admin
January 13, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲೂ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೆ ಇದೆ. ಪಾದಯಾತ್ರೆಯ ಮೂಲಕ ಇನ್ನಷ್ಟು ಸೋಂಕು ಹೆಚ್ಚಾಗುತ್ತೆ ಎಂಬ ಆತಂಕ ಮನೆ ಮಾಡಿದೆ. ಈಗಾಗಲೇ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಪಾದಯಾತ್ರೆಗೆ ಮೊದಲ ದಿನ ಚಾಲನೆ ನೀಡಿ, ಸ್ವಲ್ಪ ದೂರ ನಡೆದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ಹರಡಿದೆ. ಜ್ವರ ಇದೆ ಎನ್ನಲಾಗಿದೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು …
Read More »
BigTv News
January 13, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನಟಿ ಉಮಾಶ್ರಿಗೆ ಅವರುಪುಟ್ಟಕ್ಕನ ಮಕ್ಕಳು ಧಾರವಾಹಿಯ ಚಿತ್ರೀಕರಣದ ಸಂದರ್ಭದಲ್ಲಿ ಬಿಸಿ ನೀರು ಕಾಲಿಗೆ ಬಿದ್ದಿದ್ದರಿಂದಬೆಂಗಳೂರಿನ ತಲಘಟ್ಟಪುರದ ಶಂಕರ್ ಸ್ಟೆಷ್ಟಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಶೂಟಿಂಗ್ ವೇಳೆ ಕಾಲಿಗೆ ಗಾಯವಾದ ಘಟನೆ ನಡೆದಿದೆ. ಹೀಗಾಗಿ ಗಾಯಕ್ಕೆ ಚಿಕಿತ್ಸೆ ಪಡೆದು ಸದ್ಯ ಮನೆಯಲ್ಲೇ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಪಾದಯಾತ್ರೆಯಲ್ಲಿ ಉಮಾಶ್ರೀ ಭಾಗಿಯಾಗಿದ್ದು, ಸದ್ಯ ಕಾಲಿಗೆ ಗಾಯವಾದ ಕಾರಣ ಪಾದಯಾತ್ರೆಗೂ ಸಹ ಗೈರಾಗಿದ್ದಾರೆ.
Read More »
admin
January 12, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನಗರದಲ್ಲಿ 15,617 ಸೇರಿದಂತೆ ರಾಜ್ಯಾಧ್ಯಂತ 21,390 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ರಾಜ್ಯದಲ್ಲಿ ಮತ್ತೆ ಇಂದು ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,95,047 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.ಇವರಲ್ಲಿ ಬೆಂಗಳೂರಿನಲ್ಲಿ 15,617 ಸೇರಿದಂತೆ ರಾಜ್ಯದಲ್ಲಿ 21,390 ಜನರಿಗೆ ಕೋವಿಡ್ ದೃಢಪಟ್ಟಿರೋದಾಗಿ ತಿಳಿಸಿದೆ.
Read More »
admin
January 12, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಿರುವ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ರಾಜ್ಯದ 4 ಸಾವಿರ ಅತಿಥಿ ಉಪನ್ಯಾಸಕರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಡಬೇಕು. ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
Read More »
admin
January 12, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೋನಾ ದಿನ ದಿನೇ ಹೆಚ್ಚಳದಿಂದಾಗಿ ಎಲ್ಲರಲೂ ಆತಂಕ ಮನೆ ಮಾಡಿದ್ದು, ಶಾಲಾ ಕಾಲೇಜು ಬಂದ್ ಮಾಡಲಾಗಿದೆ. ಇದೇ ಕಾರಣದಿಂದಾಗಿ 1 ರಿಂದ 9ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಕೆಲವು ಜಿಲ್ಲೆಗಳಲ್ಲಿ ಬಂದ್ ಆಗಿವೆ. ಮಕ್ಕಳಿಗೆ ಪರ್ಯಾಯ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೋಮವಾರದಿಂದ ಶುಕ್ರವಾರದವರೆಗೆ ಚಂದನ ವಾಹಿನಿಯಲ್ಲಿ ವಿಡಿಯೋ ಪಾಠ ಪ್ರಸಾರ ಮಾಡಲು ನಿರ್ಧರಿಸಿದೆ.
Read More »
admin
January 11, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್ ಮಾಡುವುದಿಲ್ಲ.ಕೊರೊನಾ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸುತ್ತಾರೆ. ಶಾಲಾ- ಕಾಲೇಜು ಬಂದ್ ಬಗ್ಗೆ ಆಯಾ ಡಿಸಿ ನಿರ್ಧರಿಸ್ತಾರೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಆಯಾ ಅಧಿಕಾರಿಗಳೇ ನಿರ್ಧರಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ಡಿಸಿಗಳು ಈ ಬಗ್ಗೆ ನಿರ್ಧರಿಸ್ತಾರೆ ಎಂದು ತಿಳಿಸಿದ್ದಾರೆ.
Read More »
admin
January 11, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು. ಆದರೆ, ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿವ ಸೋಮಶೇಖರ್ ತಿಳಿಸಿದ್ದಾರೆ.
Read More »
admin
January 11, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಕುರಿತ ಸಭೆ ನಡೆಯುತ್ತಿದ್ದ.ರಾಜ್ಯಾದ್ಯಂತ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದ್ದು, ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ನಾಳೆಯಿಂದಲೇ ರಾಜ್ಯದಲ್ಲಿ ಹೊಸ ಬಿಗಿ ನಿಯಮಗಳು ಜಾರಿಗೆ ಬರಲಿವೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ರಾಜ್ಯಾದ್ಯಂತ ಕೋವಿಡ್ ಟೆಸ್ಟ್ ಹೆಚ್ಚಿಸಲಾಗುವುದು ಪ್ರತಿದಿನ ಈಗಿರುವ 1 ಲಕ್ಷದ 10 ಸಾವಿರ ಟೆಸ್ಟಿಂಗ್ ಸಂಖ್ಯೆಯನ್ನು 1 ಲಕ್ಷದ 50 ಸಾವಿರಕ್ಕೆ ಹೆಚ್ಚಿಸಲಾಗುವುದು. …
Read More »
admin
January 11, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ “ನಮ್ಮ ನೀರು ನಮ್ಮ ಹಕ್ಕು” ಪಾದಯಾತ್ರೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ಹಿರಿಯ ನಾಯಕ ಹೆಚ್‌ಎಂ ರೇವಣ್ಣ ಹಾಗೂ ಸಿಎಂ ಇಬ್ರಾಹಿಂ ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
Read More »
admin
January 11, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ಹಿನ್ನೆಲೆಯ್ಲಲಿ ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಮಣಿಪಾಲ್ ಆಸ್ಪತ್ರೆಯಿಂದಲೇ ವರ್ಚುವಲ್ ಮೂಲಕ ಅರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಿದ್ದು, ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
Read More »