Breaking News

ಬೆಂಗಳೂರು

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ 1, ಬಿಜೆಪಿ 2, ಜೆಡಿಎಸ್ ೦

ಬೆಂಗಳೂರು:ಕರ್ನಾಟಕದಿಂದ ನಡೆದ ರಾಜ್ಯಸಭಾ ಚುನಾವಣೆಯ ಮತದಾನ ಮತ್ತು ಎಣಿಕೆ ಶುಕ್ರವಾರ ನಡೆದಿದ್ದು, ತೀವ್ರ ಕುತೂಹಲ ಮೂಡಿಸಿದ್ದ ನಾಲ್ಕನೇ ಸ್ಥಾನವನ್ನು ಬಿಜೆಪಿ ಅಭ್ಯರ್ಥಿ ಲೆಹರ್ ಸಿಂಗ್ ಅವರು ಗೆದ್ದಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಒಮ್ಮತದ ಕೊರತೆ ಬಿಜೆಪಿಗೆ ಲಾಭ ಮಾಡಿ ಕೊಟ್ಟಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಕಾಂಗ್ರೆಸ್ ನಿಂದ ಜೈರಾಂ ರಮೇಶ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದು, ಜೆಡಿಎಸ್ ನ ಕುಪೇಂದ್ರ ರೆಡ್ಡಿ ಮತ್ತು ಕಾಂಗ್ರೆಸ್ ನ …

Read More »

ಶ್ರೀನಿವಾಸಗೌಡಗೆ ಮಾನ ಮರ್ಯಾದೆ ಇದ್ದರೆ ಜೆಡಿಎಸ್‌ಗೆ ರಾಜೀನಾಮೆ ಕೊಡಲಿ : ಕುಮಾರಸ್ವಾಮಿ

ಬೆಂಗಳೂರು : ಕಾಂಗ್ರೆಸ್ ಪರ ಮತ ಚಲಾಯಿಸಿದ ಶಾಸಕ ಶ್ರೀನಿವಾಸಗೌಡಗೆ ಮಾನ ಮರ್ಯಾದೆ ಇದ್ದರೆ ಜೆಡಿಎಸ್‌ಗೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಶ್ರೀನಿವಾಸಗೌಡ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ ಎಂದು ಬೆಳಗ್ಗೆಯೇ ಹೇಳಿದ್ದೆ. ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್‌ ಶಾಸಕ ಸ್ಥಾನ ಉಳಿಸಿಕೊಳ್ಳುವುದು ಕೋಲಾರ ಜನತೆಗೆ ಮಾಡಿದ ಅವಮಾನ. ಕಾಂಗ್ರೆಸ್‌ಗೆ ಮತವೂ ಹಾಕಬೇಕು, ಶಾಸಕ ಸ್ಥಾನವೂ ಉಳಿಯಬೇಕು ಎಂದರೆ ಯಾವ ನೈತಿಕತೆ …

Read More »

ಆತ್ಮಸಾಕ್ಷಿಯ ಮತಗಳು ನಮಗೆ ಬರುತ್ತದೆ : ಕುಮಾರಸ್ವಾಮಿ

ಬೆಂಗಳೂರು : ಇಂದು ರಾಜ್ಯಸಭೆ ಚುನಾವಣೆ ಹಿನ್ನೆಲೆ ವಿಧಾನ ಸೌಧಕ್ಕೆ ಜೆಡಿಎಸ್‌ ಶಾಸಕರು ಆಗಮಿಸಿದ ಬಳಿಕ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಮಾತನಾಡಿ ಆತ್ಮಸಾಕ್ಷಿಯ ಮತಗಳು ನಮಗೆ ಬರುತ್ತದೆ ಎಂದರು. ನಮ್ಮ ಪಕ್ಷದ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದರು ನಾಳೆಯಿಂದ ಕರ್ನಾಟಕದಲ್ಲಿ ಹೊಸ ಚ್ಯಾಪ್ಟರ್‌ ಶುರುವಾಗಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.ರಾಜ್ಯಸಭೆ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಮತದಾನ ಮಾಡುತ್ತಿದ್ದಾರೆ.ವಿಧಾನಸೌಧದ …

Read More »

ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಈಗಾಗಲೇ ಕರ್ನಾಟಕ, ತಮಿಳುನಾಡು, ಗೋವಾ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಮುಂಗಾರು ಚುರುಕಾಗಿದ್ದು, ಕರ್ನಾಟಕದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದೆ.

Read More »

ಪಿಎಸ್‌ಐ ನೇಮಕಾತಿ ಹಗರಣ : ಮೊದಲ ರ್ಯಾಂಕ್ ಕುಶಾಲ್ ಕುಮಾರ್ ಬಂಧನ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಫಸ್ಟ್ ರ್ಯಾಂಕ್ ಅಭ್ಯರ್ಥಿ ಕೂಡ ಅರೆಸ್ಟ್ ಆಗಿದ್ದು, 545 ಹುದ್ದೆ ನೇಮಕಾತಿಯೇ ಸಂಪೂರ್ಣ ಅಕ್ರಮವಾಗಿದೆಯೇ ಎಂಬ ಅನುಮಾನ ಮೂಡುತ್ತಿದೆ. ಪಿಎಸ್ ಐ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ನಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿ ಕುಶಾಲ್ ಕುಮಾರ್ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷೆಯಲ್ಲಿ ಓಎಂಆರ್ ಶೀಟ್ ತಿದ್ದಿದ್ದ ಆರೋಪ ಹಿನ್ನೆಲೆಯಲ್ಲಿ ಕುಶಾಲ್ ಕುಮಾರ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅನುಮಾನದ …

Read More »

ಈದ್ಗಾ ಮೈದಾನ ವಿವಾದ ಬಿಗ್ ಟ್ವಿಸ್ಟ್

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿರುವಂತ ಈದ್ಗಾ ಮೈದಾನ ವಿವಾದ, ಈಗ ತಾರಕಕ್ಕೇರುತ್ತಿದೆ. ಈ ಸ್ಥಳ ಸಾರ್ವಜನಿಕರಿಗೆ ಸೇರಿದ್ದು, ಹಿಂದೂಗಳಿಗೂ ವಿವಿಧ ಆಚರಣೆಗೆ ಅವಕಾಶ ನೀಡುವಂತೆ ಹಿಂದೂ ಸಂಘಟನೆಗಳು ಕೋರಿಕೊಂಡ ನಂತ್ರ, ಮತ್ತಷ್ಟು ವಿವಾದ ಸ್ಪೋಟಗೊಂಡಿದೆ.ಈ ಬೆನ್ನಲ್ಲೇ ಈದ್ಗಾ ಮೈದಾನ ಬಿಬಿಎಂಪಿ ಆಸ್ತಿ ಎಂದಿತ್ತು. ಇದೀಗ ಈದ್ಗಾ ಮೈದಾನ ಬಿಬಿಎಂಪಿ ಆಸ್ತಿಯಲ್ಲ, ವಕ್ಫ್ ಬೋರ್ಡ್ ದು ಎಂಬುದಾಗಿ ಹೇಳಿದೆ. ಈ ಕುರಿತಂತೆ ಮಾತನಾಡಿರುವಂತ ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಅಸದಿ ಅವರು, ಈದ್ಗಾ …

Read More »

ಜೂ. 11 ರವರೆಗೆ ಕರ್ನಾಟಕ, ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಪಶ್ಚಿಮ ಮಾರುತಗಳ ಪರಿಣಾಮದಿಂದಾಗಿ ದಕ್ಷಿಣ ಭಾರತದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅದ್ರಲ್ಲೂ ಜೂನ್ 11 ರವರೆಗೆ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮಳೆ ಕೆಲವು ದಿನಗಳಿಂದಲೂ ಬಿಡುವು ಪಡೆದಿದೆ. ಆದರೆ ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಉತ್ತಮ ಮಳೆ …

Read More »

ಹಿರಿಯ ನಾಗರಿಕರ ಕುರಿತು ಆಡಳಿತಾ ಸುಧಾರಣೆ ಇಲಾಖೆ ಮಹತ್ವದ ನಿಯಮ ಹೊರಡಿಕೆ

ಬೆಂಗಳೂರು: ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸದೇ ಇದ್ದರೆ, ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಿಬ್ಬಂದಿ ಹಾಗೂ ಆಡಳಿತಾ ಸುಧಾರಣೆ ಇಲಾಖೆ ಎಚ್ಚರಿಕೆ ನೀಡಿದೆ. ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಕೆಲಸದ ನಿಮಿತ್ತ ಬಂದಾಗ ಆಸನದ ವ್ಯವಸ್ಥೆ ಮಾಡುವಂತೆ ಹಾಗೂ ಅವರುಗಳ ಮನವಿ/ ಕೋರಿಕೆಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ, ಇಲಾಖೆಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಹಿರಿಯ ನಾಗರಿಕರಿಗೆ ತಲುಪಿಸುವ ವ್ಯವಸ್ಥೆಯನ್ನು …

Read More »

ಕೊರೋನಾ ಪರೀಕ್ಷೆ ಹೆಚ್ಚಳದಿಂದಾಗಿ ಹೊಸ ಪ್ರಕರಣಗಳು ಏರಿಕೆ

ಬೆಂಗಳೂರು: ‘ರಾಜ್ಯದಲ್ಲಿ ಕೊರೋನಾ ಸೋಂಕಿನ ಮತ್ತೊಂದು ಅಲೆಯ ಯಾವುದೇ ಲಕ್ಷಣಗಳೂ ಕಂಡುಬಂದಿಲ್ಲ. ಸೋಂಕು ಕೂಡ ತಟಸ್ಥವಾಗಿದ್ದು, ಪರೀಕ್ಷೆ ಹೆಚ್ಚಳದಿಂದಾಗಿ ಹೊಸ ಪ್ರಕರಣಗಳು ತುಸು ಹೆಚ್ಚಾಗಿವೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಒಂದಿಷ್ಟುಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಆತಂಕಪಡಬೇಕಿಲ್ಲ. ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿದ್ದು, ವರ್ಕ್ಫ್ರಂ ಹೋಂ ನೀತಿಯಿಂದ ಹೊರಬಂದು ಐಟಿ ಕಂಪನಿಗಳು ಕಚೇರಿ ಕೆಲಸ ಆರಂಭಿಸಿವೆ. ಕಳೆದ ಒಂದು ವಾರದಿಂದ ಕೊರೋನಾ ಹೊಸ ಪ್ರಕರಣಗಳು ಒಂದಿಷ್ಟುಹೆಚ್ಚಳವಾಗಿರುವುದು ಹಾಗೂ ಇದರ ಬೆನ್ನಲ್ಲೇ ಆರೋಗ್ಯ …

Read More »

ಆಮ್‌ ಆದ್ಮಿ ಪಾರ್ಟಿ ಅಧಿಕೃತವಾಗಿ ಸೇರ್ಪಡೆಯಾದ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಖ್ಯಾತ ನಟ, ಮಾಜಿ ವಿಧಾನ ಪರಿಷತ್‌ ಸದಸ್ಯ ಮುಖ್ಯಮಂತ್ರಿ ಚಂದ್ರುರವರು ಆಮ್‌ ಆದ್ಮಿ ಪಾರ್ಟಿ ಅಧಿಕೃತವಾಗಿ ಮಂಗಳವಾರ ಸೇರ್ಪಡೆಯಾದರು. ಬೆಂಗಳೂರಿನ ಹೋಟೆಲ್‌ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಚಂದ್ರುರವರನ್ನು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಪಕ್ಷಕ್ಕೆ ಬರಮಾಡಿಕೊಂಡರು. ಆ ಬಳಿಕ ಮಾತನಾಡಿದ ಪೃಥ್ವಿ ರೆಡ್ಡಿ ‘ಮುಖ್ಯಮಂತ್ರಿ ಚಂದ್ರುರವರು ನಾಡು, ನುಡಿ, ಜಲಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇವುಗಳ ರಕ್ಷಣೆಯು ನಮ್ಮ ಪಕ್ಷದ ಮೂಲ ಸಿದ್ಧಾಂತ ಕೂಡ ಆಗಿದೆ. ಭಾರತವು …

Read More »