Breaking News

ವಿಜಯಪುರ

ವಕ್ಫ್‌ ಭೂ ಕಬಳಿಕೆ ವಿರೋಧಿಸಿ ವಿಜಯಪುರದಲ್ಲಿ ರೈತರ ಧರಣಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬೆಂಬಲ

ವಿಜಯಪುರ: ವಕ್ಫ್ ಭೂ ಕಬಳಿಕೆ ವಿರೋಧಿಸಿ ವಿಜಯಪುರದಲ್ಲಿ ರೈತರು ಹಮ್ಮಿಕೊಂಡಿರುವ ಹೋರಾಟದಲ್ಲಿ ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾಗವಹಿಸಲಿದ್ದಾರೆ. ವಿಜಯಪುರ ಜಿಲ್ಲೆಯ ರೈತರ ಸಾವಿರಾರು ಎಕರೆ ಜಮೀನು ವಕ್ಫ್ ಮಂಡಳಿ ಹೆಸರಿನಲ್ಲಿ ದಾಖಲಾಗಿರುವುದನ್ನು ಖಂಡಿಸಿ, ರೈತರು ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆರಂಭಿಸಿದ್ದು, ಧರಣಿ ನಿರತ ರೈತರನ್ನು ಭೇಟಿ ಮಾಡಿ ಸಚಿವರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

Read More »

ವಕ್ಫ್‌ ಆಸ್ತಿ ವಿವಾದ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚನೆಗೆ ಸಚಿವ ಎಂ.ಬಿ.ಪಾಟೀಲ್‌ ಸೂಚನೆ

ವಿಜಯಪುರ: ಜಿಲ್ಲೆಯ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್‌ ಪೋರ್ಸ್ ಸಮಿತಿಯೊಂದನ್ನು ರಚಿಸಿ, 1964 ರಿಂದ 1974ರವರೆಗಿನ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ವಹಿಸುವಂತೆ ಸಚಿವ ಡಾ.ಎಂ.ಬಿ.ಪಾಟೀಲ್‌ ಸೂಚಿಸಿದರು. ನಗರದ ಸೋಲಾಪುರ ರಸ್ತೆಯಲ್ಲಿರುವ ಸಚಿವರ ಗೃಹ ಕಚೇರಿಯಲ್ಲಿ ಜಿಲ್ಲೆಯ ವಿವಿಧ ತಹಶೀಲ್ದಾರರು, ವಕ್ಫ್ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವಿಜಯಪುರ ಜಿಲ್ಲೆಯಾದ್ಯಂತ ರೈತರು ಸೇರಿದಂತೆ ಖಾಸಗಿ ಜಮೀನುಗಳ ಪೈಕಿ ಒಂದು ಎಕರೆಯೂ ಸಹ ವಕ್ಪ್‌ಗೆ …

Read More »

ವಿಜಯಪುರ: ವಕ್ಫ್‌ ಬೋರ್ಡ್ ನಿಂದ ತೊಂದರೆಗೊಳಗಾದ ರೈತರ ಅಹವಾಲು ಸ್ವೀಕಾರಕ್ಕೆ ರಾಜ್ಯ ಬಿಜೆಪಿಯಿಂದ ತಂಡ ರಚನೆ

ವಿಜಯಪುರ: ಜಿಲ್ಲೆಯ ರೈತರಿಗೆ ವಕ್ಫ್‌ ಬೋರ್ಡ್‌ನಿಂದ ನೋಟಿಸ್‌ ನೀಡಿರುವ ವಿಚಾರವು ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದು, ಮತ್ತೊಂದೆಡೆ ಇದೇ ವಿಚಾರ ರಾಜಕೀಯ ಸ್ವರೂಪವನ್ನೂ ಪಡೆದುಕೊಂಡಿದೆ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ದೇಶನದಂತೆ ಒಂದು ತಂಡ ಕೂಡ ರಚನೆಯಾಗಿದೆ. ವಿಜಯಪುರ ಜಿಲ್ಲೆಯಾದ್ಯಂತ ವಕ್ಫ್ ಬೋರ್ಡ್ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ತೊಂದರೆಗೊಳಗಾದ ರೈತರ ಅಹವಾಲು ಸ್ವೀಕರಿಸಲು ರಾಜ್ಯ ಬಿಜೆಪಿ ವತಿಯಿಂದ ತಂಡ ರಚಿಸಲಾಗಿದೆ. ಈ ತಂಡವು ಅಕ್ಟೋಬರ್‌ 29ರಂದು ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದೆ. …

Read More »

ವಿಜಯಪುರ ಜಿಲ್ಲೆಯ ಹಲವೆಡೆ ಕಂಪಿಸಿದ ಭೂಮಿ: ಮನೆಯಿಂದಾಚೆ ಓಡಿ ಬಂದ ಜನ

ವಿಜಯಪುರ: ಇಂದು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ, ಅಲ್ಲದೇ ಇದರೊಟ್ಟಿಗೆ ಜೋರು ಶಬ್ದ ಕೂಡ ಕೇಳಿ ಬಂದಿದೆ. ಈ ಶಬ್ದಕ್ಕೆ ಬೆಚ್ಚಿ ಬಿದ್ದಂತ ಜನರು ಮನೆಯಿಂದ ಹೊರ ಓಡಿ ಬಂದು ಆತಂಕದಲ್ಲಿ ಕೆಲ ಕಾಲ ಕಳೆಯುವಂತೆ ಆಗಿದೆ ಎನ್ನಲಾಗುತ್ತಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಘೋಣಸಗಿ, ಕಳ್ಳಕವಟಗಿ, ಹುಬನೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ಅಲ್ಲದೇ ಗಡಿ ಭಾಗದ …

Read More »

ವಿಜಯಪುರದ 1,495 ಎಕರೆ ಅರಣ್ಯವನ್ನು ಜೀವವೈವಿಧ್ಯ ಪರಂಪರೆಯ ತಾಣವೆಂದು ರಾಜ್ಯ ಸರ್ಕಾರ ಘೋಷಣೆ

ವಿಜಯಪುರ: ವಿಜಯಪುರ ಜಿಲ್ಲೆಯ ಮಮದಾಪುರದ 1495 ಎಕರೆ ಮೀಸಲು ಅರಣ್ಯವನ್ನು ಜೀವವೈವಿಧ್ಯ ಪರಂಪರೆಯ ತಾಣವೆಂದು ರಾಜ್ಯ ಸರ್ಕಾರ ಘೋಷಿಸಿದ್ದು, ಹಲವಾರು ಜಾತಿಯ ಸಸ್ಯ ಮತ್ತು ಪ್ರಾಣಿಗಳಿಗೆ ನೆಲೆಯಾಗಿರುವ ಕುರುಚಲು ಅರಣ್ಯ ಭೂಮಿಯ ವೈಜ್ಞಾನಿಕ ನಿರ್ವಹಣೆಗೆ ವೇದಿಕೆ ಕಲ್ಪಿಸಿದೆ. ಈ ಹಿಂದೆ ವಿವಿಧ ಅಧಿಸೂಚಿತ ಅರಣ್ಯ ಪ್ರದೇಶಗಳಲ್ಲಿ ಘೋಷಿಸಲಾಗಿದ್ದ 1,494 ಎಕರೆ 38 ಗುಂಟೆ ಭೂಮಿಯನ್ನು ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪರಂಪರೆಯ ತಾಣ ಎಂದು ಘೋಷಿಸಲಾಗಿದೆ ಎಂದು ಸರ್ಕಾರ ಆದೇಶದಲ್ಲಿ …

Read More »

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಚಿವ ಎಂ.ಬಿ ಪಾಟೀಲ್ ಆರ್ಥಿಕ ನೆರವು

ವಿಜಯಪುರ: ನೀಟ್ ಪರೀಕ್ಷೆ ಉತ್ತೀರ್ಣರಾಗಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟ್‌ ಪಡೆದರೂ ಶುಲ್ಕ ಭರಿಸಲಾಗದೆ ಹಣದ ಸಮಸ್ಯೆ ಎದುರಿಸುತ್ತಿದ್ದ ಐದು ಜನ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೋರ್ಸಿಗೆ ಅಗತ್ಯವಿರುವ ಸಂಪೂರ್ಣ ಆರ್ಥಿಕ ನೆರವು ನೀಡಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮುಂದಾಗಿದ್ದಾರೆ. ವಿಜಯಪುರ ನಗರದಲ್ಲಿರುವ ಗೃಹ ಕಚೇರಿಯಲ್ಲಿ ತಿಕೋಟಾ ತಾಲ್ಲೂಕಿನ ಬಾಬಾನಗರದ ವಿಶಾಲ ರಾಯಗೊಂಡ ಕೋರೆಗಾಂವ, ಅರಕೇರಿಯ ಕರಣ ಪಂಡಿತ ಸಿಂಧೆ …

Read More »

ಶಾಸಕ ಯತ್ನಾಳ ನೇತೃತ್ವದಲ್ಲಿ ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ವಿಜಯಪುರ: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ನಗರದ ಶ್ರೀಸಿದ್ದೇಶ್ವರ ದೇವಸ್ಥಾನ ಹತ್ತಿರ ವಕ್ಫ್ ಕಾಯ್ದೆ ವಿರೋಧಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಂಡಿದ್ದಾರೆ. ಸಾರ್ವಜನಿಕರ, ರೈತರ, ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ, ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ನಮೂದಿಸುವುದನ್ನು ಕೈಬಿಡುವಂತೆಯೂ …

Read More »

ಗ್ರಾ.ಪಂ ಸಿಬ್ಬಂದಿಗಳ ವಿವಿಧ ಬೇಡಿಕೆಗಳ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ: ಸಚಿವ ಶಿವಾನಂದ ಪಾಟೀಲ್

ವಿಜಯಪುರ: ವಿವಿಧ ಬೇಡಿಕೆ ಇಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತಿ ಪಿಡಿಒ ಸೇರಿದಂತೆ ಸಿಬ್ಬಂದಿಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಹಾಗೂ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ಭೇಟಿ ನೀಡಿ ಪ್ರತಿಭಟನಾ ನಿರತರ ಬೇಡಿಕೆ ಆಲಿಸಿದರು. ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ಗ್ರಾಮ ಪಂಚಾಯತಿ ಸಿಬ್ಬಂದಿಗಳು ನಡೆಸುತ್ತಿದ್ದಾರೆ. ಇದೇ ವೇಳೆ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಸಮಸ್ಯೆಗಳು ಜೊತೆಗೆ ಸಾಮರಸ್ಯದಿಂದ …

Read More »

ದಲಿತ ಮುಖ್ಯಮಂತ್ರಿಗಾಗಿ ನನ್ನ ಜೀವನ ಇರೋವರೆಗೂ ಹೋರಾಟ: ಸಂಸದ ರಮೇಶ ಜಿಗಜಿಣಗಿ

ಇಂಡಿ: ನನ್ನ ಜೀವನ ಇರುವವರೆಗೂ ದಲಿತ ಮುಖ್ಯಮಂತ್ರಿಗಾಗಿ ಒತ್ತಾಯ ಇದ್ದೇ ಇರುತ್ತದೆ ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಆದರೂ ಸಂತೋಷ, ದಲಿತರು ಯಾರೇ ಆದರೂ ಸಂತೋಷ. ಎಲ್ಲ ರಾಜ್ಯಗಳಲ್ಲಿ ದಲಿತ ಮುಖ್ಯಮಂತ್ರಿ ಆಗಿ ಹೋಗಿದ್ದಾರೆ. ನಮ್ಮ ರಾಜ್ಯದಲ್ಲಿ ಏಕೆ ದಲಿತ ಮುಖ್ಯಮಂತ್ರಿ ಆಗಬಾರದು, ಬಿಜೆಪಿಯಲ್ಲಿಯೂ ದಲಿತ ಮುಖ್ಯಮಂತ್ರಿ ಮಾಡುವಂತೆ ಕೇಳುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ರಾಜನಾಳ ಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಯೋಜನೆಗಳು ಚುನಾವಣೆಗಾಗಿ …

Read More »

ಪಿಎಂ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಅರ್ಜಿ ಆಹ್ವಾನ

ವಿಜಯಪುರ: 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಸಾಮಾನ್ಯ ವರ್ಗದ ರೈತರಿಗೆ 5 ಹೆಕ್ಟೆರ್‌ ಪ್ರದೇಶದ ವರೆಗೆ ಸಹಾಯಧನ ನೀಡಲು ಅವಕಾಶವಿದ್ದು, ಮೊದಲನೇ 2 ಹೆಕ್ಟೆರ್‌ ವರೆಗೆ ಶೇ 90 ರಷ್ಟು ಹಾಗೂ 2 ಹೆಕ್ಟೆರ್‌ ಮೇಲ್ಪಟ್ಟು 5 ಹೆಕ್ಟೆರ್‌ ವರೆಗೆ ಹನಿ ನೀರಾವರಿ …

Read More »