Breaking News

ಚಿಕ್ಕಮಗಳೂರು

ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ…..

ಚಿಕ್ಕಮಗಳೂರು: ಸಂಬಳವಾದ ಮೊದಲ ವಾರವೆಂದು ಮುಂದಿನ ವಾರಂತ್ಯಕ್ಕೆ ಕಾಫಿನಾಡು ಚಿಕ್ಕಮಗಳೂರಿಗೆ ಟ್ರಿಪ್‌ ಪ್ಲಾನ್‌ ಮಾಡಿದ್ದೀರಾ..? ಟ್ರಕ್ಕಿಂಗ್‌, ದೇವಸ್ಥಾನ ಹೀಗೆ ಪ್ರವಾಸಿ ತಾಣಗಳ ಪಟ್ಟಿ ಮಾಡಿಕೊಂಡಿದ್ದೀರಾ..? ಹಾಗಾದರೆ ಇಲ್ಲಿ ಗಮನಿಸಿ. ನಿಮ್ಮ ಪ್ರವಾಸಿ ತಾಣಗಳ ಪಟ್ಟಿಯಿಂದ ಈ ಸ್ಥಳಗಳನ್ನು ಕೈಬಿಟ್ಟು, ಬೇರೆ ಪ್ಲಾನ್‌ ಮಾಡಿ. ರಾಜ್ಯದ ಅತ್ಯಂತ ಜನಪ್ರಿಯ ಪ್ರವಾಸಿ ತಾಣ ಮತ್ತು ಚಾರಣ ಸ್ಥಳಗಳಲ್ಲೊಂದೆನಿಸಿಕೊಂಡಿರುವ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ನವೆಂಬರ್ 4 ಬೆಳಗ್ಗೆ 6ರಿಂದ ನವೆಂಬರ್ 6ರ …

Read More »

ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ಪ್ರಹಸನ ತಾರಕಕ್ಕೇ…

ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ನೀಡದೆ ಸತಾಯಿಸುತ್ತಿರುವ ಹಿನ್ನೆಲೆ ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಅಧ್ಯಕ್ಷರ ಕುರ್ಚಿ ಬದಲಾಯಿಸಿ ವಿಭಿನ್ನವಾಗಿ ಆಕ್ರೋಶ ಘಟನೆ ನಡೆಯಿತು. ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ಪ್ರಹಸನ ತಾರಕಕ್ಕೇರಿದ್ದು, ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಅಧ್ಯಕ್ಷರ ಕುಷನ್ ಚೇರ್ ತೆಗೆದು, ಪ್ಲಾಸ್ಟಿಕ್ ಚೇರ್ ಇಟ್ಟು, ಅಂದು ಅಧ್ಯಕ್ಷರ ಕುರ್ಚಿ ಹೀಗಿತ್ತು. ಸದಸ್ಯರ ವಿಶ್ವಾಸ ಕಳೆದುಕೊಂಡ ಅವರ ಕುರ್ಚಿ ಹೀಗಾಗಿದೆ ಎಂದು ನಗರಸಭೆ …

Read More »

ಶ್ರೀ ಮೈಲಾರಲಿಂಗಸ್ವಾಮಿಯ ಕಾರ್ಣಿಕ……

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರಿನ ಸ್ವರಸ್ವತಿಪುರಣನಲ್ಲಿ ನೆಲೆಸಿರುವ ಇತಿಹಾಸ ಪ್ರಸಿದ್ಧ ಶ್ರೀ ಮೈಲಾರಲಿಂಗಸ್ವಾಮಿಯ ಕಾರ್ಣಿಕವನ್ನು ಗೊರವಯ್ಯಾ ದಶರಥ ಪೂಜಾರ್ ಅವರು ಮುಂಜಾನೆ 4.45ಕ್ಕೆ ನುಡಿದಿದ್ದಾರೆ. ಇಟ್ಟ ರಾಮನ ಬಾಣ ಹುಸಿಯಿಲ್ಲ. ಸುರರು ಅಸೂರರು ಕಾದಾಡಿದರು. ಭಕ್ತ ಕೋಟಿಗೆ ಮಂಗಳವಾಯಿತು. ಶಾಂತಿಯ ಮಂತ್ರ ಪಠಿಸಿದರು. ಸರ್ವರು ಎಚ್ಚರದಿಂದರಬೇಕು ಪರಾಕ್”. ಎಂದು ಚಿಕ್ಕಮಗಳೂರಿನಲ್ಲಿ ಮೈಲಾರಿಗೇಶ್ವರ ಸ್ವಾಮಿಯ ಕಾರ್ಣಿಕ ನುಡಿದಿದೆ. ಈ ನುಡಿಗಳು ಯಾವುದಕ್ಕೆ ಸಂಬಂಧಿಸಿದ್ದು ಎಂದು ಜನರಲ್ಲಿ ಚರ್ಚೆ ಶುರುವಾಗಿದೆ.ಚಿಕ್ಕಮಗಳೂರು ಜಿಲ್ಲೆ …

Read More »

ಯಾರೇ ತಪ್ಪು ಮಾಡಿದರೂ ಇದ್ರೆ ಶಿಕ್ಷೆ ಆಗಬೇಕು: ಸಿ.ಟಿ.ರವಿ

ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್‌ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ವಿಚಾರಕ್ಕೆ ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು, ಹಾಲಿಂದು ಹಾಲಿಗೆ, ನೀರಿಂದು ನೀರಿಗೆ, ಉಪ್ಪು ತಿಂದೋನು ನೀರು ಕುಡಿಲೇಬೇಕು ಎಂದು ವ್ಯಂಗ್ಯವಾಡಿದ್ದಾರೆ.ಇವೆಲ್ಲ ಹಳೇ ಕಾಲದ ಗಾದೆ ಮಾತುಗಳು. ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು. ಪ್ರಾಮಾಣಿಕರಿಗೆ ತೊಂದರೆ ಆಗಬಾರದು. ಯಾರಾದರೂ ಅಕ್ರಮ ಮಾಡಿದರೆ ಅದು ಇಂದಲ್ಲ ನಾಳೆ ಬಯಲಿಗೆ ಬರಬೇಕು. ಸುಮ್‌ ಸುಮ್ನೆ ಗಾದೆ …

Read More »

ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಟಿಟಿ ವಾಹನ ರಸ್ತೆ ಮಧ್ಯೆ ಪಲ್ಟಿ…

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಟಿಟಿ ವಾಹನ ರಸ್ತೆ ಮಧ್ಯೆ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಬಳಿ ನಡೆದಿದೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನದ ಬಳಿಕ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆಂದು ಬರುವಾಗ ಈ ದುರ್ಘಟನೆ ಸಂಭವಿಸಿದೆ. ಟಿಟಿ ವಾಹನದಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದು ಕೆಲವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಟಿ ವಾಹನ ಮೂಲತಃ ಕಾರವಾರ ಜಿಲ್ಲೆಯ ಶಿರಸಿ …

Read More »

ಸಾರ್ವಜನಿಕರ ಸಮಸ್ಯೆಯನ್ನು ಕೇಳಲೆಂದೇ ಕಚೇರಿಯಲ್ಲಿ ಹೆಲ್ಪ್ ಡೆಸ್ಕ್ ಕೂಡ ಇದೆ ಎಂದರು…

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಹಳಷ್ಟು ಪ್ರವಾಸಿತಾಣಗಳಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ಜೀಪ್‌ಗಳ ಸ್ಥಿತಿಯನ್ನು ತಿಳಿಯುವ ಉದ್ದೇಶದಿಂದ ತಂಡಗಳನ್ನು ರಚನೆ ಮಾಡಿ ಪರಿಶೀಲನೆ ಮಾಡಲಾಗುವುದು ಎಂದು ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಾದೇಶಿಕ ಸಾರಿಗೆ (RTO) ಅಧಿಕಾರಿ ಆರ್.ರಾಕೇಶ್ ಕುಮಾರ್ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತಾನಾಡಿದ ಅವರು, ಪ್ರಾದೇಶಿಕ ಸಾರಿಗೆ ಕಚೇರಿಗೆ ಸಂಬಂಧಿಸಿದಂತೆ ಏನೇ ಸಮಸ್ಯೆಗಳಿದ್ದರೂ ಮುಕ್ತವಾಗಿ ನನ್ನನ್ನು ಕಾಣಬಹುದು. ಹಿಂದೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಇದ್ದಂತಹ ಸಮಸ್ಯೆಗಳು ಮುಂದೆ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ. …

Read More »

ಪರವಾನಗಿ ಇಲ್ಲದೆ ಪಟಾಕಿ ಸಂಗ್ರಹಿಸಿದರೆ ಅಂತಹವರ ವಿರುದ್ದ ಶಿಸ್ತು ಕ್ರಮವನ್ನು ಜರುಗಿಸುವಂತೆ ಸೂಚನೆ…

ಚಿಕ್ಕಮಗಳೂರು: ರಾಜ್ಯ ಸರ್ಕಾರ ಕಳೆದ ಕೆಲ ದಿನಗಳ ಹಿಂದೆ ನಡೆದ ಪಟಾಕಿ ಅವಗಡ ದುರಂತವನ್ನು ಮನಗಂಡು ಯಾವುದೇ ಪಟಾಕಿ ಮಾರಾಟಗಾರರು ಪರವಾನಗಿ ಇಲ್ಲದೆ ಪಟಾಕಿ ಸಂಗ್ರಹಿಸಿದರೆ ಅಂತಹವರ ವಿರುದ್ದ ಶಿಸ್ತು ಕ್ರಮವನ್ನು ಜರುಗಿಸುವಂತೆ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಕಡೂರು, ಬೀರೂರು ಪುರಸಭಾ ಅಧಿಕಾರಿಗಳು ಬೀರೂರು ಪಟ್ಟಣದ ವಿವಿಧ ಅಂಗಡಿ ಮತ್ತು ಮನೆಗಳ ಮೇಲೆ ದಾಳಿ ನಡೆಸಿದರು. ದಾಳಿ ಬಳಿಕ ಮಾತನಾಡಿದ ಬೀರೂರು ಪುರಸಭೆ ಮುಖ್ಯಾಧಿಕಾರಿ ವಿ.ಡಿ.ಶಾಂತಲ, ಸರ್ಕಾರದ …

Read More »

ಹೋರಾಟಗಾರರೊಬ್ಬರು ರಕ್ತವನ್ನು ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತ….

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿ ಇಂದು ಕರ್ನಾಟಕ ಬಂದ್‌ಗೆ ಕರೆ ಕೊಡಲಾಗಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಆಕ್ರೋಶಗಳು ಭುಗಿಲೆದ್ದಿವೆ. ಹಾಗೆಯೇ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಕನ್ನಡಪರ ಸಂಘಟನೆಯ ಹೋರಾಟಗಾರರೊಬ್ಬರು ರಕ್ತ ಕೊಡ್ತೀವಿ, ನೀರು ಕೊಡುವುದಿಲ್ಲ ಎಂದು ಕೈ ಕೊಯ್ದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಸ ತಾಲೂಕಿನಲ್ಲಿ ಪ್ರತಿಭಟನೆ ವೇಳೆ ಕನ್ನಡ ಹೋರಾಟಗಾರ ರಾಜು ಎಂಬುವವರು ನಂತರ ರಕ್ತ ಕೊಡ್ತೀವಿ, ನೀರು ಕೊಡಲ್ಲ ಎನ್ನುವ ಮೂಲಕ ಕೈ ಕೊಯ್ದುಕೊಂಡು …

Read More »

ಕೆಎಸ್​ಆರ್​ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ..

ಚಿಕ್ಕಮಗಳೂರು: ಕೆಎಸ್​ಆರ್​ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಬೇಲೇನಹಳ್ಳಿ ಗ್ರಾಮದ ಬಳಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ತರಿಕೆರೆಯಿಂದ ಭದ್ರಾವತಿ ಕಡೆಗೆ ಬರುತ್ತಿದ್ದ ಕಾರಿಗೆ ಬೆಂಗಳೂರು ಕಡೆ ಹೊರಟಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿವೆ. ಇದರಿಂದ …

Read More »

ಕೊಟ್ಟಿಗೆಹಾರ- ಚಾರ್ಮಾಡಿ ಮಾರ್ಗದಲ್ಲಿ ಭಾರಿ ಮಂಜು…

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಮಳೆ ಜೊತೆ ದಟ್ಟ ಮಂಜು ಕವಿದಿದ್ದು, ವಾಹನ ಸವಾರರು ಪಾರ್ಕಿಂಗ್ ಲೈಟ್, ಹೆಡ್‍ಲೈಟ್, ಫಾಗ್ ಲೈಟ್ ಹಾಕಿಕೊಂಡು ಹೋದರೂ ವಾಹನ ಸಂಚಾರ ದುಸ್ತರವಾಗುವಂತಹ ಸ್ಥಿತಿ ನಿರ್ಮಾಣವಾಗಿದೆ. 22 ಕಿ.ಮೀ. ವ್ಯಾಪ್ತಿಯ ಕೊಟ್ಟಿಗೆಹಾರ- ಚಾರ್ಮಾಡಿ ಮಾರ್ಗದಲ್ಲಿ ಭಾರಿ ಮಂಜು ಕವಿದಿದ್ದು, ಆ ಮಂಜಿನಲ್ಲಿ ವಾಹನ ಸಂಚರಿಸಲಾಗದೆ ಎರಡು ಅಪಘಾತಗಳು ಕೂಡ ಸಂಭವಿಸಿವೆ. ಬಿದಿರುತಳ ಗ್ರಾಮದ ಬಸ್ ನಿಲ್ದಾಣದ ಬಳಿ ಮಂಗಳೂರಿಗೆ ಹೋಗುತ್ತಿದ್ದ, ಬೊಲೆರೋ …

Read More »

You cannot copy content of this page