Breaking News

ಸುದ್ದಿ

80 ಪ್ರಯಾಣಿಕರು ಅಪಾಯದಿಂದ ಪಾರು….

ಕಾರವಾರ: ಕಾರವಾರ ಸಾರಿಗೆ ಸಂಸ್ಥೆಯ ಬಸ್​ವೊಂದರ ಟಯರ್ ಸ್ಫೋಟಗೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ 80 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರವಾರದ ಗೋಪಸಿಟ್ಟಾ ಸಮೀಪದ ಘಾಟಿ ಸೇತುವೆಯ ಬಳಿ ಇಂದು ಘಟನೆ ನಡೆಯಿತು.ಕೆಎ 31 ಎಫ್ 1252 ನೋಂದಣಿಯ ಬಸ್​ ಕಾರವಾರದಿಂದ ಮಲ್ಲಾಪುರ ಕದ್ರಾ ಮಾರ್ಗವಾಗಿ ಸಂಚರಿಸುತ್ತಿತ್ತು. ಗೋಪಸಿಟ್ಟಾ ಸಮೀಪದ ಘಾಟಿ ಸೇತುವೆಯ ಮೇಲೆ ಮುಂದಿನ ಟಯರ್ ಸ್ಪೋಟಗೊಂಡಿದೆ. ಚಾಲಕನ ಅಪಘಾತ ಸಂಭವಿಸುವ ಹಂತದಲ್ಲಿದ್ದ ಬಸ್ ಅನ್ನು ತಕ್ಷಣ ಮುಂದೆ ಹೋಗಿ ನಿಲ್ಲಿಸಿದ್ದಾರೆ. …

Read More »

ಪುರುಷರ ಜಾವೆಲಿನ್ ಥ್ರೋದ ಗ್ರೂಪ್ ಎ ಕ್ವಾಲಿಫೈಯರ್‌ನಲ್ಲಿ ಭಾರತದ ‘ಗೋಲ್ಡನ್ ಬಾಯ್’ ಖ್ಯಾತಿಯ ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ…

ಬುಡಾಪೆಸ್ಟ್ (ಹಂಗೇರಿ): ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ ಜಾವೆಲಿನ್ ಥ್ರೋದ ಗ್ರೂಪ್ ಎ ಕ್ವಾಲಿಫೈಯರ್‌ನಲ್ಲಿ ಭಾರತದ ‘ಗೋಲ್ಡನ್ ಬಾಯ್’ ಖ್ಯಾತಿಯ ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರ ಜೊತೆಗೆ 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೂ ಅರ್ಹತೆ ಸಾಧಿಸಿದರು. ಈ ಕ್ರೀಡಾಕೂಟ ಆಗಸ್ಟ್ 19 ರಿಂದ ಪಾರಂಭವಾಗಿದ್ದು 27 ರವರೆಗೆ ನಡೆಯಲಿದೆ. ಪುರುಷರ ಜಾವೆಲಿನ್ ಥ್ರೋದಲ್ಲಿ ಅರ್ಹತೆಗೆ 83 ಮೀಟರ್ …

Read More »

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನಗೊಳಿಸುವಂತೆ ಸೂಚನೆ…..

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 2023-24ನೇ ಬಜೆಟ್​ನಲ್ಲಿ ಘೋಷಿಸಿರುವ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಇಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ನರೇಗಾ ಯೋಜನೆಯಡಿ 5000 ಗೋಮಾಳ ಪ್ರದೇಶಗಳು, 50 ಸಾವಿರ ಎಕರೆ ಹುಲ್ಲುಗಾವಲು ಪ್ರದೇಶಗಳು, 2 ಲಕ್ಷ ಬರ ಪರಿಹಾರ ಕಾಮಗಾರಿಗಳು, 81 ಸಾವಿರ …

Read More »

ಶಿವಲಿಂಗವನ್ನು ಕಿತ್ತೊಯ್ದು ವಿಕೃತಿ ಮೆರೆದ ಖದೀಮರು……

ಗಂಗಾವತಿ : ತಾಲೂಕಿನ ಮಲ್ಲಾಪುರ ಗ್ರಾಮದ ಸಮೀಪ ಇರುವ ಪುರಾತನ ಕಾಲದ ವಾಣಿ ವೀರಭದ್ರೇಶ್ವರ ದೇವಸ್ಥಾನದಲ್ಲಿದ್ದ ಶಿವಲಿಂಗವನ್ನು ಖದೀಮರು ಕದ್ದೊಯ್ದ ಘಟನೆ ಗುರುವಾರ ಬೆಳಕಿಗೆ ಬಂದಿದೆ. ನಿರ್ಜನ ಹಾಗೂ ಬೆಟ್ಟದ ಕಡಿದಾದ ಪ್ರದೇಶದಲ್ಲಿರುವ ಪೌರಾಣಿಕ ಹಿನ್ನೆಲೆಯ ದೇವಸ್ಥಾನದಲ್ಲಿ ಕಳೆದ ಹಲವು ದಶಕದಿಂದ ನಿತ್ಯಪೂಜೆ ಸಲ್ಲಿಸಲಾಗುತ್ತಿದೆ. ಇದೇ ಸಮಯಕ್ಕಾಗಿ ಕಾದಿದ್ದ ಖದೀಮರು ದೇಗುಲದ ಗರ್ಭಗುಡಿಯಲ್ಲಿದ್ದ ಪಾಣಿ ಬಟ್ಟಲು ಮೇಲಿನ ಶಿವಲಿಂಗವನ್ನು ಕಿತ್ತೊಯ್ದು ವಿಕೃತಿ ಮೆರೆದಿದ್ದಾರೆ. ಬೆಳಗ್ಗೆ ಅರ್ಚಕರು ಪೂಜೆ ಸಲ್ಲಿಸಿ, ಮಧ್ಯಾಹ್ನದ …

Read More »

ಕೇರಳದಲ್ಲಿ ಆಫ್ರಿಕನ್ ಸ್ಟೈನ್ ಫೀವರ್…….

ಮೈಸೂರು: ಕೇರಳದಲ್ಲಿ ಆಫ್ರಿಕನ್ ಸ್ಟೈನ್ ಫೀವರ್ (African Spain fever) ಕಾಣಿಸಿಕೊಂಡ ಹಿನ್ನೆಲೆ ತಹಶೀಲ್ದಾರ್ ಸಣ್ಣ ರಾಮಪ್ಪ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಟಿ ರವಿಕುಮಾರ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಬಿ ಪ್ರಸನ್ನ ಮತ್ತು ತಂಡ ಕೇರಳ ಮತ್ತು ಕರ್ನಾಟಕ ಗಡಿಭಾಗವಾದ ಬಾವಲಿ ಚೆಕ್ ಪೋಸ್ಟ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಾಯಕ …

Read More »

ಇಸ್ರೋ ವಿಜ್ಞಾನಿಗಳ ಅಭಿನಂದಿಸಲು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮನ…..

ಬೆಂಗಳೂರು: ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ಸಫಲವಾದ ಹಿನ್ನೆಲೆ ಇಸ್ರೋ ವಿಜ್ಞಾನಿಗಳ ಅಭಿನಂದಿಸಲು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಯಾವುದೇ ರೋಡ್ ಶೋ ನಡೆಸದೇ, ಪಕ್ಷದ ಬಾವುಟ ಪ್ರದರ್ಶಿಸದೇ ಕೇವಲ ಇಸ್ರೋ ವಿಜ್ಞಾನಿಗಳ ಭೇಟಿಗೆ ಸೀಮಿತಗೊಳಿಸಿ ಪ್ರಧಾನಿ ಪ್ರವಾಸ ಆಯೋಜನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ನಾಳೆ ಬೆಳಗ್ಗೆ 6 ಗಂಟೆಗೆ ನಗರದ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ಮೋದಿ ಅವರಿಗೆ ಏರ್​ಪೋರ್ಟ್​ನಲ್ಲಿ ಸ್ವಾಗತ …

Read More »

ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ರಾಶಿ ಹಾಕಿರುವವರ ಮೇಲೆ ಮಹಾನಗರ ಪಾಲಿಕೆ ದಂಡ….

ಮಂಗಳೂರು(ದಕ್ಷಿಣ ಕನ್ನಡ): ನಗರದ ಮಣ್ಣಗುಡ್ಡ ಪ್ರದೇಶದಲ್ಲಿ ಫುಟ್​​​ ಪಾತ್​ನಲ್ಲಿ ಕಟ್ಟಡ ತ್ಯಾಜ್ಯವನ್ನು ಎಸೆದ ಪ್ರಕರಣದಲ್ಲಿ ಮಂಗಳೂರು ಮಹಾನಗರ ಪಾಲಿಕೆ ದಂಡ ವಿಧಿಸಿದೆ. ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ರಾಶಿ ಹಾಕಿರುವವರ ಮೇಲೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4,000 ರೂ.ಗಳ ದಂಡ ವಿಧಿಸಿ, ಮೊತ್ತ ವಸೂಲಿ ಮಾಡಿದೆ. ಪ್ರಶಾಂತ್ ಶೇಟ್ ಎಂಬವರಿಂದ ಕಟ್ಟಡ ತ್ಯಾಜ್ಯವನ್ನು ಫುಟ್ ಪಾತ್​ನಲ್ಲಿ ಹಾಕಿದ ಕಾರಣ ಸ್ವಚ್ಛತಾ ದರ ಎಂದು ಮಂಗಳೂರು ಮಹಾನಗರ ಪಾಲಿಕೆ ರೂ. …

Read More »

ನ್ಯಾಯಾಲಯದ ನ್ಯಾಯಾಧೀಶರಾದ ಉಂಡಿ ಮಂಜುಳ ಶಿವಪ್ಪ ಅವರು ಗ್ರಾಮದಿಂದ ಹೊರಗಡೆ ಇರಿಸಲಾಗಿದ್ದ ಶಿಶು ಮತ್ತು ಬಾಣಂತಿಯನ್ನು ರಕ್ಷಣೆ…

ತುಮಕೂರು: ಮೂಢನಂಬಿಕೆ ಪಾಲಿಸಲು ಬಾಣಂತಿ ಹಾಗೂ ಶಿಶುವನ್ನು ಊರಿನಿಂದ ಹೊರಗಿಟ್ಟಾಗ ಜಿಲ್ಲೆಯ ಗೊಲ್ಲರಹಟ್ಟಿ ಸಮೀಪ ಮಗು ಮೃತಪಟ್ಟು ಬಾಣಂತಿ ನರಳಾಡಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ. ಮತ್ತೊಬ್ಬ ಬಾಣಂತಿಯನ್ನು ಗ್ರಾಮದಿಂದ ಹೊರಗಿಡಲಾಗಿದ್ದು, ನ್ಯಾಯಾಧೀಶರು ಮಧ್ಯಪ್ರವೇಶಿಸಿ ಮೌಢ್ಯಾಚರಣೆಗೆ ತಡೆಯೊಡ್ಡಿದ ಘಟನೆ ಗುಬ್ಬಿ ತಾಲೂಕಿನ ವರದೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಬಾಣಂತಿಯನ್ನು ಹೊರಗಿಟ್ಟಿರುವ ಬಗ್ಗೆ ಬುಧವಾರ ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಗುಬ್ಬಿ ನ್ಯಾಯಾಲಯದ …

Read More »

ಮೀಸಲು ಅರಣ್ಯದೊಳಗೆ ಪರವಾನಗಿ ಪಡೆದ ಬಂದೂಕಿನಿಂದ ಕಡವೆ ಬೇಟೆ…

ಬೆಳ್ತಂಗಡಿ (ದಕ್ಷಿಣ ಕನ್ನಡ) : ಮೀಸಲು ಅರಣ್ಯದೊಳಗೆ ಪರವಾನಗಿ ಪಡೆದ ಬಂದೂಕಿನಿಂದ ಕಡವೆ ಬೇಟೆಯಾಡಿ ಸಾಗಿಸುವ ವೇಳೆ ಉಪ್ಪಿನಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಆರೋಪಿ ಪರಾರಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಸಂಕೇಶ ನಿವಾಸಿ ಜಾರಪ್ಪ ಗೌಡರ ಮಗ ಎಸ್.ಜೆ ಸಂದೇಶ್(37), ಮಣಿಯೆರು ನಿವಾಸಿ ಸುಬ್ಬಣ್ಣ …

Read More »

ನಾಳೆ ವರಮಹಾಲಕ್ಷ್ಮಿ ಹಬ್ಬ: ಭರ್ಜರಿ ವ್ಯಾಪಾರ

ಗದಗ: ನಾಳೆ ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಗದಗ ನಗರದ ಮಾರುಕಟ್ಟೆಯಲ್ಲಿ ಜನರಿಂದ ತುಂಬಿ ತುಳುಕ್ಕುತ್ತಿದೆ. ಬಾಳೇಹಣ್ಣು, ಹೂವಿನ ದರ ಗಗನಕ್ಕೇರಿದೆ. ದುಬಾರಿಯಾದ್ರೂ ಪರವಾಗಿಲ್ಲ‌ ಹಬ್ಬ ಆಚರಣೆ ಮಾಡಲೇಬೇಕಲ್ಲ, ಅಂತಿರೋ ಜನರಿಂದ ಹೂ, ಹಣ್ಣು, ಬಾಳೆ ದಿಂಡು ಖರೀದಿಗೆ ಮುಗಿಬಿದ್ದಿದ್ದಾರೆ. ಇನ್ನೂ ಕೆಲವರು ಅವಶ್ಯಕತೆಗೆ ತಕ್ಕಷ್ಟೇ ಖರೀದಿ ಮಾಡ್ತಿದ್ದಾರೆ. ಭರ್ಜರಿ ವ್ಯಾಪಾರ ಮಾಡ್ತಿರೋ ವ್ಯಾಪಾರಿಗಳು ಫುಲ್‌ ಖುಷಿಯಾಗಿದ್ದಾರೆ. ಆ ಮೂಲಕ ಸಂಭ್ರಮದ ವರಮಹಾಲಕ್ಷ್ಮಿ‌ ಹಬ್ಬ ಆಚರಣೆಗೆ ಸಿಧ್ಧರಾಗಿದ್ದಾರೆ.

Read More »