Breaking News

ಸುದ್ದಿ

ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯಲ್ಲಿ ಹಾವು…..

ಪುತ್ತೂರು (ದಕ್ಷಿಣ ಕನ್ನಡ): ಹಲವು ಪ್ರಕಾರ, ಆಕಾರಗಳ ಹಾವುಗಳಿದ್ದರೂ, ಅವುಗಳಲ್ಲಿ ಕೆಲವು ಮಾತ್ರ ಜನರ‌ ಗಮನ ಸೆಳೆಯುತ್ತವೆ. ಆದರೆ ಇಂಥ ಅನೇಕ ಪ್ರಬೇಧಗಳ ಹಾವುಗಳು ಜನರ ಗಮನಕ್ಕೂ ಬಾರದೇ ದಟ್ಟ ಅರಣ್ಯಗಳ ಮಧ್ಯೆ ತಮ್ಮ ಪಾಡಿಗೆ ಬದುಕುತ್ತಿವೆ. ಇಂಥದೇ ದಟ್ಟಾರಣ್ಯಗಳ ಮಧ್ಯೆ ಸ್ವಚ್ಛಂದವಾಗಿ ವಿಹರಿಸುವ ಅಪರೂಪದ ಹಾವೊಂದು ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯ ಟೇಬಲ್​ ಮೇಲೆ ಹರಿದಾಡುತ್ತಿತ್ತು. ಪುತ್ತೂರಿನ ಯುವ ಉರಗತಜ್ಞ ತೇಜಸ್ ಬನ್ನೂರು ಅವರು …

Read More »

ಕೌನ್ ಬನೇಗಾ ಕರೋಡ್​ ಪತಿ ಹೆಸರಿನಲ್ಲಿ ವಂಚನೆ…

ಮಂಗಳೂರು: “ಕೌನ್ ಬನೇಗಾ ಕರೋಡ್​ ಪತಿ” ಹೆಸರಿನಲ್ಲಿ ಪುತ್ತೂರಿನ ಮಹಿಳೆಯೋರ್ವರಿಗೆ ರೂ. 12.93 ಲಕ್ಷ ವಂಚನೆ ಮಾಡಲಾಗಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿಯಾದ ಝೀನತ್ ಬಾನು ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.‌ ದೂರಿನಲ್ಲಿ ಝೀನತ್ ಬಾನು ಅವರಿಗೆ 2022 ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್‌ಆ್ಯಪ್ ಕರೆ ಮಾಡಿ ತಾನು ಕೌನ್ ಬನೇಗಾ ಕರೋಡಪತಿ ಎಂಬ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದನು. ಆತ, ಮಹಿಳೆ …

Read More »

ಈದ್ಗಾ ಮೈದಾನಕ್ಕೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ಗಜಮುಖನ ಎಂಟ್ರಿ…

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ವಿಘ್ನೇಶ್ವರ ಎಂಟ್ರಿ ಕೊಟ್ಟಿದ್ದು, ಶಾಂತಿಯುತ ರೀತಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಜಮುಖ ಆಗಮಿಸಿದ್ದಾನೆ.ಸಾಕಷ್ಟು ವಿರೋಧದ ನಡುವೆಯೂ ಅನುಮತಿ ಪಡೆದು ಈಗ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಣಪತಿ ಪ್ರತಿಷ್ಟಾಪನೆ ಮಾಡಲಾಗಿದೆ. ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಹಿಂದೂಪರ ಸಂಘಟನೆಯ ಮುಖಂಡರ ನೇತೃತ್ವದಲ್ಲಿ ಅದ್ದೂರಿಯಾಗಿ ಮೆರವಣಿಗೆ ಮೂಲಕ ಪ್ರತಿಷ್ಟಾಪನೆ ಮಾಡಲಾಗಿದೆ.ಇನ್ನೂ ಮೂರು ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, …

Read More »

ವಿಶೇಷ ಹಾಗೂ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳು ಬೆಲ್ಲದಲ್ಲಿ ತಯಾರಿ….

ಮಂಡ್ಯ: ಗಣಪತಿ ಹಬ್ಬ ಇನ್ನೇನು ಬಂದೇ ಬಿಡ್ತು. ಗಣಪತಿ ಹಬ್ಬದಲ್ಲಿ ಗಣೇಶನ ಮೂರ್ತಿಯನ್ನು ಕೂರಿಸಿ ಭಕ್ತಿ-ಭಾವದಿಂದ ಪೂಜೆ ಸಲ್ಲಿಸುವುದು ವಾಡಿಕೆ. ಹೀಗಾಗಿ ಮಾರುಕಟ್ಟೆಯಲ್ಲೂ ಸಹ ಮಣ್ಣಿನ ಗಣಪ, ಪಿಒಪಿ ಗಣೇಶನ ಮೂರ್ತಿಗಳು ಮಾರಾಟಕ್ಕೆ ಸಜ್ಜಾಗಿವೆ. ಆದರೆ ಸಕ್ಕರೆ ನಗರಿ ಮಂಡ್ಯದಲ್ಲಿ ಎಲ್ಲಿಯೂ ಸಿಗದ ವಿಶೇಷ ಹಾಗೂ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳು ಬೆಲ್ಲದಲ್ಲಿ ತಯಾರಾಗಿದ್ದು, ಜನರ ಗಮನ ಸೆಳೆಯುತ್ತಿವೆ. ಹಾಗಾದ್ರೆ ಈ ಸ್ಟೋರಿ ನೋಡಿ. ಮಂಡ್ಯ ಅಂದ್ರೆ ವಿವಿಧ ಬಗೆಯ …

Read More »

ಭಗವದ್ಗೀತೆಯನ್ನು ಮೊದಲು ಬರೆದಿದ್ದು ಹಾಗೂ ಮಹಾಭಾರತವನ್ನು ಮಟ್ಟ ಮೊದಲಬಾರಿಗೆ ಲಿಪಿಬದ್ಧಗೊಳಿಸಿದ್ದು ಗಣಪತಿ…..

ಬೆಂಗಳೂರು: ಭಗವದ್ಗೀತೆಯನ್ನು ಮೊದಲು ಬರೆದಿದ್ದು ಹಾಗೂ ಮಹಾಭಾರತವನ್ನು ಮಟ್ಟ ಮೊದಲಬಾರಿಗೆ ಲಿಪಿಬದ್ಧಗೊಳಿಸಿದ್ದು ಗಣಪತಿ ಎಂದು ಪುತ್ತಿಗೆಮಠದ ಸುಗುಣೇಂದ್ರ ತೀರ್ಥರು ತಿಳಿಸಿದರು. ಜೋಶಿ ಸಂಗೀತ ನೃತ್ಯ ನಾಟಕ ಶಾಲೆಯ ವತಿಯಿಂದ ಆಯೋಜಿಸಲಾಗಿದ್ದ ಮಣ್ಣಿನ ಗಣಪ ಮಾಡುವ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ನಾವೆಲ್ಲರೂ ಮಣ್ಣಿನ ಗಣಪತಿಯನ್ನು ನಿರ್ಮಾಣ ಮಾಡುತ್ತಿದ್ದೇವೆ. ಅದರ ಜೊತೆಗೆ ಕೋಟಿ ಗೀತಲೇಖನ ಯಜ್ಞವನ್ನು ಮಾಡಬೇಕು. ಯಾಕೆಂದರೆ ಕೋಟಿ ಗೀತಾಲೇಖನ ಯಜ್ಞವನ್ನು ಮೊದಲು ಮಾಡಿದ್ದು ಗಣಪತಿ. ಆದ್ದರಿಂದ ಗಣಪತಿಗೂ …

Read More »

ಅಕ್ರಮವಾಗಿ ಇ-ಸಿಗರೇಟ್​ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರು ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ….

ದೇವನಹಳ್ಳಿ: ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್​ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರು ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಎಲ್) ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 15.9 ಲಕ್ಷ ರೂಪಾಯಿ ಮೌಲ್ಯದ ಇ-ಸಿಗರೇಟ್ ವಶಕ್ಕೆ ಪಡೆಯಲಾಗಿದೆ. ಸೋಮವಾರ ಮಲೇಷ್ಯಾದ ಕೌಲಾಲಂಪುರ್​ನಿಂದ ಮಲೇಷ್ಯಾ ಏರ್‌ಲೈನ್ಸ್ ಎಮ್ ಹೆಚ್ 192 ವಿಮಾನದ ಮೂಲಕ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಲಗೇಜ್​ಗಳನ್ನು ಪರಿಶೀಲನೆ ಮಾಡುವಾಗ ಅಕ್ರಮ ಪತ್ತೆಯಾಗಿದೆ. 1,590 ಇ-ಸಿಗರೇಟ್​ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ …

Read More »

7 ತಿಂಗಳ ಗರ್ಭಿಣಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್….

ಹೊಸಕೋಟೆ (ಬೆಂಗಳೂರು): 7 ತಿಂಗಳ ಗರ್ಭಿಣಿ ಸತತ 26 ಗಂಟೆ ಸ್ಯಾಕ್ಸೋಫೋನ್‌ ನುಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿ ವಿಶೇಷ ಮನ್ನಣೆ ತನ್ನದಾಗಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಆವಲಹಳ್ಳಿ ನಿವಾಸಿ ಸುಬ್ಬಲಕ್ಷ್ಮೀ ಈ ಸಾಧಕಿ. ಕಳೆದ ಪೆಬ್ರವರಿಯಲ್ಲಿ ಇವರು ಆವಲಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 26 ಗಂಟೆ 23 ನಿಮಿಷ ಸ್ಯಾಕ್ಸೊಫೋನ್ ನುಡಿಸಿದ್ದಾರೆ. ಇಷ್ಟು ಸಮಯ ನಿರಂತರವಾಗಿ ಸ್ಯಾಕ್ಸೊಪೋನ್ ನುಡಿಸಿದ ಮೊದಲ ಮಹಿಳೆ ಅನ್ನೋ ಹೆಗ್ಗಳಿಕೆಯೂ ಇವರದ್ದಾಗಿದೆ. ಇದೀಗ …

Read More »

ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ಸ್ವಾಮೀಜಿಯವರ ಹೆಸರು…

ಮಂಗಳೂರು: ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ಇದೀಗ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಯವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ತಾ‌ನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ, ಇದೊಂದು ಷಡ್ಯಂತ್ರದ ಭಾಗವಾಗಿ ಕಂಡು ಬರುತ್ತಿದ್ದು, ಆದರಿಂದ ಸಿಸಿಬಿ ಅಧಿಕಾರಿಗಳು ಮೇಲ್ನೋಟಕ್ಕೆ ಈ ಪ್ರಕರಣದಲ್ಲಿ ಏನಾಗಿದೆ ಎಂದು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ “ಮಾಜಿ ಹಿಂದೂ ಮುಖಂಡ ಸತ್ಯಜಿತ್ …

Read More »

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯ ಕೊಲೆ‌…

ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ ವಿಜಯಪುರ ನಗರದ ನವಬಾಗ್ ಪ್ರದೇಶದಲ್ಲಿ ವರದಿಯಾಗಿದೆ. ರೂಪಾ ಮೇತ್ರಿ (32) ಹಾಗೂ ಅವರ ತಾಯಿ ಕಲ್ಲವ್ವ (55) ಕೊಲೆಯಾದವರು ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಮೇತ್ರಿ ಕೊಲೆ ಆರೋಪಿ. ನವಭಾಗ್ ಪ್ರದೇಶದ ಭಾಗವಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗಿದ್ದ ಮಲ್ಲಿಕಾರ್ಜುನ ಮೂವರು ಮಕ್ಕಳು, ಪತ್ನಿ ಹಾಗೂ ಅತ್ತೆಯೊಂದಿಗೆ ವಾಸವಿದ್ದನು.‌ ಕಳೆದ ಆರು ತಿಂಗಳಿಂದ …

Read More »

ಸರ್ಕಾರದ ಆಡಳಿತ ಸುಧಾರಣೆ ಕಂದಾಯ ಇಲಾಖೆಯ ಮೂಲಕವೇ ಆಗಬೇಕು….

ಧಾರವಾಡ: ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದರೆ, ಜನಪರ ಕೆಲಸ ಮಾಡಿದರೆ ಅವರಿಗೆ ಪ್ರಶಸ್ತಿ ನೀಡಲಾಗುವುದು. ಅಲ್ಲದೇ ತಪ್ಪು ಮಾಡಿದರೆ ಅಮಾನತು ಮಾತ್ರವಲ್ಲ. ಕ್ರಿಮಿನಲ್ ಪ್ರಕರಣವನ್ನು ದಾಖಲಿಸುತ್ತೇವೆ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದರು. ನಗರದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆಡಳಿತ ಸುಧಾರಣೆ ಕಂದಾಯ ಇಲಾಖೆಯ ಮೂಲಕವೇ ಆಗಬೇಕು. ಹೀಗಾಗಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು. ಒಳ್ಳೆ …

Read More »