BigTv News
December 23, 2024
Breaking News, ವಿಜಯಪುರ
ವಿಜಯಪುರ: ಪಟ್ಟಣದ ಶಿವಗಣೇಶ ಸರ್ಕಲ್‌ನಿಂದ ಶಿಡ್ಲಘಟ್ಟ ಕ್ರಾಸ್‌ವರಗೆ ₹5 ಕೋಟಿ ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭಾನುವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭೂಮಿ ಪೂಜೆ ಸಲ್ಲಿಸಿದರು. ಪಟ್ಟಣದಲ್ಲಿ ಈಗಾಗಲೇ ಸುಮಾರು ₹9.5 ಕೋಟಿ ವೆಚ್ಚದಲ್ಲಿ ಕೋಲಾರ ಮುಖ್ಯರಸ್ತೆಯಲ್ಲಿ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಈಗ ಶಿವಗಣೇಶ ಸರ್ಕಲ್ ನಿಂದ 480 ಮೀಟರ್ ಉದ್ದದ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ರಸ್ತೆ ಕಾಮಗಾರಿ ಗುಣಮಟ್ಟದಲ್ಲಿರುವಂತೆ …
Read More »
BigTv News
December 22, 2024
Breaking News, ವಿಜಯಪುರ
ವಿಜಯಪುರ: ಭಾರತ ಶೀಘ್ರದಲ್ಲಿ ವೈದ್ಯಕೀಯ ಮತ್ತು ಉತ್ಪಾದನೆ ಕ್ಷೇತ್ರಗಳಲ್ಲಿ ವಿಶ್ವದ ಹಬ್ ಆಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಕೇಂದ್ರ ಇಂಧನ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದ ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಅವರು ಭಾಷಣ ಮಾಡಿದರು. ಭಾರತದಲ್ಲಿ ಹೇರಳವಾದ ಪ್ರಾಕೃತಿಕ ಮತ್ತು ಮಾನವ ಸಂಪನ್ಮೂಲವಿದೆ. ಪ್ರಾಚೀನ ಭಾರತದ ಆರ್ಯಭಟರಿಂದ ಹಿಡಿದು ಶಲ್ಯರವರೆಗೆ ಮತ್ತು …
Read More »
BigTv News
December 16, 2024
Breaking News, ವಿಜಯಪುರ
ವಿಜಯಪುರ: ಆಲಮಟ್ಟಿ ಜಲಾಶಯದ ಅಣ್ಣೆಕಟ್ಟು ಎತ್ತರ ಆಗಬೇಕು ಎನ್ನುವ ಬಹುದಿನಗಳ ಕನಸು ಇದೀಗ ಈಡೇರುವ ಹಂತವನ್ನು ತಲುಪಿದೆ. ಈ ಬಗ್ಗೆ ಕುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್.519.60 ಮೀ. ನಿಂದ 524.26 ಮೀ. ನವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಯೋಜನೆಯನ್ನು ಹಂತ …
Read More »
BigTv News
December 14, 2024
Breaking News, ವಿಜಯಪುರ
ವಿಜಯಪುರ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ.ಎಸ್.ಸಿ.ಎ) ವತಿಯಿಂದ ವಿಜಯಪುರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸ್ಥಳ ಪರಿಶೀಲನೆ ಮಾಡಲಾಯಿತು. ಕೆ.ಎಸ್.ಸಿ.ಎ ಸದಸ್ಯ ಮತ್ತು ವಿಧಾನಪರಿಷತ್ ಸದಸ್ಯ ಪ್ರಕಾಶ ರಾಠೋಡ ಅವರು ವಿಜಯಪುರದಲ್ಲಿ ಸುಂದರ ಕ್ರಿಕೆಟ್ ಕ್ರೀಡಾಂಗಣ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರೊಂದಿಗೆ ಈ ಹಿಂದೆ ಕೂಡ ಚರ್ಚಿಸಿದ್ದರು. ನಗರದ ಹೊರವಲಯದ 2-3 ಜಾಗೆಗಳನ್ನು ಕ್ರಿಕೆಟ್ ಕ್ರೀಡಾಂಗಣಕ್ಕಾಗಿ ಗುರುತಿಸುವ ಪ್ರಕ್ರಿಯೆ ನಡೆದಿದ್ದು, ಅದರನ್ವಯ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, …
Read More »
BigTv News
December 14, 2024
Breaking News, ವಿಜಯಪುರ
ವಿಜಯಪುರ: ಜಿಲ್ಲೆಯಲ್ಲಿ ಹಾಳಾದ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕ ಪದಾಧಿಕಾರಿಗಳು ಶುಕ್ರವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು, ಇದಕ್ಕೆ ಜಿಆರ್‌ಜಿ 152 ಹಾಗೂ ಜಿಆರ್‌ಜಿ 811 ತೊಗರಿ ಬೀಜವೇ ಕಾರಣ.ಈ ಬೀಜ ಸಂಪೂರ್ಣ ಕಳಪೆ ಮಟ್ಟದ್ದಾಗಿದೆ ಎಂದು …
Read More »
BigTv News
December 13, 2024
Breaking News, ವಿಜಯಪುರ
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಆಲಮಟ್ಟಿ ಜಲಾಶಯವನ್ನು ಪೂರ್ವ ನಿಗದಿತ 524.256 ಮೀಟರ್ ಗೆ ಎತ್ತರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿಯೂ ಆದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಭೂಸ್ವಾಧೀನ: ಸರ್ಕಾರಕ್ಕೆ ನಿತ್ಯ ₹1 ಕೋಟಿ ಬಡ್ಡಿ ಹೊರೆ! ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಮುಳುಗಡೆ ಭೂಮಿಗೆ ನಿಗದಿಯಾದ ಪರಿಹಾರ ಕೊಡಲು ನಮ್ಮ ಸರ್ಕಾರದ …
Read More »
BigTv News
November 12, 2024
Breaking News, ವಿಜಯಪುರ
ವಿಜಯಪುರ: ಗ್ಯಾರಂಟಿ ಭಾಗ್ಯಗಳನ್ನು ನಿಲ್ಲಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಸಲಹೆ ನೀಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಗ್ಯಗಳನ್ನು ನಿಲ್ಲಿಸಿ ದೇವಸ್ಥಾನ, ಮಸೀದಿ, ಚರ್ಚ್ ಆಸ್ತಿ ಹೋಗಿದ್ದರೆ ಪರಿಹಾರ ಕೊಡುವ ಕಾನೂನು ತರಬೇಕು. ಶಾಸಕ ಯತ್ನಾಳರು ಬಸವ ಭಕ್ತರು ಕೂಡಿಸುವ ಕೆಲಸ ಮಾಡಿಸಬೇಕು, ಆದರೆ ಒಡೆಯುವ ಕೆಲಸ ಮಾಡಬಾರದು. ಬಸವಣ್ಣನಿಗೆ ಅಪಚಾರ ಮಾಡಿದ್ದಾರೆ, ಸಮಾಜಗಳ ಮಧ್ಯೆದಲ್ಲಿ ಬಿರುಕು ಮಾಡಿದ್ದಾರೆ ಎಂದರು. ರೈತರ …
Read More »
BigTv News
November 9, 2024
Breaking News, ವಿಜಯಪುರ
ವಿಜಯಪುರ: ಸಂಘ ಪರಿವಾರದವರು ವಚನ ದರ್ಶನ ಪುಸ್ತಕದ ಮೂಲಕ ನಮ್ಮ ವಚನಗಳನ್ನು ತಿದ್ದಲು ಹೊರಟಿದ್ದಾರೆ. ವಚನಗಳು ನಮ್ಮ(ಲಿಂಗಾಯತ) ಅಸ್ಮಿತೆ. ನಮ್ಮ ಅಸ್ಮಿತೆ ಜೊತೆ ಆಟ ಆಡುವುದು ಬೇಡ ಎಂದು ಸಚಿವ ಎಂ.ಬಿ.ಪಾಟೀಲ ಎಚ್ಚರಿಕೆ ನೀಡಿದರು. ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ಅವರು ನಮ್ಮ ಅಸ್ಮಿತೆಗಳಾದ ವಚನಗಳ ಬಗ್ಗೆ ಹಸ್ತಕ್ಷೇಪ ಮಾಡುವುದನ್ನು ಬಿಡಬೇಕು. ಇಲ್ಲವಾದರೆ ನಾವು ನಿಮ್ಮ ಸುಳ್ಳು ಅಸ್ಮಿತೆ ಬಿಚ್ಚಿಡುತ್ತೇವೆ. ವೇದ, ಉಪನಿಷತ್ತುಗಳ ಸುಳ್ಳಿನ …
Read More »
BigTv News
November 4, 2024
Breaking News, ವಿಜಯಪುರ
ವಿಜಯಪುರ: ವಕ್ಫ್ ನಿಂದ ಭೂ ಕಬಳಿಕೆ ವಿರೋಧಿಸಿ ಭಾರತೀಯ ಕಿಸಾನ್ ಸಂಘದ ವತಿಯಿಂದ ವಿಜಯಪುರ ಜಿಲ್ಲೆಯ ಮಠಾಧೀಶರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಹೋರಾಟ ಮಾಡಲಾಗುತ್ತಿದೆ. ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ, ಕೂಡಲ ಸಂಗಮ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ, ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಮಹಾಸ್ವಾಮೀಜಿ, ಪಂಚಮಸಾಲಿ ಜಗದ್ಗುರು ಡಾ.ಮಹಾದೇವ ಶಿವಾಚಾರ್ಯರು, ಯರನಾಳ ವಿರಕ್ತಮಠದ ಶ್ರೀ ಗುರು …
Read More »
BigTv News
October 30, 2024
Breaking News, ವಿಜಯಪುರ
ವಿಜಯಪುರ: ‘ದೇಶದಲ್ಲಿ ವಕ್ಫ್ ಕಾಯ್ದೆಗೆ ಇರುವ ನಿರಂಕುಶ, ಅಪರಿಮಿತ ಅಧಿಕಾರವನ್ನು ಕೇಂದ್ರ ಸರ್ಕಾರ ಶೀಘ್ರವೇ ರದ್ದು ಮಾಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ವಕ್ಪ್ ಆಸ್ತಿ ವಿವಾದ ಸಂಬಂಧಿಸಿದಂತೆ ಜಿಲ್ಲೆಯ ರೈತರು ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು. ಮುಂದಿನ ಅಧಿವೇಶನದಲ್ಲಿ ವಕ್ಪ್ ಕಾಯ್ದೆಗೆ ತಿದ್ದುಪಡಿ ತರುಲು ಕೇಂದ್ರ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ …
Read More »