Breaking News

ಉಡುಪಿ

ಎ. 11ರಂದು ಸಿಎಂ ಉಡುಪಿಗೆ ಭೇಟಿ

ಉಡುಪಿ: ಎ. 11ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಡುಪಿ ಜಿಲ್ಲೆಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ ಅವರು ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ, ಮಂಗಳೂರಿನಿಂದ ಆದಿಉಡುಪಿಗೆ ಹೆಲಿಕಾಪ್ಟರ್‌ ಮೂಲಕ ಬಂದಿಳಿಯಲಿದ್ದಾರೆ ಎಂದರು.

Read More »

ವ್ಯಾಪಾರ ನಡೆಸಲು ಬೆದರಿಕೆ ಹಾಕುವವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು : ಸಿದ್ದರಾಮಯ್ಯ

ಉಡುಪಿ: ದೇಶದಲ್ಲಿ ಎಲ್ಲರೂ ಸ್ವತಂತ್ರರು, ಯಾರು ಯಾರಿಗೂ ಬೆದರಿಕೆ ಹಾಕುವಂತಿಲ್ಲ.ವ್ಯಾಪಾರ ವಹಿವಾಟು ನಡೆಸಲು ಬೆದರಿಕೆ ಹಾಕುವವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ದೇವಸ್ಥಾನ, ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಸ್ಲಿಮರು ವ್ಯಾಪಾರ ನಡೆಸಲು ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿರುವುದು ಖಂಡನೀಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಶನಿವಾರ ‘ಭೂ ಸುಧಾರಣಾ ಕಾಯ್ದೆ ಸುವರ್ಣ ಸಂಭ್ರಮ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು,  ಮುಸ್ಲಿಮರ …

Read More »

ರಸ್ತೆ ಅಪಘಾತ : ಯುವತಿ ಸಾವು

ಉಡುಪಿ : ಸಂತೆಕಟ್ಟೆ ಬಳಿ ಬುಧವಾರ ಮುಂಜಾನೆ ಅಪಘಾತ ನಡೆದಿದ್ದು ಯುವತಿ ಸಾವನ್ನಪ್ಪಿದ್ದಾರೆ.ಯುವತಿಯನ್ನು ಗಾಯತ್ರಿ ಪ್ಯೆ ಎಂದು ಗುರುತಿಸಲಾಗಿದ್ದು, ಇವರು ಹುಬ್ಬಳ್ಳಿಯಿಂದ ಆಗಮಿಸುತ್ತಿದ್ದರು. ಅನಂತರ ಹಿಂತಿರುಗುವ ವೇಳೆ ಉಡುಪಿಯಿಂದ ಸಂತೆಕಟ್ಟೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಣೇಶ್ ಪ್ಯೆ ಅವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ರೈತ ಸಮುದಾಯಕ್ಕೆ ಸಿಹಿಸುದ್ದಿ

ಉಡುಪಿ : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪಹಣಿ ಸೇರಿದಂತೆ ಕಂದಾಯ ಇಲಾಖೆಯ ದಾಖಲೆಗಳು ಮನೆ ಬಾಗಿಲಿಗೆ ತಲುಪಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಈ ತಿಂಗಳಲ್ಲೇ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕಂದೂರು ಬ್ರಹ್ಮಾವರ ತಾಲೂಕಿನ ಕೊಕ್ಕರ್ಣಿಗಳಲ್ಲಿ ರಾಜ್ಯದ 247 ಕಡೆಗಳಲ್‌ಇ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಆರ್.ಅಶೋಕ್,ರಾಝ್ಯದ …

Read More »

ಕಾನ್ಸ್‌ಸ್ಟೇಬಲ್ ಗೆ‌ ಪಿ.ಎಚ್.ಡಿ ಪ್ರಧಾನ

ಉಡುಪಿ: ಕರಾವಳಿ ಕಾವಲು ಪೊಲೀಸ್ ಮಲ್ಪೆ ಕೇಂದ್ರ ಕಚೇರಿಯಲ್ಲಿ ಪೊಲೀಸ್ ಹೆಡ್ ಕಾನ್ಸ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ್ ಶೆಟ್ಟಿ ಅವರಿಗೆ ಮೈಸೂರಿನ ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯ ಪಿ.ಎಚ್.ಡಿ. ಪದವಿ ನೀಡಿದೆ. ಸಂತೋಷ್ ಶೆಟ್ಟಿ ಅವರು ಕರ್ನಾಟಕ ಮುಕ್ತ ವಿವಿಯ ಪ್ರೊಫೆಸರ್ ಡಾ. ಮಹಾದೇವಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಮೈಸೂರು ಒಡೆಯರ ಕಾಲದಲ್ಲಿ ಪೊಲೀಸ್ ವ್ಯವಸ್ಥೆ ಒಂದು ಅಧ್ಯಯನ’ ವಿಷಯದ ಕುರಿತ ಮಹಾ ಪ್ರಬಂಧಕ್ಕೆ ಪಿ.ಎಚ್.ಡಿ. ಪದವಿಯನ್ನು ನೀಡಲಾಗಿದೆ.

Read More »

ಹಿಜಾಬ್‌ ಧರಿಸುವುದ ಕುರಿತು ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿಗಳು

ಉಡುಪಿ: ಉಡುಪಿ ಸರಕಾರಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸುವುದನ್ನು ನಿರಾಕರಿಸಿದ ವಿಷಯ ಹೈಕೋರ್ಟ್‌ ಮೆಟ್ಟಿಲೇರಿದೆ. ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಅರ್ಜಿ ಸಲ್ಲಿಸಿದ್ದು, ಹಿಜಾಬ್‌ ಧರಿಸುವುದು ಸಂವಿಧಾನದ ಕಲಂ 14 ಮತ್ತು 25ರ ಅನ್ವಯ ಮೂಲಭೂತ ಹಕ್ಕು ಎಂದು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾಳೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಸರಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್‌ ಧರಿಸಲಾಗುತ್ತಿದೆ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗುತ್ತಿದೆ. ಅವರಿಗೆ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಿಲ್ಲ ಎಂದು ಅರ್ಜಿಯಲ್ಲಿ …

Read More »

ವಾರಾಂತ್ಯ ರಾತ್ರಿ ಕರ್ಫ್ಯೂ : ಆರ್ಥಿಕತೆ ಕುರಿತು ಜನರಿಗೆ ಚಿಂತನೆ

ಮಂಗಳೂರು/ಉಡುಪಿ: ಸರಕಾರವು ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು, ಇದು ಒಟ್ಟಾರೆ ಜನ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಇದರಿಂದ ಸ್ಥಳೀಯ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳುವ ಅಪಾಯವಿದೆ. ಈ ಹಿಂದಿನ ಲಾಕ್‌ಡೌನ್‌ ಹಾಗೂ ಅನಂತರ ನಿರ್ಬಂಧಗಳ ಸಡಿಲಿಕೆ ಬಳಿಕ ಇತ್ತೀಚೆಗಷ್ಟೇ ದೈನಂ ದಿನ ಜನ ಜೀವನ ಸಾಮಾನ್ಯ ಸ್ಥಿತಿಗೆ ತಲುಪಿತ್ತು. ಅಷ್ಟರಲ್ಲಿ ಮತ್ತೊಮ್ಮೆ ಹಿಂದಿನ ಕರಾಳ ಸ್ಥಿತಿಯ ಭೀತಿ ಜನರನ್ನು …

Read More »

ಹಸೆಮಣೆ ಏರಿದ ಮೊಗ್ಗಿನ ಮನಸ್ಸಿನ ಹುಡುಗಿ ಶುಭಾ ಪೂಂಜಾ

ಉಡುಪಿ:ಕೋವಿಡ್ ಹಿನ್ನೆಲೆಯಲ್ಲಿ ನಿವಾಸದಲ್ಲಿ ಸರಳವಾಗಿ ವಿವಾಹ ಮಾಡಿಕೊಂಡ. ಕನ್ನಡ ಚಿತ್ರರಂಗದ ಮೊಗ್ಗಿನ ಮನಸ್ಸಿನ ಹುಡುಗಿ ಶುಭಾ ಪೂಂಜಾ ಬುಧವಾರ(ಜನವರಿ 05) ಶಿರ್ವದ ನಿವಾಸದಲ್ಲಿ ಸುಮಂತ್ ಜತೆ ಹಸೆಮಣೆ ಏರಿದ್ದಾರೆ. ಕಾರ್ಯಕ್ರಮ ನೆರವೇರಿರುವುದಾಗಿ  ಗೆ ಮೂಲಗಳು ತಿಳಿಸಿವೆ.ಕಳೆದ ವರ್ಷವೇ ವಿವಾಹವಾಗುವ ವದಂತಿ ಇತ್ತು, ಆದರೆ ಲಾಕ್ ಡೌನ್ ನಿಂದಾಗಿ ವಿವಾಹ ಮುಂದೂಡಲಾಗಿತ್ತು. ಇಂದು ಸುಮಂತ್ ಮತ್ತು ಶುಭಾ ಪೂಂಜಾ ಹಸೆಮಣೆ ಏರುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶಿರ್ವದ ಮಜಲಬೆಟ್ಟು ಬೀಡುವಿನಲ್ಲಿರುವ …

Read More »

ದೇವಸ್ಥಾನ ಪ್ರಸಾದಕ್ಕೆ ಹೊಸ ನಿಯಮ ಜಾರಿ

ಉಡುಪಿ: ಕೇಂದ್ರ ಸರಕಾರ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ವತಿಯಿಂದ ಧಾರ್ಮಿಕ ಕೇಂದ್ರ ಗಳಲ್ಲಿ ದೊರೆಯುವ ಪ್ರಸಾದದ ಗುಣಮಟ್ಟ ಪರಿಶೀಲನೆಗೆ “ಭೋಗ್‌’ ಕಾರ್ಯಕ್ರಮ ಅನು ಷ್ಠಾನಗೊಳಿಸಿದ್ದು, ಕರಾವಳಿಯ 4 ದೇವಸ್ಥಾನಗಳಲ್ಲಿ ಶೀಘ್ರವೇ ಕಾರ್ಯರೂಪಕ್ಕೆ ಬರಲಿದೆ. ಈ ಮೂಲಕ ಭಕ್ತರಿಗೆ ಉತ್ತಮ ಗುಣಮಟ್ಟ ಖಾತರಿಪಡಿಸಿದ ಪ್ರಸಾದವನ್ನು ನೀಡುವ ಉದ್ದೇಶವನ್ನು ಸರಕಾರ ಹೊಂದಿದೆ. ಪ್ರಾರಂಭಿಕ ಹಂತದಲ್ಲಿ ಕರಾವಳಿಯ ನಾಲ್ಕು ದೇವಸ್ಥಾನಗಳನ್ನು ಆಯ್ಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಹೆಚ್ಚಿಸುವ ನಿರೀಕ್ಷೆ ಹೊಂದಲಾಗಿದೆ. ಪ್ರಸಾದಗಳಲ್ಲಿ …

Read More »

ಉಡುಪಿ ಭಾಷಣ ವಿವಾದ – ಹೇಳಿಕೆಯನ್ನು ಹಿಂಪಡೆದ ತೇಜಸ್ವಿ ಸೂರ್ಯ

ಬೆಂಗಳೂರು: ಉಡುಪಿ ಮಾಡಿದ ಭಾಷಣ ವಿವಾದವಾಗುತ್ತಿದ್ದಂತೆ ಸಂಸದ ತೇಜಸ್ವಿ ಸೂರ್ಯ ತನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟ್ ಮಾಡಿದ ಅವರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಹಿಂದೂ ಪುನರುತ್ಥಾನ ಆಗಬೇಕು ಎನ್ನುವ ವಿಷಯದ ಕುರಿತು ಮಾತನಾಡಿದ್ದೆ. ಆದರೆ ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ. ಉಡುಪಿ ಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಅವರು, ಹಿಂದೂ …

Read More »