BigTv News
July 19, 2023
News, ಕರ್ನಾಟಕ, ಗದಗ, ಸುದ್ದಿ
ಲಕ್ಷ್ಮೇಶ್ವರ: ಗದಗ ಹೌದು ಲಕ್ಷ್ಮೇಶ್ವರ ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ವಿದ್ಯಾರ್ಥಿಗಳು ಜಿಟಿಜಿಟಿ ಮಳೆ ಲೆಕ್ಕಿಸದೆ ರಸ್ತೆ ದುರಸ್ತಿ ಮಾಡಿಕೊಡಿ ಎಂದು ಪುರಸಭೆಯ ಮುಂದೆ ಪ್ರತಿಭಟನೆ ನಡೆಸಿದರು.. ತಾಯಿ ಪಾರ್ವತಿ ಮಕ್ಕಳ ಬಳಗವು ಅನೇಕ ವರ್ಷಗಳಿಂದ ಲಕ್ಷ್ಮೇಶ್ವರ ಹಾಗೂ ಸುತ್ತಮುತ್ತಲಿನ ಗ್ರಾಮದ ಮಕ್ಕಳಿಗೆ ಅಕ್ಷರಜ್ಞಾನ ನೀಡುತ್ತಾ ಬಂದಿದೆ.ಇಲ್ಲಿ ಸುಮಾರು 1600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದೆ. ತೋಟದೇವರಮಠದಲ್ಲಿ ಬೃಹತ ಕಟ್ಟಡವನ್ನು ಹೊಂದಿದೆ ಇಲ್ಲಿಗೆ ಸಾವಿರಾರು ಮಕ್ಕಳು ವ್ಯಾಸಂಗ ಮಾಡಲು ಬರುತ್ತಾರೆ …
Read More »
BigTv News
July 19, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ
ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಲಕ್ಷ್ಮೀನಗರದ ಹೊರವಲಯದಲ್ಲಿ ಕುರಿಗಾರರು ಕುರಿ ಮೇಯಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಶೇಖಪ್ಪ ಸೋಮಣ್ಣ ಬಿಂಗಿ ಎಂಬುವರಿಗೆ ಸೇರಿದ ಒಂದು ಕುರಿ ಸಾವನ್ನಪ್ಪಿದೆ ಇನ್ನುಳಿದ ಕುರಿಗಳನ್ನು ಕುರಿಗಾರರು ರಕ್ಷಿಸಿದ್ದಾರೆ. ಸ್ಥಳಕ್ಕೆ ಹೆಸ್ಕಾಂ & ಕಂದಾಯ ಅಧಿಕಾರಿಗಳು ಹಾಗೂ ಪಶು ವೈದ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಸೂಕ್ತ ಪರಿಹಾರ ಒದಗಿಸುವಂತೆ ಸ್ಥಳೀಯ ಮುಖಂಡರಾದ ನೀಲಪ್ಪ ಪಡಗೇರಿ ಸರಕಾರವನ್ನು ಅಗ್ರಹಿಸಿದ್ದಾರೆ.
Read More »
BigTv News
July 19, 2023
News, ಆಗ್ರಾ, ಸುದ್ದಿ
ಆಗ್ರಾ (ಉತ್ತರಪ್ರದೇಶ):ವ್ಯಾಪಕ ಮಳೆಯಿಂದಾಗಿ ಯಮುನಾ ನದಿ ಉಕ್ಕೇರಿದ್ದು, ದೆಹಲಿಯನ್ನು ಮುಳುಗಿಸಿದೆ. ಇತ್ತ ಅದೇ ನದಿ ದಡದ ಮೇಲಿರುವ ತಾಜ್ಮಹಲ್ವರೆಗೂ ನೀರು ನುಗ್ಗಿದೆ. ಐತಿಹಾಸಿಕ ಮಹಲ್ನ ಗೋಡೆಗಳವರೆಗೆ ನೀರು ಬಂದು ನಿಂತಿದೆ. ಇಷ್ಟಾದರೂ ಇದರಿಂದ ಸ್ಮಾರಕಕ್ಕೆ ಯಾವುದೇ ಅಪಾಯವಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತಿಳಿಸಿದೆ. ನದಿನೀರಿನ ಮಟ್ಟವು 499 ಅಡಿಗಳಷ್ಟು ಮೇಲೆ ಬಂದಿದೆ. ಇದು ಮಧ್ಯಮ ಪ್ರವಾಹದ ಮಟ್ಟವಾಗಿದೆ. ಮಂಗಳವಾರ ಈ ಭಾಗದಲ್ಲಿ 499.97 ಅಡಿಯಷ್ಟು ನೀರು ಬಂದ …
Read More »
BigTv News
July 19, 2023
News, ಉತ್ತರ ಕನ್ನಡ, ಕರ್ನಾಟಕ, ಸುದ್ದಿ
ಕಾರವಾರ (ಉತ್ತರ ಕನ್ನಡ) : ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಸರ್ಕಾರ ನಾನಾ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಆದರೂ ಸರ್ಕಾರಿ ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಲೇ ಇದೆ. ಇದಕ್ಕೆ ಉದಾಹರಣೆ ಎಂಬಂತೆ ಗಡಿ ಜಿಲ್ಲೆ ಉತ್ತರ ಕನ್ನಡದಲ್ಲಿ ಸರ್ಕಾರಿ ಶಾಲೆಗಳು ಅವನತಿಯತ್ತ ಸಾಗಿದ್ದು, ಕಳೆದ 6 ವರ್ಷಗಳಲ್ಲಿ ಬರೋಬ್ಬರಿ 13 ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳೇ ಇಲ್ಲದೇ ಬಾಗಿಲು ಮುಚ್ಚಿವೆ.ಹೌದು, ಕಾರವಾರ ಕರ್ನಾಟಕದ ಗಡಿ ಪ್ರದೇಶವಾಗಿದ್ದು, ಗೋವಾ ಗಡಿಯಲ್ಲಿ …
Read More »
BigTv News
July 19, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನಿವೃತ್ತಿ ಹೊಂದಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಎಲ್ ಜೀವಣ್ಣವರ ಅವರಿಗೆ ಶಾಲ ಹೊದಿಸಿ ಸನ್ಮಾನಿಸಲಾಯಿತು ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್ ಎಲ್ ಜಿವಣ್ಣವರ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಲ್ಲರೂ ನನ್ನ ಮೇಲೆ ಪ್ರೀತಿ ವಿಶ್ವಾಸದಿಂದ ನೋಡಿಕೊಂಡಿದ್ದಾರೆ ಅವರನ್ನು ಎಂದಿಗೂ ನಾನು ಮರೆಯುವುದಿಲ್ಲ ಎಂದು ಹೇಳಿದ ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ …
Read More »
BigTv News
July 19, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಬೆಂಗಳೂರಿನ ಸುಲ್ತಾನ್‌ಪಾಳ್ಯ ಎಂಬ ಪ್ರದೇಶದಲ್ಲಿ ಸಿಸಿಬಿ ಪೊಲೀಸರು ಇಂದು ಐದು ಜನ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಉಗ್ರ ಸಂಘಟನೆಗಳು ಗರಿಗೆದರಿವೆ ಎಂದಿದ್ದಾರೆ. ಬೆಂಗಳೂರಲ್ಲಿ ಸಿಕ್ಕ ಶಂಕಿತ ಉಗ್ರರ ಬಳಿ ಪಿಸ್ತೂಲ್, ಸಜೀವ ಗುಂಡು, ಸ್ಯಾಟೈಟ್ ಫೋನ್ ಸೇರಿದಂತೆ ಅನೇಕ ವಸ್ತುಗಳು ಸಿಕ್ಕಿವೆ. ಸುಲ್ತಾನ್‌ಪಾಳ್ಯ ಎಂಬ ಪ್ರದೇಶದ ಒಂದು ಮನೆಯಲ್ಲಿ …
Read More »
BigTv News
July 19, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರುನಗರದಲ್ಲಿ ಭಾರಿ ಸ್ಫೋಟ ಎಸಗಲು ದೊಡ್ಡ ಮಟ್ಟದಲ್ಲಿ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದೇಶದ್ರೋಹ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಈ ಕುರಿತು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತುರ್ತು ಮಾಧ್ಯಮಗೋಷ್ಠಿ ನಡೆಸಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು …
Read More »
BigTv News
July 19, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಗಂಭೀರ ಆರೋಪದಡಿ ಐವರು ಶಂಕಿತ ಉಗ್ರರನ್ನು ನಗರ ಪೊಲೀಸರು ಇಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ ನಿಲ್ದಾಣ ಸೇರಿದಂತೆ ನಗರದ ಜನಸಂದಣಿ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸಲು ಹೊಂಚು ಹಾಕುತ್ತಿದ್ದ ಆರೋಪದಡಿ ಸುಹೇಲ್, ಉಮರ್, ಜಾಹಿದ್, ಮುದಾಸಿರ್ ಹಾಗೂ ಫೈಜರ್ ಎಂಬವರನ್ನು ಬಂಧಿಸಲಾಗಿದೆ. ಇವರಿಂದ 7 ಕಂಟ್ರಿಮೇಡ್ ಪಿಸ್ತೂಲ್ಗಳು, 45 ಜೀವಂತ ಗುಂಡುಗಳು, ವಾಕಿಟಾಕಿ ಸೆಟ್ಸ್, ಒಂದು ಡ್ರ್ಯಾಗರ್ ಹಾಗೂ 12 ಮೊಬೈಲ್ …
Read More »
BigTv News
July 19, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ
ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘದ 134 ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಜುಲೈ 20 ರಿಂದ 24 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ತಿಳಿಸಿದರು. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕನ್ನಡಿಗರ ಹಿರಿಮೆ ಹೆಚ್ಚಿಸಿದ ಕರ್ನಾಟಕ ವಿದ್ಯಾವರ್ಧಕ ಸಂಘದ ಧಾರವಾಡ 134 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ನಿವೃತ್ತ ಐಪಿಎಸ್ ಅಧಿಕಾರಿ ಶಂಕರ …
Read More »
BigTv News
July 19, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ
ಧಾರವಾಡ: ಯಾರೋ ಪಾಪಿಗಳು ನವಜಾತ ಗಂಡು ಶಿಶುವನ್ನು ಚರಂಡಿಯಲ್ಲಿ ಎಸೆದು ಹೋದ ಘಟನೆ ಧಾರವಾಡದಲ್ಲಿ ನಡೆದಿದೆ. ಸದ್ಯ ಶಿಶುವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡದ ರೌನಕಪುರ ಮಸ್ಟೀದ್ ಉರ್ದು ಶಾಲೆಯ ಬಳಿ ಚರಂಡಿಯಲ್ಲಿ ಈ ಶಿಶು ಪತ್ತೆಯಾಗಿದೆ. ಈ ಶಿಶುವನ್ನು ಬಾಲಕನೋರ್ವ ಗಮನಿಸಿದ್ದಾನೆ. ಸುರಿವ ಮಳೆಯಲ್ಲಿ ಚರಂಡಿಯಲ್ಲಿ ಶಿಶು ಬಿದ್ದಿತ್ತು. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಬಂದ ಶಹರ ಠಾಣೆ ಪೊಲೀಸರು ಆ …
Read More »