Breaking News

ವಿಜಯಪುರ

ಪಿಎಸ್ಐ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ವಿಜಯಪುರ: ಪಿಎಸ್‌ಐ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯ ಒಟ್ಟು 11 ಕೇಂದ್ರಗಳಲ್ಲಿ ಅಕ್ಟೋಬರ್ 3ರಂದು ಜರುಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಒಟ್ಟು 4,920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ 10.30ರಿಂದ 12ರ ವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 12-30ರಿಂದ ಮಧ್ಯಾಹ್ನ …

Read More »

ವಿಜಯಪುರದ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಅಮೃತಧಾರೆ ತಾಯಿಹಾಲು ಕೇಂದ್ರ ಸ್ಥಾಪನೆ

ವಿಜಯಪುರ: ಜಿಲ್ಲೆಯ ಪ್ರತಿಷ್ಠಿತ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಸೇವೆ ಜೊತೆಗೆ ಕಳೆದ ಸುಮಾರು ಒಂದೂವರೇ ವರ್ಷದಿಂದ ಅಮೃತಧಾರೆ ತಾಯಿಹಾಲು ಕೇಂದ್ರ ಸ್ಥಾಪನೆಯಾಗಿದ್ದು, ಹುಟ್ಟಿದ ಮಗುವಿಗೆ ಜೀವಾ ಮೃತವಾಗಿರುವ ತಾಯಿ ಎದೆ ಹಾಲು ವಂಚಿತ ಸಾವಿರಾರು ನವಜಾತ ಶಿಶುಗಳಿಗೆ ಬಿ.ಎಲ್.ಡಿ.ಇ ಉಚಿತವಾಗಿ ತಾಯಿ ಹಾಲು ಒದಗಿಸುವ ಮೂಲಕ ಕಾಮಧೇನುವಿನಂತೆ ಸಮಾಜಮುಖಿ ಸೇವೆಗೈಯುತ್ತಿದೆ. ಕಳೆದ ಒಂದೂವರೇ ವರ್ಷಗಳ ಹಿಂದೆ ಆರಂಭಿಸಲಾದ ಸುಸಜ್ಜಿತ ಅಮೃತಧಾರೆ ತಾಯಿ ಹಾಲಿನ ಭಂಡಾರದಿಂದ ಇಲ್ಲಿಯವರೆಗೂ 1800 ಕ್ಕೂ …

Read More »

ವಿಜಯಪುರದಲ್ಲಿ ಜಲಾವೃತಗೊಂಡ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸುರಿದ ಮಳೆಗೆ ನಗರದ ಕೆಲ ಕಾಲೋನಿಗಳಲ್ಲಿ ಮನೆಗಳು ಜಲಾವೃತಗೊಂಡಿದ್ದು, ಜಿಲ್ಲಾಧಿಕಾರಿ ಟಿ.ಭೂಬಾಲನ್ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಧಾರಾಕಾರ ಮಳೆಗೆ ಜನತೆ ತತ್ತರಿಸಿ ಹೋಗಿದ್ದಾರೆ, ಮನೆಗಳಿಗೆ ನೀರು ನುಗ್ಗಿ ಪರದಾಡುವಂತಾಗಿದೆ. ಹೀಗಾಗಿ ನಗರದ ಮುಜಾವರ್ ಕಾಲೋನಿ ನಿವಾಸಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾಗಿದ್ದರು. ಇದೇ ವೇಳೆ, ಜಿಲ್ಲಾಧಿಕಾರಿಗಳ ವಾಹನ ಆಗಮಿಸಿತು. ಆಗ ರಸ್ತೆ ತಡೆಯುವವರ ಮನವೊಲಿಸಲು ಗನ್ ಮ್ಯಾನ್ ಪ್ರಯತ್ನಿಸಿದರು. ಇದರಿಂದ …

Read More »

ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸತತವಾಗಿ 5 ಗಂಟೆಗೂ ಅಧಿಕ ಕಾಲ ಭಾರೀ ಮಳೆ ಸುರಿದಿದೆ. ಜನಜೀವನ ಅಸ್ತವ್ಯಸ್ತಗೊಂಡು, ಮನೆ ಅಂಗಡಿಗಳಿಗೆ ಮಳೆ ನೀರು ನುಗ್ಗಿ ಪರದಾಡುವಂತಾಗಿದೆ. ಹಳ್ಳ ಕೊಳ್ಳಗಳು ತುಂಬಿದ್ದು, ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ದೇವಸ್ಥಾನ ಜಲಾವೃತಗೊಂಡಿದೆ. ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಆರಂಭವಾದ ಮಳೆ ಇಡೀ ರಾತ್ರಿ ಸತತವಾಗಿ ಅಬ್ಬರಿಸಿತು. ನಗರದಲ್ಲಿ ಜೋರು ಮಳೆ ಸುರಿದರೆ, ಜಿಲ್ಲೆಯ ವಿವಿಧೆಡೆ ಗುಡುಗು ಸಹಿತವಾಗಿ ಸುರಿಯಿತು. …

Read More »

ಈಶ್ವರಪ್ಪ, ಯತ್ನಾಳ್ ಸಾರಥ್ಯದಲ್ಲಿ ಆರ್ ಸಿ ಬಿ ಸಂಘಟನೆ ಆರಂಭಿಸಲು ಚಿಂತನೆ

ವಿಜಯಪುರ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಸಂಘಟನೆ ಆರಂಭಿಸಲಿದ್ದಾರೆ. ರಾಯಣ್ಣ ಚೆನ್ನಮ್ಮ ಬ್ರಿಗೇಡ್(ಆರ್ ಸಿ ಬಿ) ಸಂಘಟನೆಯನ್ನು ಆರಂಭಿಸಿ ಕುರುಬ ಸಮುದಾಯ, ಪಂಚಮಸಾಲಿ ಸಮಾಜಗಳನ್ನು ಒಗ್ಗೂಡಿಸಲು ಪ್ಲಾನ್ ಮಾಡಿಕೊಂಡಿದ್ದಾರೆ. ಅಕ್ಟೋಬರ್ 20ರಂದು ಆರ್ಸಿಬಿ ಘೋಷಣೆಯಾಗುವ ಸಾಧ್ಯತೆ ಇದೆ. ಈ ಹಿಂದೆ ಕೆ.ಎಸ್. ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮೂಲಕ ಸಂಘಟನೆ ಮಾಡಿದ್ದರು. ಇದೀಗ ಹೊಸ ರೂಪ, ಹೊಸ ಹೆಸರಿನೊಂದಿಗೆ ರಾಜ್ಯಮಟ್ಟದಲ್ಲಿ …

Read More »

ವಕ್ಫ್ ಮಸೂದೆ ತಿದ್ದುಪಡಿ ಮೂಲಕ ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಮುಂದಾದ ಕೇಂದ್ರಸರ್ಕಾರ

ವಿಜಯಪುರ: ದೇಶಾದ್ಯಂತ ಇರುವ ವಕ್ಫ್ ಆಸ್ತಿಗಳು ದುರ್ಬಳಕೆಯಾಗುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ವಕ್ಫ್ ಮಸೂದೆಯನ್ನು ತಿದ್ದುಪಡಿ ಮಾಡುವ ಮೂಲಕ ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಮುಂದಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಮೈಸೂರು ಭಾಗದಲ್ಲಿ ಒಂದಿಷ್ಟು ಹೊರತುಪಡಿಸಿದರೇ ಅತ್ಯಂತ ಹೆಚ್ಚು ವಕ್ಫ್ ಆಸ್ತಿ ಇರುವುದೇ ಉತ್ತರ ಕರ್ನಾಟಕ ಭಾಗದಲ್ಲಿ ಎಂಬುದು ಬೆಳಕಿಗೆ ಬಂದಿದೆ. ಈ ಪೈಕಿ ಅತಿ ಹೆಚ್ಚು ವಕ್ಫ್ ಆಸ್ತಿ ಹೊಂದಿರುವ ಕಲಬುರಗಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, 2ನೇ …

Read More »

ಗಣಪತಿ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಯುವಕನ ಪುಂಡಾಟ

ವಿಜಯಪುರ : ಗಣಪತಿ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪರವಾನಿಗೆ ಹೊಂದಿದ್ದ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಯುವಕನನ್ನು ಪ್ರಶಾಂತ್ ಬಿರಾದಾರ ಎಂದು ಗುರುತಿಸಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ಬರೆದ ಪ್ರಶಾಂತ್ ಬಿರಾದರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಪರವಾನಿಗೆ ಹೊಂದಿದ್ದ ಪಿಸ್ತೂಲ್ ನಿಂದ ಪ್ರಶಾಂತ್ ಗುಂಡು ಹಾರಿಸಿದ್ದಾನೆ. ಗಣೇಶ ವಿಸರ್ಜನೆ …

Read More »

ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಗೆ ಎಂ.ಬಿ.ಪಾಟೀಲ ಸಹಾಯಹಸ್ತ

ವಿಜಯಪುರ: ನೀಟ್ ಪಾಸಾಗಿ ಸರ್ಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದಿದ್ದರೂ ಶುಲ್ಕ ಭರಿಸಲಾಗದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ ಸಹಾಯ ಹಸ್ತ ಚಾಚಿದ್ದಾರೆ. ನಗರ ತಮ್ಮ ಗೃಹ ಕಚೇರಿಗೆ ಸೋಮವಾರ ಆಗಮಿಸಿದ ಬಬಲೇಶ್ವರ ತಾಲ್ಲೂಕಿನ ಕಾಖಂಡಕಿ ಗ್ರಾಮದ ವಿದ್ಯಾರ್ಥಿ ಶ್ರೀಧರ ಬಸವರಾಜ …

Read More »

ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದ ಕೇಂದ್ರ ಜಲಶಕ್ತಿ ತಂಡ

ವಿಜಯಪುರ: ಕೇಂದ್ರ ಜಲ ಶಕ್ತಿ ತಂಡದ ನೋಡಲ್ ಅಧಿಕಾರಿ ವಿಕಾಸ್ ಡೋಗ್ರಾ ಹಾಗೂ ಅನಾಮಿಕ ಐಚ್ ತಾಂತ್ರಿಕ ಅಧಿಕಾರಿಗಳು ವಿಜಯಪುರ ಹಾಗೂ ಇಂಡಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ವಿಜಯಪುರ ತಾಲ್ಲೂಕಿನ ಭೂತನಾಳ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ, ತಿಡಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರು ಪೂರೈಕೆಯ ನಳಗಳ ಪರಿಶೀಲನೆ, ಡೋಮನಾಳ ಗ್ರಾಮದ ಗುಡ್ಡದ ಅರಣ್ಯ …

Read More »

ಭೀಕರ ರಸ್ತೆ ಅಪಘಾತ: ನಾಲ್ವರು ಪಾದಚಾರಿಗಳು ಸಾವು

ವಿಜಯಪುರ : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ, ಹಿಂಬದಿ ಸವಾರ, ರಸ್ತೆ ಬದಿ ನಿಂತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ತಾಳಿಕೋಟೆ ತಾಲೂಕಿನ ಗೋಟಖಂಡಕಿ ನಿವಾಸಿ ನಿಂಗರಾಜ ಚೌದರಿ(32), ದೇವರಹಿಪ್ಪರಗಿ ತಾಲೂಕಿನ ಹಂಚಲಿ ನಿವಾಸಿ ಅನಿಲ್ ಖೈನೂರ (23) ಮಲಗಲದಿನ್ನಿ ಗ್ರಾಮದ ನಿವಾಸಿ …

Read More »