admin
January 25, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಅತಿಥಿ ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಕಾಲೇಜು ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ದಾಖಲಾತಿ ಪ್ರಮಾಣದ ಪ್ರಕಾರ 18 ಸಾವಿರ ಅತಿಥಿ ಉಪನ್ಯಾಸಕರ ನೇಮಕದ ಬದಲಾಗಿ 10 ಸಾವಿರ ಮಂದಿಯನ್ನು ಮಾತ್ರ ನೇಮಕ ಮಾಡಕೊಳ್ಳುತ್ತಿದೆ. ರಾಜ್ಯಾದ್ಯಂತ ಕಳೆದ ವರ್ಷದಲ್ಲಿ 14,500 ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಬಾರಿ 4,500 ಮಂದಿ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಒಟ್ಟು 430 …
Read More »
admin
January 24, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆ ಬಳಿ ನಡೆದಿದೆ. ಲಕ್ಷ್ಮಿದೇವಿ ನಗರ ನಿವಾಸಿ ಸುರೇಶ್ ಬಾಬು(45)ಮೃತ ದುರ್ದೈವಿ. ವೇಗವಾಗಿ ಬಂದ ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿಯಾಗಿದೆ.ಘಟನೆಯಲ್ಲಿ ಹೆಲ್ಮೆಟ್ ಧರಿಸದೆ ಇದ್ದ ಕಾರಣ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಲ್ಲೇಶ್ವರಂ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಎಂಟಿಸಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read More »
admin
January 24, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕ್ಯಾಂಟರ್‌ಗೆ ಹಿಂದಿನಿಂದ ದ್ವಿಚಕ್ರವಾಹನ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದ, ಚಲಿಸುತಿದ್ದ ಕ್ಯಾಂಟರ್ ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದು ಘಟನೆ ನಗರದ ಕಂಠೀರವ ಸ್ಟುಡಿಯೋ ಬಳಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ರಾಜ್ ಕುಮಾರ್ ಸಮಾದಿ ಬಳಿಯ ರಸ್ತೆಯಲ್ಲಿ ತಡರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ ಲಗ್ಗೇರೆ ಕಡೆಯಿಂದ ಗೊರಗುಂಟೆ ಪಾಳ್ಯ ಕಡೆಗೆ ತೆರಳುತಿದ್ದಾಗ ಅಪಘಾತ ನಡೆದಿದೆ. ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಸ್ಕೂಟರ್ ನಲ್ಲಿ ತೆರಳುತಿದ್ದ ಇಬ್ಬರು ಮೃತಪಟ್ಟಿದ್ದಾರೆ. …
Read More »
admin
January 24, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಭೂದಾಖಲೆಗಳ ಅಕ್ರಮ ತಡೆಗೆ ಮತ್ತು ಸುಗಮ ನಿರ್ವಹಣೆಗಾಗಿ ಏಕೀಕೃತ ನಿರ್ವಹಣಾ ವ್ಯವಸ್ಥೆ ಜಾರಿಗೆ ತರಲು ಕಂದಾಯ ಇಲಾಖೆ ಸಿದ್ಧತೆ ಕೈಗೊಂಡಿದ್ದು, ಒಂದು ಆಸ್ತಿಗೆ ಒಂದು ನಂಬರ್ ನೀಡಲು ಮುಂದಾಗಿದೆ. ಆಧಾರ್ ಮಾದರಿಯಲ್ಲಿ ಏಕೀಕೃತ ನಿರ್ವಹಣ ವ್ಯವಸ್ಥೆ ನಂಬರ್ ನೀಡಲಾಗುತ್ತದೆ. ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ಈ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣ ಹಾಕಬಹುದಾಗಿದೆ. ಶೀಘ್ರವೇ ಒಂದು ಆಸ್ತಿಗೆ ಒಂದು …
Read More »
admin
January 23, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ ಸದ್ಯಕ್ಕೆ ವಿದ್ಯುತ್, ಹಾಲು ಹಾಗೂ ನೀರಿನ ದರ ಏರಿಕೆ ಮಾಡುವುದಿಲ್ಲ.ಈ ಬಗ್ಗೆ ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಕೆಎಂಎಫ್ ಹಾಲಿನ ದರ, ಎಸ್ಕಾಂಗಳ ವಿದ್ಯುತ್ ದರ ಮತ್ತು ಬೆಂಗಳೂರು ಜಲಮಂಡಳಿ ನೀರಿನ ದರ ಏರಿಕೆ ಪ್ರಸ್ತಾವನೆಗಳನ್ನು ಎಲ್ಲಾ ಆಯಾಮಗಳಿಂದ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಕುರಿತಾಗಿ ಅವಸರದ ನಿರ್ಧಾರ ಕೈಗೊಳ್ಳುವುದಿಲ್ಲವೆಂದು …
Read More »
admin
January 23, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ! ಅಂತಾರೆ. ಇದು ಭ್ರಮೆಯ ಪರಮಾವಧಿ. ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ, ಪಾಪ. ಇದು ವಿಪರೀತಕ್ಕೆ ಹೋಗಿದೆ ಎನ್ನುವುದಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಕೊಟ್ಟ ಹೇಳಿಕೆಗಳೇ ಸಾಕ್ಷಿ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಿದ್ಧರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವಂತ ಅವರು, ‘ಸ್ವಯಂ ಘೋಷಿತ ಸಂವಿಧಾನ ಪಂಡಿತ …
Read More »
admin
January 23, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ ಮಾಡಿದೆ. ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಒಟ್ಟು 23,078 ಮಂದಿ ಅತಿಥಿ ಶಿಕ್ಷಕರಿಗೆ ಒಟ್ಟು 121.47 ಕೋಟಿ ರೂ. ಗೌರವಧನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Read More »
admin
January 23, 2022
Breaking News, ಕರ್ನಾಟಕ, ಬೆಂಗಳೂರು
ಮೈಸೂರು: ‘ಸಚಿವ ಎಸ್.ಟಿ.ಸೋಮಶೇಖರ್ ಅವರು ಕೇವಲ ಬಾವುಟ ಹಾರಿಸಲು ಮೈಸೂರು ಜಿಲ್ಲೆಗೆ ಬಂದು ಹೋಗುವ ಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅನುದಾನ ಬಿಡುಗಡೆ ಮಾಡಿ, ಶಂಕುಸ್ಥಾಪನೆ ನೆರವೇರಿಸಿದ್ದ ಕಾಮಗಾರಿಗಳನ್ನು ಉದ್ಘಾಟಿಸುತ್ತಿದ್ದಾರೆ’ ಎಂದು ಹುಣಸೂರು ಶಾಸಕ ಕಾಂಗ್ರೆಸ್‌ನ ಎಚ್.ಪಿ.ಮಂಜುನಾಥ್ ಹರಿಹಾಯ್ದರು. ‘ಸಚಿವರು ಜಿಲ್ಲೆಗೆ ಇದುವರೆಗೆ ಯಾವುದೇ ಕೊಡುಗೆ ನೀಡಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ₹ 22,365 ಕೋಟಿ ವಿಶೇಷ ಅನುದಾನ ನೀಡಿ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಮೈಸೂರು ಮಹಾನಗರಕ್ಕೇ ₹ 3,800 ಕೋಟಿ ನೀಡಿದ್ದಾರೆ. …
Read More »
admin
January 23, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ …
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಕೆಯಾಗುತ್ತಿದೆ. ಕಳೆದೆರಡು ದಿನಗಳ ಹಿಂದೆ 27 ಸಾವಿರ ಗಡಿ ದಾಟಿದ್ದ ಸೋಂಕಿತರ ಪ್ರಮಾಣ ನಿನ್ನೆ 26,790ಕ್ಕೆ ಇಳಿಕೆಯಾಗಿತ್ತು. ಇಂದು 24,748ಕ್ಕೆ ಬಂದು ನಿಂತಿದೆ. ನಿನ್ನೆಗಿಂತ ಇಂದು 2 ಸಾವಿರ ಪ್ರಕರಣಗಳು ಕಡಿಮೆ ದಾಖಲಾಗಿವೆ. ಬೊಮ್ಮನಹಳ್ಳಿ ವಲಯದಲ್ಲಿ 2824, ದಾಸರಹಳ್ಳಿ 639, ಬೆಂಗಳೂರು ಪೂರ್ವ 3714, ಮಹದೇವಪುರ 3983, ಆರ್‌ಆರ್ ನಗರ 1497, ದಕ್ಷಿಣ ವಲಯ 3139, ಪಶ್ಚಿಮ 1842, ಯಲಹಂಕ …
Read More »