Breaking News

ಸುದ್ದಿ

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ….

ಬೆಂಗಳೂರು: ಕನ್ನಡಿಗರ ಕಿವಿ ಮೇಲೆ ಹೂವಿಟ್ಟು ಛೀ ಥೂ ಎನಿಸಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿ. ಮುಖ್ಯಮಂತ್ರಿ ಅವರಿಗೆ ಜನತಾ ದರ್ಶನದಲ್ಲಿ ಎದುರಾಗುವ ಪ್ರಶ್ನೆಗಳನ್ನ ರಾಜ್ಯ ಬಿಜೆಪಿ ಟ್ವೀಟ್‌ ಮೂಲಕ ಮುಂದಿಟ್ಟು, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.ಸ್ವಯಂಘೋಷಿತ ಆರ್ಥಿಕ ತಜ್ಞ ಮಜವಾದಿ ಸಿದ್ದರಾಮಯ್ಯ ಅವರ ಬಳಿ ಜನರ ಈ ಪ್ರಶ್ನೆಗಳಿಗೆ ಒಂದಕ್ಕಾದರೂ ಉತ್ತರವಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದ್ದು, ಅಕ್ಕಿ ಹೆಸರಿನಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಮೋಸದ ರಾಜಕಾರಣ ಮಾತ್ರ ಮಾಡುತ್ತಿಲ್ಲ, …

Read More »

ಅಧಿಕಾರಿಗಳ ವಿರುದ್ಧ ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ….

ರಾಯಚೂರು: ದೇವದುರ್ಗ ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ ನಡೆದ ಅಕ್ರಮ ಕುರಿತು ರಾಜ್ಯ ಸಾಮಾಜಿಕ ಲೆಕ್ಕಪರಿಶೋಧನಾ ಸಮಿತಿ ನೀಡಿದ ವರದಿ ಆಧರಿಸಿ ಇಬ್ಬರು ಅಧಿಕಾರಿಗಳ ವಿರುದ್ಧ ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿರ್ದೇಶನದ ಮೇರೆಗೆ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಅಣ್ಣರಾವ್ ನೀಡಿದ ದೂರಿನಂತೆ ತಾಲ್ಲೂಕು ಪಂಚಾಯಿತಿಯ ಹಿಂದಿನ ಇಒ ಪಂಪಾಪತಿ ಹಿರೇಮಠ, ನಿರ್ಗಮಿತ ನರೇಗಾ ಯೋಜನೆ ಸಹಾಯಕ …

Read More »

ಬೆಂಗಳೂರಿನಲ್ಲಿ ಮೊದಲ ಬಾರಿ ನಡೆದ ಕಂಬಳಕ್ಕೆ ಅದ್ಧೂರಿ ತೆರೆ….

ಬೆಂಗಳೂರಿನಲ್ಲಿ ಮೊದಲ ಬಾರಿ ನಡೆದ ಕಂಬಳಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಶನಿವಾರ, ಭಾನುವಾರ ಬೆಂಗಳೂರಿಗರು ಕರ್ನಾಟಕ ಕರಾವಳಿ ಭಾಗದ ಜನಪ್ರಿಯ ಕ್ರೀಡೆಯಾದ ಕಂಬಳವನ್ನು ಕಣ್ತುಂಬಿಕೊಂಡರು. ಕರಾವಳಿ ಭಾಗದ ಖಾದ್ಯಗಳನ್ನು ಸವಿದರು. ಎರಡು ದಿನಗಳು ನಡೆದ ಕಂಬಳದಲ್ಲಿ ಸುಮಾರು 200 ಜೋಡಿ ಕೋಣಗಳು ಭಾಗವಹಿಸಿದ್ದವು. ಕಂಬಳ ಕಾರ್ಯಕ್ರಮದ ಕೊನೆಯ ದಿನ ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಓಡಿಸಿದ್ದ ಕೋಣಗಳು ಅರಮನೆ ಮೈದಾನದಲ್ಲಿ ಚಿನ್ನ ಗೆದ್ದುಕೊಂಡಿವೆ. ಆರು ವಿಭಾಗಗಳಲ್ಲಿ ಕಂಬಳ ನಡೆದಿದ್ದು, ಒಂದು …

Read More »

ಬಿಜೆಪಿ ಸರ್ಕಾರ ಸೈನಿಕರನ್ನು ಚುನಾವಣೆಗೆ ಬಳಸಿಕೊಳ್ಳುತ್ತಿದೆ….

ಬೆಂಗಳೂರು: ಬಿಜೆಪಿಯವರು ಬ್ರಿಟಿಷರು ಇದ್ದಂತೆ. ಅವರು ಚುನಾವಣೆಗಾಗಿ ನಮ್ಮ ಸೈನಿಕರನ್ನು ಬಲಿಕೊಟ್ಟಿದ್ದಾರೆ ಎಂದು ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎಚ್‌ಸಿ ಬಾಲಕೃಷ್ಣ ಆರೋಪಿಸಿದ್ದಾರೆ. ಮಾಗಡಿ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಸೈನಿಕರನ್ನು ಚುನಾವಣೆಗೆ ಬಳಸಿಕೊಳ್ಳುತ್ತಿದೆ. 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರಚಿಸಿದ್ದು ಹೇಗೆ? ಲೋಕಸಭಾ ಚುನಾವಣೆಗೂ ಮುನ್ನ ಪುಲ್ವಾಮಾದಲ್ಲಿ ಸೈನಿಕರ ಬಲಿದಾನ ವಾಯಿತು ಎಂದು ವಾಗ್ದಾಳಿ ನಡೆಸಿದರು. ಮೋದಿಯವರು ವಿಶ್ವ ಮಾನವ ಆಗುವ …

Read More »

ಸರ್ಕಾರ ಎಲ್ಲಾ ಇಲಾಖೆಗಳ ಆಡಳಿತ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ವರದಿ ನೀಡುವಂತೆ 2ನೇ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ವರದಿ….

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಭಾರದಿಂದ ಆದಾಯ ಹೊಂದಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಇಂತಹ ಸಂದರ್ಭದಲ್ಲಿಯೇ ದಂಡ, ಸೆಸ್ ಹೆಚ್ಚಿಸಿ ಎಂದು ಸರ್ಕಾರಕ್ಕೆ ಶಿಫಾರಸು ಸಲ್ಲಿಕೆಯಾಗಿದೆ. ಸರ್ಕಾರ ಈ ಶಿಫಾರಸು ಒಪ್ಪಲಿದೆಯೇ? ಕಾದು ನೋಡಬೇಕಿದೆ.ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ 6ನೇ ವರದಿಯನ್ನು ಸಲ್ಲಿಕೆ ಮಾಡಿದೆ. ಸರ್ಕಾರದ 7 ಇಲಾಖೆಗಳ 882 ಶಿಫಾರಸುಗಳನ್ನು ಸಲ್ಲಿಸಿದೆ. ಇಲಾಖೆಗಳ ಆದಾಯ ವೃದ್ಧಿಗೆ ಹಲವು ಶಿಫಾರಸುಗಳನ್ನು ಮಾಡಲಾಗಿದೆ.ಸರ್ಕಾರ ಎಲ್ಲಾ ಇಲಾಖೆಗಳ ಆಡಳಿತ ಸುಧಾರಣೆಗೆ ಕೈಗೊಳ್ಳಬೇಕಾದ …

Read More »

ಶಿಕ್ಷಣ ಕೊಡಿ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು….

ಬೆಂಗಳೂರು: ಸಿದ್ದರಾಮಯ್ಯನವರು ಅಕ್ಕಿ ಕೊಡ್ತೀನಿ, ಬ್ಯಾಳಿ ಕೊಡ್ತೀನಿ, ಕೋಳಿ, ಕುರಿ ಕೊಡ್ತೀನಿ ಎನ್ನುತ್ತಾರೆ. 140 ಕೋಟಿಯಲ್ಲಿ ಶೇ 25 ದಲಿತರಿರುವ ನಾವು ನಮಗೆ ಕೋಳಿ, ಕುರಿ, ಅಕ್ಕಿ ಬೇಡ. ಶಿಕ್ಷಣ ಕೊಡಿ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ದೀನದಲಿತರನ್ನು ಮತಬ್ಯಾಂಕಾಗಿ ಬಳಸಿಕೊಂಡರೇ ಹೊರತು ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಬಯಸಿದಂತೆ ಅಸ್ಪೃಶ್ಯರು ಮತ್ತು ದಲಿತರನ್ನು ಮೇಲೆತ್ತುವ ಕೆಲಸ …

Read More »

ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಶಕೀಬ್ ಅಲ್ ಹಸನ್ ಅವರು ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ…

ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಹಾಗೂ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಅವರು ಆಡಳಿತಾರೂಢ ಅವಾಮಿ ಲೀಗ್‌ ಪಕ್ಷದಿಂದ ತಮ್ಮ ನಾಮನಿರ್ದೇಶನವನ್ನು ದೃಢೀಕರಿಸಿದ ನಂತರ, ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಇಎಸ್‌ಪಿಎನ್‌ಕ್ರಿಕ್‌ಇನ್‌ಫೋ ವರದಿ ತಿಳಿಸಿದೆ. 36 ವರ್ಷದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ತಮ್ಮ ತವರು ಜಿಲ್ಲೆ ಮಗರಾ-1 ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ಚುನಾವಣೆಯನ್ನು ಮುಂಬರುವ 2024ರ ಜನವರಿ 7ರಂದು ನಿಗದಿಪಡಿಸಲಾಗಿದೆ. ಬಾಂಗ್ಲಾದೇಶದ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ …

Read More »

ಬಿಜೆಪಿ ಕಾರ್ಪೊರೇಟರ್ ಅಭಿಜೇತ್ ಜವಾಲ್ಕರ್ ಅವರನ್ನು ಟಿಳಕವಾಡಿ ಬಂಧನ…

ಬೆಳಗಾವಿ: ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಕಾರ್ಪೊರೇಟರ್ ಅಭಿಜೇತ್ ಜವಾಲ್ಕರ್ ಅವರನ್ನು ಟಿಳಕವಾಡಿ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ. ಬೆಳಗಾವಿಯ ಭಾಗ್ಯನಗರ 9ನೇ ಕ್ರಾಸ್‌ನಲ್ಲಿ ಸೆಲ್ ಫೋನ್ ಟವರ್ ಅಳವಡಿಕೆ ವಿಚಾರವಾಗಿ ರಮೇಶ್ ಪಾಟೀಲ್ ಎಂಬುವವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಕಾರ್ಪೊರೇಟರ್ ಅಭಿಜೇತ್ ಜವಾಲ್ಕರ್ ಅವರನ್ನು ಟಿಳಕವಾಡಿ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ. ಸೆಲ್ ಫೋನ್ ಟವರ್ ಅಳವಡಿಕೆಗೆ ವಿಚಾರವಾಗಿ ಆಕ್ಷೇಪಿಸಲು …

Read More »

ಶಿವಾಜಿನಗರದಲ್ಲಿ ಭಾರೀ ದೊಡ್ಡ ದುರಂತವೊಂದು ಸಂಭವಿಸಿದ್ದು ಶಾಲಾ ಮಕ್ಕಳು ಅನಾಹುತದಿಂದ ಪಾರಾಗಿದ್ದಾರೆ….

ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ಭಾರೀ ದೊಡ್ಡ ದುರಂತವೊಂದು ಸಂಭವಿಸಿದ್ದು ಶಾಲಾ ಮಕ್ಕಳು ಅನಾಹುತದಿಂದ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ಮೂರು ಗಂಟೆ ಸುಮಾರಿಗೆ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. ಶಿವಾಜಿನಗರದಲ್ಲಿ 80 ಮಕ್ಕಳು ಓದುತ್ತಿದ್ದ ಬಿಬಿಎಂಪಿ ಇಂಗ್ಲಿಷ್ ನರ್ಸರಿ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. 75 ವರ್ಷ ಹಳೆಯದಾದ ಈ ಶಾಲೆಯಲ್ಲಿ 80 ಮಕ್ಕಳು ಓದುತ್ತಿದ್ದಾರೆ. ನಿತ್ಯ ಶಾಲೆಗೆ 75 ಮಕ್ಕಳು ಬರುತ್ತಾರೆ. ಇಂದು ಬೆಳಗಿನ ಜಾವ ಶಾಲೆಯ ಕಟ್ಟಡ ಕುಸಿದು …

Read More »

ಸೇತುವೆಯ ಕಂಬಗಳ ಬಳಿ ಮರಗಿಡ ಬೆಳೆದು ಸೇತುವೆ ಆಯಸ್ಸು ಕಡಿಮೆ ಆಗಿದೆ ಎನ್ನುವುದು ಸಾಬೀತಾಗಿದೆ….

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ಸೇತುವೆ ದಾಟಿಯೇ ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ ಸೇರಿದಂತೆ ನೂರಾರು ಹಳ್ಳಿಗಳಿಗೆ ತೆರಳಬೇಕು. ಆದರೆ ಈ ಸೇತುವೆ ಶಿಥಿಲಾವಸ್ಥೆ ತಲುಪಿದ್ದು ಸೇತುವೆ ಮೇಲೆ ನೀರು ನಿಲ್ಲುತ್ತದೆ. ಕೆಳಭಾಗದಲ್ಲಿ ನೀರು ಸೋರಿಕೆಯಾಗುತ್ತದೆ. ಸೇತುವೆಯ ಕಂಬಗಳ ಬಳಿ ಮರಗಿಡ ಬೆಳೆದು ಸೇತುವೆ ಆಯಸ್ಸು ಕಡಿಮೆ ಆಗಿದೆ ಎನ್ನುವುದು ಸಾಬೀತಾಗಿದೆ. ಆದರೆ ಸೇತುವೆ ಪರಿಶೀಲಿನೆ ನಡೆಸಿದ ಅಧಿಕಾರಿಗಳು ಸೇತುವೆ ಗಟ್ಟಿಮುಟ್ಟಾಗಿದೆ. ಓಡಾಡಬಹುದು ಎಂದು ವರದಿ …

Read More »