BigTv News
June 12, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ
ಧಾರವಾಡ ಕಳೆದ ಶುಕ್ರವಾರದಂದು ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ರೂಪಾ ಸವದತ್ತಿಯ ಮಹಿಳೆಯ ಹತ್ಯೆಗೆ ಸಂಬಂಧಿಸಿದಂತೆ ಓರ್ವ ಆರೋಒಇಯನ್ನು ಬಂಧನ ಮಾಡುವಲ್ಲಿ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹತ್ಯೆಯಾದ ರೂಪಾ ಮೈದುನ ರಾಕೇಶ ಬಂಧಿತ ಆರೋಪಿಯಾಗಿದ್ದಾನೆ. ಇನ್ನೂ ಹತ್ಯೆಯಾದ ರೂಪಾ ಸವದತ್ತಿ ಆರೋಪಿ ರಾಕೇಶಗೆ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ ಹಾಗೂ ನನಗೆ ಸಮಯ ನೀಡುತ್ತಿಲ್ಲ ಎಂಬ ಬೇಸರಗೊಂಡು ಮಹಿಳೆಯನ್ನು ಹತ್ಯೆ ಮಾಡಿರುವುದಾಗಿ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ …
Read More »
BigTv News
June 10, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ರಾಜಕೀಯ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದರು.ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಮ್ಮನ ಗುಡ್ಡ, ಬನಶಂಕರಿ ಮತ್ತು ದುರ್ಗಮ್ಮ ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಬರುತ್ತಾರೆ. ಇಂತಹ ಜನಸಾಮಾನ್ಯರ ಶ್ರದ್ಧಾ ಕೇಂದ್ರಗಳು ಪ್ರವಾಸಿ ತಾಣಗಳ ರೀತಿಯಲ್ಲೇ ಇವೆ. ಅವುಗಳ ಅಭಿವೃದ್ಧಿಗೆ ಗಮನ ಹರಿಸಲಾಗುವುದು ಎಂದರು.ಈ ಭಾಗದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣಗಳ ಬೆಳವಣಿಗೆಗೆ ನಿರೀಕ್ಷ …
Read More »
bigtvnews22
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ರಾಜಕೀಯ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ. ತೀವ್ರ ಪೈಪೋಟಿ ನಡುವೆ ಕಲಘಟಗಿ ಶಾಸಕ ಸಂತೋಷ್ ಲಾಡ್ ಸಚಿವರಾಗಿದ್ದಾರೆ. ಆದರೆ, ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಕುತೂಹಲ, ಚರ್ಚೆ ಜಿಲ್ಲೆಯಲ್ಲಿ ಜೋರಾಗಿತ್ತು. ಧಾರವಾಡ ಜಿಲ್ಲೆಯ ಉಸ್ತುವಾರಿ ಆಗಲು ಪ್ರಥಮ ಬಾರಿಗೆ ಸಚಿವೆಯಾಗಿರುವ ಬೆಳಗಾವಿ ಜಿಲ್ಲೆಯ ಲಕ್ಷ್ಮೀ ಹೆಬ್ಬಾಳ ಆಸಕ್ತಿ ವಹಿಸಿದ್ದರು. ಆದರೆ ಈಗ ಸಂತೋಷ ಲಾಡ್ ಅವರಿಗೆ ಧಾರವಾಡ ಫೇಡಾ ಬಿದ್ದಿರುವುದು …
Read More »
BigTv News
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ
ಧಾರವಾಡ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರೂಪಾ ಸವದತ್ತಿ ಎಂಬುವವರೇ ಹತ್ಯೆಗೀಡಾದ ಮಹಿಳೆ ನಿನ್ನೆ ಮನೆಯಿಂದ ಹೊರಗಡೆ ಹೋಗಿದ್ದ ರೂಪಾ ರಾತ್ರಿಯಾದರೂ ಮನೆಗೆ ಮರಳಿ ಬಂದಿರಲಿಲ್ಲ. ಅವರಿಗಾಗಿ ಮನೆಯವರು ಶೋಧ ಕೂಡ ನಡೆಸಿದ್ದರು. ಆದರೆ, ಇಂದು ಬೆಳಿಗ್ಗೆ ರೂಪಾ ಅವರ ಶವ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ.ಯಾರು ಕೊಲೆ ಮಾಡಿದವರು ಹಾಗೂ ಏತಕ್ಕಾಗಿ …
Read More »
BigTv News
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಶಿಕ್ಷಣ, ಸುದ್ದಿ
ಧಾರವಾಡ ನವಲಗುಂದ: ನವಲಗುಂದ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು ಈ ಕೂಡಲೇ ಶಾಲಾವಾರು ಖಾಲಿ ಇರುವಂತಹ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕೆಂದು ಸಮಾಜ ಸೇವಕ ಮಾಬುಸಾಬ್ ಯರಗುಪ್ಪಿ ಒತ್ತಾಯಿಸಿದ್ದಾರೆ. ಈ ಕುರಿತು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ನೀಡಿ ಮಾತನಾಡಿದ ಮಾಬುಸಾಬ್ ಯರಗುಪ್ಪಿ ಅವರು, ಇವತ್ತು ತಾಲೂಕಿನಾದ್ಯಾಂತ 124 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿದ್ದು …
Read More »
BigTv News
June 9, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಿಂಗನಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹಲವು ಬಾರಿ ಗ್ರಾಮಸ್ಥರಿಗೆ ಕಾಣಿಸಿಕೊಂಡಿದ್ದ ಚಿರತೆಯಿಂದ ಜನರು ಭಯಭೀತರಾಗಿದ್ದರು. ಅಲ್ಲದೆ ಚಿರತೆ ಕಂಡು ಜಮೀನಿಗೆ ತೆರಳುವುದಕ್ಕೂ ಆತಂಕಗೊಂಡಿದ್ದ ರೈತರು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು . ಇನ್ನೂ ಅರಣ್ಯ ಇಲಾಖೆಯಿಂದ ಚಿರತೆ ಸೆರೆ ಹಿಡಿಯಲು ಎರಡೂ ದಿನಗಳಿಂದ ಕಾರ್ಯಾಚರಣೆ …
Read More »
BigTv News
June 8, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕ್ರೆಡೈ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ 10ರಂದುಸರ್ಕಾರಕ್ಕೆ ಅತೀ ಹೆಚ್ಚು ಆದಾಯ ಕೊಡುತ್ತಿರುವ ಸಂಸ್ಥೆಗೆ ಪ್ರದೀಪ ರಾಯ್ಕರ ಸಾರಥ್ಯ ಹುಬ್ಬಳ್ಳಿ: ಸರ್ಕಾರಕ್ಕೆ ಆದಾಯ ತಂದು ಕೊಡುವ ಎರಡನೆಯ ಅತೀ ದೊಡ್ಡ ಉದ್ಯಮ ರಿಯಲ್ ಎಸ್ಟೇಟ್. ಈ ಉದ್ಯಮವನ್ನು ಸುಸಂಘಟಿತ ಹಾಗೂ ಕಾನೂನು ಬದ್ಧವಾಗಿ ನಡೆಸಿಕೊಂಡು ಬರುತ್ತಿರುವ ಕ್ರೆಡೈಗೆ ನೂತನ ರಾಜ್ಯಾಧ್ಯಕ್ಷರಾಗಿ ಹುಬ್ಬಳ್ಳಿಯ ಉದ್ಯಮಿ ಪ್ರದೀಪ ರಾಯ್ಕರ್ ಅವರು ಆಯ್ಕೆಯಾಗಿದ್ದು, ಇವರ ಅಧಿಕಾರ ಸ್ವೀಕಾರ ಸಮಾರಂಭ ಹುಬ್ಬಳ್ಳಿಯ ಡೆನ್ನಿಸನ್ಸ್ ಹೋಟೆಲ್‌ನಲ್ಲಿ ಜೂನ್ …
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಗೃಹ ಸಚಿವ ಜಿ ಪರಮೇಶ್ವರ್ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡುವವರಿಗೆ ನೇರ ಎಚ್ಚರಿಕೆಯನ್ನು ನೀಡಿದ್ದಾರೆ. ಲಾಟಿ ಏಟು ಬೇಕೋ, ಗುಂಡು ಬೇಕೋ, ಶಾಂತಿ ಬೇಕೋ ನೀವೇ ಆಯ್ಕೆ ಮಾಡಿ ಎಂದು ಹೇಳಿದ್ದಾರೆ. ಪ್ರಣಾಳಿಕೆಯಲ್ಲಿ ಶಾಂತಿ ಕದಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದೇವೆ. ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಲಾಟಿ ಏಟು ಬೇಕೋ, ಪಿಸ್ತೂಲ್ ಗುಂಡು ಬೇಕೋ, ಶಾಂತಿ ಬೇಕೋ?ಯಾವುದು ಬೇಕೋ ನೀವೇ ತೀರ್ಮಾನ ಮಾಡಿ ಎಂದ ಜಿ ಪರಮೇಶ್ವರ್ಶಾಂತಿ ಸುವ್ಯವಸ್ಥೆ …
Read More »
Shaikh BigTv
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಹುಬ್ಬಳ್ಳಿ ಧಾರವಾಡ ಅವಳಿನಗರವನ್ನೇ ಬೆಚ್ಚಿ ಬೀಳಿಸಿದ್ದ ಧಾರವಾಡ ಕಮಲಾಪುರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಮಹ್ಮದ್ ಕುಡಚಿ ಹತ್ಯೆಗೆ ಬಂದೂಕು ಸರಬರಾಜು ಮಾಡಿದ್ದ ಆರೋಪದ ಮೇಲೆ ಉಪನಗರ ಪೊಲೀಸ್ ಠಾಣೆಯ ಪೊಲೀಸರು ರೌಡಿಶೀಟರ್ ಮಂಜು ಸಾವಂತ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಮೇ 25 ರಂದು ಹಣದ ವಿಚಾರವಾಗಿ ಮಹ್ಮದ್ ಕುಡಚಿಯನ್ನು ಕೊಲೆ ಮಾಡಲಾಗಿತ್ತು. ಈ …
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ರಾಜ್ಯ ಸಚಿವ ಸಂಪುಟದಲ್ಲಿ ಕಾರ್ಮಿಕ ಸಚಿವರಾದ ಸಂತೋಷ ಲಾಡ ಅವರು ಇಂದು ಧಾರವಾಡದ ಮುರುಘಾಮಠಕ್ಕೆ ಬೇಟಿ ನೀಡಿದ್ದಾರೆ, ಈ ಹಿನ್ನಲೆಯಲ್ಲಿರಾಜ್ಯದ ಕಾಮಿ೯ಕ ಸಚಿವರಾದ ಸಂತೋಷ್ ಲಾಡ್ ಅವರು ಸಚಿವರಾದ ಮೇಲೆ ಪ್ರಥಮಬಾರಿಗೆ ಧಾರವಾಡಕ್ಕೆ ಇಂದು ಆಗಮಿಸಿದ್ದು ಅವರು ಶ್ರೀ ಮುರುಘಾಮಠಕ್ಕೆ ಭೇಟಿ ನೀಡಿದ ಸಂದಭ೯ದಲ್ಲಿ ಅವರನ್ನು ಶ್ರೀ ಡಾ ಮಲ್ಲಿಕಾಜು೯ನ ಮಹಾಸ್ವಾಮಿಗಳು ಗೌರವಿಸಿ ಸನ್ಮಾನಿಸಿದರು. ಅಭಿನಂದಿಸಿದ್ದಾರೆ ಕಲಘಟಗಿ ಮತಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುವ ಮೂಲಕ ರಾಜ್ಯ ಸಚಿವ ಸಂಪುಟದಲ್ಲಿ ಕಾರ್ಮಿಕ …
Read More »