Breaking News

ಸುದ್ದಿ

ಎಲ್ಲಾ ಸಮಸ್ಯೆ ಮರೆತು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ……

ಬೆಂಗಳೂರು: ರಾಜ್ಯದಲ್ಲಿ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧ ಇದೆ. ಮಹಿಳೆಯರು ಬೇರೆಡೆ ಎಲ್ಲಿ ಬೇಕು ಅಲ್ಲಿ ಹಾಕಿಕೊಳ್ಳಲು ಅವಕಾಶ ಇದೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ. ಅದನ್ನು ವಾಪಸ್ ಪಡೆಯುವ ಪ್ರಶ್ನೆ ಎಲ್ಲಿ ಬಂತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಿ ಜನರ ದಾರಿ …

Read More »

ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ಅವರು ಭಾರತದ ಅತ್ಯಂತ ಯಶಸ್ವಿ ಕೈಗಾರಿಕೋದ್ಯಮಿಗಳಲ್ಲಿ ಒಬ್ಬರು…

ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ಅವರು ಭಾರತದ ಅತ್ಯಂತ ಯಶಸ್ವಿ ಕೈಗಾರಿಕೋದ್ಯಮಿಗಳಲ್ಲಿ ಒಬ್ಬರಾಗಿದ್ದಾರೆ. 83 ವರ್ಷ ವಯಸ್ಸಿನ ರತನ್ ಟಾಟಾ ಅವರು ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷರಾಗಿ ಅವರ ಕೆಲಸ ಮತ್ತು ಅವರ ಅಸಾಮಾನ್ಯ ದಯೆ, ಶಾಂತ ಸ್ವಭಾವಕ್ಕಾಗಿ ಗುರುತಿಸಲ್ಪಟ್ಟಿದ್ದಾರೆ. ರತನ್ ಟಾಟಾ ಅವರು ಡಿಸೆಂಬರ್ 28, 1937 ರಂದು ಮುಂಬೈನಲ್ಲಿ ಜನಿಸಿದರು ಮತ್ತು ಅವರ ತಂದೆ ನೇವಲ್ ಟಾಟಾ ಆಗಿದ್ದಾರೆ. ತಾಯಿ ಸೂನಿ ಟಾಟಾ ಆಗಿದ್ದಾರೆ. ಟಾಟಾ …

Read More »

ಅಮಿತ್‌ ಷಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ: ಸಿದ್ದರಾಮಯ್ಯ.

ಮೈಸೂರು: ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಕುರಿತು ವಿವರಿಸಲಾಗಿದ್ದು, ಡಿಸೆಂಬರ್‌ 23 ರಂದು ಅಮಿತ್‌ ಷಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಶುಕ್ರವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರಪರಿಹಾರ ಸೇರಿದಂತೆ ರಾಜ್ಯದ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅವುಗಳನ್ನು ಕೇಂದ್ರ …

Read More »

ಜಗದೀಶ್ ಶೆಟ್ಟರ್ ಅವರು ದೆಹಲಿಗೆ ಹೋಗಿ ಬಂದಿರುವುದು ಭಾರೀ ಕುತೂಹಲ ಕೆರಳಿಸಿದೆ……

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಮನೆಗೆ ಭೇಟಿ ಕೊಟ್ಟು ಬಂದ ಬಳಿಕ ಧಾರವಾಡ ಲೋಕಸಭಾ ಟಿಕೆಟ್ ಕುರಿತು ಸಾಕಷ್ಟು ಚರ್ಚೆಗಳು ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿವೆ. ಈ ಮಧ್ಯೆ ಜಗದೀಶ್ ಶೆಟ್ಟರ್ ಅವರು ದೆಹಲಿಗೆ ಹೋಗಿ ಬಂದಿರುವುದು ಭಾರೀ ಕುತೂಹಲ ಕೆರಳಿಸಿದೆ. ಈ ಕುರಿತು ನಗರದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್ ಅವರು, ವೈಯಕ್ತಿಕ ಕೆಲಸಗಳಿಗಾಗಿ ನಾನು ದೆಹಲಿಗೆ ಹೋಗಿದ್ದೆ, ಯಾವುದೇ ಹೈಕಮಾಂಡ್ …

Read More »

ಹೊಸ ವರ್ಷಾಚರಣೆಗೆ ನಾಡಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ‌ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮ…

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಹೊಸ ವರ್ಷ ಎದುರು ನೋಡುತ್ತಿದ್ದಾರೆ. ಇದರಲ್ಲಿ ಬಹುತೇಕರು ಹೊಸ ವರ್ಷಾಚರಣೆಗೆ ಸಿದ್ಧವಾಗಿದೆ ಈ ಸಂದರ್ಭದಲ್ಲಿ ನಾಡಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ‌ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ನಿರ್ದೇಶನ ನೀಡಿದರು.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪೊಲೀಸ್ ಇಲಾಖೆ, ಆರೋಗ್ಯ, ಅಬಕಾರಿ ಇಲಾಖೆ, ಬಿಬಿಎಂಪಿ, ಬಿಎಂಆರ್‌ಸಿಎಲ್, ಬಿಎಂಟಿಸಿಯ ಹಿರಿಯ ಅಧಿಕಾರಿಗಳ ಜೊತೆ ಶುಕ್ರವಾರ ನಡೆದ ಸಭೆಯಲ್ಲಿ ಅವರು …

Read More »

ನಾವು ನಮ್ಮ ದೇಶವನ್ನು ಹಿಂದೂಸ್ತಾನ್ ಎಂದು ಕರೆಯುತ್ತೇವೆ ಮತ್ತು ಹಿಂದಿ ನಮ್ಮ ರಾಷ್ಟ್ರೀಯ ಭಾಷೆ, ನಮಗೆ ಭಾಷೆ ತಿಳಿದಿರಬೇಕು: ನಿತೀಶ್ ಕುಮಾರ್.

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಟಿಆರ್ ಬಾಲು ಇಂಡಿಯಾ ಬ್ಲಾಕ್ ನಾಯಕರ ಸಭೆಯಲ್ಲಿ ಹಿಂದಿಯಲ್ಲಿ ಮಾಡಿದ ಭಾಷಣ ಅನುವಾದ ಮಾಡುವಂತೆ ಕೇಳಿದಾಗ ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ನಾಯಕ ನಿತೀಶ್ ಕುಮಾರ್ ಕಿಡಿ ಕಾರಿದ್ದಾರೆ. ನಿತೀಶ್ ಕುಮಾರ್ ಅವರು ಇಂಡಿಯಾ ಬ್ಲಾಕ್ ನಾಯಕರನ್ನು ಉದ್ದೇಶಿಸಿ ಮಾತನಾಡುವಾಗ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ಮತ್ತು ಟಿಆರ್ ಬಾಲು ಸಹ ಉಪಸ್ಥಿತರಿದ್ದರು. ನಿತೀಶ್ ಏನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು …

Read More »

ಟಾಟಾ ಹ್ಯಾರಿಯರ್, ಸಫಾರಿ ಕಾರುಗಳು, ವಯಸ್ಕರ ರಕ್ಷಣೆ ವಿಭಾಗದಲ್ಲಿ ಗರಿಷ್ಠ 32ಕ್ಕೆ 30.08 ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 44.54 ಅಂಕಗಳನ್ನು ಪಡೆದಿವೆ…..

ದೇಶದ ವಾಹನ ಸುರಕ್ಷತಾ ಪರೀಕ್ಷಾ ಸಂಸ್ಥೆ ‘ಭಾರತ್ ನ್ಯೂ ಕಾರ್ ಅಸೆಸ್ಮೆಂಟ್ ಪ್ರೋಗ್ರಾಂ’ (ಭಾರತ್ ಎನ್‌ಸಿಎಪಿ – Bharat NCAP), ಡಿ.15ರಿಂದ ಕಾರ್ಯಾರಂಭ ಮಾಡಿತ್ತು. ಟಾಟಾ ಹ್ಯಾರಿಯರ್ (Tata Harrier) ಮತ್ತು ಸಫಾರಿ (Safari)ಯನ್ನು ಭಾರತದಲ್ಲಿ ಕ್ರ್ಯಾಶ್ ಟೆಸ್ಟ್ ಮಾಡಿದ ಮೊದಲ ಕಾರುಗಳೆಂದು ಭಾರತ್ ಎನ್‌ಸಿಎಪಿ ಘೋಷಣೆ ಮಾಡಿದೆ. ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ (Adult Occupant Protection) ಹಾಗೂ ಮಕ್ಕಳ ರಕ್ಷಣೆ (Child Occupant …

Read More »

ಪ್ರಧಾನ ಮಂತ್ರಿಗೆ ಮಾಧ್ಯಮಗಳ ಮುಂದೆ ಬರುವ ತಾಕತ್ತು ಇಲ್ಲ: ಎಚ್‌ ವಿಶ್ವನಾಥ್‌.

ಮೈಸೂರು: ಸಂಸತ್‌ ನಲ್ಲಿ ಭದ್ರತಾ ಲೋಪಕ್ಕೆ ಭದ್ರತಾ ಸಿಬ್ಬಂದಿ ಕೊರತೆ ಕಾರಣ ಇದೆ. ಶೇ.40ರಷ್ಟು ಅಧಿಕಾರಿಗಳೇ ಇಲ್ಲ, ಇದೆಲ್ಲ ಹೊರಗೆ ಬರುತ್ತೆ ಅನ್ನುವ ಕಾರಣಕ್ಕೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಪ್ರಧಾನ ಮಂತ್ರಿಗೆ ಮಾಧ್ಯಮಗಳ ಮುಂದೆ ಬರುವ ತಾಕತ್ತು ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಸಂಸತ್ ಅಧಿವೇಶನದಿಂದ ಸಂಸದರ ಅಮಾನತು ವಿಚಾರವಾಗಿ ಮಾತನಾಡಿ, ಲೋಕಸಭೆ, ರಾಜ್ಯಸಭೆಯ ಒಟ್ಟು 142 ಸಂಸದರನ್ನು …

Read More »

ಟ್ರಾಫಿಕ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಮೆಟ್ರೋದ ನೀಲಿ, ಹಳದಿ, ಪಿಂಕ್ ಮಾರ್ಗದ ಕಾಮಗಾರಿಗಳು ಪ್ರಗತಿ…..

ಬೆಂಗಳೂರು ಮಹಾನಗರದ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿರುವ ನಮ್ಮ ಮೆಟ್ರೋದ ಹಲವು ಮಾರ್ಗಗಳ ಕಾಮಗಾರಿ ವೇಗ ಪಡೆದುಕೊಂಡಿದೆ. ಟ್ರಾಫಿಕ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಮೆಟ್ರೋದ ನೀಲಿ, ಹಳದಿ, ಪಿಂಕ್ ಮಾರ್ಗದ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಹತ್ವಾಕಾಂಕ್ಷೆಯ ಬೆಂಗಳೂರು ನಮ್ಮ ಮೆಟ್ರೋದ ಬ್ಲೂ ಲೈನ್ ಹಂತ 2A, ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆ ಆರ್ ಪುರ (ಹೊರ ವರ್ತುಲ ರಸ್ತೆ ಮಾರ್ಗ) ವರೆಗೆ ವ್ಯಾಪಿಸಿದ್ದು, ಯೋಜನೆಯ ಶೇ. 39% ಗರ್ಡರ್ ಲಾಂಚ್‌ಗಳನ್ನು …

Read More »

ಹೊಸ ವರ್ಷದ ಮೊದಲ ದಿನ ಕೆಲವು ಅದೃಷ್ಟದ ಗಿಡಗಳನ್ನು ಮನೆಗೆ ತನ್ನಿ….

ನಾವು ಈಗ 2023ರ ಅಂತ್ಯದಲ್ಲಿದ್ದೇವೆ. ಕೆಲವೇ ದಿನಗಳಲ್ಲಿ ನಾವು ಹೊಸ ವರ್ಷ 2024 ಅನ್ನು ಪ್ರವೇಶಿಸುತ್ತೇವೆ. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಎಲ್ಲರಿಗೂ ವರ್ಷಪೂರ್ತಿ ಚೆನ್ನಾಗಿರಬೇಕು ಎಂಬ ಆಸೆ ಇರುತ್ತದೆ. ನಿಮಗೂ ಇದೇ ರೀತಿ ಅನಿಸಿದರೆ ಹೊಸ ವರ್ಷದ ಮೊದಲ ದಿನ ಕೆಲವು ಅದೃಷ್ಟದ ಗಿಡಗಳನ್ನು ಮನೆಗೆ ತನ್ನಿ. ಈ ಗಿಡಗಳನ್ನು ಮನೆಯಲ್ಲಿ ಇಡುವುದರಿಂದ ನಿಮ್ಮ ಅದೃಷ್ಟ ಹೆಚ್ಚುತ್ತದೆ ಮತ್ತು ಮನೆಯೂ ಸಂಪತ್ತಿನಿಂದ ಕೂಡಿರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಮುಂಬರುವ ಹೊಸ …

Read More »