Breaking News

ಸುದ್ದಿ

ಪ್ಯಾರಾಗ್ಲೆಡಿಂಗ್ ಮಾಡುವಾಗ ಆದಿಯೋಗಿ ಪ್ರತಿಮೆಯನ್ನು ಮೇಲಿನಿಂದ ಪಕ್ಷಿಯಂತೆ ಹಾರಿ ವೀಕ್ಷಿಸಬಹುದಾಗಿದೆ…

ಚಿಕ್ಕಬಳ್ಳಾಪುರ: ಇಶಾ ಫೌಂಡೇಶನ್’ನಿಂದ ಚಿಕ್ಕಬಳ್ಳಾಪುರದ ಬಳಿ ಆದಿಯೋಗಿ ಪ್ರತಿಮೆ ಸ್ಥಾಪನೆಯಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ವಿವಿಧ ಕಡೆಯಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.ಇದನ್ನೇ ಬಂಡವಾಳ ಮಾಡಿಕೊಂಡ ಬೆಂಗಳೂರಿನ ಸ್ಕೈಬರ್ಡ್ ಅಡ್ವೆಂಚರಸ್ ಸಂಸ್ಥೆ ಇಶಾ ಫೌಂಡೇಶನ್ ಸಮೀಪ ಪ್ಯಾರಾಗ್ಲೈಡಿಂಗ್ ಹಾರಾಟ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಪ್ಯಾರಾಗ್ಲೆಡಿಂಗ್ ಮಾಡುವಾಗ ಆದಿಯೋಗಿ ಪ್ರತಿಮೆಯನ್ನು ಮೇಲಿನಿಂದ ಪಕ್ಷಿಯಂತೆ ಹಾರಿ ವೀಕ್ಷಿಸಬಹುದಾಗಿದೆ. ಈಗ ಮೊದಲ ಹಂತದ ಪ್ರಾಯೋಗಿಕ ಹಾರಾಟ ಚಿಕ್ಕಬಳ್ಳಾಪುರದಲ್ಲಿ ಯಶಸ್ವಿಯಾಗಿದೆ.ಬುಧವಾರ ಪ್ರಾಯೋಗಿಕವಾಗಿ …

Read More »

NWKRTCಗೆ 20 ನಾನ್ ಎಸಿ ಸ್ಲೀಪರ್ ಬಸ್‌ಗಳನ್ನು ಸಹ ಖರೀದಿ …

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC)ಗೆ ‘ಪಲ್ಲಕ್ಕಿ’ ಹೆಸರಿನ ನೂತನ ಸ್ಲೀಪರ್ ಮಾದರಿಯ ನಾನ್ ಎಸಿ ಬಸ್‌ ಸೇರ್ಪಡೆಯಾಗಲಿದೆ. ಇದರ ಜೊತೆಗೆ ಐಷಾರಾಮಿ 4 ‘ಅಂಬಾರಿ ಉತ್ಸವ’ ಬಸ್‌ಗಳು ಸೇರಲಿವೆ.ಹುಬ್ಬಳ್ಳಿಯಲ್ಲಿ ಪ್ರಧಾನ ಕಛೇರಿಯನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಂದಿದೆ. ಯುರೋಪಿಯನ್ ಮಾದರಿಯ ಮಲ್ಟಿ ಆಕ್ಸೆಲ್ ಹವಾನಿಯಂತ್ರಣ ಸಹಿತ ಸ್ಲೀಪರ್ ಬಸ್‌ಗಳು ಸಂಸ್ಥೆಗೆ ಸೇರಲಿವೆ. ಆದರೆ ಯಾವ ಮಾರ್ಗದಲ್ಲಿ ಈ ಬಸ್ ಸಂಚಾರ ನಡೆಸಲಿವೆ ಎಂಬುದು …

Read More »

ಚೆನ್ನೈ ಸೆಂಟ್ರಲ್-ಮೈಸೂರು-ಚೆನ್ನೈ ಸೆಂಟ್ರಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ವಿಶೇಷ ರೈಲು…..

ದೇಶಾದ್ಯಂತ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲುಗಳು ಸೆಮಿ-ಹೈಸ್ವೀಡ್ ರೈಲುಗಳಾಗಿ ದೊಡ್ಡ ಮಟ್ಟದಲ್ಲಿ ಖ್ಯಾತಿ ಗಳಿಸಿವೆ. ಇದೀಗ, ರೈಲ್ವೆ ಇಲಾಖೆ ತನ್ನ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಹಬ್ಬದ ಋತುವಿನಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆಗೊಳಿಸಲು ಈ ಮಾರ್ಗದಲ್ಲಿ ಮತ್ತೊಂದು ವಂದೇ ಭಾರತ್ ರೈಲನ್ನು ಪರಿಚಯಿಸಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ವಿಶೇಷ ರೈಲು ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ (Dr MGR Chennai Central) ಮತ್ತು ಮೈಸೂರು ಜಂಕ್ಷನ್ …

Read More »

ರಾಗಿ ಬೆಳೆಗಾರಿಗೆ ಗುಡ್‌ನ್ಯೂಸ್‌….

ಬೆಂಗಳೂರು: ಈ ವರ್ಷ ಮಳೆ ಕೈಕೊಟ್ಟಿದ್ದು, ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಆವರಿಸಿದೆ. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ದೊಡ್ಡ ಸವಾಲಾಗಿದ್ದರೆ, ಇತ್ತ ರೈತರ ಬದುಕು ಕೂಡ ಸಂಕಷ್ಟಕ್ಕೆ ಸಿಲುಕಿದೆ. ನಿರೀಕ್ಷಿಸಿದ ಮಟ್ಟಿಗೆ ಮಳೆಯಾಗದೇ ನೀರಿಲ್ಲದೇ ಬೆಳೆಗಳು ಜಮೀನುಗಳಲ್ಲೇ ಒಣಗಿ ನಾಶವಾಗುತ್ತಿದೆ.ಬರ ಹಾಗೂ ಇತರ ಸವಾಲುಗಳ ಮಧ್ಯೆಯೇ ರೈತರು ಈ ಬಾರಿ ಒಂದಿಷ್ಟು ಬೆಳೆಯನ್ನು ಬೆಳೆದಿದ್ದು, ಇದೀಗ ಫಸಲ ಮಾರಾಟಕ್ಕೆ ಸಿದ್ಧರಾಗಿದ್ದಾರೆ. ಹೀಗಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಗೆ …

Read More »

ಮಂಡ್ಯ ರಮೇಶ್ ಅವರು ತೀವ್ರಗಾಯದಿಂದ ಬಳಲುತ್ತಿದ್ದಾರೆ….

ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಅವರು ಧಾರಾವಾಹಿ ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದಿದ್ದು, ತೀವ್ರಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಾಣಲಿರುವ ಹೊಸ ಧಾರಾವಾಹಿ ‘ಆಸೆ’ ಶೂಟಿಂಗ್ ವೇಳೆ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ …

Read More »

ಮುಂಬರುವ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಸ್ಥಾನಗಳಿಂದ ಅವರು ಹೀನಾಯ ಸೋಲು: ಜಗದೀಶ್ ಶೆಟ್ಟರ್.

ಹುಬ್ಬಳ್ಳಿ: ಬಿಜೆಪಿಯಲ್ಲಿ ಎಲ್ಲವೂ ಹದಗೆಟ್ಟು ಹೋಗಿದೆ. ಮುಂಬರುವ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಸ್ಥಾನಗಳಿಂದ ಅವರು ಹೀನಾಯ ಸೋಲು ಕಾಣಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಈ ಹಿಂದೆ 2018 ರಲ್ಲಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸಭೆ ಚುನಾವಣಾ ನಡೆತು, ಆವಾಗ ಎಷ್ಟೇ ಗುದ್ದಾಡಿದರು ಕೊನೆಗೆ ಬಂದು ನಿಂತಿದ್ದು 104ಕ್ಕೆ. ಇವತ್ತು ಬಿಜೆಪಿ ಹದಗೆಟ್ಟು ಹೋಗಿದೆ. ಈಗ ಚುನಾವಣಾ …

Read More »

ಅಮೃತ ಭಾರತ ನಿಲ್ದಾಣ ಯೋಜನೆಯಡಿ ತುಮಕೂರು ರೈಲ್ವೆ ನಿಲ್ದಾಣ ಅಭಿವೃದ್ಧಿಯಾಗಲಿದೆ….

ಅಮೃತ ಭಾರತ ನಿಲ್ದಾಣ ಯೋಜನೆಯಡಿ ತುಮಕೂರು ರೈಲ್ವೆ ನಿಲ್ದಾಣ ಅಭಿವೃದ್ಧಿಯಾಗಲಿದೆ. ಕಲ್ಪತರು ನಾಡಿನ ಹೊಸ ರೈಲ್ವೆ ನಿಲ್ದಾಣ ಸಾಕಷ್ಟು ಹೈಟೆಕ್ ಆಗಿರಲಿದ್ದು, ಇದರ ವಿಡಿಯೋವನ್ನು ನೈಋತ್ಯ ರೈಲ್ವೆ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ.ತುಮಕೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಪರಿವರ್ತನೆಗೆ ಸಾಕ್ಷಿಯಾಗಿ, ಅಮೃತ್ ಭಾರತ್ ನಿಲ್ದಾಣಗಳ ಯೋಜನೆಯಡಿ ಅಭಿವೃದ್ಧಿಯನ್ನು ಬಿಂಬಿಸುವ ದರ್ಶನ.” ಎನ್ನುವ ಶೀರ್ಷಿಕೆಯಡಿ ಹೊಸ ರೈಲ್ವೆ ನಿಲ್ದಾಣ ಹೇಗಿರಲಿದೆ ಎನ್ನುವ ವಿಡಿಯೋವನ್ನು ಹಂಚಿಕೊಂಡಿದೆ.ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ನಗರದಲ್ಲಿ ರೈಲ್ವೆ …

Read More »

ಕೇಂದ್ರ ಸರ್ಕಾರವು 81.35 ಕೋಟಿ ಬಡವರಿಗೆ ತಿಂಗಳಿಗೆ 5 ಕಿಲೋಗ್ರಾಂಗಳಷ್ಟು ಉಚಿತ ಆಹಾರಧಾನ್ಯಗಳನ್ನು ಒದಗಿಸುವ ಯೋಜನೆಯನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿದೆ….

ದೆಹಲಿ: ಮುಂದಿನ ವರ್ಷ ಏಪ್ರಿಲ್-ಮೇನಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವುದರಿಂದ ಕೇಂದ್ರ ಸರ್ಕಾರವು 81.35 ಕೋಟಿ ಬಡವರಿಗೆ ತಿಂಗಳಿಗೆ 5 ಕಿಲೋಗ್ರಾಂಗಳಷ್ಟು ಉಚಿತ ಆಹಾರಧಾನ್ಯಗಳನ್ನು ಒದಗಿಸುವ ಯೋಜನೆಯನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿದೆ. ಇದರಿಂದ ಬೊಕ್ಕಸಕ್ಕೆ ಸುಮಾರು ₹ 11.80 ಲಕ್ಷ ಕೋಟಿ ವೆಚ್ಚವಾಗಲಿದೆ.ಈ ಯೋಜನೆಯನ್ನು ಕೊನೆಯದಾಗಿ ಡಿಸೆಂಬರ್ 31, 2023 ರವರೆಗೆ ವಿಸ್ತರಿಸಲಾಗಿತ್ತು. ಫಲಾನುಭವಿಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಉದ್ದೇಶಿತ ಜನಸಂಖ್ಯೆಗೆ ಆಹಾರ ಧಾನ್ಯಗಳ ಲಭ್ಯತೆ, ಕೈಗೆಟುಕುವಿಕೆ ಮತ್ತು ಲಭ್ಯತೆಯ …

Read More »

ನಗ ನಾಣ್ಯಗಳನ್ನು ದೋಚ್ಚುತ್ತಿದ್ದ ಖದೀಮ ಕಳ್ಳನನ್ನು ಬಂಧಿಸುವಲ್ಲಿ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಯಶಸ್ವಿ…

ಧಾರವಾಡ: ಮನೆಯ ಬೀಗಮುರಿದು ಮನೆಯಲ್ಲಿದ ನಗ ನಾಣ್ಯಗಳನ್ನು ದೋಚ್ಚುತ್ತಿದ್ದ ಖದೀಮ ಕಳ್ಳನನ್ನು ಬಂಧಿಸುವಲ್ಲಿ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಜಾವರ್ ಮಹ್ಮದ್ ರಫೀಕ್ ಸೌದಾಗರ ಬಂಧಿತ ಆರೋಪಿಯಾಗಿದ್ದಾನೆ. ಇತ್ತೀಚೆಗೆ ಜುಲೈ 20ರಂದು ರಾಜೀವ ಗಾಂಧಿನಗರದಲ್ಲಿ ಮನೆಯೊಂದರ ಕೀ ಮುರಿದು, ಮನೆಯಲ್ಲಿ ಬಂಗಾರ ಬೆಳ್ಳಿ ಹಾಗೂ ನಗದು ಕಳ್ಳತನವಾಗಿತ್ತು. ಈ ಕುರಿತು ಮಾಲೀಕರು ವಿದ್ಯಾಗಿರಿ ಪೊಲೀಸ ಠಾಣೆಯಲ್ಲಿ ದೂರು ದಾಖಲು ಮಾಡಿದರು. ಈ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಚಾಲಕಿ ಕಳ್ಳನ …

Read More »

ಅಗಲಿದ ವೀರಯೋಧರಿಗೆ ವೀರ ಸ್ವರ್ಗ ಪ್ರಾಪ್ತಿಯಾಗಲಿ ಎಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು…

ಧಾರವಾಡ 27 : ಭಾರತೀಯ ಸೇನೆಯ 63 ರಾಷ್ಟ್ರೀಯ ರೈಫಲ್ ನ ಯುವ ವೀರಯೋಧ ಕ್ಯಾಪ್ಟನ್ ಎಂ ವ್ಹಿ ಪ್ರಾಂಜಲ್ ಹಾಗೂ ಇತರ ವೀರಯೋಧರು ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ರಾಷ್ಟ್ರ ರಕ್ಷಣೆಯ ಕಾರ್ಯದಲ್ಲಿ ಪಾಕಿಸ್ತಾನಿಯ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿ ಭಾರತಮಾತೆಯ ಮಡಿಲಿಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ , ಅಗಲಿದ ವೀರಯೋಧರಿಗೆ ವೀರ ಸ್ವರ್ಗ ಪ್ರಾಪ್ತಿಯಾಗಲಿ ಎಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು ಧಾರವಾಡದ ಜಿಲ್ಲಾಧಿಕಾರಿಗಳ ಆವರಣದಲ್ಲಿರುವ ಕಾರ್ಗಿಲ್ ಸ್ಥೂಪದ ಹತ್ತಿರ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿತ್ತು. …

Read More »