Breaking News

ಬೆಂಗಳೂರು

ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಎಸಿಬಿ ಅಧಿಕಾರಿಗಳು :78 ಕಡೆ ದಾಳಿ

ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯದ 18 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಏಕಕಾಲಕ್ಕೆ ಇನ್ನೂರಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಶಾಕ್​ ನೀಡಿದ್ದು, ರಾಜ್ಯಾದ್ಯಂತ 78 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ 3 ಅಧಿಕಾರಿಗಳ ಮನೆ ಮತ್ತು ಕಚೇರಿ ಸೇರಿದಂತೆ 14 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿ.ಕೆ ಶಿವಕುಮಾರ್ ಹೆಚ್ಚುವರಿ ನಿರ್ದೇಶಕ, ಕೈಗಾರಿಕೆ & ವಾಣಿಹಜ್ಯ ಇಲಾಖೆ, ಖನಿಜ ಭವನ, …

Read More »

ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು : ದ್ವಿತೀಯ ಪಿಯು ಪರೀಕ್ಷೆ ಮತ್ತು ಎನ್‌ಟಿ‌ಎ ನಡೆಸುವ ಜೆಇಇ ಪರೀಕ್ಷೆಯ ಕೆಲ ವಿಷಯಗಳು ಒಂದೇ ದಿನಾಂಕದಂದು ಬಂದಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ (ತಾತ್ಕಾಲಿಕ) ಪರಿಷ್ಕರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಟ್ವೀಟ್‌ ಮಾಡಿದ್ದಾರೆ. ಏ.22ರಿಂದ ಮೇ 11ರವರೆಗೆ ಪರೀಕ್ಷೆ ನಡೆಯಲಿದೆ. ವೇಳಾಪಟ್ಟಿಯ ಪ್ರಕಾರ, ಏ.22ರಂದು ವ್ಯವಹಾರ ಅಧ್ಯಯನ, 23ರಂದು ಹಿಂದಿ, 25ರಂದು ಅರ್ಥಶಾಸ್ತ್ರ, 26ರಂದು ರಸಾಯನವಿಜ್ಞಾನ, 27ರಂದು ಸಂಸ್ಕೃತ, 28ರಂದು …

Read More »

ಕರುನಾಡಿಗೆ ಕರೆ ನೀಡಿದ ಡಿಕೆಶಿ

ಬೆಂಗಳೂರು: ಮಾರ್ಚ್ 3 ಮತ್ತೊಂದು ಇತಿಹಾಸ ಸೃಷ್ಟಿಯಾಗುವ ಸಮಯ. ಈ ಅಮೋಘ ಘಳಿಗೆಗೆ ನೀವು ಸಾಕ್ಷಿಯಾಗಬೇಕು ಎಂದು ಮೇಕೆದಾಟು ಪಾದಯಾತ್ರೆಯಲ್ಲಿ ನಿರತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜ್ಯದ ಜನರಿಗೆ ಕರೆ ಕೊಟ್ಟಿದ್ದಾರೆ. ಮೂರನೇ ತಾರೀಕು ಪಾದಯಾತ್ರೆ ಅಂತ್ಯ ಮಾಡಲಿದ್ದೇವೆ. ರಾಜ್ಯದ ಉದ್ದಗಲಕ್ಕೂ ಕಾರ್ಯಕರ್ತರಿಗೆ ಮುಖಂಡರಿಗೆ ಮನವಿ ಮಾಡುತ್ತೇನೆ. ನೀವು ಮೂರನೇ ತಾರೀಖು ಬೆಳಗ್ಗೆ ಪ್ಯಾಲೆಸ್ಗೆ ಬಂದು ಅಲ್ಲಿಂದ ಪ್ಯಾಲೆಸ್ ನಿಂದ ಪಾದಯಾತ್ರೆಗೆ ಹೆಜ್ಜೆ ಹಾಕಬೇಕು. ಇದು ನಿಮಗೆ ಅನುಭವದ …

Read More »

ಉಕ್ರೇನ್ : ನವೀನ್ ಸಾವಿಗೆ ಕೇಂದ್ರ ಸರಕಾರದ ನಿರ್ಲ್ಯಕ್ಷವೇ ಕಾರಣ : ಸಿದ್ದರಾಮಯ್ಯ

ಬೆಂಗಳೂರು: ರಷ್ಯಾ ನಡೆಸಿದ ಶೆಲ್ ನಲ್ಲ ನಡೆದ ದಾಳಿಯಲ್ಲಿ ಭಾರತಿಯ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದು ವಿಷಾದಿನಿಯ. ನವೀನ್ ಸಾವಿನ ಸಂಬಂಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದರು. ವಿದ್ಯಾರ್ಥಿಯ ಸಾವಿಗೆ ಕೇಂದ್ರ ಸರಕಾರದ ನಿರ್ಲ್ಯಕ್ಷವೇ ಕಾರಣ ಎಂದು ಸಿದ್ದರಾಮಯ್ಯ ದೂರಿದ್ದರು. “ಉಕ್ರೇನ್‌ನಲ್ಲಿ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ್ ಸಾವಿಗೆ ಯುದ್ದದಾಹಿ ರಷ್ಯಾ ಸೇನೆ ಎಷ್ಟು ಹೊಣೆಯೋ, ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಸಕಾಲದಲ್ಲಿ ನೆರವಾಗದೆ ನಿರ್ಲಕ್ಷಿಸಿದ @PMOIndia ಮತ್ತು …

Read More »

ಉಕ್ರೇನ್ ನಿಂದ ಭಾರತಕ್ಕೆ ಸುರಕ್ಷಿತವಾಗಿ ಬಂದ 5 ವಿದ್ಯಾರ್ಥಿಗಳು

ದೇವನಹಳ್ಳಿ(ಬೆಂಗಳೂರು): ಉಕ್ರೇನ್​ನಲ್ಲಿ ಭಾರತೀಯರು ಸಿಲುಕಿಕೊಂಡಿದ್ದು, ಅಲ್ಲಿಂದ ಅವರನ್ನು ಮರಳಿ ದೇಶಕ್ಕೆ ಕರೆತರುವ ಕೆಲಸ ಆಗುತ್ತಿದೆ. ಅದರಂತೆ ಐವರು ವಿದ್ಯಾರ್ಥಿಗಳು ಉಕ್ರೇನ್​ನಿಂದ ದೆಹಲಿಗೆ ಬಂದು, ಅಲ್ಲಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ನಿನ್ನೆ ರಾತ್ರಿ 8 ಗಂಟೆಗೆ ಆಗಮಿಸಿದ್ದಾರೆ. ಸೋಮವಾರ ರಾತ್ರಿ 5 ವಿದ್ಯಾರ್ಥಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿದ್ಯಾರ್ಥಿಗಳಾದ ಶ್ರವಣ ಸಂಗಣ್ಣ, ಶಕ್ತಿಶ್ರೀ ಶೇಖರ್, ಮೈನಾ ಅನಿಲ್​​ ನಾಯಕ್, ನಿಹಾರಿಕಾ, ಆಶಾ ವೆಂಕಟೇಶ್ ರೆಡ್ಡಿ ಅವರನ್ನು ಪೋಷಕರು …

Read More »

ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಫೆ.7ರಂದು ಸಿಎಂ ಚಾಲನೆ

ಬೆಂಗಳೂರು: ಫೆಬ್ರವರಿ 7 ರಂದು ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರ ಪರಿಚಯಿಸುತ್ತಿರುವ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಯನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಜಾರಿಗೊಳಿಸಲಾಗಿದೆ. ಪ್ರಾಯೋಗಿಕವಾಗಿ 100 ವಸತಿ ಶಾಲೆಗಳಲ್ಲಿ ಕರಾಟೆ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆಯುವ ಮಕ್ಕಳಿಗೆ ಇಲಾಖೆ ವತಿಯಿಂದ ಸಮವಸ್ತ್ರ ನೀಡಲಾಗುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತರಬೇತಿ ನೀಡಲಾಗುವುದು.

Read More »

ಫೆ.25ರಂದು ಓಲ್ಡ್‌ಮಾಂಕ್‌ ಚಿತ್ರ ಬಿಡುಗಡೆ

ಶ್ರೀನಿ ನಿರ್ದೇಶನ ಮತ್ತು ನಟನೆಯ ಬಹುನಿರೀಕ್ಷಿತ ಚಿತ್ರ ‘ಓಲ್ಡ್‌ಮಾಂಕ್‌’ ಫೆ.25ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಅದೇ ಥರ ‘ವಿಕ್ರಾಂತ್‌ ರೋಣ’ ರಿಲೀಸ್‌ ಮುಂದಕ್ಕೆ ಹೋಗಿರುವುದರಿಂದ ಅವತ್ತೇ ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿ ಕೊಟ್ಟಮಾತನ್ನು ಉಳಿಸಿಕೊಂಡಿದೆ. ಕನ್ನಡದಲ್ಲಿ ಮಾತ್ರವಲ್ಲದೇ ತೆಲುಗಿನಲ್ಲಿಯೇ ಫೆ.25ರಂದೇ ಸಿನಿಮಾ ಬಿಡುಗಡೆ ಆಗಲಿದೆ.

Read More »

ಕೇಂದ್ರ ಬಜೆಟ್  ಕುರಿತು ಟೀಕೆ ಮಾಡಿದ ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ 2022-23ನೇ ಸಾಲಿನ ಕೇಂದ್ರ ಬಜೆಟ್  ಕುರಿತು ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಸಾಮಾನ್ಯ ಜನರ ಪಾಲಿಗೆ ಭರವಸೆ ಆಶಾಕಿರಣವಾಗಬೇಕಿದ್ದ ಕೇಂದ್ರ ಬಜೆಟ್‌ನಲ್ಲಿ ಅಂಥ ಯಾವುದೇ ಅಂಶ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು. “ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮನೆಯಲ್ಲಿ ಮಲಗಿ ಎನ್ನುವಂತಿದೆ ಈ ಬಜೆಟ್” ಎಂದು …

Read More »

ಬಜೆಟ್ ಕುರಿತು ಟ್ವೀಟ್ ರನಲ್ಲಿ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ 2022-23ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದರು. ಈ ಕುರಿತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರದ ಆತ್ಮನಿರ್ಭರ ಬಜೆಟ್‌ನಲ್ಲಿ ವಿವಿಧ ಘೋಷಣೆಗಳೊಂದಿಗೆ ಕರ್ನಾಟಕದ ಅಭಿವೃದ್ಧಿ ಚಟುವಟಿಕೆಗಳು ಭಾರಿ ಉತ್ತೇಜನವನ್ನು ಪಡೆಯುತ್ತವೆ ಮತ್ತು ಹಂಚಿಕೆ ಮಾಡಲಾದ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ಖಚಿತಪಡಿಸಿಕೊಳ್ಳಲು ನಾವು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ನಮ್ಮ …

Read More »

ಕೊರೋನಾ ಪಾಸಿಟಿವಿಟಿ ದರ ಕ್ರಮೇಣ ಇಳಿಕೆ : ಸುಧಾಕರ್

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಪಾಸಿಟಿವಿಟಿ ಕ್ರಮೇಣ ಇಳಿಕೆಯಾಗುತ್ತಿದೆ. ಅದಾಗ್ಯೂ, ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಎಚ್ಚರದಿಂದ ಪಾಲಿಸಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಲಿಕಾನ್ ಸಿಟಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಕೊವಿಡ್-19 ಪ್ರಕರಣ ಸಂಖ್ಯೆ ಇಳಿಕೆಯಾಗಿದೆ ಎಂದರು. ಬೆಂಗಳೂರು ಹೊರತಾಗಿ ಬೇರೆ ಜಿಲ್ಲೆಗಳಲ್ಲಿ ಕೂಡ ಪಾಸಿಟಿವಿಟಿ ದರ ಕ್ರಮೇಣ ಇಳಿಕೆಯಾಗುತ್ತಿದೆ. ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಕೊವಿಡ್ ಪಾಸಿಟಿವಿಟಿ ಹೆಚ್ಚಾಗುತ್ತಿದೆ …

Read More »