Breaking News

ಬೆಂಗಳೂರು

ಲಾಲ್‌ ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ರದ್ದು

ಬೆಂಗಳೂರು: ಲಾಲ್‌ ಬಾಗ್‌ನಲ್ಲಿ ನಡೆಯುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಬೆಂಗಳೂರು ನಗರ ಮತ್ತು ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದ್ದಈ ಹಿನ್ನಲೆಯಲ್ಲಿ  ಈ ವರ್ಷವೂ ರದ್ದಾಗಿದೆ. ಕರ್ನಾಟಕ ಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿಯನ್ನು ಪ್ರಕಟಿಸಿದ ಬಳಿಕ ತೋಟಗಾರಿಕಾ ಇಲಾಖೆ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಫಲಪುಷ್ಪ ಪ್ರದರ್ಶನ ರದ್ದುಗೊಳಿಸಿದೆ. ಸತತ ಎರಡು ವರ್ಷಗಳಿಂದ ಫಲಪುಷ್ಪ ಪ್ರದರ್ಶನ ನಡೆಯುತ್ತಿಲ್ಲ.

Read More »

ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು  ಗ್ರಾಮೀಣ ಜನತೆ ಮತ್ತು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು , ಜನವರಿ 26 ರ ಗಣರಾಜ್ಯೋತ್ಸವ ದಿನದಂದು ರೈತರ ಮನೆ ಬಾಗಿಲಿಗೆ ಉಚಿತ ಪಹಣಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ . ಜನವರಿ 26 ರಂದು ಕಂದಾಯ ಇಲಾಖೆಯಿಂದ ಹಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಲಾಗುವುದು.

Read More »

SSLC ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಮಾರ್ಚ್, ಏಪ್ರಿಲ್ 2022ರಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ದಿನಾಂಕ 28-03-2022 ರಂದು ಪ್ರಥಮ ಭಾಷೆಗಳಾದಂತ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ( ಕೇಂದ್ರ ಪಠ್ಯಕ್ರಮ) ಸಂಸ್ಕೃತ ಪರೀಕ್ಷೆ ನಿಗದಿ ಪಡಿಸಲಾಗಿದೆ. 1. ದಿನಾಂಕ 29-03-2022ರಂದು ಯಾವುದೇ ಪರೀಕ್ಷೆ ಇರುವುದಿಲ್ಲ 2.  30-03-2022ರಂದು ದ್ವಿತೀಯ ಭಾಷೆ – …

Read More »

ರಾಜ್ಯದಲ್ಲಿ ಇಂದು ಅಬ್ಬರಿಸಿದ ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ಇಂದು  ಕೊರೋನಾ ಮಹಾಸ್ಪೋಟವಾಗಿದ್ದು, ಜನರಲ್ಲಿ ಮತ್ತೇ ಆತಂಕ ಹೆಚ್ಚುತ್ತಿದೆ. ಇದೀಗ ಸ್ವಲ್ಪಮಟ್ಟಿಗೆ ಏರಿಕೆಯನ್ನು ಜೀವನದಲ್ಲಿ ಕಂಡಂತಹ ಜನರಿಗೆ ಮತ್ತೇ ತಲೆ ನೋವು ಉಂಟಾಗಿದೆ. ಇಂದಿನ ಕೊರೋನಾ ಮಾಹಿತಿ ಒಂದೇ ದಿನ ಬರೋಬ್ಬರಿ 5031 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 4324 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಹೊಸ ಕೇಸ್ 4 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಹೊಸ ಕೇಸ್ ಸಂಖ್ಯೆ 5 ಸಾವಿರ …

Read More »

ನೈಟ್ ಕರ್ಫ್ಯೂ ಇಲ್ಲ ಸುಡುಗಾಡು ಇಲ್ಲ : ಈಶ್ವರಪ್ಪ

ಬೆಂಗಳೂರು : ಶಿವಮೊಗ್ಗದಲ್ಲಿ ನಾನು 3 ದಿನ ಇದ್ದೆ, ಅಲ್ಲಿ ನೈಟ್ ಕರ್ಫ್ಯೂ ಇಲ್ಲ ಸುಡುಗಾಡು ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿ ಸರಕಾರವನ್ನು ಮತ್ತೆ ಮುಜುಗರಕ್ಕೆ ಸಿಲುಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಒಂದೇ ರೀತಿ ನಿಯಮ ಇಲ್ಲ.ಶಿವಮೊಗ್ಗ ದಲ್ಲಿ ನಾನು 3 ದಿನ ಇದ್ದೆ ಅಲ್ಲಿ ನೈಟ್ ಕರ್ಫ್ಯೂ ಇಲ್ಲ, ಸುಡುಗಾಡು ಇಲ್ಲ ಎಂದರು. ರಾಜ್ಯವ್ಯಾಪಿ ರಾತ್ರಿ ಕರ್ಫ್ಯೂ ಗೆ ವಿರೋಧ ವ್ಯಕ್ತಪಡಿಸಿದ್ದ ಈಶ್ವರಪ್ಪ ಬೆಂಗಳೂರಿನಲ್ಲಿ ನಿಯಮ …

Read More »

ಕ್ಯಾಬಿನೆಟ್​ ಸಭೆಯಲ್ಲಿ ಹತ್ತಾರು ಮಹತ್ತರ ನಿರ್ಧಾರ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕ್ಯಾಬಿನೆಟ್​ ಸಭೆಯಲ್ಲಿ ಹತ್ತಾರು ಮಹತ್ತರ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲ ಕಡೆ ಕೋವಿಡ್​ ಪ್ರೋಟೋಕಾಲ್​ ಬೇಕಾ? ಅಂತ ಸಚಿವರು ಕೇಳಿದ್ದಾರೆ. ಹೀಗಾಗಿ ನಾಲ್ಕೈದು ದಿನ ಬಿಟ್ಟು ತಜ್ಞರ ಜತೆ ಚರ್ಚಿಸಿ ಇತರ ನಗರಗಳಿಗೆ ರಿಲೀಫ್​ ಮಾಡಲು ನಿರ್ಧರಿಸಲಾಗಿದೆ. ಆಯುಷ್ ಶುಶ್ರೂಷಕರ 80 ಹುದ್ದೆಗೆ ನೇರ ನೇಮಕ. ಗುತ್ತಿಗೆ ನೌಕರರಿಗೆ ವರ್ಷಕ್ಕೆ ಎರಡು ಕೃಪಾಂಕ ಕೊಡಲು ನಿರ್ಧಾರ. ಅಂಬರೀಷ್ ಸ್ಮಾರಕ‌ ನಿರ್ಮಿಸಲು 12 …

Read More »

ಮೇಕೆದಾಟು ಯೋಜನೆಯ ಪಾದಯಾತ್ರೆ ಮಾಡುವುದಾಗಿ ಕಾಂಗ್ರೆಸ್ ಪಟ್ಟು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ.6.45ಕ್ಕೆ ಜಿಗಿತಕಂಡು ಸಂಭಾವ್ಯ ಅನಾಹುತದ ಮುನ್ಸೂಚನೆ ನೀಡಿರುವ ಹೊರತಾಗಿಯೂ ಮೇಕೆದಾಟು ಯೋಜನೆಗಾಗಿ ಜ.9ರಿಂದ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ನಡೆಸಿಯೇ ಸಿದ್ಧ ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಕೋವಿಡ್ ವ್ಯಾಪಕವಾಗುತ್ತಿರುವ ಹಿನ್ನೆಯಲ್ಲಿ ಸಭೆ, ಸಮಾರಂಭ, ರಾಜಕೀಯ ರ್ಯಾಲಿಗಳಿಗೆ ಸರ್ಕಾರ ನಿರ್ಬಂಧ ಹೇರಿದ ಬೆನ್ನಲ್ಲೇ ಬುಧವಾರ ಮಧ್ಯಾಹ್ನ ಕಾಂಗ್ರೆಸ್ ನಾಯಕರು ಸಭೆ ನಡೆಸಿ, ಪಾದಯಾತ್ರೆ ನಿಲ್ಲಿಸುವುದು ಬೇಡ ಎಂಬ ನಿರ್ಣಯಕ್ಕೆ ಬಂದರು.

Read More »

ವಿಧಾನಪರಿಷತ್‌ ಸದಸ್ಯರಿಗೆ ಬೀಳ್ಕೊಡುಗೆ

ಬೆಂಗಳೂರು : ವಿಧಾನಪರಿಷತ್‌ ಸದಸ್ಯರ ಪಾತ್ರದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಬುಧವಾರ ವಿಕಾಸಸೌಧದಲ್ಲಿ ಪರಿಷತ್‌ ಅವಧಿ ಮುಕ್ತಾಯವಾಗಿರುವ ಸದಸ್ಯರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಾದ ನಿರ್ಣಯಗಳನ್ನು ಮರು ದೃಢೀಕರಣ ಮಾಡುವ ಗುರುತರ ಜವಾಬ್ದಾರಿ ವಿಧಾನಪರಿಷತ್‌ನದ್ದಾಗಿದೆ . ಪರಿಷತ್‌ಗೆ ತನ್ನದೇ ಆದ ಇತಿಹಾಸ, ಪರಂಪರೆ ಇದೆ ಎಂಬುದನ್ನು ಯಾರೂ ಮರೆಯುವಂತಿಲ್ಲ. ಪರಿಷತ್‌ನ ಇತಿಹಾಸ, ಪರಂಪರೆಯನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬ …

Read More »

ಕೋವಿಡ್ ನಿರ್ಬಂಧ ವಿರುದ್ಧ ಡಿಕೆಶಿ ತಿರುಗೇಟು

ಬೆಂಗಳೂರು : ಕೋವಿಡ್ ನಿರ್ಬಂಧ ನೆಪದಲ್ಲಿ ಮೇಕೆದಾಟು ಪಾದಯಾತ್ರೆ ವಿರುದ್ಧ ನಿರ್ಬಂಧ ಹೇರಿದರೆ ನಾನು ಸಿದ್ದರಾಮಯ್ಯ ಇಬ್ಬರೇ ನಡೆಯುತ್ತೇವೆ, ಆದರೆ ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರ ಬೇಕಾದರೆ ನಮ್ಮ ಮೇಲೆ ಪ್ರಕರಣ ದಾಖಲಿಸಲಿ, ಬಂಧಿಸಲಿ ನಾವೇನು ಅಂಜುವುದಿಲ್ಲ. ನಿಷೇಧಾಜ್ಞೆ ಹೇರಿದರೆ ನಾನು, ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಧ್ರುವನಾರಾಯಣ ಸೇರಿ ಮೂರ್ನಾಲ್ಕು ಜನ ನಡೆಯುತ್ತೇವೆ. ಆದರೆ ನಮ್ಮ ಉದ್ದೇಶವನ್ನು …

Read More »

ಪಂಜಾಬ್ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪಂಜಾಬ್ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾಗಿರುವ ಭದ್ರತಾ ಲೋಪಕ್ಕೆ ಬಿಜೆಪಿ ನಾಯಕರು ವ್ಯಾಪಕ ಆಕ್ರೋಶ ಹೊರ ಹಾಕಿದ್ದು, ಪಂಜಾಬ್ ಕಾಂಗ್ರೆಸ್ ಸರಕಾರದ ವಿರುದ್ಧ ಹಲವರು ಕಿಡಿ ಕಾರಿದ್ದಾರೆ. ”ಪ್ರಧಾನಿ ನರೇಂದ್ರ ಮೋದಿಜೀ ಅವರು ಇಂದು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾಗಿರುವ ಭದ್ರತಾ ಲೋಪವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ನಡೆಯಬಾರದು. ಇದೇ …

Read More »