BigTv News
January 2, 2024
ಕರ್ನಾಟಕ, ಚಿತ್ರದುರ್ಗ, ಸುದ್ದಿ
ಚಿತ್ರದುರ್ಗ: ಶಾಲಾ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಮಲ್ಲಪ್ಪನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಸ್ಪಲ್ಟಿಯಾಗಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡೊದ್ದಾರೆ. ಇನ್ನು ಗಾಯಾಳು ವಿದ್ಯಾರ್ಥಿಗಳನ್ನು ಹೊಸದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಈ ಪ್ರಕರಣ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ …
Read More »
BigTv News
January 2, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕಾನೂನು- ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷದ್ದು ಹಿಂದೂ ವಿರೋಧಿ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕಿಡಿಕಾರಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ. ನಿನ್ನೆ ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು …
Read More »
BigTv News
December 30, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಬೈಕ್ ಸವಾರನೊಬ್ಬನಿಗೆ ಕಾರು ಡಿಕ್ಕಿ ಹೊಡೆದುಕೊಂಡು ಹೋದ ಘಟನೆ ಧಾರವಾಡದ ಜೆಎಸ್‌ಎಸ್ ಕಾಲೇಜು ಬಳಿ ಸಂಭವಿಸಿದೆ. ಈ ಘಟನೆಯಲ್ಲಿ ಬೈಕ್ ಸವಾರನ ತಲೆಗೆ ಪೆಟ್ಟಾಗಿದೆ. ಇವರು ಪತ್ರಿಕಾ ವಿತರಕರಾಗಿ ಕೆಲಸ ಮಾಡುತ್ತಿದ್ದು, ಬೆಳಿಗ್ಗೆ ಪತ್ರಿಕೆ ಹಾಕಲು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರು ಚಾಲಕ ಸ್ಥಳದಲ್ಲಿ ನಿಲ್ಲದೇ ಪಾರಾಗಿ ಹೋಗಿದ್ದು, ಈ ಸಂಬಂಧ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read More »
BigTv News
December 30, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: 55 ಕ್ವಿಂಟಲ್ ತೂಕದ ಆನೆ ಹಾಗೂ ಅಂಬಾರಿ ತುಲಾಭಾರ ಮಾಡುವ ಮೂಲಕ ಶಿರಹಟ್ಟಿ ಫಕ್ಕಿರ ಸಿದ್ದರಾಮರ ಅಮೃತ ಮಹೋತ್ಸವ ವಿಜೃಂಭಣೆಯಿಂದ ಮಾಡಲಾಗುವುದು ಎಂದು ಶಿರಹಟ್ಟಿ ಫಕ್ಕಿರ ಸಂಸ್ಥಾನಮಠದ ಶ್ರೀ ಫಕ್ಕಿರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಶಿರಹಟ್ಟಿ ಫಕ್ಕಿರ ಸಿದ್ದರಾಮ ಸ್ವಾಮೀಜಿ ಅವರ 75ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಹುಬ್ಬಳ್ಳಿ ನಗರದ 108 ಸಮಾಜದ ಮುಖಂಡರು ಆಗಮಿಸಿ ಸಲಹೆ ಸೂಚನೆ ನೀಡಿದರು. ಜನೇವರಿ 10 ರಿಂದ …
Read More »
BigTv News
December 30, 2023
ಕರ್ನಾಟಕ, ಧಾರವಾಡ, ಸುದ್ದಿ
ಕುಂದಗೋಳ: ಆರ್.ಟಿ.ಪಿ.ಸಿ.ಆರ್ ವಿಧಾನದ ಮೂಲಕ ಕೋವಿಡ್ ಟೆಸ್ಟ್ ಮಾಡಲಾಗುತ್ತಿದ್ದು, ಪಾಸಿಟಿವ್ ಪ್ರಕರಣ ಕಂಡು ಬಂದಿಲ್ಲಾ’ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ವಿದ್ಯಾವತಿ ಪಾಟೀಲ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಯಲ್ಲಿ ನಡೆದ ಕೋವಿಡ್-19 ಟಾಸ್ಕ್ ಫೋರ್ಸ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕು -ಆಸ್ಪತ್ರೆಯಲ್ಲಿ ಸಕಲ ಸಿದ್ಧತೆ ಮಾಡಿ ಕೊಂಡಿದ್ದೇವೆ. ಒಟ್ಟು 100 ಹಾಸಿಗೆ, 11 ವೆಂಟಿಲೇಟರ್, 25 3, 133, 643 20, 1 ಪಿ.ಎಸ್.ಎ ಆಕ್ಸಿಜನ್ -ಪ್ಲಾಂಟ್, …
Read More »
BigTv News
December 30, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31ರ ರಾತ್ರಿ ಅಸಭ್ಯವಾಗಿ ವರ್ತಿಸುವುದು, ಕುಡಿದು ಹುಚ್ಚಾಟವಾಡುವುದು ಸೇರಿದಂತೆ ಕಾನೂನು ಉಲ್ಲಂಘನೆಯ ಚಟುವಟಿಕೆ ನಡೆಸುವವರನ್ನು ಹೆಡೆಮುರಿ ಕಟ್ಟಲು ಮೈಸೂರಿನಲ್ಲಿ ಚಾಮುಂಡಿ ಪಡೆ (ಸುರಕ್ಷತಾ ಪಿಂಕ್ ಗರುಡಾ) ತಯಾರಾಗಿದೆ.ಹೊಸ ವರ್ಷಾಚರಣೆ ಸಲುವಾಗಿ ಜನ ಮನೆಯಿಂದ ಹೊರಬಂದು ತಮಗೆ ಇಷ್ಟವಾದ ಸ್ಥಳಗಳಲ್ಲಿ ಪಾರ್ಟಿಗಳನ್ನು ಮಾಡುವುದರಿಂದ ನಗರದಾದ್ಯಂತ ಜನ ಸಂದಣಿಯಿರುತ್ತದೆ. ಹೋಟೆಲ್, ರೆಸಾರ್ಟ್‌ಗಳಲ್ಲಿ ವರ್ಷಾಚರಣೆಯ ಕಾರ್ಯಕ್ರಮಗಳು ಜೋರಾಗಿಯೇ ನಡೆಯುತ್ತದೆ. ರಾತ್ರಿಯಿಡೀ ಕೆಲವರು ನಗರದಲ್ಲಿ ಅಡ್ಡಾಡುವ ಮೂಲಕ ಹೊಸ …
Read More »
BigTv News
December 30, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹೊಸ ವರುಷದ ಆಚರಣೆ ಹಾಗೂ 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ.ಬೆಂಗಳೂರು ಮಹಾನಗರ ಸಾರಿಗೆ ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಬಿಎಂಟಿಸಿ ಬಸ್ ಚಾಲಕರು ಹಾಗೂ ನಿರ್ವಾಹಕರು ಚಾಲನೆ ವೇಳೆ ಮೊಬೈಲ್ ಬಳಕೆ, ಟಿಕೆಟ್ ಸರಿಯಾಗಿ ನೀಡದಿರುವುದು, …
Read More »
BigTv News
December 30, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣವೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕೆಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಚೆಕ್ ಬೌನ್ಸ್ ಆದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರಿಗೆ ಕೋರ್ಟ್ 6 ಕೋಟಿ 96 ಲಕ್ಷದ 70 ಸಾವಿರ ದಂಡ ವಿಧಿಸಿದೆ. ದಂಡ ಕಟ್ಟಲು ತಪ್ಪಿದರೆ 6 ತಿಂಗಳ ಸೆರೆವಾಸ ಅನುಭವಿಸಬೇಕು ಎಂದು ತೀರ್ಪಿನಲ್ಲಿ ಆದೇಶಿಸಲಾಗಿದೆ. ಇಂಥ ಹಿನ್ನೆಲೆಯಿರುವ ಸಚಿವರು ಶಿಕ್ಷಣ ಇಲಾಖೆಗೆ ಕಪ್ಪುಚುಕ್ಕಿ; ಅವರು …
Read More »
BigTv News
December 30, 2023
ಅಯೋಧ್ಯೆ, ಸುದ್ದಿ
ಅಯೋಧ್ಯೆ: ಅಯೋಧ್ಯೆಯಲ್ಲಿ ಪುನರಾಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಬಳಿಕ ದೇಶದ ವಿವಿಧೆಡೆ ಸಂಚರಿಸುವ ಎರಡು ಅಮಿತ್ ಭಾರತ್ ಮತ್ತು ಆರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ಪ್ರಧಾನಿ ಮೋದಿ ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಅಲಂಕರಿಸಿದ ಅಮೃತ್ ಭಾರತ್ ಎಕ್ಸ್‌ಪ್ರೆಸ್ ಅನ್ನು ಹತ್ತಿ ರೈಲಿನಲ್ಲಿರುವ ಪ್ರಯಾಣಿಕರ ವೈಶಿಷ್ಟ್ಯಗಳು ಮತ್ತು ಸೌಕರ್ಯಗಳನ್ನು ಪರಿಶೀಲಿಸಿದರು. ಈ …
Read More »
BigTv News
December 30, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನ ಪಡೆಯಲು ಕಾಂಗ್ರೆಸ್ ಟಾರ್ಗೆಟ್ ಹಾಕಿಕೊಂಡಿದೆ. ಅದರಂತೆ ಕಾಂಗ್ರೆಸ್ ಪಾಳಯದಲ್ಲಿರುವ ಅಸಮಾಧಾನವನ್ನ ಶಮನಗೊಳಿಸಲು ಪಕ್ಷದಲ್ಲಿ ಬಂಡಾಯಗೊಂಡ ಶಾಸಕರ ಅಸಮಾಧಾನವನ್ನ ಶಮನಗೊಳಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಮಂತ್ರಿಗಿರಿ ಮೇಲೆ ಕಣ್ಣೀಟ್ಟ ಶಾಸಕರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಕೆಲ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನವನ್ನ ಹೊರಹಾಕಿದ್ರು, ಈ ಅಸಮಾಧಾನ ಮುಂದಿನ ಲೋಕಸಭಾ ಚುನಾವಣೆಯ …
Read More »