Breaking News

ಸುದ್ದಿ

ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಆಗ್ರಹ…

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಆಗ್ರಹಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರದ ನಡೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಗಣಪತಿ ಉತ್ಸವ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ಆದರೆ ಈದ್ಗಾ ಮೈದಾನದಲ್ಲಿ ಅನುಮತಿ ನೀಡಲು ಮೀನಮೇಷ ಎಣಿಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

Read More »

ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು: ಗೋವಿಂದ ಕಾರಜೋಳ.

ಬೆಂಗಳೂರು: ಯಲಹಂಕದಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ ಮಾಡಿದ ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಒತ್ತಾಯಿಸಿದರು. ಯಲಹಂಕದಲ್ಲಿ ಸಚಿವರಿಂದ ದೌರ್ಜನ್ಯಕ್ಕೊಳಗಾದ ದಲಿತ ಮಹಿಳೆ ಮುನಿಯಮ್ಮರನ್ನು ಬಿಜೆಪಿ ನಿಯೋಗವು ಇಂದು ಭೇಟಿ ಮಾಡಿತು. ಕುಟುಂಬದ ಅಹವಾಲು ಆಲಿಸಿತು. ನಂತರ ಮಾತನಾಡಿದ ಮಾಜಿ ಡಿಸಿಎಂ ಕಾರಜೋಳ, ದಲಿತರ ಆಸ್ತಿ ಕಬಳಿಕೆಗೆ ಸಚಿವರೇ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಸ್ವಾತಂತ್ರ್ಯೋತ್ತರದ 75 ವರ್ಷಗಳ ಆಡಳಿತದಲ್ಲಿ …

Read More »

ಪರೀಕ್ಷೆ ಮುಗಿದ 48 ಗಂಟೆಗಳ ಒಳಗೆ ಫಲಿತಾಂಶ ಪ್ರಕಟಿಸಿ ಶೈಕ್ಷಣಿಕ ದಾಖಲೆ ಸೃಷ್ಟಿ….

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಬಿಸಿಎ (ಬ್ಯಾಚಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್) ಪದವಿಯ 5 ಮತ್ತು 6ನೇ ಸೆಮಿಸ್ಟರ್​ಗಳ ಪರೀಕ್ಷೆ ಮುಗಿದ 48 ಗಂಟೆಗಳ ಒಳಗೆ ಫಲಿತಾಂಶ ಪ್ರಕಟಿಸಿ ಶೈಕ್ಷಣಿಕ ದಾಖಲೆ ಸೃಷ್ಟಿಸಿದೆ. ಶೀಘ್ರ ಮೌಲ್ಯಮಾಪನಕ್ಕೆ ಹೆಸರಾಗಿರುವ ಕುವೆಂಪು ವಿವಿಯು ಈ ಹಿಂದೆಯೂ ಶೀಘ್ರವಾಗಿ ಫಲಿತಾಂಶ ನೀಡಿ ವಿದ್ಯಾರ್ಥಿಗಳಿಗೆ ನೆರವಾಗಿತ್ತು. ಪ್ರಸ್ತುತ ನಾನ್ – ಎನ್​ಇಪಿ ಬ್ಯಾಚ್​ನ ಬಿಸಿಎ ಪದವಿಯ 5 ಮತ್ತು 6ನೇ ಸೆಮಿಸ್ಟರ್​ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಮುಕ್ತಾಯಗೊಂಡ …

Read More »

ರೇಡಿಯೊ ಕಾಲರ್‌ಗಳಿಲ್ಲದೆ ಕಾಡಿನಲ್ಲಿ ಮೇಲ್ವಿಚಾರಣೆ ಸಾಧ್ಯವಿಲ್ಲ….

ಶಿಯೋಪುರ್ (ಮಧ್ಯಪ್ರದೇಶ): ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳ ಸಾವಿಗೆ ರೇಡಿಯೋ ಕಾಲರ್‌ಗಳಿಗೆ ಸಂಬಂಧಿಸಿರುವ ಸಂಭವನೀಯ ಸೋಂಕು ಕಾರಣವಾಗಿರಬಹುದು ಶಂಕೆಯನ್ನು ಚೀತಾ ಪ್ರಾಜೆಕ್ಟ್ ಮುಖ್ಯಸ್ಥ ಎಸ್‌.ಪಿ ಯಾದವ್ ಅಲ್ಲಗಳೆದಿದ್ದಾರೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್‌ಟಿಸಿಎ) ಸದಸ್ಯ ಕಾರ್ಯದರ್ಶಿಯೂ ಆಗಿರುವ ಯಾದವ್, ಚೀತಾಗಳನ್ನು ದೇಶದಲ್ಲಿ ಮರು ಪರಿಚಯಿಸಿ ಒಂದು ವರ್ಷ ಪೂರ್ಣಗೊಂಡಿರುವ ಕುರಿತು ಸುದ್ದಿಸಂಸ್ಥೆಯೊಂದರ ವಿಶೇಷ ಸಂದರ್ಶನದಲ್ಲಿ ಮಾಹಿತಿ ನೀಡಿದರು. “ಚೀತಾಗಳ ಮೇಲೆ ಎಲ್ಲಾ ಕಡೆ ನಿಗಾ ಇರಿಸಲಾಗಿದೆ. ರೇಡಿಯೋ ಕಾಲರ್‌ …

Read More »

ಇಂದು ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಎದುರು….

ನವದೆಹಲಿ: ಏಷ್ಯಾಕಪ್ 2023ರ ಸೂಪರ್ 4 ಸುತ್ತಿನ ಅಂತಿಮ ಪಂದ್ಯದಲ್ಲಿ ಇಂದು ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಎದುರಾಗಲಿವೆ. ಈ ಪಂದ್ಯವು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಫೈನಲ್​ ಪ್ರವೇಶಿಸಿರುವ ಭಾರತ ತಂಡಕ್ಕೆ ಈ ಪಂದ್ಯವು ಔಪಚಾರಿಕವಾಗಿದೆ. ಇನ್ನೊಂದೆಡೆ ಟೂರ್ನಿಯಿಂದ ಹೊರಬಿದ್ದಿರುವ ಬಾಂಗ್ಲಾ ತಂಡ ಈ ಸುತ್ತಿನಲ್ಲಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಫೈನಲ್​ನಲ್ಲಿ ಟೀಂ ಇಂಡಿಯಾ ಶ್ರೀಲಂಕಾವನ್ನು ಎದುರಿಸಲಿದೆ. ಇಂದಿನ ಪಂದ್ಯದಲ್ಲಿ ಭಾರತ ತಂಡಕ್ಕೆ …

Read More »

ತಮಿಳುನಾಡಿಗೆ ನೀರು ಹರಿಸುವುದು ಸಾಧ್ಯವಿಲ್ಲ: ಸಿದ್ದರಾಮಯ್ಯ.

ಬೆಂಗಳೂರು: ರಾಜ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ. ಹೀಗಾಗಿ ನಾವು ಸುಪ್ರೀಂಕೋರ್ಟ್​ ಆದೇಶಿಸಿದಂತೆ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದೇ ವೇಳೆ ಅವರು, ಕಾನೂನು ತಜ್ಞರ ಸಲಹೆ ಪಡೆದುಕೊಳ್ಳುವವರೆಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ನೀರು ಹರಿಸುತ್ತೇವೆ. ಈ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕಾವೇರಿ ನದಿ ನೀರು ವಿಚಾರವಾಗಿ ಇಂದು ಕರೆಯಲಾಗಿರುವ …

Read More »

ಮುಂದೊಂದು ದಿನ ದಲಿತರಿಗೆ ಅವಕಾಶ ಸಿಕ್ಕೇ ಸಿಗುತ್ತದೆ: ಸತೀಶ್ ಜಾರಕಿಹೊಳಿ.

ಹುಬ್ಬಳ್ಳಿ: ಸಚಿವ ಜಿ. ಪರಮೇಶ್ವರ್​ ಮುಖ್ಯಮಂತ್ರಿ, ಸತೀಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಆಗಬೇಕೆಂದು ವಿಧಾನ ಪರಿಷತ್​ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಸಾಂದರ್ಭಿಕವಾಗಿ ಹೇಳಿರಬಹುದು. ಆದರೆ ಮುಂದೊಂದು ದಿನ ದಲಿತರಿಗೆ ಅವಕಾಶ ಸಿಕ್ಕೇ ಸಿಗುತ್ತದೆ. ಅದಕ್ಕೆ ಕಾಯಬೇಕಷ್ಟೇ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ಅವರು ಒಳ್ಳೆಯ ದೃಷ್ಟಿಯಿಂದ ಹೇಳಿದ್ದಾರೆ. ಹೇಳಿದ ತಕ್ಷಣ ಯಾವುದು ಆಗೋದಿಲ್ಲ. ಈ ಬಗ್ಗೆ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ. ಸದ್ಯ ರಾಜ್ಯದಲ್ಲಿ …

Read More »

ಸುಳ್ಯ ಸೇರಿದಂತೆ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ…

ಸುಳ್ಯ (ದಕ್ಷಿಣ ಕನ್ನಡ) : ಕೋಝಿಕ್ಕೋಡ್​​ನಲ್ಲಿ ಇಬ್ಬರು ಶಂಕಿತ ನಿಫಾ ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ಕೇರಳದ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಸುಳ್ಯ ಸೇರಿದಂತೆ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಕರ್ನಾಟಕ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈಗಾಗಲೇ ನಿಫಾ ವೈರಸ್‌ ಪತ್ತೆಯಾಗಿ ಇಬ್ಬರು ಮೃತಪಟ್ಟ ಕೇರಳದ ಕೊಝಿಕ್ಕೋಡ್ ಜಿಲ್ಲೆಯ ಮರುದ್ವಾಂಕರ, ಆಯಂಚೇರಿ, ಕಾವಿಲಂಪ್ಪಾರ, ವಿಲ್ಯಾಂಪಳ್ಳಿ, ಕುಟ್ಯಾಡಿ, ಮಂಗಲಾಡ್ ಸೇರಿದಂತೆ ಹಲವಾರು …

Read More »

ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ…..

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಖಚಿತವಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಇಂದು ರಾಜ್ಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಪಕ್ಷದ ಮುಂದಿನ ಸಂಘಟನಾತ್ಮಕ ಚಟುವಟಿಕೆ, ಲೋಕಸಭಾ ಚುನಾವಣೆಗೆ ಸಿದ್ಧತೆ ಮತ್ತು ಜೆಡಿಎಸ್‌ನೊಂದಿಗಿನ ಹೊಂದಾಣಿಕೆಯ ನಂತರದ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ. ಇಂದು ಬೆಳಿಗ್ಗೆ 10.30ಕ್ಕೆ ಸಭೆ ಆಯೋಜಿಸಲಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ …

Read More »

ಖಾಸಗಿ ಸಾರಿಗೆ ಬಂದ್​ಗೆ ಕರೆ…

ಬೆಂಗಳೂರು: ಕರ್ನಾಟಕ ಸರ್ಕಾರದ ಶಕ್ತಿ ಯೋಜನೆ ವಿರುದ್ಧ ಅಸಮಾಧಾನ, ಖಾಸಗಿ ವಾಹನ ಚಾಲಕರಿಗೆ ಮಾಸಿಕ 10 ಸಾವಿರ ರೂಪಾಯಿ ಧನಸಹಾಯ, ರಸ್ತೆ ತೆರಿಗೆ ರದ್ದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ಬೆಂಗಳೂರಿನಲ್ಲಿ ಇಂದು ಖಾಸಗಿ ಸಾರಿಗೆ ಬಂದ್​ಗೆ ಕರೆ ನೀಡಿದೆ. ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ರಾತ್ರಿ 12ರವರೆಗೆ ಖಾಸಗಿ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಬಂದ್‌ಗೆ ಒಕ್ಕೂಟ ನಿರ್ಧರಿಸಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ …

Read More »