Breaking News

ಬೆಂಗಳೂರು

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಆಯ್ಕೆ

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಈ ಹಿಂದೆ ಗೊಂದಲ ಉಂಟಾಗಿದ್ದು, ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿದ್ದ ಮೊಹಮ್ಮದ್‌ ನಲಪಾಡ್‌ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು.

Read More »

ರಾಜ್ಯದಲ್ಲಿ 28,264 ಕೊರೋನ ಪ್ರಕರಣಗಳು ದೃಢ

ಬೆಂಗಳೂರು: ರಾಜ್ಯದಲ್ಲಿ ರವಿವಾರ 28,264 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 68 ಮಂದಿ ಸೋಂಕಿಗೆ ಬಲಿಯಾಗಿದ್ದು, 29,244 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 3785295ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,942ಕ್ಕೆ ತಲುಪಿದೆ.

Read More »

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಹೊಸದಾಗಿ 28,264 ಜನರಿಗೆ ಕೊರೋನಾ ಸೋಂಕು ತಗುಲಿದೆ. 29,244 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 2,51,084 ಸಕ್ರಿಯ ಪ್ರಕರಣಗಳಿವೆ

Read More »

ರಸ್ತೆ ಗುಂಡಿಗೆ ಬಿದ್ದು ಮಹಿಳೆ ಸಾವು

ಬೆಂಗಳೂರು:  ರಸ್ತೆ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಶರ್ಮಿಳಾ (38) ಮೃತಪಟ್ಟ ಮಹಿಳೆ. ಮಾಗಡಿ ಮುಖ್ಯರಸ್ತೆಯಲ್ಲಿ ರಸ್ತೆ ಗುಂಡಿ   ಹೋದ ಮಹಿಳೆ ಆಯತಪ್ಪಿ ರೋಡ್​ಗೆ ಬಿದ್ದಿದ್ದಾರೆ. ಪ್ರಕರಣ ಸಂಬಂಧ ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೊಲೆರೋ ಚಾಲಕ ಮಾದೇಶ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Read More »

ಯಡಿಯೂರಪ್ಪ ಮೊಮ್ಮಗಳು ವಿಧಿವಶ : ಬಿಎಸ್ ವೈ ಮನೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿನ್ನಲೆಯಲ್ಲಿ ಬಿಎಸ್ ವೈ ಮೌನವಾಗಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೆ ಭೇಟಿ‌ ನೀಡಿ ಮೊಮ್ಮಗಳ ನಿಧನಕ್ಕೆ ಸಾಂತ್ವನ ಹೇಳಿದ್ದಾರೆ.

Read More »

ಪವರ್​ಸ್ಟಾರ್ ಅಗಲಿ 3 ತಿಂಗಳು : ಸಸಿ ನೆಟ್ಟ ಭಾವುಕರಾದ ರಾಘಣ್ಣ

ಬೆಂಗಳೂರು: ಪವರ್​ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಮೂರು ತಿಂಗಳು ಕಳೆದಿದೆ. ಕಳೆದ ವರ್ಷ ಅಕ್ಟೋಬರ್ 29 ರಂದು ಹೃದಯಾಘಾತದಿಂದ ಪುನೀತ್​ ರಾಜ್​ ಕುಮಾರ್​ ಇಹಲೋಕ ತ್ಯಜಿಸಿದ್ದರು.  ಪುನೀತ್ ಸಮಾಧಿ ಬಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಸಮಾಧಿ ಬಳಿ ಪುನೀತ್ ರಾಜ್ ಕುಮಾರ್ ಅವರಿಗೆ ಇಷ್ಟವಾದ ತಿಂಡಿಗಳನಿಟ್ಟು ಕುಟುಂಬಸ್ಥರು ನಮನ ಸಲ್ಲಿಸಿದ್ದಾರೆ. ಪೂಜೆ ಬಳಿಕ ಅಶ್ವಿನಿ ಪುನೀತ್ ರಾಜ್ ಕುಮಾರ್, ಅಭಿಮಾನಿಗಳಿಗೆ ಬಾದಾಮಿ, ಸೀಬೆ, ಮಾವು, ತೇಗ, ಹಲಸಿನ …

Read More »

ಕರ್ಫ್ಯೂ ಕುರಿತು ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿದ್ದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕಡಿಮೆ ಇರುವುದರಿಂದ ರಾಜ್ಯದಲ್ಲಿ ನಿರ್ಬಂಧ ಸಡಿಲಿಕೆಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಶೇಕಡ 50 ರ ಮಿತಿ ನಿರ್ಬಂಧ ಸಡಿಲಿಕೆ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗುವುದು. ಇದರೊಂದಿಗೆ ನೈಟ್ ಕರ್ಫ್ಯೂ ಸಮಯ ಬದಲಾವಣೆ, ಕರ್ಫ್ಯೂ ಮುಂದುವರಿಕೆ, ಬೆಂಗಳೂರಿನಲ್ಲಿ 1 ರಿಂದ 9ನೇ ತರಗತಿ ಆರಂಭ ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸುವ ಸಾಧ್ಯತೆ ಇದೆ.

Read More »

ಬಿಎಸ್ ವೈ ಮೊಮ್ಮಗಳ ಆತ್ಯಹತ್ಯೆ ಪ್ರಕರಣ : ಗಣ್ಯರಿಂದ ಸಾಂತ್ವನ

ಬೆಂಗಳೂರು : ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಮಗಳಾದ ಸೌಂದರ್ಯ(30) ವಸಂತ ನಗರದ ಫ್ಯಾಟ್ ನಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. 9 ತಿಂಗಳ ಪುಟ್ಟ ಮಗು ಇದ್ದರೂ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ ಈ ಘಟನೆ ಹಿನ್ನಲೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮೌನಕ್ಕೆ ಶರಣಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮೌನಕ್ಕೆ ಶರಣಾಗಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಕರೆ …

Read More »

ಮಾಜಿ ಸಿಎಂ ಯಡಿಯೂರಪ್ಪವರ ಮೊಮ್ಮಗಳ ಆತ್ಮಹತ್ಯೆಗೆ ಶರಣು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪದ್ಮಾವತಿ ಅವರ ಮಗಳು ಸೌಂದರ್ಯ (30)  ಅವರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಜಿ ಸಿಎಂ ಅವರ ಮೊಮ್ಮಗಳ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಅವರು ಎಂ.ಎಸ್.‌ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕಟ್ಟೆ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನಲೆ ರಾಮಚಂದ್ರ (75) ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಕಟ್ಟೆ ರಾಮಚಂದ್ರ ಅವರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

Read More »