BigTv News
December 13, 2024
Breaking News, ಉಡುಪಿ
ಉಡುಪಿ: ಉಡುಪಿ ಜಿಲ್ಲೆಗೊಂದು ಸುಸಜ್ಜಿತ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಕೇಂದ್ರ ಸಚಿವ ಜೆಪಿ ನಡ್ಡಾ ಅವರಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದರು. ಇಂದು (ಡಿ.13) ಕೇಂದ್ರ ಸಚಿವರನ್ನು ಭೇಟಿಯಾದ ಅವರು ಉಡುಪಿ ಜಿಲ್ಲೆ ಸುಮಾರು 167 ಗ್ರಾಮ ಪಂಚಾಯಿತಿ ಮತ್ತು15 ಲಕ್ಷ ಜನಸಂಖ್ಯೆ ಹೊಂದಿರುವ ಪ್ರದೇಶವಾಗಿದ್ದು ಶಿಕ್ಷಣ ಕ್ಷೇತ್ರ, ದೇವರ ಬೀಡು, ಪ್ರವಾಸಿ ತಾಣವನ್ನು ಹೊಂದಿರುವ ಉಡುಪಿ ಜಿಲ್ಲೆಗೆ ಒಂದು ಸುಸಜ್ಜಿತವಾದ ಮೆಡಿಕಲ್ ಕಾಲೇಜಿನ ಅವಶ್ಯಕತೆ …
Read More »
BigTv News
November 17, 2024
Breaking News, ಉಡುಪಿ
ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣ ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಮತ್ತು ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ತಮ್ಮ ಪಿಂಚಣಿ ಹಣ ಪಡೆಯಲು ಕಳೆದ ಐದು ತಿಂಗಳಿಂದ ಖಜಾನೆಯ ಉಪನಿರ್ದೇಶಕ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬುವರು ಸತಾಯಿಸುತ್ತಿದ್ದು, 5,000 ರೂ.ಲಂಚ ನೀಡುವಂತೆ ಒತ್ತಾಯಿಸಿದ್ದರು ಎಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್, ನಿರೀಕ್ಷಕರಾದ ಸುರೇಶ್, ಕೆ.ಎನ್. …
Read More »
BigTv News
November 16, 2024
Breaking News, ಉಡುಪಿ
ಉಡುಪಿ: ಜಿಲ್ಲೆಯಲ್ಲಿ ಸಿಎನ್‌ಜಿ ಇಂಧನ ಚಾಲಿತ ಆಟೊ ರಿಕ್ಷಾ ಚಾಲಕರು ಸಮಸ್ಯೆ ಎದುರಿಸುತ್ತಿದ್ದು, ಸಿಎನ್‌ಜಿ ಬಂಕ್‌ಗಳಿಗೆ ಸಮರ್ಪಕವಾಗಿ ಇಂಧನ ಪೂರೈಸಿ ಎಂದು ಮಂಗಳೂರಿನ ಗೇಲ್ ಇಂಡಿಯಾ ಕಂಪನಿ ಹಾಗೂ ಅದಾನಿ ಕಂಪನಿ ಪ್ರತಿನಿಧಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಿಎನ್‌ಜಿ ಇಂಧನ ತುಂಬಿಸಿಕೊಳ್ಳಲು ರಿಕ್ಷಾ ಚಾಲಕರು ಬಂಕ್‌ಗಳ ಮುಂದೆ ಕಿ.ಮೀ.ಗಟ್ಟಲೆ ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. …
Read More »
BigTv News
November 10, 2024
Breaking News, ಉಡುಪಿ
ಉಡುಪಿ: ದೇಶದ ಸುಮಾರು 25 ಸಾಂಪ್ರದಾಯಿಕ ಕುಲ ಕಸುಬುಗಳನ್ನು ಪ್ರೋತ್ಸಾಹಿಸಿ ಅಗತ್ಯ ತರಬೇತಿ ಮತ್ತು ಸೌಲಭ್ಯವನ್ನು ಒದಗಿಸಲು ಕೇಂದ್ರ ಸರಕಾರ ಕಳೆದ ವರ್ಷ ಜಾರಿಗೆ ತಂದ ಪಿಎಂ ವಿಶ್ವಕರ್ಮ ಯೋಜನೆಯ ನೋಂದಣಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ದೇಶಕ್ಕೆ ಮಾದರಿಯಾಗಿದೆ. 2023ರ ಸೆಪ್ಟಂಬರ್‌ನಲ್ಲಿ ಜಾರಿಯಾದ ಈ ಯೋಜನೆಗೆ ಆರಂಭದಲ್ಲಿ ದೇಶದ ಕೆಲವು ಜಿಲ್ಲೆಗಳನ್ನು ಮಾತ್ರ ಪರಿಗಣಿಸಲಾಗಿತ್ತು. ಅನಂತರ ಎಲ್ಲ ಜಿಲ್ಲೆಗಳನ್ನು ಯೋಜನೆಯ ವ್ಯಾಪ್ತಿಗೆ ತರಲಾಗಿತ್ತು. ಈವರೆಗೆ ದೇಶದಲ್ಲಿ 2.58 ಕೋಟಿ ಅರ್ಜಿಗಳು …
Read More »
BigTv News
November 7, 2024
Breaking News, ಉಡುಪಿ
ಉಡುಪಿ: ಕನ್ನಡ ನಾಡು ನುಡಿಯ ಕುರಿತು ಅಭಿಮಾನವನ್ನು ಮೂಡಿಸುವ ಉದ್ದೇಶದಿಂದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯು ಪ್ರತಿ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಅನೇಕ ಶತಮಾನಗಳ ಇತಿಹಾಸವನ್ನು ಹೊಂದಿದ ಕನ್ನಡ ನಾಡು ಹಾಗೂ ಕನ್ನಡ ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹೇಳಿದರು. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ …
Read More »
BigTv News
November 5, 2024
Breaking News, ಉಡುಪಿ
ಉಡುಪಿ: ಕೇಂದ್ರ ಸರ್ಕಾರದ ಯೋಜನೆಗಳಾದ ವಿಶ್ವಕರ್ಮ, ಸ್ವನಿಧಿ, ಮುದ್ರಾ ಯೋಜನೆ, ಸ್ಟಾರ್ಟ್‌ಅಪ್ ಮೊದಲಾದ ಯೋಜನೆಗಳಿಗೆ ಸಂಬಂಧಿಸಿದಂತೆ ಸಾಲ ನೀಡಲು ಯಾವುದೇ ವಿಳಂಬ ಮಾಡುವುದು ಸರಿಯಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಕಚೇರಿಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಸಾಲ ಸೌಲಭ್ಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ 4,465 ಮಂದಿ ಸ್ವನಿಧಿಯ ಮೊದಲ ಹಂತದ …
Read More »
Shaikh BigTv
November 3, 2024
Breaking News, ಉಡುಪಿ
ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಉಡುಪಿ ಶ್ರೀಕೃಷ್ಣನ ಭಕ್ತರಾದ ಖ್ಯಾತ ಚಿತ್ರನಟ ಸೂಪರ್ ಸ್ಟಾರ್ ರಜನೀಕಾಂತ್ ಅವರನ್ನು ಪರ್ಯಾಯದ ಕಾರ್ಯಕ್ರಮಗಳಿಗೆ ಆಮಂತ್ರಿಸಲಾಯಿತು. ಮಠದ ವತಿಯಿಂದ ಹರೀಶ್ ಭಟ್ ಅವರು ರಜನೀಕಾಂತ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಈ ಸಂದರ್ಭದಲ್ಲಿ ರಜನೀಕಾಂತ್ ಅವರು ಕೋಟಿ ಗೀತಾ ಲೇಖನ ಯಜ್ಞದ ಬಗ್ಗೆ ಖುದ್ದಾಗಿ ಮಾಹಿತಿ ಪಡೆದುಕೊಂಡು ಸಂತೋಷಪಟ್ಟು, ಸದ್ಯದಲ್ಲಿಯೇ ಭೇಟಿ ನೀಡುವುದಾಗಿ ತಿಳಿಸಿದರು.
Read More »
Shaikh BigTv
November 3, 2024
Breaking News, ಉಡುಪಿ
ಉಡುಪಿ: ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಕ್ಸ್ ಸೊತ್ತುಗಳನ್ನು ರಾಷ್ಟ್ರೀಕರಣಗೊಳಿಸಿ ಎಂಬ ಬಿಜೆಪಿ ಶಾಸಕ …
Read More »
BigTv News
October 19, 2024
Breaking News, ಉಡುಪಿ
ಮಲ್ಪೆ: ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿರುವ ಘಟನೆ ಮಲ್ಪೆ ಬೀಚಿನಲ್ಲಿ ನಿನ್ನೆ ನಡೆದಿದ್ದು, ರಕ್ಷಿಸಲ್ಪಟ್ಟಿರುವ ಮಕ್ಕಳು ಹಾವೇರಿಯವರೆಂದು ತಿಳಿದುಬಂದಿದೆ. ವಿದ್ಯಾಭ್ಯಾಸ ಮುಂದುವರಿಸುವ ಆಸಕ್ತಿ ಹೊಂದಿದ್ದೇವೆ, ಪೋಷಕರಿಲ್ಲದೆ ಅಸಹಾಯಕರಾದೆವು. ಕಲಿಯುವ ಉದ್ದೇಶಕ್ಕಾಗಿ ಹಣ ಕ್ರೋಢೀಕರಿಸಲು, ಹಾವೇರಿಯಿಂದ ಉಡುಪಿಗೆ ಭಿಕ್ಷೆಯಾಚಿಸಲು ಬಂದಿರುವುದಾಗಿ ಮಕ್ಕಳು ಹೇಳಿಕೊಂಡಿದ್ದಾರೆ. ಬೀಚ್ ನಲ್ಲಿ ವಿಹರಿಸುತ್ತಿದ್ದ ಇಬ್ಬರು ಬಾಲಕಿಯರ ಚಲನವಲನದಲ್ಲಿ ಸಂಶಯಗೊಂಡು ವಿಚಾರಿಸಿದಾಗ, ಬೀಚ್ ಗಸ್ತು ಸಿಬ್ಬಂದಿ ಸುರೇಶ್ ಅಂಚನ್ ಮತ್ತು ಸುಬ್ರಮಣ್ಯ ಅವರು ಬಾಲಕಿಯರು ಮನೆಬಿಟ್ಟು ಬಂದಿರುವುದು ಗೊತ್ತಾಗಿದೆ. …
Read More »
BigTv News
August 28, 2024
Breaking News, ಉಡುಪಿ
ಉಡುಪಿ: ಜಿಲ್ಲೆಯ ರಸ್ತೆ ಅವ್ಯವಸ್ಥೆ ನೋಡಲು ಸ್ವತಃ ಯಮರಾಜನೇ ಯಮಲೋಕದಿಂದ ಭೂಲೋಕಕ್ಕೆ ಬಂದಿದ್ದಾನೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಉಡುಪಿಯ ರಸ್ತೆಗಳ ಸ್ಥಿತಿ. ಆದಿ ಉಡುಪಿಯಲ್ಲಿ ಯಮರಾಜ ಮತ್ತು ಚಿತ್ರಗುಪ್ತ ರಾಷ್ಟ್ರೀಯ ಹೆದ್ದಾರಿಯ ಗುಂಡಿಗಳ ಆಳ ಅಗಲ ಅಳೆಯುವ ವಿಡಿಯೋ ಇದಾಗಿದ್ದು, ಜಿಲ್ಲಾಡಳಿತ ಜನಪ್ರತಿನಿಧಿಗಳು ರಸ್ತೆ ವಿಚಾರದಲ್ಲಿ ಎಷ್ಟು ಸಿರಿಯಸ್ ಆಗಿದ್ದಾರೆ ಎನ್ನುವುದನ್ನು ತೋರಿಸುತ್ತಿದೆ. ಈ ಬಾರಿ ಅಷ್ಟಮಿಯಲ್ಲಿ ನಾಲೈದು ಯುವಕರ ತಂಡವೊಂದು ವಿಭಿನ್ನ ವೇಷಗಳ ಮೂಲಕ ಮಲ್ಪೆ …
Read More »