BigTv News
August 8, 2023
ಕರ್ನಾಟಕ, ಧಾರವಾಡ, ಸುದ್ದಿ
ನವಲಗುಂದ: ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಧಾರವಾಡ ಜಿಲ್ಲಾ ಉಪಾಧ್ಯಕ್ಷರಾಗಿ ಪಟ್ಟಣದ ಪುರಸಭೆ ಪೌರ ನೌಕರ ಶಿವಾನಂದ ಕದಂ ಆಯ್ಕೆಯಾಗಿದ್ದಾರೆ. ಈ ಮೊದಲು ನವಲಗುಂದದ ತಾಲೂಕಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ನೂತನ ಆಯ್ಕೆಯಾದ ಕದಂ ನೌಕರರ ಹಿತಾಸಕ್ತಿಗಾಗಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಹಾಗೂ ಯಾವುದೇ ಕುಂದು ಕೊರತೆಗಳ ಬಗ್ಗೆ ಜೊತೆಗೂಡಿ ಗಮನ ಸೆಳೆಯಲು ಸಹಕಾರಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.ಉಪಾಧ್ಯಕ್ಷ ಆಯ್ಕೆಯಾದ ಶಿವಾನಂದ ಕದಂ ಅವರನ್ನು ಮುಖ್ಯಾಧಿಕಾರಿ ವೆಂಕಟೇಶ …
Read More »
BigTv News
August 8, 2023
ಕರ್ನಾಟಕ, ಧಾರವಾಡ, ಸುದ್ದಿ
ಕುಂದಗೋಳ: ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ರೈತ ಚನ್ನಯ್ಯ ಗಬ್ಯೂರಮಠ (80) ಸೋಮವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು- ನಾಲ್ಕು ವರ್ಷಗಳಿಂದ ಬೆಳೆ ಸರಿಯಾಗಿ ಬರದೆ ಇದ್ದರಿಂದ ವಿವಿಧ ಬ್ಯಾಂಕುಗಳಲ್ಲಿ ಮಾಡಿದ್ದ 3 ಲಕ್ಷಕ್ಕೂ ಹೆಚ್ಚು ಸಾಲವನ್ನು ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
August 8, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಮುಂದಿನ ಗಾಲಿಯ ಟೈರ್ ಬ್ಲಾಸ್ಟ್ ಆಗಿ ಅಕ್ಕಿ ಲಾರಿಯೊಂದು ಪಲ್ಟಿಯಾದ ಘಟನೆ ಹುಬ್ಬಳ್ಳಿಯ ಕುಂದಗೋಳ ರಿಂಗ್ ರೋಡ್‌ನಲ್ಲಿ ಈಗಷ್ಟೇ ನಡೆದಿದೆ. ಅಕ್ಕಿ ಪಾಕೆಟ್ ಹೊತ್ತು ದಾವಣಗೆರೆಯಿಂದ ಅಹ್ಮದಾಬಾದ್‌ಗೆ ಹೋಗುತ್ತಿದ್ದ ಲಾರಿಯ ಮುಂದಿನ ಗಾಲಿಯ ಟೈರ್ ಏಕಾಏಕಿ ಬ್ಲಾಸ್ಟ್ ಆಗಿದೆ. ಪರಿಣಾಮ ಲಾರಿ ನೆಲಕ್ಕೂರುಳಿದೆ. ಅದೃಷ್ಟವಶಾತ್ ಲಾರಿ ಚಾಲಕ ಮತ್ತು ನಿರ್ವಾಹಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
August 8, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಜರ್ಮನಿಯ ಬರ್ಲಿನ್‌ನಲ್ಲಿ ಜುಲೈ 28ರಿಂದ ಆಗಸ್ಟ್ 5ರವರೆಗೆ ನಡೆದ 8ನೇ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಭಾರತ ತಂಡ 20 ಚಿನ್ನದ ಪದಕಗಳೊಂದಿಗೆ ಅಭೂತಪೂರ್ವ ಸಾಧನೆ ಮಾಡಿ ಸ್ವದೇಶಕ್ಕೆ ಮರಳಿದೆ. ಅಲ್ಲದೇ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪದ ದೇವಪ್ಪ ಮೋರೆ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಂಡಿದ್ದು ಸ್ವಗ್ರಾಮಕ್ಕೆ ಆಗಮಿಸಿದ ಅವರನ್ನು ಗ್ರಾಮಸ್ಥರು ಹೆಗಲ ಮೆಲೆ ಹೊತ್ತೊಯ್ದು ಸ್ವಾಗತಿಸಿದರಲ್ಲದೇ ಭಾರತದ ತ್ರಿವರ್ಣ ಧ್ವಜವನ್ನು ಜರ್ಮನಿಯ ನೆಲದಲ್ಲಿ ಹಾರಿಸಿದ …
Read More »
BigTv News
August 8, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಅಂತರರಾಜ್ಯ ಡ್ರಗ್ಸ್ ಪೆಕ್ಟರ್‌ಗಳೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಹುಬ್ಬಳ್ಳಿ ಮೂಲದ ಯುವಕನನ್ನು ತಮಿಳುನಾಡಿನ ಪೊಲೀಸರು ಬಂಧಿಸಿ ಹುಬ್ಬಳ್ಳಿ ಗ್ರಾಮೀಣ ಹಾಗೂ ಉಪನಗರ ಠಾಣೆಗೆ ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಸೂರಜಗೌಡ ಕಾನಗೌಡರ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ನಗರದ ಜನತಾ ಬಜಾರ್‌ನಲ್ಲಿರುವ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕ. ಈತ ಕಳೆದ ಹಲವು ತಿಂಗಳಿಂದ ಅಂತರರಾಜ್ಯ ಡ್ರಗ್ ಪೆಡಲರ್‌ಗಳೊಂದಿಗೆ ನಂಟು ಹೊಂದಿದ್ದು, ಈ ಹಿನ್ನೆಲೆಯಲ್ಲಿ ತಮಿಳನಾಡಿನ …
Read More »
BigTv News
August 7, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಸಂಯೋಜಕರಾದ ಶ್ರೀಪಾದ ಹೆಗಡೆ ಧಾರವಾಡದಂತಹ ಸಾಂಸ್ಕೃತಿಕ ನಗರಿಯಲ್ಲಿ ವಿವಿಧ ರೀತಿಯ ವೈವಿಧ್ಯಮಯ ಸಂಗೀತ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವುದು ಪ್ರತಿಷ್ಠಾನದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿ ಮತ್ತು ಬಾಪು ಪದ್ಮನಾಭ ಅವರ ಕೊಳಲುವಾದನ ಕೇಳುಗರ ಮನಗೆದ್ದಿದ್ದು ಅವರ ಸಂಗೀತ ಸಾಧನೆಗೆ ಸಿಗುವ ಫಲ ಎಂದು ಖ್ಯಾತ ಸಂಗೀತ ಸಂಯೋಜಕರು ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರರಾದ ಪಂ. ಶ್ರೀಪಾದ ಹೆಗಡೆಯವರು ಹೇಳಿದರು.ಅವರು ನಗರದ ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ ಧಾರವಾಡ ಹಾಗೂ ಕನ್ನಡ …
Read More »
BigTv News
August 7, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: “ನಾವು ಭೋವಿ ಜನಾಂಗ, ಕಲ್ಲು ಹೊಡೆಯುವ ಸಮಾಜ, ಸದಾ ಎಚ್ಚರವಾಗಿರುತ್ತೇವೆ ಎಂಬುದನ್ನು ಮರೆಯಬೇಡಿ. ಭೋವಿ, ಬಂಜಾರ ಅಲೆಮಾರಿಗಳ ಮೀಸಲಾತಿಗೆ ಕೈ ಹಾಕಿದರೆ ಪರಿಸ್ಥಿತಿ ನೆಟ್ಟಗಿರೊಲ್ಲ”ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿಂದು ಕರ್ನಾಟಕ ರಾಜ್ಯ ಮೀಸಲಾತಿ ಒಕ್ಕೂಟದಿಂದ ಆಯೋಜಿಸಿದ್ದ ಸಂವಿಧಾನದ ಸಾಧನೆ ಮತ್ತು ಸವಾಲುಗಳ ಪರಾಮರ್ಶೆಗಾಗಿ ಮೀಸಲಾತಿ ಸಂರಕ್ಷಣಾ ರಾಜ್ಯ ಸಮಾವೇಶದಲ್ಲಿ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಸನ್ಮಾನ …
Read More »
BigTv News
August 7, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಕಾವೇರಿ ಭಾಗದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುವ ಮುನ್ನ ನಾಲೆಗಳಿಗೆ ನೀರು ಹರಿಸಿ, ರಾಜ್ಯದ ರೈತರ ಹಿತ ಕಾಪಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರುಜಲದರ್ಶಿನಿ ಸರಕಾರಿ ಅತಿಥಿಗೃಹದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸಂಕಷ್ಟ ಕಾಲದಲ್ಲೂ ಸ್ಥಳೀಯ ರೈತರನ್ನು ನಿರ್ಲಕ್ಷಿಸಿ ಕಬಿನಿ, ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿ, ಅಚ್ಚುಕಟ್ಟು ಭಾಗದ ರೈತರನ್ನು ಬಲಿ ಕೊಡುವುದು ಸರಿಯಲ್ಲ. ಜಲಾಶಯದ ಎಲ್ಲ …
Read More »
BigTv News
August 7, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಜಮೀನು ವಿವಾದದ ಹಿನ್ನೆಲೆಯಲ್ಲಿ ಮರಕ್ಕೆ ಕಟ್ಟಿಹಾಕಿ ಥಳಿಸಿದ್ದರಿಂದ ಅವಮಾನಿತರಾಗಿ, ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಮೃತರ ಪತ್ನಿ ನೀಡಿದ ದೂರಿನಂತೆ ಮೂವರ ವಿರುದ್ಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹುಣಸೂರು ತಾಲೂಕಿನ ಕುಡಿನೀರು ಮುದ್ದನಹಳ್ಳಿ ಗ್ರಾಮದ ಗುರುರಾವ್ ಭಾಂಗೆ (60) ಆತ್ಮಹತ್ಯೆಗೆ ಶರಣಾದವರು. ಇವರಿಗೆ ಪತ್ನಿ, ಮಕ್ಕಳಿದ್ದಾರೆ. ಪತಿಯ ಆತ್ಮಹತ್ಯೆಗೆ ಗ್ರಾಮದ ಮಹೇಶ್ ಮತ್ತವರ ಪತ್ನಿ ಸಾಕಮ್ಮ …
Read More »
BigTv News
August 7, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
.ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ 200 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯೋಜನೆಗೆ ಅರ್ಹವಾದ 35.90 ಲಕ್ಷ ಕುಟುಂಬಗಳ ಪೈಕಿ 29.09 ಲಕ್ಷ ಕುಟುಂಬಗಳು (ಶೇ 81.03) ನೋಂದಣಿ ಮಾಡಿಕೊಂಡಿವೆ. ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಸರ್ಕಾರವು ಜೂನ್‌ನಲ್ಲಿ ಆರಂಭಿಸಿತ್ತು. ಜುಲೈ ತಿಂಗಳಿನಿಂದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಹೆಸ್ಕಾಂ …
Read More »