BigTv News
July 19, 2023
News, Uncategorized, ಕರ್ನಾಟಕ, ಕಲೆ, ಜಿಲ್ಲೆ, ಧಾರವಾಡ, ಸುದ್ದಿ
ಧಾರವಾಡ: ಅಯೋಧ್ಯೆಯ ರಾಮಮಂದಿರ ಪ್ರದೇಶದಲ್ಲಿ ಜು.21 ರಿಂದ 28ರವರೆಗೆ ವಿಶ್ವ ಪರಿಷತ್ ವತಿಯಿಂದ ಚತುರ್ವೇದ ಸಂಹಿತಾ ಯಾಗ, ಶ್ರೀಮದ್ ಭಾಗವತ ಹಾಗೂ ವಾಲ್ಮೀಕಿ ರಾಮಾಯಣದ ಪಾರಾಯಣ ಹಾಗೂ ಯಾಗ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಧಾರವಾಡದ ವೈದಿಕ ವಿದ್ವಾಂಸ ಗಿರೀಶ ಶೆಲ್ಲಿಕೇರಿ ಪಾಲ್ಗೊಳ್ಳಲಿದ್ದಾರೆ. ಧಾರ್ಮಿಕ ಕಾರ್ಯಕ್ರಮಕ್ಕೆ ವಿವಿಧೆಡೆಯಿಂದ 40 ವೈದಿಕ ವಿದ್ವಾಂಸರು ತೆರಳಲಿದ್ದಾರೆ. ಶುಕ್ಲ ಯಜುರ್ವೇದದ 3,000 ಶ್ಲೋಕ ಸೇರಿ 1.30 ಲಕ್ಷ ಶ್ಲೋಕಗಳ ಮೂಲಕ ಆಹುತಿ ನೀಡಲಾಗುವುದು. ವಿದ್ವಾಂಸ ಗಿರೀಶ ಅವರು …
Read More »
BigTv News
July 18, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಅವಳಿನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ನೀಡಿರುವ ಸರ್ಕಾರ ಈಗ ಮತ್ತೊಂದು ವಿನೂತನ ಪ್ರಯೋಗದ ಮೂಲಕ ಈ ಭಾಗದ ಜನರಿಗೆ ಗುಣಮಟ್ಟದ ಸೇವೆ ಒದಗಿಸಲು ಚಿಂತನೆ ನಡೆಸಿದೆ. ಅವಳಿ ನಗರಗಳ ನಡುವೆ ಬಿ.ಆರ್.ಟಿ.ಎಸ್ ಬಸ್ಸಿನ ಜೊತೆಗೆ ಲಘು ರೈಲು ಸಾರಿಗೆಯನ್ನು ಪರಿಚಯಿಸಲು ಸರ್ಕಾರ ಮುಂದಾಗಿದೆ. ಒಂದು ವೇಳೆ, ಈ ಯೋಜನೆಯು ಕಾರ್ಯರೂಪಕ್ಕೆ ಬಂದರೆ, ದೇಶದಲ್ಲೇ ಮೊದಲ ಬಾರಿಗೆ ಲಘು ರೈಲು ಸಾರಿಗೆಯನ್ನು ಹುಬ್ಬಳ್ಳಿ-ಧಾರವಾಡ ಮಹಾನಗರಗಳು …
Read More »
BigTv News
July 18, 2023
News, ದೆಹಲಿ, ಸುದ್ದಿ
ನವದೆಹಲಿ :ಬೆಂಗಳೂರಿನಲ್ಲಿ ಸಭೆ ನಡೆಸುತ್ತಿರುವ ವಿರೋಧ ಪಕ್ಷಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಇದು ಭ್ರಷ್ಟರ ಸಭೆ ಎಂಬುದು ಜನರಿಗೆ ಗೊತ್ತಾಗುತ್ತಿದೆ ಮತ್ತು ತಮ್ಮ ಭ್ರಷ್ಟಾಚಾರ ಬಯಲಿಗೆ ಬಂದಾಗ ಈ ಪಕ್ಷಗಳು ಪರಸ್ಪರ ರಕ್ಷಣೆಗೆ ಮುಂದಾಗುತ್ತವೆ ಎಂದಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್‌ನಲ್ಲಿರುವ ವೀರ್ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದ ನಂತರ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಿದರು. …
Read More »
BigTv News
July 18, 2023
News, ಕರ್ನಾಟಕ, ದೆಹಲಿ, ಸುದ್ದಿ
ನವದೆಹಲಿ : ದೆಹಲಿಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ದೆಹಲಿಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಭೆ ಇಂದು ಸಂಜೆ ನಡೆಯಲಿದ್ದು, ಸುಮಾರು 38 ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ವಾರ್ಥಕ್ಕಾಗಿ ವಿರೋಧ ಪಕ್ಷಗಳು ಸಭೆ ನಡೆಸುತ್ತಿವೆ. ತಮ್ಮ ಮೇಲಿನ 20 ಲಕ್ಷ ಕೋಟಿಗೂ ಅಧಿಕ ಭ್ರಷ್ಟಾಚಾರ ಪ್ರಕರಣವನ್ನು ಮುಚ್ಚಿಹಾಕಲು ಅವರು ಒಗ್ಗಟ್ಟಾಗಿದ್ದಾರೆ ಎಂದು ಟೀಕಿಸಿದರು. ಪ್ರಧಾನಿ …
Read More »
BigTv News
July 18, 2023
News, ಆಂಧ್ರ ಪ್ರದೇಶ, ಸುದ್ದಿ
ಅಮರಾವತಿ:ನಾಯಿಗಳಿಗೆ ಇರುವ ನಿಯತ್ತು, ಸ್ವಾಮಿನಿಷ್ಠೆ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇಂತಹದ್ದೇ ಒಂದು ಘಟನೆ ಇದೀಗ ನೆರೆಯ ಆಂಧ್ರ ಪ್ರದೇಶದಲ್ಲಿ ನಡೆದಿದೆ. ತನ್ನ ಪ್ರೀತಿಯ ಮಾಲಕಿ ಜೊತೆ ಒಡನಾಟ ಹೊಂದಿದ್ದ ನಾಯಿ, ಆಕೆ ಸತ್ತಿರುವುದು ತಿಳಿಯದೇ ಅವಳ ಬರುವಿಕೆಗೆ ಚಪ್ಪಲಿ ಬಳಿಯೇ ರಾತ್ರಿಯೆಲ್ಲಾ ಕಾದು ಕುಳಿತ ಮನಕಲಕುವ ಘಟನೆ ನಡೆದಿದೆ. ಅಂಬೇಡ್ಕರ್ ಕೊನಸೀಮಾ ಜಿಲ್ಲೆಯಲ್ಲಿ ಕಳೆದ ಭಾನುವಾರ 22 ವರ್ಷದ ಯುವತಿ ತನ್ನ ಮುದ್ದು ನಾಯಿ ಜೊತೆ ವಾಕಿಂಗ್ ಹೋಗಿದ್ದಳು. ಸೂರ್ಯಾಸ್ತದ …
Read More »
BigTv News
July 18, 2023
News, ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು :ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೆ ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಪಿರಿಯಾಪಟ್ಟಣ ಬಳಿಯ ಕಂಪಲಾಪುರ ಗ್ರಾಮದ ಬಳಿ ಇಂದು ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸೌದೆ ತುಂಬಿಕೊಂಡು ನಿಂತಿದ್ದ ಟ್ರಾಕ್ಟರ್ಗೆ ಕಂಪಲಾಪುರ ಬಳಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮುದಾಸಿರ್, ಮುಜಾಹಿದ್ ಹಾಗೂ ಅಹ್ಮದ್ ಪಾಷಾ …
Read More »
BigTv News
July 18, 2023
News, ದೆಹಲಿ, ವಾಣಿಜ್ಯ, ಸುದ್ದಿ
ನವದೆಹಲಿ : ಭಾರತೀಯ ಸ್ಟಾರ್ಟಪ್ ಉದ್ಯಮಕ್ಕೆ ಬರುತ್ತಿದ್ದ ಫಂಡಿಂಗ್ ಹಣಕಾಸು ವರ್ಷ 2023ರಲ್ಲಿ ಶೇ 70ರಷ್ಟು ಕುಸಿತ ಕಂಡು 15 ಶತಕೋಟಿ ಡಾಲರ್ಗೆ ತಲುಪಿದೆ. ಕಳೆದ ಹಣಕಾಸು ವರ್ಷ 2022ರಲ್ಲಿ ಸ್ಟಾರ್ಟಪ್ ಉದ್ಯಮದ ಫಂಡಿಂಗ್ ಗರಿಷ್ಠ ಮಟ್ಟಕ್ಕೇರಿ 50 ಶತಕೋಟಿ ಡಾಲರ್ಗೆ ತಲುಪಿತ್ತು. ಮಾರುಕಟ್ಟೆ ಸಂಶೋಧನಾ ಸಂಸ್ಥೆ ರೆಡ್‌ಸೀರ್‌ನ ವರದಿಯ ಪ್ರಕಾರ, ಬಂಡವಾಳ ಕುಸಿಯುತ್ತಿದ್ದಂತೆ, ಸ್ಟಾರ್ಟ್‌ಪ್‌ಗಳು ತಮ್ಮ ಖರ್ಚು ವೆಚ್ಚ ಕಡಿಮೆ ಮಾಡುತ್ತಿವೆ ಮತ್ತು ಲಾಭದಾಯಕತೆಯ ಹಾದಿಯನ್ನು ತ್ವರಿತಗೊಳಿಸುತ್ತಿವೆ. ಬಂಡವಾಳ …
Read More »
BigTv News
July 18, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಪತ್ನಿ ಮತ್ತು ಆಕೆಯ ಕುಟುಂಬಸ್ಥರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿ ಮಾನಸಿಕ ಕಿರುಕುಳ ನೀಡುತ್ತಿರುವ ಆರೋಪದಡಿ ಐಎಎಸ್ ಅಧಿಕಾರಿಯೊಬ್ಬರ ವಿರುದ್ದ ಕೊಡಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ಕೊಡಗು ಜಿಲ್ಲಾ ಪಂಚಾಯತ್ನಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ವಿರುದ್ಧ ಅವರ ಪತ್ನಿ ಡಾ. ವಂದನಾ ಈ ಆರೋಪ ಮಾಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಟಿ ಆರ್ ಸುರೇಶ್ ಅವರ ಪುತ್ರಿ …
Read More »
BigTv News
July 17, 2023
News, ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು:ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಸಸ್ಯೋದ್ಯಾನ (ಟ್ರೀ ಪಾರ್ಕ್) ಇಲ್ಲವೋ ಅಲ್ಲಿ ಸಾಲುಮರದ ತಿಮ್ಮಕ್ಕ ಟ್ರೀಪಾರ್ಕ್ಗಳನ್ನು ನಿರ್ಮಿಸುವಂತೆ ರಾಜ್ಯ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮೈಸೂರಿನ ಅರಣ್ಯ ಭವನದಲ್ಲಿ ಭಾನುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇಂದಿನ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯ ತಡೆಗೆ ವೃಕ್ಷ ಸಂಪತ್ತಿನ ಹೆಚ್ಚಳ ಅನಿವಾರ್ಯ ಎಂದರು. …
Read More »
BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ಇದನ್ನು ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡಿರುವುದು ಅನ್ನಬೇಕೋ, ಅಥವಾ ಪೊಲೀಸ್ ಸಿಬ್ಬಂದಿಯ ಅಸಹಾಯಕತೆ ಅನ್ನಬೇಕೋ ಗೊತ್ತಿಲ್ಲ. ಸಂಕಷ್ಟದಲ್ಲಿರುವವರಿಗೆ ತಕ್ಷಣ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಲು ಅನುಕೂಲವಾಗಲಿ ಎಂದು ಚಾಲ್ತಿಯಲ್ಲಿರುವ 112 ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಚಪ್ಪಲಿ ಕಳೆದು ಹೋಗಿದೆ. ಹುಡುಕಿಕೊಡಿ ಎಂದು ದೂರು ನೀಡಿರುವ ವಿಚಿತ್ರ ಘಟನೆ ತಡರಾತ್ರಿ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ಪೊಲೀಸ್ ನಿಯಂತ್ರಣ ಕೋಣೆಯ ಸಹಾಯವಾಣಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ …
Read More »