admin
January 28, 2022
Breaking News, ಬೆಂಗಳೂರು
ಬೆಂಗಳೂರು:ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದರು.ಈಗ ಎಸ್ ಪಿ ಅವರನ್ನು ವರ್ಗಾವಣೆ ಮಾಡಿ ಸರಕಾರ ಬಿಸಿ ಮುಟ್ಟಿಸಿದೆ. ಪ್ರಮುಖವಾಗಿ ಖಡಕ್ ಅಧಿಕಾರಿ ಎನಿಸಿಕೊಂಡು ಮತ್ತು ವಾಗ್ಮಿಯಾಗಿ ಹೆಸರು ಗಳಿಸಿದ್ದ ಚನ್ನಣ್ಣನವರ್ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿದ್ದವು. ಇದೀಗ ಸಿಐಡಿ ಎಸ್ ಪಿ ರವಿ ಡಿ ಚನ್ನಣ್ಣನವರ್ , ಬೆಂಗಳೂರು ಸೆಂಟ್ರಲ್ …
Read More »
admin
January 27, 2022
Breaking News, ಬೆಂಗಳೂರು
ಬೆಂಗಳೂರು: ಓಮಿಕ್ರಾನ್ ವೈರಸ್ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ದೇಶದಲ್ಲೇ ಮೊದಲ ಓಮಿಕ್ರಾನ್ ವೈರಸ್ ಪತ್ತೆಯಾದಂತ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ, ಇಂದು ಮತ್ತೆ 185 ಮಂದಿಗೆ ಓಮಿಕ್ರಾನ್ ದೃಢಪಟ್ಟಿದೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ ಇಂದು ಹೊಸದಾಗಿ 185 ಜನರಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 1,115ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.
Read More »
admin
January 27, 2022
Breaking News, ಬೆಂಗಳೂರು
ಬೆಂಗಳೂರು: ಬುಧವಾರ ರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನೋವಾ ಕ್ರಿಸ್ಟಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ ನಗರದ ಮಂತ್ರಿ ಮಾಲ್ ಬಳಿ ನಡೆದಿದೆ. ಇನೋವಾ ಕ್ರಿಸ್ಟಾ ಕಾರಿನಲ್ಲಿ ಓವರ್ ಸ್ಪೀಡ್ ಆಗಿ ಬಂದ ಚಾಲಕ ರಸ್ತೆ ಡಿವೈಡರ್‍ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಎರಡು ಏರ್ ಬ್ಯಾಗ್‌ಗಳು ಓಪನ್ ಆಗಿದೆ. ಅಲ್ಲದೇ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸೇರಿ ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. …
Read More »
admin
January 26, 2022
Breaking News, ಬೆಂಗಳೂರು
ಬೆಂಗಳೂರು: ಬಿಜೆಪಿಯ ಕೆಲ ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಆರ್. ಅಶೋಕ್ ನಮ್ಮೊಂದಿಗೂ ಕೆಲ ಕಾಂಗ್ರೆಸ್ ನಾಯಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಓರ್ವ ಪಕ್ಷಾಂತರಿ. ಹೀಗಾಗಿ ಅವರು ಪಕ್ಷಾಂತರದ ಬಗ್ಗೆಯೇ ಮಾತನಾಡುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದ ಶಾಸಕರನ್ನು ಸೂರ್ಯ ಚಂದ್ರ ಇರುವವರೆಗೂ ಮತ್ತೆ ವಾಪಸ್ ಸೇರಿಸಿಕೊಳ್ಳುವುದಿಲ್ಲ …
Read More »
admin
January 26, 2022
Breaking News, ಬೆಂಗಳೂರು
ಬೆಂಗಳೂರು : ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ದೃಢವಾದ ಹಿನ್ನಲೆಯಲ್ಲಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ದೇವೇಗೌಡರು ಗುಣಮುಖರಾಗಿದ್ದು, ಇಂದು ವರದಿ ಕೊರೋನಾ ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಪದ್ಮನಾಭನಗರದ ನಿವಾಸಕ್ಕೆ ತೆರಳಿದ್ದಾರೆ
Read More »
admin
January 26, 2022
Breaking News, ಬೆಂಗಳೂರು
ಬೆಂಗಳೂರು:ಪುನೀತ್ ರಾಜಕುಮಾರ್ ಅವರ ಹೆಸರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದರು ಆದರೆ ಪ್ರಶಸ್ತಿ ಪಟ್ಟಿಯಲ್ಲಿ ಅವರ ಹೆಸರಿಲ್ಲ ಎಂಬ ಪ್ರಶ್ನೆಗೆ, ‘ಪ್ರಧಾನಮಂತ್ರಿಗಳಿಗೆ ಯಾರು ಏನು ಶಿಫಾರಸ್ಸು ಮಾಡಿದ್ದರೋ ಗೊತ್ತಿಲ್ಲ ಅಸಮಾಧಾನ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಈ ವಿಚಾರದಲ್ಲಿ ಸಿಎಂ ಬೊಮ್ಮಾಯಿ ಕೊಟ್ಟ ಮಾತು ಉಳಿಸಿಕೊಂಡಿಲ್ಲ ಎಂದು ಟೀಕಿಸಿದ್ದಾರೆ. ಪಾದಯಾತ್ರೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಯಾವ ಕಲಾವಿದರ ಜತೆ ಏನು ಮಾತನಾಡಿದ್ದರು ಎಂಬುದನ್ನು ಈ ಸಂದರ್ಭದಲ್ಲಿ ಹೇಳುವುದಿಲ್ಲ. …
Read More »
admin
January 25, 2022
ಕರ್ನಾಟಕ, ಬಳ್ಳಾರಿ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ನನ್ನ ಒಳ್ಳೆ ಕೆಲಸದ ಹೆಜ್ಜೆ ಗುರುತುಗಳಿಂದಲೇ ಬಳ್ಳಾರಿ ಜಿಲ್ಲೆಯ ಉಸ್ತುವಾರಿಯ ಅವಕಾಶ ಸಿಕ್ಜಿದೆ ಎಂದು ಸಚಿವ ಬಿ ಶ್ರೀರಾಮುಲು ಮಂಗಳವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಬಳ್ಳಾರಿ ನನಗೆ ಜನ್ಮ ಕೊಟ್ಟ ಸ್ಥಳ, ನಾನು ಅನೇಕ ಜಿಲ್ಲೆಗಳಲ್ಲೂ ಒಳ್ಳೆ ಕೆಲಸ ಮಾಡಿದ್ದೇನೆ.ನಾನು ಎಲ್ಲ ಜಿಲ್ಲೆಗಳಲ್ಲೂ ನನ್ನ ಕೆಲಸದ ಹೆಜ್ಜೆ ಗುರುತು ಗಳನ್ನು ಹಾಕಿಕೊಂಡು ಬಂದಿದ್ದೇನೆ. ಅದಕ್ಕಾಗಿ ನನಗೆ ಇವಾಗ ಬಳ್ಳಾರಿ ಉಸ್ತುವಾರಿ ನೀಡಿದ್ದಾರೆ ಎಂದರು. ಇತ್ತೀಚೆಗೆ ನನಗೆ ಬಳ್ಳಾರಿಯಲ್ಲಿ ಸೇವೆ …
Read More »
admin
January 25, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದ ಜನರು 2-3 ವಾರ ಎಚ್ಚರಿಕೆಯಿಂದ ಇದ್ದರೆ ಮಾತ್ರ ಕೊರೊನಾ 3 ಅಲೆ ನಿಯಂತ್ರಣಕ್ಕೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 2-3 ವಾರ ಎಚ್ಚರಿಕೆಯಿಂದ ಇದ್ದರೆ ರಾಜ್ಯದಲ್ಲಿ ಕೊರೊನಾ 3 ನೇ ಅಲೆ ನಿಯಂತ್ರಣಕ್ಕೆ ಬರುತ್ತದೆ. ಹೀಗಾಗಿ ರಾಜ್ಯದ ಜನರು 2-3 ವಾರ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.
Read More »
admin
January 25, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಹೈಕೋರ್ಟ್‌ನ ಆದೇಶದಹಿನ್ನೆಲೆಯಲ್ಲಿ ಪದವಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕನ್ನಡ ಭಾಷೆ ಕಲಿಕೆ ಕಡ್ಡಾಯ ಎಂಬ ನಿಯಮವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಪದವಿಯಲ್ಲಿ ಕಲಿಯುತಿರುವ ವಿದ್ಯಾರ್ಥಿಗಳು ಕನ್ನಡವನ್ನು ಒಂದು ಭಾಷೆಯಾಗಿ ಕಲಿಯಲು ಇಚ್ಚಿಸದಿದ್ದರೆ ನ್ಯಾಯಾಲಯದ ಅಂತಿಮ ಆದೇಶವಾಗುವವರೆಗೂ ಅದನ್ನು ಕಡ್ಡಾಯಗೊಳಿಸದಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇನ್ನು ಆಗಸ್ಟ್ 7, 2021ರ ತನ್ನ ಆದೇಶದಲ್ಲಿ ರಾಜ್ಯದಲ್ಲಿ ಪದವಿ ಮಾಡುವ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಕಾ ಭಾಷೆಯಾಗಿ ಆಯ್ಕೆ ಮಾಡುವಂತೆ …
Read More »
admin
January 25, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕಳೆದ ಡಿಸೆಂಬರ್ ತಿಂಗಳ ಕೊನೆಯ ದಿನ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಆಡಳಿತ ವರ್ಗದಲ್ಲಿ ಭಾರೀ ಬದಲಾವಣೆ ಮಾಡಿದ್ದ ಮುಖ್ಯಮಂತ್ರಿಯವರು ಪುನಃ ಮತ್ತೆ ಸರ್ಜರಿ ನಡೆಸಿದ್ದಾರೆ. ಇದೀಗ ಆಡಳಿತವರ್ಗಕ್ಕೆ ಮತ್ತೆ ಮೇಜರ್ ಸರ್ಜರಿ ನಡೆಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 19 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ. ವರ್ಗಾವಣೆಗೊಂಡ ಅಕಾರಿಗಳ ಪಟ್ಟಿ1. ಅನಿಲ್‍ಕುಮಾರ್.ಬಿ.ಎಚ್- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ.2.ಡಾ.ಶಾಮಲ ಇಕ್ಬಾಲ್ – ಕಾರ್ಯದರ್ಶಿ, …
Read More »