Breaking News

ಬೆಂಗಳೂರು

ಖಡಕ್ ಐಪಿಎಸ್ ಅಧಿಕಾರಿ ವಿರುದ್ಧ ದೂರ ದಾಖಲು

ಬೆಂಗಳೂರು: ಖಡಕ್ ಐಪಿಎಸ್ ಅಧಿಕಾರಿ ಎಂದು ಗುರುತಿಸಿಕೊಂಡು ಆಗಾಗ ಸುದ್ದಿಯಲ್ಲಿರುವ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ನಿರ್ದೇಶಕಿ ಡಿ.ರೂಪಾ ಮುದ್ಗಲ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಸರ್ಕಾರದ ಮುಖ್ಯ ಕಾರ್ಯದಶಿಗೆ ನಿಗಮದ ಅಧ್ಯಕ್ಷ ಡಾ. ಬೇಳೂರು ರಾಘವೇಂದ್ರ ಶೆಟ್ಟಿ ದೂರು ನೀಡಿದ್ದಾರೆ. ಐದು ಲಕ್ಷಕ್ಕೂ ಮೇಲ್ಪಟ್ಟ ಟೆಂಡರ್ ನೀಡಬೇಕಾದರೆ ನಿಗಮದ ಅಧ್ಯಕ್ಷರು ಮತ್ತು ಸದಸ್ಯರ ಗಮನಕ್ಕೆ ತರಬೇಕು ಎಂಬ ನಿಯಮ ಇದ್ದರೂ ಆರು ಕೋಟಿಗೂ ಹೆಚ್ಚು ಹಣ ವೆಚ್ಚ ಮಾಡಿದ್ದಾರೆ …

Read More »

ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ : ಇಬ್ರಾಹಿಂ

ಬೆಂಗಳೂರು: ರಾಜ್ಯಸಭೆ ಚುನಾವಣೆ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ಸ್ಥಳೀಯ ನಾಯಕರಿಂದ ಕೊನೇ ಕ್ಷಣದಲ್ಲಿ ಗೇಮ್ ಚೇಂಜ್ ಆಗಿದೆ. ಇದು ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಅಪಮಾನ ಎಂದರು.

Read More »

ರಾಜ್ಯದಲ್ಲಿಂದು 197 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿಂದು 17,716 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 197 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,52,102 ಕ್ಕೆ ಏರಿಕೆ ಆಗಿದೆ.‌ ಪಾಸಿಟಿವ್ ದರವೂ 1.11% ಕ್ಕೆ ಏರಿಕೆ ಕಂಡಿದೆ. ಇತ್ತ 273 ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯತನಕ ಒಟ್ಟು 39,09,966 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿಗೆ ಓರ್ವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,065 ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 2,029 ರಷ್ಟಿದೆ. ವಿಮಾನ‌ …

Read More »

ನಾನು ಹುಟ್ಟಿದ್ದು ಇತ್ತೀಚೆಗೆ, ಹಿರಿಯರಾದ ಸಿದ್ದರಾಮಯ್ಯನವರುರಿದ್ದಾರೆ: ಡಿಕೆಶಿ

ಬೆಂಗಳೂರು: ನಾನು ಹುಟ್ಟಿದ್ದು ಇತ್ತೀಚೆಗೆ. ನನಗೆ 60 ವರ್ಷ. ಸಿದ್ದರಾಮಯ್ಯನವರು ಹಿರಿಯರಿದ್ದಾರೆ. ಆರ್ಯ ದ್ರಾವಿಡ ವಿಚಾರಗಳ ಬಗ್ಗೆ ಪುಸ್ತಕಗಳನ್ನು ಓದಿಕೊಂಡು ಪ್ರತಿಕ್ರಿಯಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್‌ಅವರಿಗೆ ಆರ್ಯ ದ್ರಾವಿಡ ವಿಚಾರವಾಗಿ ಪ್ರಶ್ನೆ ಕೇಳಲಾಯಿತು. ಅದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ‘ಸಿದ್ದರಾಮಯ್ಯ ನವರು ಹಿರಿಯರಿದ್ದಾರೆ. ಶಾಸಕಾಂಗ ಪಕ್ಷದ ನಾಯಕರಿದ್ದಾರೆ. ನಾನು ಇದರ ಬಗ್ಗೆ ಹೆಚ್ಚು ಅಧ್ಯಯನ ಮಾಡಿಲ್ಲ. ನಾನು ಹುಟ್ಟಿದ್ದು …

Read More »

UPSC ಫಲಿತಾಂಶ : ಇಲ್ಲಿದೆ ನೋಡಿ ಕನ್ನಡಿಗರ ಟಾರ್ಪರ್ ಲಿಸ್ಟ್

ಬೆಂಗಳೂರು : ಕೇಂದ್ರ ನಾಗರಿಕ ಸೇವಾ ಆಯೋಗ (UPSC) 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ. ಟಾಪ್​ 10ರಲ್ಲಿ ಮೊದಲ ನಾಲ್ಕು Rank ಮಹಿಳೆಯರ ಪಾಲಾಗಿವೆ. ಕನ್ನಡಿಗರು ಸಹ ಸಾಧನೆಗೈದಿದ್ದಾರೆ. ದಾವಣಗೆರೆಯ ಅವಿನಾಶ್ 31ನೇ Rank ಪಡೆದಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ‌. ಅವಿನಾಶ್​ ಅವರು ಮೊದಲ ಪ್ರಯತ್ನದಲ್ಲೇ ಯುಪಿಎಸ್ ಸಿ ಪರೀಕ್ಷೆಯಲ್ಲಿ ಪಾಸ್​ ಆಗಿದ್ದು, ಕುಟುಂಬಸ್ಥರ ಸಂತಸಕ್ಕೆ ಕಾರಣವಾಗಿದೆ. ಕನ್ನಿಡಿರ 25 ಅಭ್ಯರ್ಥಿಗಳು ಮೇಲುಗೈ ದಾವಣಗೆರೆಯ ಅವಿನಾಶ್ …

Read More »

ರೆಸ್ಟೋರೆಂಟ್​ನಲ್ಲಿ ಯುವಕನ ಬರ್ಬರ ಕೊಲೆ

ಬೆಂಗಳೂರ: R.R.ನಗರದ ರೆಸ್ಟೋರೆಂಟ್​ನಲ್ಲಿ ಯುವಕನ ಬರ್ಬರ ಕೊಲೆಯಾಗಿದೆ. ಚಾಕುವಿನಿಂದ ಇರಿದು ಮಿಲನ್ ಬರ್ಲಾ (25) ಎಂಬ ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಆರೋಪಿ ಆರ್ಯನ್ ಪುಷ್ಕರ್ (20) ಎಂಬುವನನ್ನು ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

11 ಮಂದಿ ಐಎಎಸ್ ಅಧಿಕಾರಿಗಳ ವರ್ಗಾಯಿಸಿ ಆದೇಶ ಹೊರಡಿಕೆ

ಬೆಂಗಳೂರು : 11 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಜನೀಶ್ ಗೋಯಲ್​ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಐಎಸ್​ಎನ್ ಪ್ರಸಾದ್​ ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದಾರೆ. ಉಮಾಶಂಕರ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ರಶ್ಮಿ ವಿ.ಮಹೇಶ್- ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ, ಪಂಕಜ್ ಕುಮಾರ್ ಪಾಂಡೆ- ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿ, …

Read More »

ಟ್ರಾನ್ಸ್ ಪೋರ್ಟ್ ಮಾಲೀಕ ಆತ್ಮಹತ್ಯೆಗೆ ಶರಣು

ಬೆಂಗಳೂರು : ಟ್ರಾನ್ಸ್ ಪೋರ್ಟ್ ಮಾಲೀಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಸರುಘಟ್ಟ ರಸ್ತೆಯ ಹವನೂರು ಬಡಾವಣೆಯಲ್ಲಿ ನಡೆದಿದೆ. ಟ್ರಾನ್ಸ್ ಪೋರ್ಟ್ ಮಾಲೀಕ ಪ್ರಮೋದ್ ಹೆಗಡೆ (45) ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಮೋದ್ ಹೆಗಡೆ ಮೂಡಬಿದರಿ ಮೂಲದವರಗಾಗಿದ್ದು, 16 ವರ್ಷಗಳ ಹಿಂದೆ ವೀಣಾರನ್ನು ಮದುವೆಯಾಗಿದ್ದರು.ಪತ್ನಿ ವೀಣಾ ಸಂಬಂಧಿಕರ ಮನೆಗೆ ತೆರಳಿದ್ದರು. ಈ ವೇಳೆ ಸ್ನೇಹಿತರ ಜೊತೆಗೆ ಮ್ಯಾಚ್ ನೋಡಿ ಬಳಿಕ ರಾತ್ರಿ 10.30 ರ ಸುಮಾರಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ವೀಣಾ …

Read More »

ಪಕ್ಷದ ಅಭ್ಯರ್ಥಿಗಳನ್ನಾಗಿ ನಿರ್ಮಲಾ ಸೀತಾರಾಮನ್ ಮತ್ತು ಜಗ್ಗೇಶ್ ಹೆಸರು ಘೋಷಣೆ

ಬೆಂಗಳೂರು: ಜೂನ್ 10 ರಂದು ನಡೆಯಲಿರುವ ಮುಂಬರುವ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಪಕ್ಷದ ಅಭ್ಯರ್ಥಿಗಳನ್ನಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ ಮತ್ತು ರಾಜಕಾರಣಿ ಜಗ್ಗೇಶ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಿಸಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲು ಉತ್ತರ ಪ್ರದೇಶದಿಂದ ಸೀತಾರಾಮನ್ ಅವರನ್ನು ಕಣಕ್ಕಿಳಿಸಬಹುದು ಎಂಬ ಊಹಾಪೋಹಗಳ ನಡುವೆಯೇ ಈ ಘೋಷಣೆ ಹೊರಬಿದ್ದಿದೆ.ಕರ್ನಾಟಕದಲ್ಲಿನ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳ ಪೈಕಿ ಮೂರನ್ನು ಭದ್ರಪಡಿಸಿಕೊಳ್ಳಲು ಚರ್ಚೆ ನಡೆಸಲಾಗಿದೆ …

Read More »

ಜೂನ್‌ 5ರವರೆಗೆ ಮುಂಗಾರು ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ನಾನಾ ಕಾರಣಗಳಿಂದ ವಿಳಂಬಗೊಂಡಿದ್ದ ಬಹುನಿರೀಕ್ಷಿತ ಮುಂಗಾರು ಮಳೆ ಜೂನ್‌ 5ಕ್ಕೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಇನ್ನು ಕೇವಲ 2 ಅಥವಾ 3 ದಿನಗಳಲ್ಲಿ ನೆರೆ ರಾಜ್ಯ ಕೇರಳಕ್ಕೂ ಮುಂಗಾರು ಪ್ರವೇಶವಾಗಲಿದೆ ಎನ್ನಲಾಗಿದೆ.ಪ್ರಸ್ತುತ ಹವಾಮಾನದ ಅನ್ವಯ ಮೇ 30 ರಿಂದ ಜೂ.2 ರವರೆಗೆ ಮುಂಗಾರು ಮಾರುತಗಳ ಪ್ರವೇಶವಾಗಲಿದೆ ಎಂದು ಐಎಂಡಿ ಅಂದಾಜಿಸಿದೆ.

Read More »