Breaking News

ಸುದ್ದಿ

ಪುಸ್ತಕದಲ್ಲಿ ಜಿಲ್ಲೆಯ ಸಚಿವರ ಹೆಸರನ್ನು ಉಲ್ಲೇಖಿಸದಿದ್ದರೂ ಅಜಿತ್ ಪವಾರ್ ಅವರನ್ನು ಸೂಚಿಸುತ್ತಾರೆ….

ಪುಣೆಯ ಮಾಜಿ ಪೊಲೀಸ್ ಮುಖ್ಯಸ್ಥರಾದ ಮೀರಾನ್ ಚಡಾ ಬೋರ್ವಾಂಕರ್ ಅವರು ತಮ್ಮ ಇಲಾಖೆಗೆ ಸೇರಿದ ಹರಾಜಿನ ನಿವೇಶನವನ್ನು ವಿಜೇತ ಬಿಡ್ಡರ್‌ಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು 2010 ರಲ್ಲಿ ಅಂದಿನ ಜಿಲ್ಲಾ ಮಂತ್ರಿ ಒತ್ತಾಯಿಸಿದ್ದರು ಎಂದು ಪುಸ್ತಕದಲ್ಲಿ ಹೇಳಿಕೊಂಡಿದ್ದಾರೆ. ಪುಸ್ತಕದಲ್ಲಿ ಜಿಲ್ಲೆಯ ಸಚಿವರ ಹೆಸರನ್ನು ಉಲ್ಲೇಖಿಸದಿದ್ದರೂ, ಮೇಡಂ ಆಯುಕ್ತರು, ನಿವೃತ್ತ ಐಪಿಎಸ್ ಅಧಿಕಾರಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ, ಪ್ರಸ್ತುತ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಸೂಚಿಸುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್-ಎನ್‌ಸಿಪಿ …

Read More »

ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಟಿಟಿ ವಾಹನ ರಸ್ತೆ ಮಧ್ಯೆ ಪಲ್ಟಿ…

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಟಿಟಿ ವಾಹನ ರಸ್ತೆ ಮಧ್ಯೆ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಬಳಿ ನಡೆದಿದೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನದ ಬಳಿಕ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆಂದು ಬರುವಾಗ ಈ ದುರ್ಘಟನೆ ಸಂಭವಿಸಿದೆ. ಟಿಟಿ ವಾಹನದಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದು ಕೆಲವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಟಿ ವಾಹನ ಮೂಲತಃ ಕಾರವಾರ ಜಿಲ್ಲೆಯ ಶಿರಸಿ …

Read More »

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಆಡಳಿತ ವಿರೋಧಿ ಅಲೆ ಎದುರಾಗಿದೆ…

ನವದೆಹಲಿ: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯು ನವೆಂಬರ್‌ನಲ್ಲಿ ನಡೆಯಲಿದೆ. ಈ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ಕಾಂಗ್ರೆಸ್‌ ಪೈಪೋಟಿ ನೀಡಲಿದೆ. ಪ್ರಸ್ತುತ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಆಡಳಿತ ವಿರೋಧಿ ಅಲೆ ಎದುರಾಗಿದೆ ಎಂಬ ಅಂಶಗಳು ಸಮೀಕ್ಷೆಯಲ್ಲಿ ಹೊರಬಿದ್ದಿದೆ. 2018 ರ ಚುನಾವಣೆಯಲ್ಲಿ, ಕಾಂಗ್ರೆಸ್ ಚುನಾವಣೆಯಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಗಳಿಸಿತ್ತು. ಆದರೆ, ಕಾಂಗ್ರೆಸ್‌ ನಾಯಕರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಿದರು. …

Read More »

ಅರಭಾವಿ ಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಮಹಾಸ್ವಾಮೀಜಿ ಲಿಂಗೈಕ್ಯ….

ಬೆಂಗಳೂರು: ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಅರಭಾವಿ ಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ (64) ಅವರು ಸೋಮವಾರ ಲಿಂಗೈಕ್ಯರಾದರು. ಶ್ರೀಗಳ ಅಲಿಕೆಯಿಂದ ಅವರ ಭಕ್ತಗಣ ಶೋಕ ಸಾಗರದಲ್ಲಿ ಮುಳುಗಿದೆ. ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಅನೇಕರು ಗಣ್ಯರು ಶ್ರೀಗಳ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳು ಭಾನುವಾರ ಮಠದಲ್ಲಿರುವಾಗಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಗೋಕಾಕ್‌ ನಗರ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿ …

Read More »

ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಬಾಲಕ ಸಾವು…

ಧಾರವಾಡ: ರಸ್ತೆ ಬದಿ ನಿಂತಿದ್ದ ಬಾಲಕನಿಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಮೃತಪಟ್ಟ ಘಟನೆ ಇಂದು ಮುಂಜಾನೆ ಧಾರವಾಡ-ಹಳಿಯಾಳ ರಸ್ತೆಯಲ್ಲಿನ ತಾಲೂಕಿನ ಸಲಕಿನಕೊಪ್ಪದ ಬಳಿ ಸಂಭವಿಸಿದೆ. ಮುಧೋಳ ಮೂಲದ ಅರ್ಷದ ಅಹ್ಮದ ಸಲೀಂ ಚೌಧರಿ (8) ಮೃತಪಟ್ಟಿದ್ದು, ದಾಂಡೇಲಿಗೆ ತೆರಳುತ್ತಿದ್ದ ಸಮಯದಲ್ಲಿ ಧಾರವಾಡ ತಾಲೂಕಿನ ಸಲಕಿನಕೊಪ್ಪದ ಬಳಿ ಉಪಹಾರಕ್ಕಾಗಿ ಹೊಟೇಲ್ ಬಳಿ ಕಾರು ನಿಲ್ಲಿಸಿದ್ದರು. ಉಪಹಾರ ಮುಗಿಸಿ ಬಾಲಕ ಕಾರು ಬಳಿ ನಿಂತ ಸಮಯದಲ್ಲಿ, …

Read More »

ಧಾರವಾಡದಲ್ಲಿ ಹರಿಯಿತು ನೆತ್ತರು….

ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಮಾರಕಾಸ್ತ್ರಗಳು ಮತ್ತೆ ಝಳಪಿಸಿವೆ. ಎಲೆಕ್ನಿಕ್ ಬಿಲ್ ಕಲೆಕ್ಟರ್ ಒಬ್ಬರನ್ನು ಧಾರವಾಡ ಹೊರವಲಯದ ಹಳಿಯಾಳ ಬೈಪಾಸ್‌ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬಾಡ ಗ್ರಾಮದ ರಜಾಕ್ ಕವಲಗೇರಿ ಎಂಬಾತನೇ ಹತ್ಯೆಗೀಡಾದವನು. ಬೈಕ್ ಮೇಲೆ ಹೊರಟಿದ್ದ ರಜಾಕ್‌ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಳಿಯಾಳ ಬೈಪಾಸ್ ಬಳಿ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಈ ಕೊಲೆ ಮಾಡಿದವರು ಯಾರು? ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಉಪನಗರ ಠಾಣೆ …

Read More »

ವಿಠಲಾಪುರದ ಪ್ರಗತಿಪರ ರೈತ ಸುಬ್ಬೇಗೌಡರು ಮಾತ್ರ ಭಿನ್ನವಾಗಿದ್ದಾರೆ…..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ರೈತರು ಕಬ್ಬು ಮತ್ತು ಭತ್ತವನ್ನು ಬೆಳೆಯುತ್ತಾ ಬಂದಿದ್ದಾರೆ. ಇದೆರಡು ಬೆಳೆಯನ್ನು ಬೆಳೆಯ ಬೇಕಾದರೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬೇಕಾಗುತ್ತದೆ. ಈ ಬಾರಿ ಮಳೆಯ ಕೊರೆತೆಯಿಂದಾಗಿ ಬೆಳೆ ಬೆಳೆಯುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಬಹುತೇಕ ರೈತರು ನೀರಿಲ್ಲದ ಕಾರಣದಿಂದ ಬೆಳೆ ಬೆಳೆಯಲಾಗದೆ ಆಕಾಶ ನೋಡುವಂತಾಗಿದೆ. ಆದರೆ ಕೆ.ಆರ್.ಪೇಟೆ ತಾಲೂಕಿನ ವಿಠಲಾಪುರದ ಪ್ರಗತಿಪರ ರೈತ ಸುಬ್ಬೇಗೌಡರು ಮಾತ್ರ ಭಿನ್ನವಾಗಿದ್ದಾರೆ. ಇದಕ್ಕೆ ಕಾರಣವೂ ಇದೆ. ಅವರು ಕಬ್ಬು, ಭತ್ತಕ್ಕೆ ಜೋತು …

Read More »

ಪ್ರೊ. ಕೆ. ಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ: ಜಗ್ಗೇಶ್

ಪ್ರೊ. ಕೆ. ಎಸ್ ಭಗವಾನ್ ಪದೇ ಪದೇ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುತ್ತಾರೆ. ರಾಜ್ಯದಲ್ಲಿ ಮಹಿಷ ದಸರಾ ವಿವಾದ ತಾರಕಕ್ಕೇರಿದೆ. ಇಂತಹ ಹೊತ್ತಲ್ಲೇ ಒಕ್ಕಲಿಗರ ಬಗ್ಗೆ ಪ್ರೊ. ಕೆ. ಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಖಂಡಿಸಿ ಕೆಲವೆಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಭಗವಾನ್ ಹೇಳಿಕೆಯನ್ನು ನಟ, ಸಂಸದ ಜಗ್ಗೇಶ್ ಖಂಡಿಸಿದ್ದಾರೆ ಇತ್ತೀಚೆಗೆ ಮಹಿಷ ದಸರಾ ಆಚರಣೆ ಸಮಿತಿಯಿಂದ ಮೈಸೂರಿನ ಪುರಭವನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ಕೆ. ಎಸ್ …

Read More »

ಬೇರೆಯವರ ಮೇಲೆ ಗೂಬೆ ಕೂರಿಸುವ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ: ಮುಖ್ಯಮಂತ್ರಿ ಚಂದ್ರು.

ರಾಯಚೂರು: ಭ್ರಷ್ಟಾಚಾರ ಆರೋಪ ಬಂದಾಗ ನಾವು ಭ್ರಷ್ಟರಲ್ಲ ಎಂದು ಯಾರೂ ಹೇಳುತ್ತಿಲ್ಲ. ಬದಲಾಗಿ ಅವರು ಹೆಚ್ಚು ಭ್ರಷ್ಟಾಚಾರ ಮಾಡಿದ್ದಾರೆಂದು ಬೇರೆಯವರ ಮೇಲೆ ಗೂಬೆ ಕೂರಿಸುವ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ ಎಂದು ಆಮ್‍‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದರು. ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಚಂದ್ರು ಅವರು ಶನಿವಾರ ರಾಯಚೂರು ಜಿಲ್ಲಾ ಪ್ರವಾಸವನ್ನು ಮಾಡಿದರು. ಈ ವೇಳೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, …

Read More »

ಜರ್ಮನಿ ಕಂಪನಿಗಳು ರಾಜ್ಯದ ಕೈಗಾರಿಕಾ ಸಾಮರ್ಥ್ಯ ಹೆಚ್ಚಿಸಲು ತಮ್ಮದೇ ಕಾಣಿಕೆ ನೀಡುತ್ತಿವೆ….

ಬೆಂಗಳೂರು: ತಯಾರಿಕಾ ವಲಯವಾಗಿ ಬೆಳೆಯುವ ಗುರಿ ಹೊಂದಿರುವ ಕರ್ನಾಟಕ ಸರ್ಕಾರವು ಜರ್ಮನಿ ಕಂಪನಿಗಳಿಗೆ ಹೆಚ್ಚಿನ ಬೆಂಬಲ ನೀಡಲು ಇತ್ತೀಚೆಗೆ ಹಲವು ಉಪಕ್ರಮಗಳನ್ನು ಜಾರಿಗೊಳಿಸಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಶುಕ್ರವಾರ ಹೇಳಿದರು. ಬೆಂಗಳೂರಿನಲ್ಲಿ ಶುಕ್ರವಾರ VDMA ಮೆಕ್ಯಾನಿಕಲ್ ಎಂಜಿನಿಯರಿಂಗ್ ಸಮಾವೇಶ-2023ರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಸಚಿವರು, ಅವರು ಕರ್ನಾಟಕ ಮತ್ತು ಜರ್ಮನಿ ಮುಂಚಿನಿಂದಲೂ ಸದೃಢ ಕೈಗಾರಿಕಾ ಸಹಭಾಗಿತ್ವ ಹೊಂದಿವೆ. ಇದರಿಂದ ರಾಜ್ಯದಲ್ಲಿ ತಲೆಎತ್ತಲಿರುವ …

Read More »