Breaking News

ಉಡುಪಿ

ದಾಂಡಿಯಾ ಪೆಂಡಾಲ್ ಗೆ ಮುಸ್ಲಿಂ ಯುವಕರಿಗೆ ನಿರ್ಬಂಧ ಹೇರಬೇಕು : ಮುತಾಲಿಕ್

ಉಡುಪಿ: ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇವಸ್ಥಾನಗಳಲ್ಲಿ, ಕೆಲವೊಂದು ಸ್ಥಳಗಳಲ್ಲಿ ವಿಶೇಷವಾದ ಕುಣಿತ, ಸಾಂಸ್ಕೃತಿಕ ಕಾರ್ಯಕ್ರಮ, ವಿಶೇಷ ಪೂಜೆ ನಡೆಯುತ್ತಲೇ ಇರುತ್ತದೆ. ದಾಂಡಿಯಾ ಕುಣಿತ ಕೂಡ ದಸರಾ ಹಬ್ಬದ ಸ್ಪೆಷಲ್. ಇದೀಗ ದಾಂಡಿಯಾ ಪೆಂಡಾಲ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ್ ಮುತಾಲಿಕ್, ದಾಂಡಿಯಾ ಪೆಂಡಾಲ್ ನಲ್ಲಿ ಮುಸ್ಲಿಂ ಯುವಕರಿಗೆ ಏನು ಕೆಲಸ ಎಂದು ಪ್ರಶ್ನಿಸಿದ್ದಾರೆ. ಲವ್ ಜಿಹಾದ್ ಮಾಡುವುದಕ್ಕೆ ದಾಂಡಿಯಾ ಪೆಂಡಾಲ್ ಗೆ ಬರುತ್ತಾರೆ. ನಮ್ಮ ಸಮಾಜ …

Read More »

ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವು

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಬಳಿ ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಸಂಪತ್ ಪೂಜಾರಿ (17) ರೈಲು ಡಿಕ್ಕಿ ಹೊಡೆದು ಮೃತಪಟ್ಟ ವಿದ್ಯಾರ್ಥಿ. ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸ್ಥಳೀಯ ವಿದ್ಯಾರ್ಥಿ ಸಂಪತ್ ರೈಲು ಹಳಿ ದಾಟುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ರೈಲು ಅಧಿಕಾರಿಗಳು, ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More »

ಉಡುಪಿ ಕೃಷ್ಣಲೀಲೋತ್ಸವಕ್ಕೆ ಹರಿದು ಬಂದ ಜನ ಸಾಗರ

ಉಡುಪಿ: ಎರಡು ವರ್ಷಗಳಿಂದ ಎಲ್ಲ ಹಬ್ಬಗಳ ಸಂಭ್ರಮಕ್ಕೆ ಸರಕಾರದ ಕೋವಿಡ್‌ ಮಾರ್ಗ ಸೂಚಿ ಕಡಿವಾಣ ಹಾಕಿದ್ದರೆ, ಈ ಬಾರಿ ಶ್ರೀಕೃಷ್ಣಾಷ್ಟಮಿ, ವಿಟ್ಲಪಿಂಡಿ ಉತ್ಸವವು ಜನಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆಯಿತು. ಊರ, ಪರ ಊರಿನ ಸಾವಿರಾರು ಮಂದಿ ಭಕ್ತರು ಕೃಷ್ಣಾ… ಕೃಷ್ಣಾ.. ಎಂದು ಕೃಷ್ಣಲೀಲೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ರಥಬೀದಿಯಲ್ಲಿ ಶನಿವಾರ ಸಂಜೆ ಸಾವಿರಾರು ಭಕ್ತ ಸಾಗರದ ನಡುವೆ ವೈಭವದಿಂದ ವಿಟ್ಲಪಿಂಡಿ ಉತ್ಸವ ಸಂಪನ್ನಗೊಂಡಿತು. ಬಿಸಿಲು ಮೋಡದ ವಾತಾವರಣದ ನಡುವೆ ಸುಮಾರು 4 ಗಂಟೆ …

Read More »

ಭವಿಷ್ಯದಲ್ಲಿ ತನ್ನ ನೆಲೆ ಕಳೆದುಕೊಂಡು ಕಾಂಗ್ರೆಸ್‌ ಪಶ್ಚಾತ್ತಾಪ ಪಡಬೇಕಿದೆ

ಉಡುಪಿ: ಪೂರ್ವ ನಿರ್ಧಾರ ಮಾಡದೆ ಬಿಜೆಪಿಯನ್ನು ಸೇರಿಲ್ಲ. ಯೋಚನೆ ಮಾಡಿ ತೆಗೆದುಕೊಂಡ ನಿರ್ಧಾರವಾಗಿದ್ದು, ಪಶ್ಚಾತ್ತಾಪ ಪಡುವ ದಿನ ಬರುವುದಿಲ್ಲ. ಭವಿಷ್ಯದಲ್ಲಿ ತನ್ನ ನೆಲೆ ಕಳೆದುಕೊಂಡು ಕಾಂಗ್ರೆಸ್‌ ಪಶ್ಚಾತ್ತಾಪ ಪಡಬೇಕಿದೆ ಎಂದು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಇದು ಅರಿವಾಗಲಿದೆ. 2020-23ರ ಚುನಾವಣೆಯಲ್ಲಿ ಅಧಿಕಾರ ಸಿಗುತ್ತದೆ ಎಂಬ …

Read More »

ಟೊಮ್ಯಾಟೋ ಜ್ವರ ಕುರಿತು ನಿಗ್ಗಾವಹಿಸಿಕೊಳ್ಳಿ : ಜಿಲ್ಲಾಧಿಕಾರಿ

ಉಡುಪಿ: ಕೇರಳ- ತಮಿಳುನಾಡು ಗಡಿಯಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80ಕ್ಕೂ ಅಧಿಕ ಮಕ್ಕಳಲ್ಲಿ ಟೊಮ್ಯಾಟೋ ಜ್ವರ ಕಂಡು ಬಂದಿದ್ದು, ಉಡುಪಿಯಲ್ಲಿ ಈ ರೋಗ ಲಕ್ಷಣ ಪತ್ತೆಯಾಗಿಲ್ಲ. ಆದರೂ ಗಡಿ ಜಿಲ್ಲೆಗಳಲ್ಲಿ ಈ ಕುರಿತು ನಿಗಾ ಅಗತ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ತಿಳಿಸಿದ್ದಾರೆ. ಜ್ವರ ಕಾಣಿಸಿಕೊಳ್ಳುವ ಮಕ್ಕಳ ದೇಹದಲ್ಲಿ ಟೊಮ್ಯಾಟೋ ಆಕಾರದ ಗುಳ್ಳೆಗಳು ಏಳುವುದರಿಂದ ಇದಕ್ಕೆ ಟೊಮ್ಯಾಟೋ ಜ್ವರ ಎಂದು ಹೆಸರಿಡಲಾಗಿದೆ. ಈ ಜ್ವರವು ವೈರಸ್‌ನಿಂದ ಹರಡುತ್ತಿದ್ದು …

Read More »

ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್

ಉಡಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನಾ ಮೋನೋಸಿಲ್ ಎಂಬ ಕೀಟನಾಶಕವನ್ನು ಜೂಸ್ ಗೆ ಬೆರೆಸಿ ಕುಡಿದಿರುವ ಶಂಕೆ ವ್ಯಕ್ತವಾಗಿದೆ.ಈ ಬಗ್ಗೆ ಉಡುಪಿಯ ಲಾಡ್ಜಿನ ಕಸದ ತೊಟ್ಟಿಯಲ್ಲಿ ವಿಷದ ಬಾಟಲಿಯೊಂದನ್ನು ಪೊರೆನ್ಸಿಕ್ ತಜ್ಞರು ಪತ್ತೆ ಹಚ್ಚಿದ್ದಾರೆ. ಜೊತೆಗೆ ಅದನ್ನು ವಶಪಡಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಲಾಡ್ಜ್ ನಲ್ಲಿ ಪತ್ತೆಯಾದ ಬಾಟಲ್ ಮೋನೊಸಿಲ್ ಎಂಬುದಾಗಿ ತಿಳಿದು ಬಂದಿದೆ. ಇದು ಗಿಡಗಳಿಗೆ ಹುಳ ಬಾಧೆ ತಡೆಯಲು ಬಳಸಲಾಗುವ ಮೋನೊಸಿಲ್ ಎಂಬ ಕೀಟನಾಶಕ. ಇದನ್ನು ಜೂಸ್ ನಲ್ಲಿ ಬೆರೆಸಿ …

Read More »

ಈಶ್ವರಪ್ಪ ವಿರುದ್ಧ ಕಮಿಷನ್‌ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ

ಉಡುಪಿ : ನನ್ನ ಸಾವಿಗೆ ಸಚಿವ ಕೆ.ಎಸ್‌. ಈಶ್ವರಪ್ಪ ಕಾರಣ, ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಡೆತ್‌ ನೋಟ್‌ ಬರೆದಿಟ್ಟು ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ ಪಾಟೀಲ ನಗರದ ಲಾಡ್ಜ್‌ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕೆ.ಎಸ್. ಈಶ್ವರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸಂತೋಷ 4 ಕೋಟಿ ರೂಪಾಯಿ ವೆಚ್ಚದಲ್ಲಿ 108 ಕಾಮಗಾರಿ ನೆರವೇರಿಸಿದ್ದರು. ಇದರ ಬಿಲ್ ಪಡೆಯಲು ಈಶ್ವರಪ್ಪ ಶೇ.40 ಕಮಿಷನ್ ಕೇಳುತ್ತಿರುವ …

Read More »

ಈಶ್ವರಪ್ಪರನ್ನು ಸಚಿವಸ್ಥಾನದಿಂದ ವಜಾಗೊಳಿಸುವಂತೆ ಪ್ರತಿಭಟನೆ

ಉಡುಪಿ: ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾದ ಸಚಿವ ಈಶ್ವರಪ್ಪರನ್ನು ಸಚಿವಸ್ಥಾನದಿಂದ ವಜಾಗೊಳಿಸಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶಾಂಭವಿ ಲಾಡ್ಜ್‌ ಎದುರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಈಶ್ವರಪ್ಪ ಅವರ ಹರಕು ನಾಲಿಗೆಯ 40 ಪರ್ಸೆಂಟ್ ಕಮಿಷನ್ ದಂಧೆಯ ರಾಜಕಾರಣಕ್ಕೆ ಬೆದರಿ ಬೆಳಗಾವಿಯ ಹಿಂಡಲಗಾ ಗ್ರಾಮದ ಜನಪರ ಚಿಂತನೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. …

Read More »

ಯಾವ ವಿವಾದಲ್ಲಿ ಭಾಗಿಯಾಗುವುದಿಲ್ಲಾ : ಸಿಎಂ

ಉಡುಪಿ:ನಾನು ಯಾವ ವಿವಾದದಲ್ಲೂ ಬೀಳಲು ಬಯಸುವುದಿಲ್ಲ. ಯಾರು ಏನು ಹೇಳಿಕೆ ಕೊಡುತ್ತಾರೆ ಎಂಬುದು ಮುಖ್ಯವಲ್ಲ. ರಾಜ್ಯದ ಜನರ ಆಸ್ತಿಪಾಸ್ತಿ ಜೀವ ರಕ್ಷಣೆ ನಮ್ಮ ಕರ್ತವ್ಯ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಪ್ರಸಕ್ತ ವಿದ್ಯಮಾನಗಳ ಕುರಿತು ಮಣಿಪಾಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರು ಏನೇ ಹೇಳಿಕೆ ಕೊಟ್ಟರೂ ಶಾಂತಿ-ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ರಾಜಿ ಇಲ್ಲ, ಯಾರೇ ಇರಲಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಖಡಕ್ ನೀಡಿದರುಸಂದೇಶ .

Read More »

ಇಂದು ಉಡುಪಿಗೆ ಸಿಎಂ ಭೇಟಿ

ಉಡುಪಿ: ಏ.11ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11.45ಕ್ಕೆ ಆದಿ ಉಡುಪಿಗೆ ಹೆಲಿಕಾಪ್ಟರ್‌ನಲ್ಲಿ ಬಂದಿಯಲಿರುವ ಸಿಎಂ ಕಾಪು ತಾಲ್ಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಬಳಿಕ ಮಧ್ಯಾಹ್ನ 3ಕ್ಕೆ ಉಡುಪಿಯಲ್ಲಿ ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ಡಿಜಿಟಲ್‌ ಗ್ರಂಥಾಲಯ ಉದ್ಘಾಟಿಸಲಿದ್ದಾರೆ.

Read More »