Breaking News

ಸುದ್ದಿ

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ 2023ರಲ್ಲಿ ಕಾಂಗ್ರೆಸ್ ಹಿನ್ನಡೆ…

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆ 2023ರಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಆದರೆ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಚಿಂದ್ವಾರಾ ಕ್ಷೇತ್ರದಲ್ಲಿ ಎದುರಾಳಿ ಬಿಜೆಪಿಯ ವಿವೇಕ್ ಬಂಟಿ ಶಾಹೂ ವಿರುದ್ಧ ಮುನ್ನಡೆಯಲ್ಲಿದ್ದಾರೆ. ಸದ್ಯದ ಮಾಹಿತಿಯಂತೆ ಬಿಜೆಪಿ 162, ಕಾಂಗ್ರೆಸ್ 65, ಬಿಎಸ್‌ಪಿ 2 ಮತ್ತು ಇತರರು 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿದ್ದವು. ಆದರೆ ಸಮೀಕ್ಷೆಗಳ ವರದಿ ಉಲ್ಟಾ …

Read More »

ಕಾಂಗ್ರೆಸ್ ಕೈ ಕೊಟ್ಟು ಮತ್ತೆ ಬಿಜೆಪಿ ಕೈಹಿಡಿದಿದ್ದಾನೆ ಮತದಾರ ಪ್ರಭು….

2024ರ ಲೋಕಸಭೆ ಚುನಾವಣೆ ಬಿಜೆಪಿ ಪಕ್ಷಕ್ಕೆ ಮತ್ತೊಮ್ಮೆ ಭರ್ಜರಿ ಜಯ ತಂದುಕೊಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಹ್ಯಾಟ್ರಿಕ್ ಬಾರಿಸಲಿದೆ. ಅಷ್ಟಕ್ಕು ಈ ಮಾತು ಹೇಳುತ್ತಿದ್ದ ಬಿಜೆಪಿ ಬೆಂಬಲಿಗರಿಗೆ ಹಾಗೂ ನಾಯಕರಿಗೆ ಇಂದು ಸಿಹಿಸುದ್ದಿ ಸಿಕ್ಕುಬಿಟ್ಟಿದೆ. ಪಂಚರಾಜ್ಯ ಚುನಾವಣೆ ಅಖಾಡದಲ್ಲಿ ಸಮೀಕ್ಷೆಗಳ ಫಲಿತಾಂಶ ಸುಳ್ಳಾಗಿದ್ದು, ಕಾಂಗ್ರೆಸ್ ಕೈ ಕೊಟ್ಟು ಮತ್ತೆ ಬಿಜೆಪಿ ಕೈಹಿಡಿದಿದ್ದಾನೆ ಮತದಾರ ಪ್ರಭು! ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಮಿಜೋರಾಂ ಎಲೆಕ್ಷನ್ ನಡೆದಿದ್ದು ಇಂದು 4 …

Read More »

ಕಾಂಗ್ರೆಸ್ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಪಕ್ಷಕ್ಕೆ ನೆರೆಯ ತೆಲಂಗಾಣದಲ್ಲಿ ಅಧಿಕಾರ: ಪ್ರಿಯಾಂಕ್ ಖರ್ಗೆ.

ಕಲಬುರಗಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಪಕ್ಷಕ್ಕೆ ನೆರೆಯ ತೆಲಂಗಾಣದಲ್ಲಿ ಅಧಿಕಾರ ತಂದುಕೊಟ್ಟಿದೆ ಎಂದು ರಾಜ್ಯದ ಐಟಿ-ಬಿಟಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ತೆಲಂಗಾಣದಲ್ಲಿ ಬಿಆರ್ ಎಸ್ ಸರ್ಕಾರದ ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರದಿಂದ ಹಿನ್ನಡೆ ಆಗಿದೆ. ಮತ್ತೊಂದೆಡೆ, ಕಾಂಗ್ರೆಸ್ ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತಿದೆ. ಜಾತಿ ಜಾತಿಗಳ ಮಧ್ಯೆ, ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿಯವರು ಮಾಡಿದರೆ ನಮ್ಮದು …

Read More »

ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ರಮಣ್ ಸಿಂಗ್.

ಜೈಪುರ: ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯು ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದ್ದು, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಧಿಕಾರ ಕಸಿಯುವ ಹಂತದಲ್ಲಿದೆ. ಈ ಹೊತ್ತಿನ ಟ್ರೆಂಡ್‌ ಪ್ರಕಾರ, ಅಲ್ಲೂ ಬಿಜೆಪಿಗೆ ಬಹುಮತ ಬರುವ ಸಾಧ್ಯತೆ ಇದೆ. ಫಲಿತಾಂಶದ ಟ್ರೆಂಡ್‌ಗಳಲ್ಲಿ ಬಿಜೆಪಿಗೆ ಸ್ಪಷ್ಟ ಬೆಂಬಲವಿದೆ, ಜನರ ಕೋಪವು ಮತದಾನದಲ್ಲಿ ಪ್ರತಿಫಲಿಸುತ್ತದೆ. ಎಲ್ಲಾ ಮೂರು …

Read More »

ಹುಬ್ಬಳ್ಳಿಯಿಂದ-ಶಬರಿಮಲೆಗೆ ಇಂದಿನಿಂದ ವಿಶೇಷ ರೈಲು ವ್ಯವಸ್ಥೆ…

ಹುಬ್ಬಳ್ಳಿ: ಹುಬ್ಬಳ್ಳಿಯಿಂದ-ಶಬರಿಮಲೆಗೆ ಇಂದಿನಿಂದ ವಿಶೇಷ ರೈಲು ವ್ಯವಸ್ಥೆ ಮಾಡಿದ್ದು, ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಾಲಾಧಾರಿಗಳು ಪೂಜೆ ಸಲ್ಲಿಸಿದರು. ರೈಲಿಗೆ ವಿಶೇಷ ರೀತಿಯಲ್ಲಿ ಅಲಂಕರಿಸಿ, ಕಬ್ಬು, ಬಾಳೆ ಗಿಡ, ಹೂವು ಕಟ್ಟಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ರೈಲಿಗೆ ಪೂಜೆ ಸಲ್ಲಿಸಿದರು. ಶಬರಿಮಲೆ ಯಾತ್ರಿಕರ ದಟ್ಟಣೆ ಪರಿಗಣಿಸಿ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಕೇರಳದ ಕೊಟ್ಟಾಯಂಗೆ 2 ವಿಶೇಷ ರೈಲುಗಳನ್ನು ಆರಂಭಿಸಿದ್ದರಿಂದ ಅನುಕೂಲ ಆಗಿದೆ‌‌ ಎಂದು ಭಕ್ತರು ಸಂತಸ ವ್ಯಕ್ತಪಡಿಸುತ್ತಾರೆ. ಈ …

Read More »

ಜನಪ್ರತಿನಿಧಿಗಳು ಹಾಗೂ ಮುಖಂಡರ ಜೊತೆಗೆ ಸಭೆ ನಡೆಸಿ ಅಭ್ಯರ್ಥಿಯನ್ನ ದೇವೇಗೌಡ್ರು ಆಯ್ಕೆ…

ಹಾಸನ: 2019 ರ ಲೋಕಸಭಾ ಚುನಾವಣೆಯಲ್ಲಿ ಮೊಮ್ಮೊಗನಿಗಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡರು ಹಾಸನ ಕ್ಷೇತ್ರವನ್ನ ತ್ಯಾಗ ಮಾಡಿದ್ದು, ಇದೀಗ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳ ಒತ್ತಾಯದ ಮೇರೆಗೆ ಹಾಸನದಿಂದ ದೇವೇಗೌಡರು ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ಹಾಸನ ಜಿಲ್ಲಾ ಜನಪ್ರತಿನಿಧಿಗಳು ಹಾಗೂ ಮುಖಂಡರ ಜೊತೆಗೆ ಸಭೆ ನಡೆಸಿ ಅಭ್ಯರ್ಥಿಯನ್ನ ದೇವೇಗೌಡ್ರು ಆಯ್ಕೆ ಮಾಡಿದ್ದಾರೆ. ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ …

Read More »

ಕೆ ಎಸ್‌ ಈಶ್ವರಪ್ಪ ಅವರು ಮತ್ತೆ ಬಿಜೆಪಿ ಜಗದೀಶ್‌ ಶೆಟ್ಟರ್‌ ಬರುತ್ತಾರೆ ಎಂದು ಹೇಳಿದ್ದಾರೆ….

ವಿಜಯಪುರ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಾಗಿದ್ದು, ಲೋಕಸಮರದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ನಾಯಕರು, ಈ ಹಿಂದೆ ಕಾಂಗ್ರೆಸ್‌ ಸೇರ್ಪಡೆಯಾದ ನಾಯಕರನ್ನ ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನಗಳಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಕೆ ಎಸ್‌ ಈಶ್ವರಪ್ಪ ಅವರ ಹೇಳಿಕೆ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೆ ಎಸ್‌ ಈಶ್ವರಪ್ಪ ಅವರು ಮತ್ತೆ …

Read More »

ಮೇಲ್‌ನ ಮೂಲವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭ….

ಬೆಂಗಳೂರು: ಶುಕ್ರವಾರ ಬಾಂಬ್ ಬೆದರಿಕೆ ಮೇಲ್ ಬಂದ ಬೆಂಗಳೂರು ನಗರದ 48 ಶಾಲೆಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಿವೆ. ಈ ಸಂಬಂಧ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ. ಮೇಲ್‌ನ ಮೂಲವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಮೇಲ್‌ಗಳನ್ನು ವಿದೇಶದಿಂದ ‘khharijites@beeble.com’ ಎಂಬ ಇಮೇಲ್ ಮೂಲಕ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಬೀಬಲ್ ಥರ್ಡ್‌ ಪಾರ್ಟಿ ಆಕ್ಸೆಸ್‌ ಇಲ್ಲದ ಖಾಸಗಿ ಸುರಕ್ಷಿತ ಇಮೇಲ್ ಸೇವೆಯಾಗಿದೆ. ಆದ್ದರಿಂದ ಬೆದರಿಕೆ ಮೇಲ್ …

Read More »

ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು..

ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ (ಡಿಸೆಂಬರ್‌ 01) ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ 23 ದಿನಗಳ ಅವಧಿಯಲ್ಲಿ 2 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ (ಡಿಸೆಂಬರ್‌ 01) ಬೆಳಗ್ಗೆ 8 ಗಂಟೆಗೆ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ …

Read More »

ಆಸ್ಟ್ರೇಲಿಯಾ ತಂಡವನ್ನ ಭಾರತ ಸಲೀಸಾಗಿ ಸೋಲಿಸಿ ಸರಣಿ ಗೆದ್ದಿದೆ…

ಕಳೆದ ಪಂದ್ಯದಲ್ಲಿ ಅಂದರೆ 3ನೇ ಟಿ20 ಮ್ಯಾಚ್‌ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ಟೀಂ ವಿರುದ್ಧ ಬರೋಬ್ಬರಿ 200ಕ್ಕೂ ಹೆಚ್ಚು ರನ್ ಗಳಿಸಿತ್ತು. ಆದ್ರೂ ಭಾರತ ತಂಡ ಗೆಲ್ಲೋದಕ್ಕೆ ಆಗಲೇ ಇಲ್ಲ. ಇದೀಗ ಆ ಪಂದ್ಯದ ಸೇಡನ್ನೂ ಭಾರತ ತೀರಿಸಿಕೊಂಡಿದೆ.ಇನ್ನು ಭಾರತದ ಬ್ಯಾಟಿಂಗ್ ಸಮಯದಲ್ಲಿ ಆಸ್ಟ್ರೇಲಿಯಾದ ಬೌಲರ್‌ಗಳು ಅಬ್ಬರಿಸಿದ್ರು. ಆಗ ಭಾರತಕ್ಕೆ ನೆರವಾಗಿದ್ದು ರಿಂಕು ಸಿಂಗ್ ಅವರ 46 ರನ್‌ಗಳ ಕೊಡುಗೆ. ಹೀಗೆ ಕೇವಲ 29 ಬಾಲ್ ಆಡಿದ್ದ ರಿಂಕು ಸಿಂಗ್ …

Read More »