Breaking News

ಬೆಂಗಳೂರು

ಬಿಜೆಪಿ ಕಾರ್ಯಕಾರಣಿ ಸಭೆಗೆ ಸಕಲ ಸಿದ್ಧತೆ: ಮಹತ್ವದ ಚರ್ಚೆ ಕ್ಷಣಗಣನೆ…!

ಹುಬ್ಬಳ್ಳಿ: ಸತತ 10 ವರ್ಷಗಳ ನಂತರ ಉತ್ತರ ಕರ್ನಾಟಕದ ಹೆಬ್ಬಾಗಿಲು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿಗೆ ಸಜ್ಜುಗೊಂಡಿದ್ದು, ಕಮಲ ಪಡೆಯ ನಾಯಕರ ಆಗಮನಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಇಂದು ಮತ್ತು ನಾಳೆ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಕಲ‌ ಸಿದ್ಧತೆ ನಡೆದಿದ್ದು, ಇಡೀ ನಗರ ಕೇಸರೀಮಯವಾಗಿ ರಾರಾಜಿಸುತ್ತಿದೆ. ಸತತ 10 ವರ್ಷಗಳ ನಂತರ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ಬಿಜೆಪಿ …

Read More »

ACB ಬಲೆಗೆ ಬಿದ್ದ ಇಬ್ಬರು ಅರಣ್ಯ ಇಲಾಖೆಯ ಅಧಿಕಾರಿಗಳು…

ಹುಬ್ಬಳ್ಳಿ : ಲಂಚ ಸ್ವೀಕರಿಸಿವಾಗ ಎಸಿಬಿ ಬಲೆಗೆ ಇಬ್ಬರು ಅರಣ್ಯ ಇಲಾಖೆಯ ಸಿಬ್ಬಂದಿ ಬಿದಿದ್ದಾರೆ. ವಲಯ ಅರಣ್ಯ ಅಧಿಕಾರಿ ಅನ್ನದಾನಯ್ಯ ನೀಲಗುಂದಮಠ ಮತ್ತು ಕಂಪ್ಯೂಟರ್ ಆಪರೇಟರ್ ಶಿವಶಂಕರ ಹಿರೇಮಠ ಬಲೆಗೆ ಬಿದ್ದವರು. ಮೃತ ವಾಚರ್ ಮನೊಬ್ಬರು ಪರಿಹಾರ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 15 ಸಾವಿರ ರೂಪಾಯಿ ಲಂಚ ತಗೆದುಕೊಳ್ಳುವಾಗ ಇಬ್ಬರು ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದಿದ್ದಾರೆ. ಡಿವೈಎಸ್ಪಿ ಮಹಾಂತೇಶ ಜಿದ್ದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Read More »

ಸಿಎಂ ಬೊಮ್ಮಾಯಿಗೆ ಅರುಣಸಿಂಗ್ ಬಹುಪರಾಕ್: ನಾಳೆ ಜೆ.ಪಿ.ನಡ್ಡಾ ಬರಲ್ಲ…!

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತು ಬಿಜೆಪಿ ನೇತೃತ್ವದ ಸರ್ಕಾರ ಉತ್ತಮ ಕೆಲಸವನ್ನು ಮಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ಅದ್ಬುತ ಕೆಲಸವನ್ನು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ಚುನಾವಣೆ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆಯುತ್ತದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಕುಮಾರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷ ಮತ್ತು ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ನಾಳೆ, ಮತ್ತು ನಾಡಿದ್ದು ಪಕ್ಷದ ಕಾರ್ಯಕಾರಣಿ ಸಭೆ ಇದೆ. …

Read More »

ಶಿವಮೊಗ್ಗ: ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮರಳಿದ ಒಂದೇ ಕುಟುಂಬದ 9 ಮಂದಿ

ಶಿವಮೊಗ್ಗ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆ ಬಿಸಿಯಾಗಿರುವಾಗಲೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಒಂದೇ ಕುಟುಂಬದ 9 ಮಂದಿ ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ವಿಶೇಷ ಪೂಜೆಗಳ ಮೂಲಕ ಇವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಲಾಯಿತು. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬುವರು ತಮ್ಮ ಕುಟುಂಬದ ಸಮೇತ ಹಿಂದೂ ಧರ್ಮಕ್ಕೆ ಭಾನುವಾರ ಮರಳಿದ್ದಾರೆ. 40 ವರ್ಷಗಳ ಹಿಂದೆ ಮತಾಂತರ ಜಯಶೀಲನ್ ಅವರ …

Read More »

ಸಿಎಂ ಕಾರ್ಯಕ್ರಮಕ್ಕಿಲ್ಲಾ ಕೊರೋನಾ ರೂಲ್ಸ್-ಮಾಸ್ಕ್,ಇಲ್ಲಾ ಸಾಮಾಜಿಕ ಅಂತರ ಮಾಯ !

ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಇಂದು ಪರಿಹಾರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಜನ ಬಸ್‍ಗಳ ಮೂಲಕ ಗುಂಪು, ಗುಂಪಾಗಿ ಆಗಮಿಸಿದ್ದು, ಕೊರೊನಾ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ. ಬಸವಗುಡಿ ಮೈದಾನದಲ್ಲಿ ಇಂದು ಬೆಳಗ್ಗೆ 11:30ಕ್ಕೆ ಸರ್ಕಾರ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ನೂರಾರು ಮಂದಿ ಬಸ್ ಏರಿ ಬಂದಿದ್ದರು. ಅಲ್ಲದೇ ಈ ವೇಳೆ ಎಲ್ಲರೂ ಮಾಸ್ಕ್ …

Read More »

ಏಳು ಬಾರಿಯ ರಾಜ್ಯಸಭಾ ಸಂಸದ ಮಹೇಂದ್ರ ಪ್ರಸಾದ್ ಇನ್ನಿಲ್ಲ

ನವದೆಹಲಿ:ಜನತಾ ದಳ (ಯುನೈಟೆಡ್) ನ ರಾಜ್ಯಸಭಾ ಸಂಸದ ಮತ್ತು ಕೈಗಾರಿಕೋದ್ಯಮಿ ಮಹೇಂದ್ರ ಪ್ರಸಾದ್ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 81 ವರ್ಷದ ಪ್ರಸಾದ್ ಭಾನುವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಸಂಸತ್ತಿನ ಶ್ರೀಮಂತ ಸದಸ್ಯರಲ್ಲಿ ಒಬ್ಬರು ಎಂದು ಅಂದಾಜಿಸಲಾಗಿದೆ. ಬಿಹಾರದಿಂದ ಏಳು ಬಾರಿ ರಾಜ್ಯಸಭಾ ಸಂಸದರಾಗಿದ್ದರು ಮತ್ತು ಒಮ್ಮೆ ಲೋಕಸಭೆಗೆ ಚುನಾಯಿತರಾಗಿದ್ದರು.ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. …

Read More »

ರಾಜ್ಯ ಬಿಜೆಪಿ ಸರ್ಕಾರ ‘ನೈಟ್ ಕರ್ಪ್ಯೂ’ ಬಗ್ಗೆ, ಸ್ವಪಕ್ಷೀಯ ನಾಯಕರಿಂದಲೇ ಅಸಮಾಧಾನ.!

ಚಿಕ್ಕಮಗಳೂರು: ರಾಜ್ಯ ಸರ್ಕಾರ ನಾಳೆಯಿಂದ ಜಾರಿಗೊಳಿಸುತ್ತಿರುವಂತ ನೈಟ್ ಕರ್ಪ್ಯೂ ಆದೇಶದ ಬಗ್ಗೆ ಹೋಟೆಲ್ ಮಾಲೀಕರು, ಚಿತ್ರಮಂದಿರದ ಮಾಲೀಕರು ಸೇರಿದಂತೆ ಅನೇಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಇತ್ತ ಬಿಜೆಪಿ ಸರ್ಕಾರದ ಈ ಆದೇಶ ವಿರುದ್ಧವೇ ಸ್ವಪಕ್ಷೀಯ ನಾಯಕ ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ಓಮಿಕ್ರಾನ್ ವೈರಸ್ ಬಗ್ಗೆ ಭಯಪಡಬೇಡಿ ಎಂಬುದಾಗಿ ವಿಜ್ಞಾನಿಗಳೇ ತಿಳಿಸಿದ್ದಾರೆ. ಅಲ್ಲದೇ ಮೂಗು …

Read More »

ಮಾತೃ ಭಾಷೆ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ-ಕುಮಾರಸ್ವಾಮಿ

ಬೆಂಗಳೂರು: ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ಕೇಂದ್ರ ಸರ್ಕಾರ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕಲಾಗುತ್ತಿದೆ. ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಭಾನುವಾರ ನಡೆಸಿದ ಯುಜಿಸಿ-ಎನ್‍ಇಟಿ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯಲ್ಲಿ 100ರಲ್ಲಿ 90 ರಷ್ಟು ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದರಿಂದ ಸಾವಿರಾರು ವಿದ್ಯಾರ್ಥಿಗಳು ಗೊಂದಲಕ್ಕೀಡಿ ಪರೀಕ್ಷೆಯನ್ನು …

Read More »

ಯೋಗಿ ಮತ್ತೆ ಅಧಿಕಾರಕ್ಕೆ ಬಂದರೆ ಅಸಾದುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆ – ಯುಪಿ ಸಚಿವ

ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದರೆ, ಆಲ್‌ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಹಿಂದೂಗಳ ಜನಿವಾರವನ್ನು ಧರಿಸುತ್ತಾರೆ ಎಂದು ಯುಪಿಯ ಪಂಚಾಯತ್‌ರಾಜ್ ಸಚಿವ ಭೂಪೇಂದ್ರ ಸಿಂಗ್ ಚೌಧರಿ ಹೇಳಿದ್ದಾರೆ. ಚೌಧರಿ ಅವರು ಶಾಮ್ಲಿಯಲ್ಲಿ ನಡೆದ ಯುವಜನರ ಸಮಾವೇಶದಲ್ಲಿ ಯೋಗಿ ಆದಿತ್ಯನಾಥನ್ ಮತ್ತೆ ಅಧಿಕಾರಕ್ಕೆ ಬಂದರೆ ಅಸಾದುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆ ಮತ್ತು ಭಗವಾನ್ ರಾಮನ ಹೆಸರನ್ನು ಜಪಿಸುತ್ತಾರೆ ಎಂದಿದ್ದಾರೆ.ಬಿಜೆಪಿಯ ಸಿದ್ಧಾಂತವನ್ನು ಬಲಪಡಿಸುವ ಮಧ್ಯೆ, …

Read More »

ಹು-ಧಾ ಅವಳಿನಗರದ ರಸ್ತೆ ತಗ್ಗು ಗುಂಡಿಗಳನ್ನು ಮುಚ್ಚಲು ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಗಣಹೋಮ

ಹುಬ್ಬಳ್ಳಿ: ಹು-ಧಾ ಮಹಾನಗರ ನಗರದಲ್ಲಿ ಹದಗೆಟ್ಟಿರುವ ರಸ್ತೆಗಳ ದುರಸ್ತಿ ಹಾಗೂ ನಗರದೆಲ್ಲೆಡೆ ತೆರೆದುಕೊಂಡಿರುವ ಗುಂಡಿಗಳನ್ನು ಕೂಡಲೇ ಮುಚ್ಚಬೇಕೆಂದು ಒತ್ತಾಯಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಕೊಪ್ಪಿಕರ ರಸ್ತೆಯ ಮಧ್ಯದಲ್ಲಿ ಹೋಮ ಕುಂಡ ನಿರ್ಮಿಸಿ, ಸಂಕಲ್ಪ ಗಣಹೋಮ ಮಾಡುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು. ಈ ವೇಳೆ ಇಬ್ಬರು ಅರ್ಚಕರಿಂದ ಮಂತ್ರಘೋಷ ಪಟಣದ ಮೂಲಕ ಶಾಸ್ತ್ರೋಕ್ತವಾಗಿ ಗಣಹೋಮ‌ ನೆರವೇರಿಸಿದರು. ಈ ವೇಳೆ ಮಾತನಾಡಿದ ಹು-ಧಾ ಮಹಾನಗರ …

Read More »