Breaking News

ಬೆಂಗಳೂರು

3-4 ವಾರಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಆರಂಭವಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಸಾವಿರ ಗಡಿ ದಾಟಿದೆ. ಈ ಬೆಳವಣಿಗೆಯು ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಈ ನಡುವಲ್ಲೇ ಆರೋಗ್ಯ ಇಲಾಖೆಯ ಆಯುಕ್ತ ಡಿ ರಂದೀಪ್ ಅವರು ಮುಂದಿನ 3-4 ವಾರಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಆರಂಭವಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮಾತನಾಡಿ, ಜೂನ್ ಮತ್ತು ಜುಲೈ ತಿಂಗಳು …

Read More »

ಮಾಜಿ ಸಿಎಂ , ಸಿದ್ದರಾಮಯ್ಯ ಭೇಟಿ : ರಾಜಕೀಯದಲ್ಲಿ ರೋಚಕ ಕುತೂಹಲ

ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಜ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಳಗಾವಿಗೆ ತೆರಳುವ ಸಂದರ್ಭದಲ್ಲಿ ಇಬ್ಬರು ನಾಯಕರು ಲಾಂಜ್ ನಲ್ಲಿ ಭೇಟಿ ಮಾಡಿದರು. ಇದೊಂದು ಸೌಹಾರ್ದ ಭೇಟಿ ಎಂದು ಉಭಯ ನಾಯಕರ ಕಚೇರಿ ಮೂಲಗಳು ಹೇಳಿವೆ. ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕನೇ ಅಭ್ಯರ್ಥಿಯ ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರ ಕಸರತ್ತು ಆರಂಭಿಸಿರುವ ವೇಳೆ ಉಭಯ ನಾಯಕರ …

Read More »

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಸಂಚಾರಿ ಆಸ್ಪತ್ರೆಯನ್ನು ಆರಂಭಿಸಲಾಗಿದ್ದು, ಶೀಘ್ರವೇ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರೋಟರಿ ಬೆಂಗಳೂರು ಹೈಗ್ರೌಂಡ್ಸ್ ಸಹಯೋಗದೊಂದಿಗೆ ಇನ್ಫೋಸಿಸ್ ಫೌಂಡೇಶನ್ ಕೊಡ ಮಾಡಿರುವ ಸಂಚಾರಿ ಪ್ರಯೋಗಾಲಯಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಬಜೆಟ್ ನಲ್ಲಿ ಘೋಷಣೆ …

Read More »

ಕೋವಿಡ್ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸಿ ಮೃತಪಟ್ಟಿರುವ ಪರಿಹಾರ ಬಿಡುಗಡೆ

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕೋವಿಡ್ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸಿ ಮೃತಪಟ್ಟಿರುವ ಸರ್ಕಾರಿ ನೌಕರರಿಗೆ ಶಿಕ್ಷಣ ಇಲಾಖೆ ಪರಿಹಾರ ಬಿಡುಗಡೆ ಮಾಡಿದೆ. ಕೊರೊನಾ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸಿ ಮೃತಪಟ್ಟಿರುವ ಸರ್ಕಾರಿ ನೌಕರರಿಗೆ ಪರಿಹಾರ ನೀಡಲು 6.9 ಕೋಟಿ ರೂ. ಬಿಡುಗಡೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Read More »

ಪಿಎಸ್‌ಐ ನೇಮಕಾತಿ ಅಕ್ರಮ : ದರ್ಶನ್ ಗೌಡ ಬಂಧನ..

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಗೌಡ ರಾಮನಗರ ಜಿಲ್ಲೆಯ ಮಾಗಡಿ ಮೂಲದ ನಿವಾಸಿ. ದರ್ಶನ್ ಗೌಡ ಪ್ರಕರಣದಲ್ಲಿ ಸಚಿವ ಅಶ್ವತ್ಥನಾರಾಯಣ ಹೆಸರು ಬಾಯ್ಬಿಟ್ಟಿದ್ದ ಎಂದು ಹೇಳಲಾಗಿತ್ತು. ನಿನ್ನೆ ವಿಚಾರಣೆಗಾಗಿ ಸಿಐಡಿ ಪೊಲೀಸರು ದರ್ಶನ್ ಗೌಡನನ್ನು ವಶಕ್ಕೆ ಪಡೆದಿದ್ದರು. ಇದೀಗ ಆತನನ್ನು ಬಂಧಿಸಿದ್ದಾರೆ. ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ದರ್ಶನ್ ಗೌಡ ಓಎಂಆರ್ ಶೀಟ್ ಖಾಲಿ ಬಿಟ್ಟಿದ್ದ. ಪರೀಕ್ಷೆ ಬಳಿಕ …

Read More »

ರಾಜ್ಯದ ಕಂತು 2000 ರೂ. ಗಳನ್ನು ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಿಎಂ-ಕಿಸಾನ್ ಕರ್ನಾಟಕ ಯೋಜನೆಯಡಿ ರಾಜ್ಯದ ಕಂತು 2000 ರೂ. ಗಳನ್ನು ಬಿಡುಗಡೆ ಮಾಡಿದರು.ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು. ಇಲ್ಲಿಯವರೆಗೆ ರಾಜ್ಯ ಸರ್ಕಾರವು ಒಟ್ಟು 3861.66 ಕೋಟಿ ರೂ. ನೆರವನ್ನು ರೈತರಿಗೆ ಬಿಡುಗಡೆ ಮಾಡಿದೆ.ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ …

Read More »

ಸ್ಯಾಂಡಲ್ ವುಡ್ ನ ಹಿರಿಯ ನಟ ಉದಯ್ ಹುತ್ತಿನಗದ್ದೆ ನಿಧನ

ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ ಉದಯ್ ಹುತ್ತಿನಗದ್ದೆ (62) ಉಸಿರಾಟದ ಸಮಸ್ಯೆಯಿಂದ ಗುರುವಾರ ಸಂಜೆ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. 1987 ರಲ್ಲಿ ಬಿಡುಗಡೆಯಾದ ಆರಂಭ ಸಿನಿಮಾದ ಮೂಲಕ ನಾಯಕನಾಗಿ ಕನ್ನಡ ಚಿತ್ರ ರಂಗಕ್ಕೆ ಎಂಟ್ರಿ ಕೊಟ್ಟ ಅವರು ಶಿವಯೋಗಿ ಅಕ್ಕಮಹಾದೇವಿ,ಅಮೃತ ಬಿಂದು, ಉದ್ಭವ, ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಉಂಡು ಹೋದ ಕೊಂಡೂ ಹೋದ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.

Read More »

ಬಿತ್ತನೆ ಬೀಜ , ಗೊಬ್ಬರ ಕೊರತೆಯಾಗದಂತೆ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು : ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಹಿರಿಯ ಅಧಿಕಾರಿಗಳು ಖುದ್ದು ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇಂದು ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ರಾಜ್ಯದಲ್ಲಿ ಮೇ 31ರ ಮಾಹಿತಿಯಂತೆ 1.26 ಲಕ್ಷ ಮೆಟ್ರಿಕ್ ಟನ್ ಡಿಎಪಿ ಲಭ್ಯವಿದ್ದು, ಒಟ್ಟಾರೆ, 7.64 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ. ರಾಜ್ಯದ ಬೇಡಿಕೆ …

Read More »

ರಾಜ್ಯದಲ್ಲಿ ನಾಲ್ಕು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಕ್ಕೆ ಈಗಾಗಲೇ ನೈಋತ್ಯ ಮುಂಗಾರು ಪ್ರವೇಶವಾಗಿದ್ದು, ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

Read More »

ಪಠ್ಯಪರಿಷ್ಕರಣೆ ವಿವಾದ : 7 ಜನ ಲೇಖಕರು ರಾಜೀನಾಮೆ

ಬೆಂಗಳೂರು: ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ನಡೆದ ಪಠ್ಯಪರಿಷ್ಕರಣೆ ವಿವಾದವು ರಾಜ್ಯದಲ್ಲಿ ಭುಗಿಲೆದ್ದಿದ್ದು, ಇಂಟರ್ ನ್ಯಾಷನಲ್ ಬಸವ ಮ್ಯೂಸಿಯಂ ಎಕ್ಸ್ ಪರ್ಟ್ ಕಮಿಟಿಯಿಂದ 7 ಜನ ಲೇಖಕರು ಬುಧವಾರ ರಾಜೀನಾಮೆ ನೀಡಿದ್ದಾರೆ. ಪರಿಷ್ಕೃತ ಪಠ್ಯದಲ್ಲಿ ಇತಿಹಾಸವನ್ನು ತಿರುಚಲಾಗಿದ್ದು, ಬಸವಣ್ಣವನರ ಬಗ್ಗೆ ಪುಸ್ತಕದಲ್ಲಿ ಅವಹೇಳನಕಾರಿ ಸಂದೇಶ ಇದೆ.ಬಸವ ತತ್ವಕ್ಕೆ ವಿರುದ್ಧವಾಗಿ ರಾಜ್ಯ ಸರಕಾರವು ಅದನ್ನು ಪ್ರಕಟಿಸುತ್ತಿದೆ ಎಂದು ರಾಜೀನಾಮೆ ಸಲ್ಲಿಸಿದ್ದಾರೆ. ಕಮಿಟಿಯಲ್ಲಿದ್ದ ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ. ಜಾಮದಾರ್, ಸಾಹಿತಿ ಡಾ. …

Read More »