BigTv News
December 5, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ನಾಯಿ ಮಾಲೀಕನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ಎನ್. ಆರ್. ಪುರದಲ್ಲಿ ನಡೆದಿದೆ. ನಾಯಿ ಮಾಲೀಕನ ಎಡಗಣ್ಣಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ ನಡೆಸಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ. ನಾಯಿ ಮಾಲೀಕ ಸುಂದರ್ ರಾಜ್ ಎಂಬುವವರ ಮೇಲೆ ಆಸಿಡ್ ದಾಳಿ ಮಾಡಲಾಗಿದೆ. ನಾಯಿ …
Read More »
BigTv News
December 5, 2023
ಕರ್ನಾಟಕ, ಮೈಸೂರು, ಸುದ್ದಿ
ದಸರಾ ಆನೆ ಅರ್ಜುನ ಸಾವು ಕನ್ನಡಿಗರನ್ನ ದುಃಖದ ಕಡಲಲ್ಲಿ ಮುಳುಗುವಂತೆ ಮಾಡಿದೆ. ಅದರಲ್ಲೂ 8 ಬಾರಿ ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಬಗ್ಗೆ ಕನ್ನಡಿಗರು ಪ್ರೀತಿಯನ್ನ ಹೊಂದಿದ್ದರು. ನಿನ್ನೆ ಕಾಡಾನೆ ಜೊತೆ ಸೆಣೆಸಾಟ ನಡೆಸಿ, ಕನ್ನಡ ನಾಡಿನ ಜನರ ರಕ್ಷಣೆ ಮಾಡುವಾಗ ಅರ್ಜುನ ಮೃತಪಟ್ಟಿದ್ದಾನೆ. ಹೀಗಿದ್ದಾಗ ಮಾವುತರು, ಅರ್ಜುನನ ಜೊತೆ ನಮ್ಮನ್ನೂ ಮಣ್ಣು ಮಾಡಿ’ ಎಂದು ಹಠ ಹಿಡಿದಿದ್ದಾರೆ. ನಿನ್ನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಸಳೂರು, …
Read More »
Shaikh BigTv
December 4, 2023
Breaking News, ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು ನಗರದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ವಕೀಲರು ತೀರ್ಮಾನಿಸಿದ್ದಾರೆ.ವಕೀಲನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣದಲ್ಲಿ ಚಿಕ್ಕಮಗಳೂರು ಪೊಲೀಸರು ಮತ್ತು ವಕೀಲರ ನಡುವೆ ಜಟಾಪಟಿ ನಡೆಯುತ್ತಿದೆ. ಹೆಲ್ಮೆಟ್ ಹಾಕದ ಕಾರಣ ಲಾಯರ್ ಪ್ರೀತಮ್ ಮೇಲೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬುದು ಆರೋಪ. ಗುರುವಾರ ತಡರಾತ್ರಿ ವಕೀಲರು …
Read More »
BigTv News
December 4, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದೆ. ಕನಿಷ್ಠ ವೇತನ ಕಾಯ್ದೆ ಅನ್ವಯ ವೇತನ ಪಾವತಿಸುವಂತೆ ಪಂಚಾಯತ್‌ರಾಜ್ ಆಯುಕ್ತಾಲಯ ಸುತ್ತೋಲೆಯನ್ನು ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕನಿಷ್ಠ ವೇತನದ ಕುರಿತು ಸುತ್ತೋಲೆ ಮೂಲಕ ಮಾಹಿತಿ ನೀಡಿದೆ. ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಕಾಯ್ದೆ ದರಗಳ ಅನ್ವಯ ಮಾತ್ರ ಸಿಬ್ಬಂದಿ ವೇತನ ಪಾವತಿಸಬೇಕು ಎಂದು ಹೇಳಿದೆ. ಯಾವುದೇ ಕಾರಣಕ್ಕೂ …
Read More »
BigTv News
December 4, 2023
ಚೆನ್ನೈ, ಸುದ್ದಿ
ಚಿಚಾಂಗ್ ಚಂಡಮಾರುತದ ಪರಿಣಾಮದಿಂದ ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಚೆನ್ನೈ ವಿಮಾನ ನಿಲ್ದಾಣದ ರನ್‌ವೇನಲ್ಲಿ ಭಾರಿ ಪ್ರಮಾಣದ ನೀರು ನಿಂತ ಕಾರಣ ಡಿಸೆಂಬರ್ 4 ರಂದು ಬೆಳಿಗ್ಗೆ ಎರಡು ಗಂಟೆಗಳ ಕಾಲ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ವಿಮಾನ ಪ್ರಯಾಣ ವೇಳಾಪಟ್ಟಿ ಮೇಲೆ ಪರಿಣಾಮ ಬೀರಿದ್ದು, ಜೋರು ಗಾಳಿಯ ಪರಿಣಾಮ ಸರಿಸುಮಾರು 10 ಚೆನ್ನೈಗೆ ಹೋಗುವ ವಿಮಾನಗಳನ್ನು ಬೆಂಗಳೂರಿಗೆ ತಿರುಗಿಸಲಾಯಿತು. ಚೆನ್ನೈನಲ್ಲಿ ಇಳಿಯಬೇಕಿದ್ದ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳನ್ನು …
Read More »
BigTv News
December 4, 2023
ಕರ್ನಾಟಕ, ಚಿತ್ರದುರ್ಗ, ಸುದ್ದಿ
ಚಿತ್ರದುರ್ಗ: ಮಧ್ಯ ಕರ್ನಾಟಕದ ಬಯಲು ಸೀಮೆ ಎಂದೇ ಕರೆಯಲ್ಪಡುವ ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ಇದೀಗ ಹಂತ-ಹಂತವಾಗಿ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ. ಇದರ ಮಧ್ಯೆ ಹಿರಿಯೂರು ಅಥವಾ ಚಿತ್ರದುರ್ಗ ಆಸುಪಾಸಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಅಂದಹಾಗೆ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯಕ್ಕೆ ಭದ್ರಾ ನೀರು ಹರಿಸುವ ಯೋಜನೆ, ಚಳ್ಳಕೆರೆಯ ನಾಯಕನಹಟ್ಟಿ ಬಳಿ ಡಿಆರ್‌ಡಿಓ ಪ್ರಾಜೆಕ್ಟ್, ಚಿತ್ರದುರ್ಗ ಮೂಲಕ (ತುಮಕೂರು- ಚಿತ್ರದುರ್ಗ- …
Read More »
BigTv News
December 4, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಚಳಿಗಾಲದ ಅಧಿವೇಶನದ ಮೊದಲ ದಿನವೇ ವಂಶಾಡಳಿತ ರಾಜಕಾರಣದ ವಿರುದ್ಧ ವಿಜಯಪುರ ಶಾಸಕ ಬಸನಗೌಡ ಪಾಟೀಲ ವಾಗ್ದಾಳಿ ನಡೆಸಿದ್ದಾರೆ. ವಂಶಾಡಳಿತ ರಾಜ್ಯ ಹಾಗೂ ರಾಷ್ಟ್ರವನ್ನೇ ಸರ್ವನಾಶ ಮಾಡಲಿದೆ ಎಂದು ಅವರು ವಾಗ್ದಾಳಿ ಮಾಡಿದ್ದಾರೆ. ಉತ್ತರ ಕರ್ನಾಟಕದ ಒಬ್ಬ ನಾಯಕನಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನವನ್ನು ನೀಡುಬೇಕು ಎಂದು ಯತ್ನಾಳ್ ಒತ್ತಾಯಿಸಿದ್ದಾರೆ. ಅಲ್ಲಿಯವರೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುವುದಿಲ್ಲ ಎಂದು ಹೇಳಿದರು. ಹೊಸದಾಗಿ ನೇಮಕಗೊಂಡಿರುವ …
Read More »
BigTv News
December 4, 2023
ದೆಹಲಿ, ಸುದ್ದಿ
ನವದೆಹಲಿ: ತೆಲಂಗಾಣ ರಾಜ್ಯದ ಮೇದಕ್ ಜಿಲ್ಲೆಯಲ್ಲಿ ತರಬೇತಿ ವಿಮಾನವೊಂದು ಕ್ರಾಶ್ ಆಗಿ ಪತನಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಅಪಘಾತದ ಕಾರಣವೇನೆಂದು ತಿಳಿದುಕೊಳ್ಳು ತನಿಖೆಗೆ ಆದೇಶಿಸಲಾಗಿದೆ. ಅಪಘಾತ ಸಂಭವಿಸುವ ಮೊದಲು ಈ ವಿಮಾನವು ಎಂದಿನಂತೆ ತರಬೇತಿಗಾಗಿ ಹೈದರಾಬಾದ್‌ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ (AFA) ತೆರಳಿತ್ತು. ವಿಮಾನ ಪತನಗೊಂಡಾಗ ಒಬ್ಬ ತರಬೇತುದಾರ ಮತ್ತು ತರಬೇತಿ ಪೈಲಟ್ ವಿಮಾನದೊಳಗೆ ಇದ್ದರು. ಘಟನೆಯಲ್ಲಿ ಅವರಿಬ್ಬರು ಮೃತಪಟ್ಟಿದ್ದಾರೆ.ಹೈದರಾಬಾದ್‌ನ …
Read More »
BigTv News
December 4, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಳ್ಳಂಬೆಳಗ್ಗೆ ಕಾರು ಹಾಗೂ ಬಿಎಂಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರಿನ ನಾಯಂಡಳ್ಳಿ ಸಮೀಪದ ರಿಂಗ್‌ರೋಡ್‌ನಲ್ಲಿ ನಡೆದಿದೆ.ಬಿಎಂಟಿಸಿ ಬಸ್ ರಿಂಗ್‌ರೋಡ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿತ್ತು. ಈ ವೇಳೆ ನಿಂತಿದ್ದ ಬಸ್‌ಗೆ ವೇಗವಾಗಿ ಬಂದ i20 ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ಚಾಲಕ ಹೊರ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. …
Read More »
BigTv News
December 3, 2023
ಭೋಪಾಲ್, ಸುದ್ದಿ
ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆ 2023ರಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. 158 ಕ್ಷೇತ್ರದಲ್ಲಿ ಪಕ್ಷ ಮುನ್ನಡೆ ಪಡೆದಿದ್ದು, ಸರ್ಕಾರ ರಚನೆ ಮಾಡುವ ತಯಾರಿ ಆರಂಭಿಸಿದೆ. ಕಾಂಗ್ರೆಸ್ 69 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ವಿಧಾನಸಭೆ ಚುನಾವಣೆ ಮತ ಎಣಿಕೆ ಭಾನುವಾರ ನಡೆಯುತ್ತಿದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಮತದಾನ ನಡೆದಿತ್ತು. ರಾಜ್ಯದಲ್ಲಿ ಬಿಜೆಪಿ ಮಾತ್ರ ಮುನ್ನಡೆ ಪಡೆದಿಲ್ಲ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಹ ಬುಧ್ನಿ ಕ್ಷೇತ್ರದಲ್ಲಿ …
Read More »