ್ಯ ಇರಬಹುದು ಯಡಿಯೂರಪ್ಪ ಇರಬಹುದು ಈ ರೀತಿಯಲ್ಲಿ ಮೊಟ್ಟೆ ಎಸೆಯಬಾರದು. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಇದ್ದಾರೆ ಅವರಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಈ ರೀತಿಯಲ್ಲಿ ನಡವಳಿಕೆ ಯಾವುದೇ ಕಾರಣಕ್ಕೂ ಸಹಿಸಿಕೂಡದು. ಈ ರೀತಿಯಲ್ಲಿ ಯಾರು ಮಾಡಬಾರದು ಅಂತ ನಾನು ಕೇಳಿಕೊಳ್ಳುತ್ತೇನೆ …

Read More »