Breaking News

ಸುದ್ದಿ

ಕೆಎಸ್​ಆರ್​ಟಿಸಿ ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿ ಐವರು ಮೃತ…

ಚಿತ್ರದುರ್ಗ: ಕೆಎಸ್​ಆರ್​ಟಿಸಿ ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಮಗು ಸೇರಿ ಐವರು ಮೃತಪಟ್ಟ ಘಟನೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಬಸ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಜೊತೆಗೆ ಕೆಲವರು ಗಾಯಗೊಂಡಿದ್ದಾರೆ. ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ (45) , ರಾಯಚೂರಿನ ಮಸ್ಕಿ ಮೂಲದ …

Read More »

ಖಾಸಗಿ ವಾಹನ ಚಾಲಕರ ಬೆಂಗಳೂರು ಬಂದ್ ರಾಜಕೀಯ ಪ್ರೇರಿತ: ಡಿ ಕೆ ಶಿವಕುಮಾರ್.

ಬೆಂಗಳೂರು: ಖಾಸಗಿ ವಾಹನ ಚಾಲಕರ ಬೆಂಗಳೂರು ಬಂದ್ ರಾಜಕೀಯ ಪ್ರೇರಿತವಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವನಗರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಖಾಸಗಿ ವಾಹನದವರು ಎಲ್ಲರೂ ಬಂದು ಹೋರಾಟ ಮಾಡುವ ಅವಶ್ಯಕತೆ ಇಲ್ಲ. ಖಾಸಗಿ ಬಸ್​ನವರಿಗೆ ತೊಂದರೆಯಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ನಮ್ಮ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣ ಅವಕಾಶ ನೀಡುರುವುದರಿಂದ ಅವರಿಗೆ ಸಮಸ್ಯೆಯಾಗಿದೆ ಎಂದು ಹೇಳಿದರು. ಆದರೆ ಈ ಹೋರಾಟದಲ್ಲಿ ಓಲಾ, …

Read More »

ರಾಜ್ಯಾದ್ಯಂತ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿ….

ಬೆಂಗಳೂರು: ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಈ ಸಂಬಂಧ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು …

Read More »

ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗೆ ಆಹ್ವಾನ ಇಲ್ಲದೇ ನಾನು ಹೇಗೆ ಹೋಗಲಿ: ಮಲ್ಲಿಕಾರ್ಜುನ ಖರ್ಗೆ.

ಕಲಬುರಗಿ: ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗೆ ಆಹ್ವಾನ ಇಲ್ಲದೇ ನಾನು ಹೇಗೆ ಹೋಗಲಿ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ಕಲಬುರಗಿ ಪ್ರವಾಸದಲ್ಲಿರುವ ಅವರು ಮಾಧ್ಯಮದವರ ಜೊತೆ ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ಇಬ್ಬರು ಒಂದಾಗಿದ್ದಾರೆ ಎಂದು ಪೇಪರ್​ನಲ್ಲಿ ನೋಡಿದೆ. ದೇವೇಗೌಡರು ಮತ್ತು ಮೋದಿ ಕೈ ಕೈ ಹಿಡಿದುಕೊಂಡಿರೋದು ನೋಡಿದ್ದೇನೆ. ಅವರಿಬ್ಬರು ಒಂದಾಗುವ ಪ್ರಯತ್ನ ಮಾಡ್ತಿದ್ದಾರೆ. …

Read More »

ಪ್ರತಿಭಟನಾ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ….

ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿದ್ದ ನೀರನ್ನು ಸ್ಥಗಿತ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿದ್ದ ಪ್ರತಿಭಟನಾ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ನಗರದ ಸರ್​ ಎಂ ವಿ ಪ್ರತಿಮೆ ಎದುರು ಕಳೆದ 9 ದಿನದಿಂದ ನಡಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ ಎಂದು ರೈತ ಹಿತ ರಕ್ಷಣಾ ಸಮಿತಿ ಘೋಷಿಸಿದೆ. ಕಾವೇರಿ ಕೊಳ್ಳದ ಜಲಾಶಯಗಳಿಂದ ನಿರಂತರವಾಗಿ ನೀರು ಹರಿಸುತ್ತಿದ್ದ ಸರ್ಕಾರದ ವಿರುದ್ಧ ಪ್ರತಿಭಟನಾ ಧರಣಿ ನಡೆಸುತ್ತ …

Read More »

ಕೆಆರ್‌ಎಸ್‌ ಅಣೆಕಟ್ಟೆಗೆ ಬಿಜೆಪಿ ಮುಖಂಡರ ನಿಯೋಗ ಭೇಟಿ ನೀಡಿ ಜಲಾಶಯ ವೀಕ್ಷಣೆ…

ಮಂಡ್ಯ: ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರನ್ನು ಹರಿಸುತ್ತಿರುವ ಕುರಿತು ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಮತ್ತೊಂದೆಡೆ, ಕೆಆರ್‌ಎಸ್‌ ಅಣೆಕಟ್ಟೆಗೆ ಬಿಜೆಪಿ ಮುಖಂಡರ ನಿಯೋಗ ಶುಕ್ರವಾರ ಭೇಟಿ ನೀಡಿ ಜಲಾಶಯ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೆಆರ್​ಎಸ್ ವೀಕ್ಷಣೆಗೆ ಆಗಮಿಸಿದ ಮಾಜಿ ಸಿಎಂ ನೇತೃತ್ವದ ಬಿಜೆಪಿ ನಿಯೋಗಕ್ಕೆ ಆರಂಭದಲ್ಲೇ ಪೊಲೀಸರು ಅಡ್ಡಿಪಡಿಸಿದರು. ಮುಖ್ಯ ದ್ವಾರದ ಬಳಿಯೇ ಬ್ಯಾರಿಕೇಡ್​ಗಳನ್ನ ಹಾಕಿ ತಡೆಯೊಡ್ಡಿದ ಪೊಲೀಸರು ಪೂರ್ವಾನುಮತಿ ಇರುವ ಕೆಲವರಿಗಷ್ಟೇ ಡ್ಯಾಂ ವೀಕ್ಷಣೆಗೆ ಅವಕಾಶ …

Read More »

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳ‌ ಹಾಗೂ ಸಿಬ್ಬಂದಿ ಕಾರ್ಯಪಾಲನೆ ಪರಿಶೀಲನೆ: ಡಾ ಜಿ ಪರಮೇಶ್ವರ್.

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳ‌ ಹಾಗೂ ಸಿಬ್ಬಂದಿ ಕಾರ್ಯಪಾಲನೆ ಪರಿಶೀಲನೆ ಬಗ್ಗೆ ಭೇಟಿ‌ ನೀಡಿ ಪರಿಶೀಲಿಸಿದ್ದೇನೆ.‌ ಅಧಿಕಾರಿಗಳಿಗೆ ಕೆಲವು ಸಲಹೆಗಳನ್ನು ನೀಡಿದ್ದೇನೆ. ಠಾಣೆಗೆ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆ ಬಗ್ಗೆ ಪರಿಶೀಲನೆ ಮಾಡಿದ್ದೇನೆ. ಜನಸ್ನೇಹಿ‌ ಪೊಲೀಸ್ ಠಾಣೆ ಬಗ್ಗೆ ಪರಿಶೀಲನೆ ಮಾಡಿದ್ದೇನೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್​ ಹೇಳಿದ್ದಾರೆ. ಕೋಮು‌ಗಲಭೆಗೆ ಸಾಕ್ಷಿಯಾಗಿದ್ದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಠಾಣೆಯಲ್ಲಿ ಹಾಜರಿ …

Read More »

ಚುನಾವಣಾ ಪೂರ್ವ ಮೈತ್ರಿ ಘೋಷಣೆ…

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಮತ್ತೊಮ್ಮೆ ಚುನಾವಣಾ ಪೂರ್ವ ಮೈತ್ರಿ ಘೋಷಣೆಯಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ನಡೆದಿದ್ದು, ಈ ಮೈತ್ರಿಯನ್ನು ಉಭಯ ಪಕ್ಷಗಳ ನಾಯಕರು ಸ್ವಾಗತಿಸಿದ್ದಾರೆ. 24+4 ಸ್ಥಾನಗಳ ಹಂಚಿಕೆ ನಡೆದಿದ್ದು ಇದನ್ನು ರಾಜ್ಯ ಬಿಜೆಪಿ ನಾಯಕರು ಖಚಿತಪಡಿಸಿದ್ದಾರೆ. ಸ್ಥಾನ ಕಳೆದುಕೊಳ್ಳುವ ಭೀತಿಗೆ ಸಿಲುಕಿರುವ ಹಾಲಿ ಬಿಜೆಪಿ ಸಂಸದ ಮುನಿಸ್ವಾಮಿ ಕ್ಷೇತ್ರ ತ್ಯಾಗಕ್ಕೆ ಮುಂದಾಗಿದ್ದಾರೆ. ನಾನು ಪಕ್ಷದ ನಿರ್ಧಾರಕ್ಕೆ ಬದ್ದ …

Read More »

ಲಾಟರಿ ಮುಖ್ಯಮಂತ್ರಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ….

ಮೈಸೂರು : ಸಿದ್ದರಾಮಯ್ಯ ಯಾವಾಗಲೂ ತಮ್ಮ ಶಕ್ತಿಯ ಮೇಲೆ ಸಿಎಂ ಆಗಿಲ್ಲ, 2013 ರಲ್ಲಿ ಬಿಜೆಪಿ, ಕೆಜೆಪಿ ಎಂದು ವಿಭಾಗ ಆಗಿತ್ತು. ಅದರ ಲಾಭ ಪಡೆದು ಸಿದ್ದರಾಮಯ್ಯ ಅಂದು ಮುಖ್ಯಮಂತ್ರಿ ಆದರು. ಈಗ ಗ್ಯಾರಂಟಿ ಎಂದು ಹೇಳಿಕೊಂಡು ಸಿಎಂ ಆಗಿದ್ದಾರೆ. ಯಾವಾಗಲೂ ಲಾಟರಿ ಮುಖ್ಯಮಂತ್ರಿ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಮೈಸೂರಿಗೆ ಪಕ್ಷದ ಕಾರ್ಯಕ್ರಮದ ಹಿನ್ನೆಲೆ ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ …

Read More »

ಕಚೇರಿಯ ಉಪಕರಣ ಮತ್ತು ಅಧಿಕಾರಿ ವಾಹನ ಹಾಗೂ ಪುರಸಭೆ ಕಚೇರಿಯ ಪೀಠೋಪಕರಣ ಜಪ್ತಿ….

ಮಂಡ್ಯ: ಪಾಂಡವಪುರ ಪುರಸಭೆ ವ್ಯಾಪ್ತಿಯ ಒಳಚರಂಡಿ ಕಾಮಗಾರಿಗೆ ಭೂಮಿ ನೀಡಿದ ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆ‌, ನ್ಯಾಯಾಲಯ ಆದೇಶದಂತೆ ಉಪವಿಭಾಗಾಧಿಕಾರಿ ಕಚೇರಿಯ ಉಪಕರಣ ಮತ್ತು ಅಧಿಕಾರಿ ವಾಹನ ಹಾಗೂ ಪುರಸಭೆ ಕಚೇರಿಯ ಪೀಠೋಪಕರಣ ಜಪ್ತಿ ಮಾಡಲಾಯಿತು. ಪಾಂಡವಪುರ ಅಪರ ಸಿವಿಲ್ ನ್ಯಾಯಾಲಯ ಆದೇಶದ ಮೇರೆಗೆ ನ್ಯಾಯಾಲಯದ ಅಮಿನ್ ಸಿಬ್ಬಂದಿಯಾದ ನಾರಾಯಣಗೌಡ, ಸಿದ್ದರಾಜ್, ತ್ರಿವೇಣಿ, ಆನಂದ್​ರವರು ವಕೀಲ ಧರ್ಮಪುರ ಲೋಕೇಶ್ ಸಮ್ಮುಖದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿದ್ದ 13 ಕಂಪ್ಯೂಟರ್, ಅಧಿಕಾರಿಗೆ …

Read More »