Breaking News

ಬೆಂಗಳೂರು

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವಂದಿತಾ ಶರ್ಮಾ ನೇಮಕ

ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ಇದೇ ಮೇ 31 ರಂದು ತೆರವಾಗಲಿರುವ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಲಿದ್ದಾರೆ.ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ

Read More »

2021 ಕೆಎಎಸ್ ವಿರುದ್ಧ ಸಿಡಿದೆದ್ದ ಸುರೇಶ್ ಕುಮಾರ್

ಬೆಂಗಳೂರು: 2021ರ ಕೆಎಎಸ್ ಮುಖ್ಯ ಪರೀಕ್ಷೆ ಮೌಲ್ಯಮಾಪನ ಕುರಿತಂತೆ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಪತ್ರ ಬರೆದು ಮೌಲ್ಯ ಮಾಪನ ಆರಂಭಗೊಂಡಿದ್ಯಾ ಅಥವಾ ಇಲ್ಲವಾ ಎಂಬುದಾಗಿ ಕೋರಿದ್ದರು. ಆದ್ರೇ.. ಈವರೆಗೆ ಯಾವುದೇ ಉತ್ತರ ಕರ್ನಾಟಕ ಲೋಕಸೇವಾ ಆಯೋಗದಿಂದ ಬಾರದ ಕಾರಣ, ಕೆಪಿಎಸ್ಸಿ ವಿರುದ್ಧ ಸಿಡಿದೆದ್ದಿದ್ದಾರೆ. ಮೇ.31, 2022ರಂದು ಆಯೋಗದ ಮುಂದೆ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, 2021ರ ಫೆಬ್ರವರಿಯಲ್ಲಿ ನಡೆದಿದ್ದಂತ ಕೆಎಎಸ್ …

Read More »

ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ರಾಜೀನಾಮೆ

ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಇಂದು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಚಂದ್ರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಚಂದ್ರುಗೆ ಟಿಕಟ್ ನೀಡದ ಹಿನ್ನೆಲೆಯಲ್ಲಿ ಬೇಸರಗೊಂಡು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Read More »

ಕಾಲೇಜಿಗೆ ಸೇರಲು ಹೊರಟ್ಟಿದ ಹುಡುಗಿ ಸ್ಮಶಾನ ಸೇರಿದಳು : ವಿಧಿ ಆಟ

ಬೆಂಗಳೂರು: ಖಾಸಗಿ ಸ್ಕೂಲ್​ ಬಸ್​ ಮತ್ತು ಬೈಕ್​ ನಡುವೆ ನಗರದ ಬನಶಂಕರಿಯಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, 16 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹಾರೋಹಳ್ಳಿಯ ಕೀರ್ತನ ಮೃತ ದುರ್ದೈವಿ. ಇತ್ತೀಚಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸ್​ ಆಗಿದ್ದ ಕೀರ್ತನ ಮತ್ತು ಹರ್ಷಿತಾ ಇಬ್ಬರೂ ಕನಕಪುರ ರಸ್ತೆಯ ನೆಟ್ಟಿಗೆರೆ ಬಳಿಯ ಅಕ್ಕನ ಮನೆಗೆ ಬುಧವಾರ ತೆರಳಿದ್ದರು. ಗುರುವಾರ ಬೆಳಗ್ಗೆ ನಾಗರಬಾವಿಯ ಸರ್ಕಾರಿ ಕಾಲೇಜಿಗೆ ಸೇರಲೆಂದು ಸ್ನೇಹಿತ ದರ್ಶನ್​ನ ಬೈಕ್​ನಲ್ಲಿ ತ್ರಿಬಲ್​ ರೈಡಿಂಗ್​ನಲ್ಲಿ …

Read More »

ಮೇ .27ರಂದು ವಿಧಾನಸೌಧದಲ್ಲಿ ಕೆಲಸಗಳು ಸ್ಥಗಿತ

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯದ ನೌಕರರ ಸಂಘ ಮೇ 27ರಂದು ಸಚಿವಾಲಯ ಬಂದ್‌ಗೆ ಕರೆ ನೀಡಿದೆ. ಇದರಿಂದಾಗಿ ಒಂದು ದಿನದ ಮಟ್ಟಿಗೆ ವಿಧಾನಸೌಧದಲ್ಲಿ ಕೆಲಸಗಳು ಸ್ಥಗಿತಗೊಳ್ಳುವ ನಿರೀಕ್ಷೆ ಇದೆ. ಸಚಿವಾಲಯದ 542 ಕಿರಿಯ ಸಹಾಯಕ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 27ರ ಶುಕ್ರವಾರ ಸಚಿವಾಲಯ ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕ ಸರ್ಕಾರದ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ ಈ ಕುರಿತು …

Read More »

ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ ಡಿಕೆಶಿ

ಬೆಂಗಳೂರು: ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಬಿಜೆಪಿಗೆ ಸೇರಲು ಒಪ್ಪದಿದ್ದಾಗ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಟ್ವೀಟ್ ಮೂಲಕ ಈ ಬಗ್ಗೆ ಅವರು ಆರೋಪಿಸಿದ್ದು, ಸರ್ಕಾರಿ ಸಂಸ್ಥೆಗಳಿಂದ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ …

Read More »

ಕೊಕೈನ್ ಸಪ್ಲೈ : ಶ್ರೀನಿವಾಸ್ ಬಂಧನ

ಬೆಂಗಳೂರು: ಡ್ರಗ್ ಕೇಸ್ ನಲ್ಲಿ ಖ್ಯಾತ ಉದ್ಯಮಿ ದಿ.ಆದಿಕೇಶವಲು ಮಗ ಶ್ರೀನಿವಾಸ್ ಅವರನ್ನು ಬೆಂಗಳೂರಿನ NCB ಅಧಿಕಾರಿಗಳು ಬಂಧಿಸಿದ್ದಾರೆ. ಮೊನ್ನೆ ತಡರಾತ್ರಿ ಯಲಹಂಕ ಬಳಿ ಸೆಲೆಬ್ರಿಟಿ ಪಾರ್ಟಿಯಲ್ಲಿ ಕೊಕೈನ್ ಸಪ್ಲೈ ಆಗಿದ್ರ ಬಗ್ಗೆ ಖಚಿತ ಮಾಹಿತಿ ಪಡೆದ NCB ಅಧಿಕಾರಿಗಳು, ಆರೋಪಿ ಶ್ರೀನಿವಾಸ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಬಂಧಿತ ಶ್ರೀನಿವಾಸ್ ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಶ್ರೀನಿವಾಸ್ ಮನೆ ಮೇಲೂ ಎನ್ ಸಿಬಿ ಅಧಿಕಾರಿಗಳು ದಾಳಿ …

Read More »

ಮಾಜಿ ಸಿಎಂಗೆ ವಿಶೇಷ ಕೋರ್ಟ್ ಸಮನ್ಸ್ ಜಾರಿ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ವಿಶೇಷ ಕೋರ್ಟ್ ಸೋಮವಾರ ಸಮನ್ಸ್ ಜಾರಿ ಮಾಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಸಮನ್ಸ್ ಜಾರಿ ಮಾಡಿದ್ದು, 24 ರಂದು ನಡೆಯುವ ವಿಚಾರಣೆಗೆ ಖದ್ದು ಹಾಜರಾಗುವಂತೆ ಸೂಚಿಸಲಾಗಿದೆ.

Read More »

ಶಾಸಕ ಮುನಿರಾಜು ಹೇಳಿಕೆಗೆ ತಿರಿಗೇಟು ನೀಡಿದ ಮಾಜಿ ಸಿಎಂ

ಬೆಂಗಳೂರು: ‘ಉಪಚುನಾವಣೆಯೊಂದರಲ್ಲಿ ಸಾವಿರ ಜನ ಕಾರ್ಯಕರ್ತರು ಬಂದು ಐದೈದು, ಹತ್ತತ್ತು ಓಟ್ ಹಾಕಿದ್ದರು’ ಎಂದು ಬಿಜೆಪಿ ಮಾಜಿ ಎಸ್. ಶಾಸಕ ಮುನಿರಾಜು ಹೇಳುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ಕುರಿತು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ‘ಏನಿದು ರಹಸ್ಯ? ಅಸಹ್ಯ?’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ …

Read More »

ಮಹಿಳೆಯರ ರಕ್ಷಣೆಗೆ ಹೆಚ್ಚಿನ ಆದ್ಯತೆ : ಕಮೀಷನರ್ ಪ್ರತಾಪ್ ರೆಡ್ಡಿ

ಬೆಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿರುವ ಸಿ.ಹೆಚ್. ಪ್ರತಾಪ್ ರೆಡ್ಡಿ, ಮಹಿಳೆಯರ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮೀಷನರ್ ಪ್ರತಾಪ್ ರೆಡ್ಡಿ, ಬೆಂಗಳೂರಿನಲ್ಲಿ ಶೀಘ್ರದಲ್ಲಿಯೇ ವಾಹನ ಟೋಯಿಂಗ್ ಆರಂಭವಾಗಲಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜತೆ ಮಾತನಾಡಿ ಟೋಯಿಂಗ್ ಜಾರಿಗೊಳಿಸುತ್ತೇವೆ ಎಂದರು. ಪ್ರತಿ ಸ್ಟೇಷನ್ ನಲ್ಲಿಯೂ ಕನಿಷ್ಠ ನಾಲ್ಕು ಸಿಸಿ ಟಿವಿ ಅಳವಡಿಸಲಾಗುವುದು. ಯಾರೇ ದೂರು ನೀಡಿದರೂ ದಾಖಲೆಯಾಗಬೇಕು. …

Read More »