admin
May 7, 2022
Breaking News, ಬೆಂಗಳೂರು
ಬೆಂಗಳೂರು : ರೈತನ ಮನೆ ಬಾಗಿಲಲ್ಲೇ ಜಾನುವಾರುಗಳಿಗೆ ಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷಿ ಪಶು ಸಂಜೀವಿನಿ ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಂಜೂರು ಮಾಡಿರುವ 275 ಸಂಚಾರಿ 7 ರ ಇಂದು ಲೋಕಾರ್ಪಣೆಗೊಳ್ಳಲಿವೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಭು ಚೌವ್ಹಾಣ್, 70 ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ ಕೇಂಧ್ರ ಸಚಿವ ಪರ್ಷೋತ್ತಮ ರೂಪಾಲ ಹಾಗೂ ಸಿಎಂ ಬಸವರಾಜ …
Read More »
admin
May 3, 2022
Breaking News, ಬೆಂಗಳೂರು
ಬೆಂಗಳೂರು : ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ -2021ಯುನಿವರ್ಸಿಟಿ ಗೇಮ್ಸ್ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಇಂದು ವಿಶೇಷ ವಿಮಾನದ ಮೂಲಕ ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ರಾಜ್ಯ ಸಚಿವರುಗಳಾದ ಅರಗ ಜ್ಞಾನೇಂದ್ರ, ಗೋವಿಂದ ಎಮ್ ಕಾರಜೋಳ, ನಾರಾಯಣ …
Read More »
admin
May 3, 2022
Breaking News, ಬೆಂಗಳೂರು
ಬೆಂಗಳೂರು: ಮಹಾರಾಷ್ಟ್ರದ ರಾಜಕಾರಣಿಗಳು ತಮ್ಮ ರಾಜಕೀಯ ಉಳಿವಿಗಾಗಿ ಭಾಷೆ ಅಥವಾ ಗಡಿ ವಿವಾದವನ್ನು ಬಳಸಿಕೊಳ್ಳಬೇಡಿ ಎಂದು ಒತ್ತಾಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೆರೆಯ ರಾಜ್ಯಕ್ಕೆ ಕರ್ನಾಟಕ ತನ್ನ ಒಂದು ಇಂಚು ಭೂಮಿಯನ್ನು ಸಹ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರ್ನಾಟಕದ ಗಡಿ ವಿಚಾರದ ಬಗ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮ ಒಂದಿಂಚೂ ಜಾಗವನ್ನೂ ಬಿಟ್ಟು ಕೊಡುವುದಿಲ್ಲ. ಮಹಾರಾಷ್ಟ್ರದಲ್ಲಿ …
Read More »
admin
April 30, 2022
Breaking News, ಬೆಂಗಳೂರು
ಬೆಂಗಳೂರು: ನಗರದ ಶಾಂತಿನಗರದಲ್ಲಿರುವ ಕೊಳದಮಠದಲ್ಲಿದ ಶಾಂತವೀರ ಸ್ವಾಮೀಜಿಯವರು (80), ಇಂದು ಲಿಂಗೈಕ್ಯರಾಗಿದ್ದಾರೆ. ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಶಾಂತಿನಗರದಲ್ಲಿರುವ ಕೊಳದ ಮಠದಲ್ಲಿಶ್ರೀ ಶಾಂತವೀರ ಸ್ವಾಮೀಜಿಗಳು ಇಂದು ಎಂದಿನಂತೆ ತಮ್ಮ ನಿತ್ಯಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ.
Read More »
admin
April 30, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದ ಪ್ರತಿ ಗ್ರಾಮಪಂಚಾಯಿತಿ ಗೊಂದು ಸ್ವಾಮಿ ವಿವೇಕಾನಂದ ಹೆಸರಿನ ಸಂಘಗಳನ್ನು ರೂಪಿಸಿ, ಯುವಕರ ಸ್ವಾವಲಂಬನೆ,ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳಲು ಕ್ರೀಡಾ ಮತ್ತು ಯುವಸಬಲೀಕರಣ ಇಲಾಖೆ ಯೋಜನೆ ರೂಪಿಸಲಿದೆ. ಈ ಕುರಿತು ಮಾಹಿತಿ ನೀಡಿರುವ ಕ್ರೀಡಾ ಸಚಿವ ನಾರಾಯಣಗೌಡ, ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೊಂದು ಯುವ ಸಂಘಗಳನ್ನು ಸ್ಥಾಪಿಸಿ, ಯುವಕರಿಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸಿ,ಯುವಸಮುದಾಯಕ್ಕೆ ನಾಯಕತ್ವದ ಗುಣ, ನಿರುದ್ಯೋಗ ನಿವಾರಣೆಗೆ ಯೋಜನೆ ರೂಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
Read More »
admin
April 26, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಿಂದ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರೋ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹೀಗೆ ಸುಳ್ಳು ಮಾಹಿತಿ ನೀಡಿ, ಜಾತಿ ಪ್ರಮಾಣಪತ್ರವನ್ನು ಪಡೆದಿರುವ ಕುರಿತಂತೆ ಮಾಹಿತಿ ಸಂಗ್ರಹಿಸಿ, ನೀಡಲು ಇದೀಗ ಆದೇಶಿಸಿದೆ. ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ರಾಜ್ಯದ ಹಲವಾರು ಕಡೆ ಅನರ್ಹರು ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ಪಡೆದಿರೋ ಬಗ್ಗೆ ದಿನಾಂಕ 20-04-2022ರಂದು ನಡೆದ …
Read More »
admin
April 20, 2022
Breaking News, ಬೆಂಗಳೂರು
ಮೈಸೂರು: ದೊಡ್ಮನೆಯ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರುಯಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಮರಳಿದ್ದಾರೆ ಎಂದು ಹೇಳಲಾಗುತ್ತಿದೆ. ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಜೇಮ್ಸ್ ಚಿತ್ರದ ಬಿಡುಗಡೆ, ಚಿತ್ರ ಪ್ರದರ್ಶನದ ಸೇರಿದಂತೆ ವಿವಿಧ ವಿಚಾರಗಳಲ್ಲಿ ಬ್ಯುಸಿ ಇದ್ದಂತ ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿರೋದೆ ಎಂದು ಹೇಳಲಾಗುತ್ತಿದೆ.
Read More »
admin
March 25, 2022
Breaking News, ಬೆಂಗಳೂರು
ಬೆಂಗಳೂರು :ವರುಣ ಆರ್ಭಟಕ್ಕೆ ಜನರು ಮತ್ತು ರೈತರಿಗೆ ಸಿಡಿಲು ಬಡದಂತೆ ಬಾಸವಾಗಿದೆ. ಬೆಳೆಗಳ ನಾಶದಿಂದಾಗಿ ರೈತರು ಕಂಗಲಾಯಾಗಿದ್ದಾರೆ. ಮತ್ತೆ ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
Read More »
admin
March 19, 2022
Breaking News, ಬೆಂಗಳೂರು
ಬೆಂಗಳೂರು : ಮಾರ್ಚ್ 28 ರಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುತ್ತೇನೆ.ಸೋನಿಯಾ ಗಾಂಧಿ,ರಾಹುಲ್ ಗಾಂಧಿ, ನಮ್ಮ ವರಿಷ್ಠರು ನನಗೆ ಅವಕಾಶ ಕೊಟ್ಟು,ನೇಮಿಸಿದ್ದಾರೆ.ಖರ್ಗೆ ಸೇರಿ ಎಲ್ಲರೂ ಬೆಂಬಲ ಸೂಚಿಸಿದ್ದಾರೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪ್ರಚಾರ ಸಮಿತಿಯನ್ನ ನಾವು ಬಲಪಡಿಸಬೇಕಿದೆ. ರಾಜ್ಯ,ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಬೇಕಿದೆ. 5 ವರ್ಷ ಜಲಸಂಪನ್ಮೂಲ ಸಚಿವನಾಗಿದ್ದೆ. ಗೃಹ ಸಚಿವನಾಗಿಯೂ ನಾನು ಕೆಲಸ ಮಾಡಿದ್ದೇನೆ. ಎಲ್ಲರನ್ನ …
Read More »
admin
March 19, 2022
Breaking News, ಬೆಂಗಳೂರು
ಬೆಂಗಳೂರು: ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಅಪ್ಪಳಿಸಲಿದ್ದು, ಮಾರ್ಚ್ 21ರಂದು ಅಸನಿ ಎಂಬ ಈ ವರ್ಷದ ಮೊದಲ ಚಂಡಮಾರುತ ಬೀಸಲಿದೆ. ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಸನಿ ಚಂಡಮಾರುತ ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳ ಉದ್ದಕ್ಕೂ ಬೀಸಲಿದ್ದು, ಗಂಟೆಗೆ 70-90 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಬದಲಾವಣೆಯಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ …
Read More »