admin
January 5, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಶಾಸಕ ಸಿ.ಎನ್.ಬಾಲಕೃಷ್ಣ , ಪ್ರಧಾನ ಕಾರ್ಯದರ್ಶಿಯಾಗಿ ಟಿ.ಕೋನಪ್ಪ ರೆಡ್ಡಿ ಆಯ್ಕೆಯಾಗಿದ್ದಾರೆ. ಇಂದು ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಾಲಕೃಷ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಟಿ.ಕೋನಪ್ಪ ರೆಡ್ಡಿ ಅವರಿಗೆ ತಲಾ 20 ಮತಗಳು ದೊರೆತು ಚುನಾಯಿತರಾಗಿದ್ದಾರೆ.
Read More »
admin
January 5, 2022
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ
ಚಂಡೀಗಢ: ಭದ್ರತಾ ಸಿಬ್ಬಂದಿ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಫ್ಲೈ ಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡ ಘಟನೆ ನಡೆದಿದೆ. ಪ್ರತಿಭಟನೆ ಕಾರಣದಿಂದಾಗಿ ಪಿಎಂ ಮೋದಿ ಅವರ ಸುಗಮ ಸಂಚಾರಕ್ಕೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಬಟಿಂಡಾದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಬೇಕಿದ್ದ ಪ್ರಧಾನಿ ಮೋದಿ ಅವರು ತಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಿ ಪಂಜಾಬ್ ವಿಮಾನ ನಿಲ್ದಾಣಕ್ಕೆ ಮರಳಿದ್ದಾರೆ. ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ಬಟಿಂಡಾಗೆ …
Read More »
admin
January 5, 2022
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ರಾಜಕೀಯ ಸುದ್ದಿ, ರಾಮನಗರ, ಸುದ್ದಿ
ಬೆಳಗಾವಿ: ರಾಮನಗರದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳೇನು ಎನ್ನುವ ಪ್ರಶ್ನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಉತ್ತರಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸವಾಲು ಹಾಕಿದರು. ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಇದುವರೆಗೂ ಮನಬಂದಂತೆ ಮತ್ತು ಏನು ಮಾಡಿದರೂ ಜಯಿಸಿಕೊಳ್ಳುತ್ತೇವೆ ಎನ್ನುವಂತೆ ಅವರು ನಡೆದುಕೊಂಡು ಬಂದಿದ್ದಾರೆ. ನಮ್ಮ ತಾಳ್ಮೆಯ ಮಿತಿ ಮೀರುವಂತೆ ಮಾಡಿದ್ದಾರೆ. ಆದ್ದರಿಂದ ಬಹಳ ಸ್ಪಷ್ಟವಾಗಿ ಅವರಿಗೆ ಸಂದೇಶ ಕೊಡಬೇಕಾಗಿತ್ತು, …
Read More »
admin
January 5, 2022
Breaking News, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ
ಬೆಳಗಾವಿ: ಕೊರೊನ ಮತ್ತು ಒಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ ಚಟುವಟಿಕೆ ಮತ್ತು ಓಡಾಟಗಳಿಗೆ …
Read More »
admin
January 5, 2022
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ ಮಾಡಿಯೇ ತೀರುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ. ನಾವು ಜನರನ್ನ ಉಳಿಸುವ ಕೆಲಸವನ್ನೂ ಮಾಡ್ತೇವೆ. ಪಾದಯಾತ್ರೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಎಲ್ಲರೂ ಮಾಸ್ಕ್ ಹಾಕಿಕೊಳ್ಳಬೇಕು. ಸ್ಯಾನಿಟೈಸ್ ಮಾಡಿಕೊಳ್ಳಬೇಕು, ಅಂತರ ಕಾಯ್ದುಕೊಳ್ಳಬೇಕು ಎಂಬ ಕೊರೋನಾ ನಿಯಮ ಪಾಲಿಸುತ್ತೇವೆ ಎಂದರು. ವೀಕೆಂಡ್ ಲಾಕ್ ಡೌನ್ ಇದ್ದರೂ ಜನವರಿ 9ರಿಂದ ಪಾದಯಾತ್ರೆ ಮಾಡಿಯೇ ಮಾಡುತ್ತೇವೆ, ಇದರಲ್ಲಿ ಯಾವುದೇ ಬದಲಾವಣೆ …
Read More »
admin
January 5, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೋವಿಡ್ ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ಶುಕ್ರವಾರದಿಂದ (ಜ.7) ರಾಜ್ಯದಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ಏನೆಲ್ಲ ಇರುತ್ತೆ… * ಮೆಡಿಕಲ್ ಸ್ಟೋರ್, ಆಸ್ಪತ್ರೆಗಳು ಕಾರ್ಯನಿರ್ವಹಿಸಲಿವೆ.* ದಿನಸಿ ಅಂಗಡಿ, ಹಾಲು, ತರಕಾರಿ, ಔಷಧ, ಪೆಟ್ರೋಲ್ ಮತ್ತಿತರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ* ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆ ಮಾತ್ರ ಇರುತ್ತದೆ* ಐಟಿ ಹಾಗೂ ಇತರೆ ಉದ್ಯಮ ಸಂಸ್ಥೆಗಳ ಸಿಬ್ಬಂದಿ ಗುರುತಿನ ಚೀಟಿಯೊಂದಿಗೆ ಸಂಚಾರಕ್ಕೆ ಅನುಮತಿ*ಇ-ಕಾಮರ್ಸ್ ಸೇವೆಗೆ ಅವಕಾಶ* …
Read More »
admin
January 5, 2022
Breaking News, ಬೆಂಗಳೂರು
ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿ ಚಕ್ರ ವಾಹನದ ಹಿಂದೆ ಕುಳಿತಿದ್ದ ವಿದ್ಯಾರ್ಥಿನಿ ತಲೆ ಮೇಲೆ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಟ್ಟಿರುವ ಘಟನೆ ಅಶೋಕನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರ್.ಎಸ್.ಪಾಳ್ಯ ನಿವಾಸಿ ಸಂಜನಾ ಪ್ರಿಯಾ (21) ಮೃತ ವಿದ್ಯಾರ್ಥಿನಿ. ದ್ವಿಚಕ್ರ ವಾಹನ ಚಾಲಕ ವಿನಯ್‌ಕುಮಾರ್(24) ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Read More »
admin
January 5, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಇದು ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಬಂದಿದೆ ಎಂಬುದನ್ನು ಖಚಿತಪಡಿಸುತ್ತದೆ. ನಾವೀಗ ಮೂರನೇ ಅಲೆಯ ಆರಂಭದಲ್ಲಿದ್ದೇವೆ . ರಾಜ್ಯದ ಕೋವಿಡ್ ಪಾಸಿಟಿವಿಟಿ ದರ ಕಳೆದ ಆರು ತಿಂಗಳುಗಳಿಂದ ಶೇ.1ರೊಳಗೆ ಇದ್ದದ್ದು, ಇದೀಗ ಶೇ.2.59ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ನಾವೀಗ ಮೂರನೇ ಅಲೆಯ ಆರಂಭದಲ್ಲಿದ್ದೇವೆ. ದಿನದಿಂದ ದಿನಕ್ಕೆ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮೊದಲು …
Read More »
admin
January 4, 2022
Breaking News, News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನಗರದಲ್ಲಿ ಮುಂದಿನ ಎರಡುವಾರಗಳ ಕಾಲ 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕ ಸ್ಥಗಳಾದಂತ ಚಿತ್ರಮಂದಿರ, ಮಾಲ್, ಪಬ್, ಬಾರ್ ಗಳಲ್ಲಿ ಶೇ.50ರ ಮಿತಿಯನ್ನು ಏರಲಾಗಿದೆ. ,ವಾರಾಂತ್ರ ಕರ್ಪ್ಯೂ ಜಾರಿಗೊಳಿಸಲಾಗಿದೆ. ನೈಟ್ ಕರ್ಪ್ಯೂ ಮುಂದಿನ ಎರಡು ವಾರ ಮುಂದುವರೆಸಲಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಇಂದಿನ ಸಿಎಂ ಸಭೆಯ …
Read More »
admin
January 4, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಅಧಿಕಾರಿಗಳ ಮೂಲಕ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ನೋಡಲ್ ಅಧಿಕಾರಿಗಳಾಗಿ ಐಎಎಸ್, ಐಪಿಎಸ್ ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ. ಅದ್ರಂತೆ, ಏರ್‌ಪೋರ್ಟ್ ಕೋವಿಡ್ ಉಸ್ತುವಾರಿಯನ್ನ ಸಿ.ಶಿಖಾ ಅವ್ರಿಗೆ ನೀಡಲಾಗಿದ್ದು, ಖಾಸಗಿ ವೈದ್ಯ ಸಂಸ್ಥೆಯಲ್ಲಿ ಹಾಸಿಗೆ ಮೀಸಲು ಉಸ್ತುವಾರಿಗಳನ್ನ ನೇಮಿಸಲಾಗಿದೆ.
Read More »