Breaking News

ಸುದ್ದಿ

ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈವಿರುದ್ಧ ಎಫ್ಐಆರ್ ದಾಖಲು…

ಬೆಂಗಳೂರು: ನ್ಯಾಯಾಲಯದ ಆದೇಶದ ಮೇರೆಗೆ ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಸೇರಿ ನಾಲ್ವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಮ್ಮ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ರಿಯಲ್‌ ಎಸ್ಟೇಟ್ ಉದ್ಯಮಿ ಶ್ರೀನಿವಾಸ್ ನಾಯ್ಡು ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ, ಸಹಚರರಾದ ತಾರಿಕ್ ರೆಹಾನ್, ಫರ್ಹಾನ್ …

Read More »

ನರೇಂದ್ರ ಮೋದಿ ಅವರಿಗೆ ಲೋಕಮಾನ್ಯ ಬಾಲಗಂಗಾಧರ್​ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ….

ಪುಣೆ(ಮಹಾರಾಷ್ಟ್ರ): ಮಹಾರಾಷ್ಟ್ರ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಇಂದು ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಮಾನ್ಯ ಬಾಲಗಂಗಾಧರ್​ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಮೈತ್ರಿಕೂಟದ ಭಾಗವಾಗಿರುವ ಎನ್‌ಸಿಪಿ ನಾಯಕ ಶರದ್ ಪವಾರ್ ಅವರು ಕೂಡ ವೇದಿಕೆ ಹಂಚಿಕೊಂಡು ಕುತೂಹಲ ಮೂಡಿಸಿದರು. ಈ ಪ್ರಶಸ್ತಿ ಪಡೆದ 41ನೇ ವ್ಯಕ್ತಿ ಮೋದಿ ಅವರಾಗಿದ್ದಾರೆ. ಮಾಜಿ ರಾಷ್ಟ್ರಪತಿಗಳಾದ ಡಾ. ಶಂಕರ್ ದಯಾಳ್ ಶರ್ಮಾ, ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ …

Read More »

ಇಂಗ್ಲೆಂಡ್​ ವೇಗಿ ಸ್ಟುವರ್ಟ್ ಬ್ರಾಡ್ ದಾಖಲೆ ನಿರ್ಮಾಣ..

ಲಂಡನ್: ಕ್ರಿಕೆಟ್​​ ವೃತ್ತಿಜೀವನದ ಅಂತಿಮ ಇನ್ನಿಂಗ್ಸ್​​ನಲ್ಲಿ ಇಂಗ್ಲೆಂಡ್​ ವೇಗಿ ಸ್ಟುವರ್ಟ್ ಬ್ರಾಡ್ ಎರಡು ವಿಕೆಟ್​ಗಳನ್ನು ಪಡೆದು ದಾಖಲೆ ನಿರ್ಮಿಸಿದರೆ, ಅತ್ತ ಆ್ಯಶಸ್ ಐದನೇ ಪಂದ್ಯವನ್ನು ಇಂಗ್ಲೆಂಡ್ 49 ರನ್​ನಿಂದ ಗೆದ್ದು ಸರಣಿ ಸಮಬಲ ಸಾಧಿಸಿದ ತೃಪ್ತಿಯನ್ನು ಪಡೆದುಕೊಂಡಿತು. ನಾಲ್ಕನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೇ 135 ರನ್‌ ಗಳಿಸಿತ್ತು. ಐದನೇ ದಿನದ ಆಟ ಮಳೆಯಿಂದಾಗಿ ಕೊಂಚ ತಡವಾಗಿ ಆರಂಭವಾದರೂ ಆಸಿಸ್​ ಆಟಗಾರರು ಉತ್ತಮ ಲಯದಲ್ಲಿ ಬ್ಯಾಟ್​ ಬೀಸಿದರು. ಆರಂಭಿಕರು …

Read More »

ಸಿದ್ದರಾಮಯ್ಯನವರು ಸಭೆಯಲ್ಲಿ ಯಾವುದೇ ಪತ್ರ ಹರಿದಿಲ್ಲ: ಸಂತೋಷ ಲಾಡ್

ಹುಬ್ಬಳ್ಳಿ: ಖರ್ಗೆಯವರು ದೆಹಲಿಯಲ್ಲಿ ಕರೆದಿರುವ ಸಭೆಯಲ್ಲಿ ಭಾಗವಹಿಸುತ್ತೇನೆ. ಪಕ್ಷ ಸಂಘಟನೆ, ಪಾಲಿಸಿ ಮೇಕಿಂಗ್, ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಲು ಕರೆದಿದ್ದಾರೆ. ಸಿದ್ದರಾಮಯ್ಯನವರು ಸಭೆಯಲ್ಲಿ ಯಾವುದೇ ಪತ್ರ ಹರಿದಿಲ್ಲ. ನಾನು ಸಭೆಯಲ್ಲಿ ಇದ್ದೆ. ಲೆಟರ್ ಹರಿದಿದ್ದಂತೂ ನಾನು ನೋಡಿಲ್ಲ. ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ವೀಕರಿಸಲಾಗುತ್ತಿದೆ. ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಹಣ ನೀಡಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತಾನಾಡಿದ ಅವರು, ಅಸಮಾಧಾನಗೊಂಡ ಶಾಸಕರ ಪತ್ರವನ್ನು …

Read More »

ಹುಬ್ಬಳ್ಳಿ ಧಾರವಾಡ ಅವಳಿ ನಗರದ ಆಟೋ ಚಾಲಕರಿಂದ ಬೃಹತ್ ಪ್ರತಿಭಟನೆ…

ಹುಬ್ಬಳ್ಳಿ : ಶಕ್ತಿ ಯೋಜನೆಯಿಂದ ಆಟೋ ಚಾಲಕರಿಗೆ ಅನ್ಯಾಯವಾಗುತ್ತಿದೆ. ಸರಿಯಾದ ದುಡಿಮೆ ಇಲ್ಲದೆ ಪರದಾಡುತ್ತಿರುವ ಹಿನ್ನಲೆಯಲ್ಲಿ, ಇಂದು ಹುಬ್ಬಳ್ಳಿ ಧಾರವಾಡ ಅವಳಿ ನಗರದ ಆಟೋ ಚಾಲಕರ ಸಂಘ ಸಂಪೂರ್ಣ ಆಟೋ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್‌ನಲ್ಲಿ ಪ್ರತಿಭಟನೆ ಮಾಡಿದ ಆಟೋ ಚಾಲಕರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಆಟೋ ಚಾಲಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕೆಂದು ಆಗ್ರಹಿಸಿದರು. ಇನ್ನು, ಆಟೋ ಚಾಲಕರ ಪ್ರತಿಭಟನೆ ಹಿನ್ನೆಲೆಯಲ್ಲಿ, ಜಿಲ್ಲಾ …

Read More »

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಅತ್ಯಾಚಾರ…

ಬೀದರ್​: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಮನುಕುಲವೇ ತಲೆ ತಗ್ಗಿಸುವಂಥ ದುಷ್ಕೃತ್ಯ ಬೆಳಕಿಗೆ ಬಂದಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ರಾತ್ರಿ ಹೊತ್ತಿನಲ್ಲಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆರೋಪಿ ಮಗಳ ಬಾಯಿ ಮುಚ್ಚಿ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ. ಬಾಲಕಿ ಈ ವಿಷಯವನ್ನು ತನ್ನ ತಾಯಿಗೆ ತಿಳಿಸಿದ್ದು ಕೇಳಲು ಬಂದ ಪತ್ನಿಯನ್ನೇ ಥಳಿಸಿ …

Read More »

ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ…

ಬೆಂಗಳೂರು: ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ. ವಿಜಯಪುರ ಪಟ್ಟಣದ ನಿವಾಸಿ ರಮೇಶ್ (28) ಹಾಗು ಸಹನಾ (26) ಸಾವಿಗೆ ಶರಣಾದವರು. ಪ್ರೀತಿಸಿ ಮನೆಯವರ ವಿರೋಧದ ನಡುವೆ ಇವರು ಮದುವೆಯಾಗಿದ್ದರು. ವಿವಾಹವಾಗಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ರಮೇಶ್ ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ದಿನದ ಹಿಂದೆ ಬಿಜ್ಜವಾರ ಗ್ರಾಮದ ಸಂಬಂಧಿಕರ ಮನೆಗೆ ಇಬ್ಬರೂ …

Read More »

ಭಾರತ ತೊರೆಯಲು ಯೋಜಿಸುತ್ತಿರುವುದು ಪ್ರಧಾನಿ ಮೋದಿ: ಲಾಲೂ ಪ್ರಸಾದ್ ಯಾದವ್​​

ಪಾಟ್ನಾ(ಬಿಹಾರ) : “ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭಯದಲ್ಲಿದ್ದಾರೆ. ಸೋತ ಬಳಿಕ ಅವರು ವಿದೇಶದಲ್ಲಿ ಹೋಗಿ ನೆಲೆಯೂರಲು ಯೋಚನೆ ಮಾಡುತ್ತಿದ್ದಾರೆ” ಎಂದು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್​​ ಭಾನುವಾರ ಟೀಕಿಸಿದರು.ಕೆಲವು ದಿನಗಳ ಹಿಂದೆ ಮೋದಿ ಮಾಡಿದ್ದ ‘ಕ್ವಿಟ್​ ಇಂಡಿಯಾ’ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಭಾರತ ತೊರೆಯಲು ಯೋಜಿಸುತ್ತಿರುವುದು ಪ್ರಧಾನಿ ಮೋದಿ. ಇದೇ ಕಾರಣಕ್ಕಾಗಿಯೇ ಅವರು ಪದೇ …

Read More »

ವಿಚಿತ್ರ ಹಾಗೂ ನಿಗೂಢ ರೀತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆ…

ಶಹದೋಲ್ (ಮಧ್ಯಪ್ರದೇಶ):ಶಹದೋಲ್ ಜಿಲ್ಲೆಯಲ್ಲಿ ವಿಚಿತ್ರ ಹಾಗೂ ನಿಗೂಢ ರೀತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಸಿಕ್ಕಿದೆ. ಮಹಿಳೆಯ ತಲೆಕೂದಲುಗಳನ್ನು ಕತ್ತರಿಸಲಾಗಿದೆ. ಮೃತದೇಹದಿಂದ ಕಣ್ಣು, ಮೂಗು, ಕಿವಿ ಹಾಗು ನಾಲಿಗೆ ಕಾಣೆಯಾಗಿವೆ. ಮೃತದೇಹದ ಪ್ರಮುಖ ಅಂಗಾಂಗಳು ಕಾಣೆಯಾಗಿದ್ದರಿಂದ ಪ್ರಕರಣದ ತನಿಖೆ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ನಿಗೂಢ ಕೊಲೆ ಪ್ರಕರಣದ ಹಿಂದೆ ಬಿದ್ದಿರುವ ಪೊಲೀಸರು, ಆರೋಪಿಗಳಿಗೆ ಶೋಧ ತೀವ್ರಗೊಳಿಸಿದ್ದಾರೆ. ಸಂಪೂರ್ಣ ವಿವರ: ಶಹದೋಲ್ ಜಿಲ್ಲೆಯ ಜೈತ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಟಪರಿಹ ಟೋಳದ 55 …

Read More »

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ…

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆ ಹಾಗೂ ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಇನ್ನೊಂದು ವಾರದಲ್ಲಿ ಖಾಲಿ ಇರುವ ಮೂರು ಪ್ರಮುಖ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ರಾಜ್ಯದ ಎರಡು ಪ್ರಬಲ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗ ಜೊತೆ ಹಿಂದುಳಿದ ವರ್ಗಗಳ ಸಮೀಕರಣದೊಂದಿಗೆ ಆಯಕಟ್ಟಿನ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂದು …

Read More »