Breaking News

ಸುದ್ದಿ

ಟಬ್ರಲ್‌ ಶೂಟರ್‌ ಎಂದೇ ಖ್ಯಾತಿ ಗಳಿಸಿರುವ ಡಿಕೆ ಶಿವಕುಮಾರ್‌ ಫೀಲ್ಡಿಗಿಳಿಯುವ ಸಾಧ್ಯತೆ….

ಬೆಂಗಳೂರು: ತೆಲಂಗಾಣ ವಿಧಾನಸಭಾ ಫಲಿತಾಂಶ ಭಾನುವಾರ ಪ್ರಕಟಗೊಳ್ಳಲಿದ್ದು, ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ ಎಂದು ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ತಿಳಿಸಿವೆ. ಒಂದು ವೇಳೆ ಕಾಂಗ್ರೆಸ್‌ಗೆ ಬಹುಮತ ಬಂದರೆ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಬೇಕಾಗಿರುವುದರಿಂದ ಟಬ್ರಲ್‌ ಶೂಟರ್‌ ಎಂದೇ ಖ್ಯಾತಿ ಗಳಿಸಿರುವ ಡಿಕೆ ಶಿವಕುಮಾರ್‌ ಫೀಲ್ಡಿಗಿಳಿಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ತೆಲಂಗಾಣದಲ್ಲಿ ಫಲಿತಾಂಶ ಪ್ರಕಟವಾಗುವ ಮುನ್ನವೇ ಭಾರತ್ ರಾಷ್ಟ್ರ ಸಮಿತಿ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್ …

Read More »

ಕಾಂಗ್ರೆಸ್‌ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ…

ನವದೆಹಲಿ: 5 ರಾಜ್ಯಗಳ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟವಾಗಲಿದೆ. ಗೆಲ್ಲುವ ಶಾಸಕರನ್ನು ಅನ್ಯ ಪಕ್ಷಗಳ ನಾಯಕರು ಸೆಳೆಯುವ ಸಂಭವವಿರುವುದರಿಂದ ಈ ಎಲ್ಲ ರಾಜ್ಯ ಕಾಂಗ್ರೆಸ್‌ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ತೆಲಂಗಾಣದಲ್ಲಿ ಈಗಾಗಲೇ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ ಎನ್ನಲಾಗಿದ್ದು, ಹಾಲಿ ಸಿಎಂ ಕೆ ಚಂದ್ರಶೇಖರ್‌ ರಾವ್‌ ಅವರು ಗೆಲ್ಲಬಹುದಾದ ಶಾಸಕರಿಗೆ ದೂರವಾಣಿ ಕರೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ …

Read More »

5 ತಾಸಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತ…..

ಚಾಮರಾಜನಗರ: ಸಮರ್ಪಕ ರಸ್ತೆಗೆ ಆಗ್ರಹಿಸಿ ತಮಿಳುನಾಡಿನ ಜನರು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕಳೆದ 5 ತಾಸಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಾಗಾದರೆ ಈ ಘಟನೆ ಬಳಿಕ ಮತ್ತೇನು ಅವಾಂತರಗಳು ಸಂಭವಿಸಿವೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.ತಮಿಳುನಾಡು ಮತ್ತು ಕರ್ನಾಟಕದ ಗಡಿಯಾದ ಅಸನೂರಿನಲ್ಲಿ ತಮಿಳುನಾಡಿನ 15 ಗ್ರಾಮಗಳ ಜನರು, ಶಾಲಾ ವಿದ್ಯಾರ್ಥಿಗಳು ಬೆಳಗ್ಗೆಯಿಂದಲೇ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವೊಂದು ವಾಹನವು …

Read More »

ಮೈಸೂರು ತಾಲೂಕು ಆರೋಗ್ಯಾಧಿಕಾರಿ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿಯನ್ನು ಸೇವೆಯಿಂದ ಅಮಾನತು…

ಮೈಸೂರು: ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಮೈಸೂರು ತಾಲೂಕು ಆರೋಗ್ಯಾಧಿಕಾರಿ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮೈಸೂರು ಮಾತಾ ಆಸ್ಪತ್ರೆ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸರಕಾರಿ ಅತಿಥಿಗೃಹದಲ್ಲಿ ಮೈಸೂರು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. …

Read More »

ಮೆಲೋನಿ ಬರೆದಿರುವ ಹ್ಯಾಶ್‌ಟ್ಯಾಗ್ ಮತ್ತು ಶೀರ್ಷಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್…

ದುಬೈ: ದುಬೈನಲ್ಲಿ ನಡೆದ COP28 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಇಬ್ಬರೂ ನಾಯಕರು ಸೆಲ್ಫಿ ಕೂಡ ತೆಗೆದುಕೊಂಡರು. ಇಟಾಲಿಯನ್ ಪ್ರಧಾನಿ ಸಾಮಾಜಿಕ ಮಾಧ್ಯಮದಲ್ಲಿ ಆ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಸೆಲ್ಫಿಯನ್ನು ಶೇರ್ ಮಾಡುವಾಗ ಮೆಲೋನಿ ಬರೆದಿರುವ ಹ್ಯಾಶ್‌ಟ್ಯಾಗ್ ಮತ್ತು ಶೀರ್ಷಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಇಟಲಿಯ ಪ್ರಧಾನಿ ಮೆಲೋನಿ ಅವರು ಭಾರತದ ಪ್ರಧಾನಿ …

Read More »

ಪಕ್ಷ ಏನು ಕೆಲಸ ನೀಡುತ್ತದೆಯೋ ಅದನ್ನು ಮಾಡುತ್ತೇನೆ: ಡಿ ಕೆ ಶಿವಕುಮಾರ್‌.

ಬೆಂಗಳೂರು: ತೆಲಂಗಾಣ ವಿಧಾನಸಭಾ ಎಕ್ಸಿಟ್‌ ಪೋಲ್‌ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆಯಲಿದೆ ಎಂದು ತಿಳಿಸಿದ್ದು, ಶಾಸಕರನ್ನು ಹಿಡಿದಿಟ್ಟುಕೊಳ್ಳುಲು ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ತೆಲಂಗಾಣದತ್ತ ಮುಖ ಮಾಡಿದ್ದಾರೆ. ತೆಲಂಗಾಣಕ್ಕೆ ತೆರಳುವ ಮುನ್ನ ಮಾಧ್ಯಮಗಳ ಜೊತೆಗೆ ಸದಾಶಿವನಗರದಲ್ಲಿ ಡಿ ಕೆ ಶಿವಕುಮಾರ್‌ ಮಾತನಾಡಿ,ಚುನಾವಣೆ ಕಾರಣ ತೆಲಂಗಾಣಕ್ಕೆ ಹೋಗುತ್ತಿದ್ದು, ಪಕ್ಷ ಏನು ಕೆಲಸ ನೀಡುತ್ತದೆಯೋ ಅದನ್ನು ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. …

Read More »

ಮಿಷಿನ್ ಕಾಂಪೌಂಡ್ ನಲ್ಲಿ ನೇಣು ಹಾಕಿಕೊಂಡ ಯುವಕ….

ಹುಬ್ಬಳ್ಳಿ: ಕಾರವಾರ ರಸ್ತೆಯ ಮಿಷನ್ ಕಂಪೌಂಡ್ ಮನೆಯಲ್ಲಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಒಬ್ಬ ವ್ಯಕ್ತಿ ನೇಣು ಹಾಕಿಕೊಂಡು ಘಟನೆ ನಡೆದಿದೆ.ನೇಣು ಹಾಕ್ಕೊಂಡ ವ್ಯಕ್ತಿ ಅಲೆನ್ ವಿನೋದ ಭಸ್ಮೆ ಎಂದು ಗುರುತಿಸಲಾಗಿದ್ದು. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಶವವನ್ನು ಕಿಮ್ಸ್ ಶವಗಾರಕ್ಕೆ ರವಾನಿಸಿದ್ದಾರೆ

Read More »

ಮೃತ ಪಕ್ಷದ ಯುವ ಮುಖಂಡನ ಕುಟುಂಬಸ್ಥರಿಗೆ ಕೇಂದ್ರ ಸಚಿವ ಸಹಾಯ ಹಸ್ತ…

ಧಾರವಾಡ: ಕಳೆದ ಏಪ್ರಿಲ್ 19 ರಂದು ಕೋಟೂರು ಗ್ರಾಮದಲ್ಲಿ ಹತ್ಯೆಯಾಗಿದ್ದ ಧಾರವಾಡ ಜಿಲ್ಲಾ ಬಿಜೆಪಿಯ ಯುವ ಮೋರ್ಚಾ ಉಪಾಧ್ಯಕ್ಷ ದಿ. ಪ್ರವೀಣ ಕಮ್ಮಾರ ಕುಟುಂಬಸ್ಥರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಧನ ಸಹಾಯ ಮಾಡುವ ಮೂಲಕ ಕುಟುಂಬದ ಕಷ್ಟಕ್ಕೆ ನೇರವಾಗಿದ್ದಾರೆ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಹತ್ಯೆಯ ನಂತರ ಆರ್ಥಿಕ ಸಂಕಷ್ಟದಿಂದಾಗಿ ನೂತನ ಮನೆ ನಿರ್ಮಾಣ ಕಾರ್ಯ ಅರ್ಧಕ್ಕೆ ಸ್ಥಗಿತವಾಗಿತ್ತು. ಇದನ್ನು ಪಕ್ಷದ ಮುಖಂಡರು ಹಾಗೂ …

Read More »

ಸರ್ಕಾರ ರಾಜ್ಯವನ್ನ ಮರೆತು ತೆಲಂಗಾಣದಲ್ಲಿ ಚುನಾವಣೆ ಮಾಡಲು ಹೋಗಿದ್ದಾರೆ ಇದರಿಂದ ರಾಜ್ಯವನ್ನ ಸಂಪೂರ್ಣವಾಗಿ ಕಡೆಗಣಿಸಲಾಗಿದೆ: ಹೆಚ್‌ ಡಿ ರೇವಣ್ಣ.

ಹಾಸನ: ಮಧು ಬಂಗಾರಪ್ಪ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಮೊದಲು ಅವರು ಎಲ್ಲಿಂದ ಬಂದಿದ್ದರು ಎಂಬುದನ್ನ ಕಲಿತುಕೊಳ್ಳಬೇಕು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಗಿರಾಕಿ ಈಗ ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಕಿಡಿಕಾರಿದ್ದಾರೆ. ಈ ಕುರಿತು ಹಾಸನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲದಿಂದ ಜನರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ ಆದರೆ ಸರ್ಕಾರ ರಾಜ್ಯವನ್ನ ಮರೆತು ತೆಲಂಗಾಣದಲ್ಲಿ ಚುನಾವಣೆ …

Read More »

ಇಂಡಿಯಾ ಪದದ ಬದಲಿಗೆ ಭಾರತ್ ಎಂದು ಬದಲಿಸಿದೆ…

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ತನ್ನ ಅಧಿಕೃತ ಲೋಗೋವನ್ನು ಬದಲಾಯಿಸಿದ್ದು, ಇಂಡಿಯಾ ಪದದ ಬದಲಿಗೆ ಭಾರತ್ ಎಂದು ಬದಲಿಸಿದೆ ಅಲ್ಲದೆ ರಾಷ್ಟ್ರೀಯ ಲಾಂಛನದ ಬದಲಿಗೆ ಆಯುರ್ವೇದದ ದೇವರಾದ ಧನ್ವಂತರಿಯ ಪೋಟೋವನ್ನು ಸೇರಿಸಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗವು ವೈದ್ಯಕೀಯ ಶಿಕ್ಷಣ ಮತ್ತು ವೈದ್ಯಕೀಯ ವೃತ್ತಿಪರರನ್ನು ನಿಯಂತ್ರಿಸುವ 33 ಸದಸ್ಯರ ಭಾರತೀಯ ನಿಯಂತ್ರಕ ಸಂಸ್ಥೆಯಾಗಿದೆ. ಈ ಕ್ರಮವು ದೇಶದ ಉನ್ನತ ವೈದ್ಯಕೀಯ ನಿಯಂತ್ರಕ ಸಂಸ್ಥೆ ರಾಷ್ಟ್ರೀಯ ಲಾಂಛನವನ್ನು ಕೈಬಿಟ್ಟಿರುವುದು ವಿವಾದವನ್ನು ಹುಟ್ಟುಹಾಕಿದೆ. …

Read More »