Breaking News

ಸುದ್ದಿ

ಚಂದ್ರನ ಚಿತ್ರಗಳ ಸರಣಿಯನ್ನು ಹಂಚಿಕೊಂಡ ಚಂದ್ರಯಾನ-3 ನೌಕೆಯ ‘ವಿಕ್ರಮ್​’…..

ಬೆಂಗಳೂರು: ಭಾರತ ದೇಶ ಸೇರಿದಂತೆ ಪ್ರಪಂಚವೇ ತುದಿಗಾಲ ಮೇಲೆ ನಿಂತು ಕಾಯುತ್ತಿರುವ ಚಂದ್ರಯಾನ-3 ನೌಕೆಯ ‘ವಿಕ್ರಮ್​’ ಲ್ಯಾಂಡರ್ ​ಹಜಾರ್ಡ್ ಡಿಟೆಕ್ಷನ್ ಮತ್ತು ಅವಾಯಿಡೆನ್ಸ್ ಕ್ಯಾಮೆರಾದಿಂದ ಚಂದ್ರನ ದೂರದ ಪ್ರದೇಶದ ಚಿತ್ರಗಳನ್ನು ಸೆರೆಹಿಡಿದಿದೆ. ‘ವಿಕ್ರಮ್​’​ನಿಂದ ಇಸ್ರೋ ಸಂಸ್ಥೆಗೆ ಬಂದು ತಲುಪಿರುವ ಚಂದ್ರನ ಈ ಛಾಯಾಚಿತ್ರಗಳು ವಿಜ್ಞಾನಿಗಳನ್ನು ಬೆರಗುಗೊಳಿಸಿವೆ. ಚಂದ್ರನ ಪರಿಶೋಧನೆಯತ್ತ ಮಹತ್ವದ ದಾಪುಗಾಲು ಇರಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ವಿಕ್ರಮ್ ಲ್ಯಾಂಡರ್‌, ಗಮನಸೆಳೆಯುವಂತಹ ಹೊಸದಾಗಿ …

Read More »

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಮನವಿಯನ್ನು ಆಲಿಸಲು ಇಂದೇ ವಿಚಾರಣಾ ಪೀಠವನ್ನು ರಚಿಸುವುದಾಗಿ ಸುಪ್ರೀಂಕೋರ್ಟ್​ ಹೇಳಿಕೆ….

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಮನವಿಯನ್ನು ಆಲಿಸಲು ಇಂದೇ ವಿಚಾರಣಾ ಪೀಠವನ್ನು ರಚಿಸುವುದಾಗಿ ಸುಪ್ರೀಂಕೋರ್ಟ್​ ಹೇಳಿದೆ. ಆಗಸ್ಟ್​ ತಿಂಗಳ ನದಿ ನೀರಿನ ಪಾಲನ್ನು ಬಿಡುಗಡೆ ಮಾಡುವಲ್ಲಿ ಕರ್ನಾಟಕ ವಿಳಂಬ ಮಾಡಿದ ಹಿನ್ನೆಲೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ ಮೆಟ್ಟಿಲೇರಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​ ಅವರ ಪೀಠದ ಮುಂದೆ ತಮಿಳುನಾಡು ಪರ ವಾದ ಮಂಡಿಸಿದ ಮಾಜಿ ಅಟಾರ್ನಿ ಜನರಲ್​, ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಹೆಚ್ಚುವರಿ …

Read More »

ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್​ನ 22ನೇ ಶಾಖೆ ಉದ್ಘಾಟನೆ…

ಕೋಲಾರ: ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್​ನ 22ನೇ ಶಾಖೆ ಉದ್ಘಾಟನೆಗೊಂಡಿದೆ. ಸಂಸ್ಥೆಯ ಒಟ್ಟಾರೆ 109 ನೇ ಶಾಖೆ ಇದಾಗಿದೆ. ಕಂಪನಿ ಎಂಡಿ ಶೈಲಜಾ ಕಿರಣ್ ಅವರು ಈ ಶಾಖೆಯನ್ನು ವರ್ಚುಯಲ್​ ಆಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಹಕರು ಭಾಗವಹಿಸಿದ್ದರು. ನೂತನ ಶಾಖೆ ಉದ್ಘಾಟನೆ ಬಳಿಕ ಮಾತನಾಡಿದ ಮಾರ್ಗದರ್ಶಿ ಚಿಟ್ಸ್​ ನಿರ್ದೇಶಕರಾದ ಪಿ ಲಕ್ಷ್ಮಣ್​ರಾವ್​, ಕೋಲಾರ ಜನತೆಯ ಸಹಕಾರ ಅಮೂಲ್ಯವಾದದ್ದು ಎಂದು ಹೇಳಿದರು. ಜನತೆ ಮಾರ್ಗದರ್ಶಿ ಚಿಟ್ಸ್​ ಕಂಪನಿಯಿಂದ …

Read More »

70 ವರ್ಷದ ವೃದ್ದನ ಮೇಲೆ 63 ವರ್ಷದ ವೃದ್ದೆ ದೂರು….

ಬೆಂಗಳೂರು : 70 ವರ್ಷದ ವೃದ್ದನೊಬ್ಬ ತನ್ನನ್ನ ಮದುವೆಯಾಗುವುದಾಗಿ ನಂಬಿಸಿ ನಂತರ ಮದುವೆಗೆ ನಿರಾಕರಿಸಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ 63 ವರ್ಷದ ವೃದ್ದೆಯೊಬ್ಬರು ಪೊಲೀಸ್ ಠಾಣಾ ಮೆಟ್ಟಿಲೇರಿರುವ ವಿಚಿತ್ರ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ನೊಂದ ವೃದ್ದೆ ನೀಡಿರುವ ದೂರಿನನ್ವಯ ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರೆಯ ಪತಿ ಹಾಗೂ ಆರೋಪಿತನ ಪತ್ನಿ ಸಾವನ್ನಪ್ಪಿದ್ದು, ಐದು ವರ್ಷಗಳ ಹಿಂದೆ ಇಬ್ಬರಿಗೂ ಪರಿಚಯವಾಗಿತ್ತು. ಆರೋಪಿ ತನ್ನ …

Read More »

ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ….

ಬೆಂಗಳೂರು :ಲೋಕಸಭೆ ಚುನಾವಣೆ ಹಾಗೂ ಪಕ್ಷದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಚರ್ಚಿಸುವ ಸಂಬಂಧ ಇಂದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಕರೆಯಲಾಗಿತ್ತು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಗೊಂಡಿದೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ …

Read More »

ಪೈಪ್ ಲೈನಗಳ ತೆರವು ಕಾರ್ಯಾಚರಣೆ…..

ಗಂಗಾವತಿ(ಕೊಪ್ಪಳ): ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿನ ವಿತರಣಾ ಕಾಲುವೆಗಳ ಸಮೀಪ ಅನಧಿಕೃತವಾಗಿ ಪೈಪ್​ಲೈನ್​ ಅಳವಡಿಸಿ, ನೀರು ಕಳ್ಳತನವಾಗುತ್ತಿರುವ ಪ್ರದೇಶಗಳನ್ನು ಪತ್ತೆ ಹಚ್ಚಿದ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಇಂದು ಪೈಪ್​ಲೈನ್​​​ಗಳ ತೆರವು ಕಾರ್ಯಾಚರಣೆ ನಡೆಸಿತು. ನೀರು ಕಳ್ಳತನ ತಡೆಯುವ ಉದ್ದೇಶಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ತುಂಗಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಮುಖ್ಯ ಅಭಿಯಂತರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿಂದ ಕೂಡಿದ ಕಾರ್ಯಾಚರಣೆ ಪಡೆ ರಚಿಸಿದ್ದಾರೆ.ಈ ಹಿನ್ನೆಲೆ ಇಲ್ಲಿನ ವಡ್ಡರಹಟ್ಟಿ ನಂಬರ್-2 ವಿಭಾಗದ ವ್ಯಾಪ್ತಿಗೆ …

Read More »

ಹುಬ್ಬಳ್ಳಿ ಮಹಾದಾಯಿಗಾಗಿ ರೈತರ ಪ್ರತಿಭಟನೆ

ಹುಬ್ಬಳ್ಳಿ: ಮಹಾದಾಯಿಗಾಗಿ ಮಹಾ ವೇದಿಕೆ ವತಿಯಿಂದ 4 ಜಿಲ್ಲೆಗಳ ಮಹಾದಾಯಿ ಕಳಸಾ ಬಂಡೂರಿ ಹೋರಾಟಗಾರ ಎಲ್ಲಾ ಸಂಘಟನೆಗಳ ವೇದಿಕೆ ವತಿಯಿಂದ ಶಂಕರ್ ಅಂಬಲಿ‌ ನೇತೃತ್ವದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ನಂತರ ಕೇಶ್ವಾಪೂರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮನೆ ಮುಂದೆ ಧರಣಿ ನಡೆಸಿ ಪ್ರತಿಭಟಿಸಲಾಯಿತು

Read More »

ಹುಬ್ಬಳ್ಳಿಯಲ್ಲಿ ಶಾದಿ ಮಹಲನಲ್ಲಿ ಜಷಣೆ ಆಜಾದಿ ಕಾರ್ಯಕ್ರಮ

ನವಲಗುಂದ: ಉಮ್ಮತಿ ಎಜೋಕೇಶನ್ ಆಂಡ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಪಟ್ಟಣದ ಶಾದಿ ಮಹಲದಲ್ಲಿ ಜಷಣೆ ಆಜಾದಿ ಎಂಬ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉರ್ದು ಸಾಹಿತಿ ಹಾಗೂ ಶಾಯರ್ ಅಝೀಜುಲ್ಲಾ ಸರ್ಮಸ್ತ ಅವರು ಸ್ವಾತಂತ್ರೋತ್ಸವ ಸಂದ್ರರ್ಭದಲ್ಲಿ ಹೋರಾಡಿ ವೀರ ಮರಣರಾದವರ ಬಗ್ಗೆ ಇತಿಹಾಸ ವಿವರಿಸದರು. ಇದೆ ವೇಳೆ ಉತ್ತಮ ಸಾಧನೆ ಮಾಡಿ ಎಂಬಿಬಿಎಸ್ ಓದುತ್ತಿರುವ ಒಂದೇ ಮನೆಯ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Read More »

ಬಿಜೆಪಿ ಸರ್ಕಾರದ ಅವಧಿಯ 40ರಷ್ಟು ಕಮಿಷನ್ ಪ್ರಕರಣ ತನಿಖೆಗೆ ಸಮಿತಿ‌ ರಚಿಸಿ ರಾಜ್ಯ ಸರ್ಕಾರ ಆದೇಶ: ನಾಗಮೋಹನ್ ದಾಸ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ 40ರಷ್ಟು ಕಮಿಷನ್ ಪ್ರಕರಣ ತನಿಖೆಗೆ ಸಮಿತಿ‌ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿವೃತ್ತ ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ತ‌ನಿಖಾ ಸಮಿತಿ ರಚಿಸಲಾಗಿದೆ. ಆ ಮೂಲಕ ಸರ್ಕಾರ ಬಿಜೆಪಿ ಆಡಳಿತಾವಧಿಯಲ್ಲಾದ 40ರಷ್ಟು ಕಮಿಷನ್ ಆರೋಪ ಸಂಬಂಧ ತನಿಖಾ ಸಮಿತಿ ರಚಿಸಿದೆ. ಬಿಜೆಪಿ ಆಡಳಿತಾವಧಿಯ ವಿವಿಧ ಅಕ್ರಮ ಆರೋಪಗಳ ಸಂಬಂಧ ಕಾಂಗ್ರೆಸ್ ಸರ್ಕಾರ ಈಗಾಗಲೇ ತ‌ನಿಖೆಗೆ ಆದೇಶಿದೆ‌. ಲೋಕೋಪಯೋಗಿ ಇಲಾಖೆ ಅಪರ ಕಾರ್ಯದರ್ಶಿ, ಶೇ …

Read More »

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್​ಬಿಐ) ಸಾಲ ಖಾತೆಗಳಿಗೆ ದಂಡ ಶುಲ್ಕ ವಿಧಿಸುವ ಕುರಿತಂತೆ ಸಮಗ್ರ ಮಾರ್ಗಸೂಚಿ…..

ನವದೆಹಲಿ: ಹಣಕಾಸು ಸಂಸ್ಥೆಗಳು ಸಾಲ ನೀಡುವ ಪ್ರಕ್ರಿಯೆಗಳಲ್ಲಿ ನ್ಯಾಯಸಮ್ಮತತೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಉತ್ತೇಜಿಸುವ ಪ್ರಯತ್ನವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್​ಬಿಐ) ಸಾಲ ಖಾತೆಗಳಿಗೆ ದಂಡ ಶುಲ್ಕ ವಿಧಿಸುವ ಕುರಿತಂತೆ ಸಮಗ್ರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳು ಸಣ್ಣ ಹಣಕಾಸು ಬ್ಯಾಂಕುಗಳು, ಸ್ಥಳೀಯ ಬ್ಯಾಂಕುಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಪ್ರಾಥಮಿಕ ನಗರ ಸಹಕಾರಿ ಬ್ಯಾಂಕುಗಳು, ಬ್ಯಾಂಕೇತರ ಹಣಕಾಸು ಕಂಪನಿಗಳು (ಎನ್​​ಬಿಎಫ್​ಸಿ) ಮತ್ತು ಅಖಿಲ ಭಾರತ ಹಣಕಾಸು …

Read More »