admin
December 22, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಸುದ್ದಿ
ಬೆಳಗಾವಿ: ಕಲಾಪ ವರದಿ ಮಾಡಲು ಬಂದ ಮಾಧ್ಯಮಗಳಿಗೆ ಸುವರ್ಣಸೌಧ ಪ್ರವೇಶಕ್ಕೆ ನಿರ್ಬಂಧ ಹೇರಿದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎನ್ನುತ್ತಿರುವವರು ಸಂವಿಧಾನದ ಒಂದು ಕಾಲನ್ನೇ ಮುರಿಯುತ್ತಿದ್ದಾರೆಂದು ತರಾಟೆಗೆ ತೆಗೆದುಕೊಂಡಿದ್ದಾರೆ, ಟ್ವೀಟ್‍ನಲ್ಲಿ ಏನಿದೆ?ಸುವರ್ಣಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧ ಮಾಡಿರುವ ಕ್ರಮ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ. ಈಗಾಗಲೇ ಜನರ ಆಕ್ರೋಶಕ್ಕೆ ತುತ್ತಾಗಿರುವ ಬಿಜೆಪಿ ಸರ್ಕಾರ ನಾಡಿನ ಸಮಸ್ಯೆಗಳನ್ನು ‘ವಿಷಯಾಂತರ’ ಮಾಡಲು …
Read More »
admin
December 22, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ನವದೆಹಲಿ: ನೂತನ ಎಲೆಕ್ಷನ್ ಬಿಲ್ ಅನ್ನೇ ನೆಪ ಮಾಡಿಕೊಂಡು ವಿರೋಧ ಪಕ್ಷಗಳು ಉದ್ದೇಶಪೂರ್ವಕವಾಗಿ ಸಂಸತ್ ಅಧಿವೇಶನದಲ್ಲಿ ಗಲಾಟೆ ಮಾಡಿದವು, ಅವರಿಗೆ ಸ್ಪೀಕರ್ ಚರ್ಚೆಗೆ ಅವಕಾಶ ನೀಡಿದರೂ ಚರ್ಚೆ ಮಾಡದೇ ಓಡಿ ಹೋದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಅನಿರ್ದಿಷ್ಟವಾಧಿಗೆ ಮುಂದೂಡಿಕೆಯಾದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲೂ ವಿಪಕ್ಷಗಳು ಅತ್ಯಂತ ಕೆಟ್ಟದಾಗಿ ವರ್ತಿಸಿವೆ, ರೂಲ್ …
Read More »
admin
December 22, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು : ಡಿಸೆಂಬರ್ 31ರ ಕರ್ನಾಟಕ ಬಂದ್‌ಗೆ ಸಧ್ಯಕ್ಕೆ ನಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ್ಯ ಟಿ.ಎ ನಾರಾಯಣ ಗೌಡ ಹೇಳಿದ್ದಾರೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕರವೇ ಅಧ್ಯಕ್ಷರು, ’31ರ ಕರ್ನಾಟಕ ಬಂದ್‌ಗೆ ಸಧ್ಯಕ್ಕೆ ನಮ್ಮ ಬೆಂಬಲವಿಲ್ಲ . ಯಾಕಂದ್ರೆ, ಬಂದ್‌ಗೆ ಒಂದಷ್ಟು ಯೋಜನೆ ಮಾಡಿಕೊಳ್ಳಬೇಕು. ಈ ರೀತಿ ಏಕಾಏಕಿ ಪ್ರತಿಭಟನೆ ಮಾಡಿದ್ರೆ, ಜನರಿಗೆ ತೊಂದರೆ ಆಗುತ್ತೆ. ಹಾಗಾಗಿ ನಾಳಿನ ಕರವೇ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ’ …
Read More »
admin
December 22, 2021
Breaking News, ಅಪರಾಧ, ಕರ್ನಾಟಕ, ಬೆಂಗಳೂರು, ಸುದ್ದಿ, ಹಾಸನ
ಹಾಸನ: ಸಕಲೇಶಪುರ ತಾಲೂಕಿನ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡರಜಗಲಿ ಗ್ರಾಮದಲ್ಲಿ ಯುವಕರೇ ಅಕ್ರಮ ಮದ್ಯ ಮಾರಾಟ ತಡೆಗೆ ಮುಂದಾಗಿದ್ದು, ಗ್ರಾಮಕ್ಕೆ ತಲುಪಿದ್ದ ಮದ್ಯ ವಶಕ್ಕೆ ಪಡೆದು ನಡು ರಸ್ತೆಯಲ್ಲಿಯೇ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 15 ದಿನಗಳ ಹಿಂದೆ ಗ್ರಾಮ ಚನ್ನಯ್ಯ ಅವರ ಪತ್ನಿ ಮದ್ಯ ಸೇವನೆಯಿಂದ ಮೃತಪಟ್ಟಿದ್ದರು. ಇದರಿಂದ ಎಚ್ಚೆತ್ತ ಗ್ರಾಮದ ಯುವಕರು ಗ್ರಾಮದಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲು ನಿರ್ಧರಿಸಿದ್ದರು. ಅದರಂತೆ ಬ್ಯಾಡರಜಗಲಿ ಗ್ರಾಮದಲ್ಲಿ ಮದ್ಯ ಮಾರಾಟ …
Read More »
admin
December 22, 2021
Breaking News, ದೆಹಲಿ, ದೇಶ-ವಿದೇಶ, ಸುದ್ದಿ
ಲಂಡನ್ : ದುಬೈ ದೊರೆ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು ತಮ್ಮ ಆರನೇ ಪತ್ನಿ, ರಾಜಕುಮಾರಿ ಹಯಾ ಬಿಂಟ್ ಅಲ್ ಹುಸೇನ್‌ಗೆ ನೀಡಿದ್ದ ವಿಚ್ಛೇದನ ಇತ್ಯರ್ಥವಾಗಿದೆ. ಒಟ್ಟು 5,527 ಕೋಟಿ ರೂಪಾಯಿ ಜೀವನಾಂಶ ಪಾವತಿಸುವಂತೆ ಬ್ರಿಟನ್ ನ್ಯಾಯಾಲಯ ಆದೇಶ ನೀಡಿದೆ. ಇದರಲ್ಲಿ 2,521 ಕೋಟಿ ರೂ.ಗಳನ್ನು ಪೂರ್ಣವಾಗಿ ಒಂದು ಮೊತ್ತದಲ್ಲಿ ಹಯಾಗೆ ಪಾವತಿಸಬೇಕು ಎಂದು ಹೇಳಿದೆ. ರಶೀದ್ ಅವರ ಪತ್ನಿಯರ ಪೈಕಿ ಹಯಾ ಕಿರಿಯವರಾಗಿದ್ದು, ದಂಪತಿಗೆ ಅಲ್ ಜಲಿಲಿಯಾ(14), …
Read More »
admin
December 22, 2021
Breaking News, ಅಪರಾಧ, ಕರ್ನಾಟಕ, ಚಿತ್ರದುರ್ಗ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಚಿತ್ರದುರ್ಗ : ಹಣ ದ್ವಿಗುಣ ವಂಚನೆ ಆರೋಪದ ಮೇಲೆ ಇಲ್ಲಿನ ನಗರಸಭೆ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ನಗರಸಭೆಯ 4ನೇ ವಾರ್ಡ್ ಜೆಡಿಎಸ್ ಸದಸ್ಯ ಚಂದ್ರಶೇಖರ್ ಅಲಿಯಾಸ್ ಚಂದ್ರು ಬಂಧಿತ ಆರೋಪಿಯಾಗಿದ್ದಾರೆ. ಚಂದ್ರಶೇಖರ್ ಖೋಟಾ ನೋಟು ಕಿಂಗ್ ಪಿನ್ ಎಂದೇ ಕುಖ್ಯಾತನಾಗಿರುವ. ಸಾಕಷ್ಟು ಪ್ರಕರಣಗಳಲ್ಲಿ ಬೇಕಾಗಿದ್ದ. ಆದರೆ, ಯಾವುದೇ ದಾಖಲೆಗಳು ಸಿಗುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಇತ್ತೀಚೆಗೆ ದೊಡ್ಡಬಳ್ಳಾಪುರ ಮೂಲದ ನಾಗರಾಜ್ ಎಂಬುವರಿಗೆ ವಂಚಿಸಿರುವ ಬಗ್ಗೆ ಚಿತ್ರದುರ್ಗದಲ್ಲಿ ಚಂದ್ರಶೇಖರ್ ವಿರುದ್ದ ಪ್ರಕರಣ …
Read More »
admin
December 21, 2021
Breaking News, ಕರ್ನಾಟಕ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡುವ ಮೂಲಕ ಸ್ವಾಗತಾರ್ಹ ಮತ್ತು ಪ್ರಗತಿಪರ ಹೆಜ್ಜೆ ಇಟ್ಟಿದ್ದು, ಕೆಎಸ್‌ಆರ್‌ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ ವಿಶೇಷ ಮೀಸಲು ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಳೆದ ವರ್ಷ ನಗರದ ಎನ್‌ಜಿಒ ಮತ್ತು ಹಕ್ಕುಗಳ ಸಂಘ – ಸಂಗಮ ಹಾಗೂ ಸಾಮಾಜಿಕ ಕಾರ್ಯಕರ್ತೆ ನಿಶಾ ಗೂಳೂರ್ ಪರ ಹಿರಿಯ ವಕೀಲ ಬಿಟಿ ವೆಂಕಟೇಶ್ …
Read More »
admin
December 21, 2021
Breaking News, World, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು : 2021ಕ್ಕೆ ಬೈ-ಬೈ ಹೇಳಿ 2022ಕ್ಕೆ ಹಾಯ್ ಹೇಳುತ್ತಾ ಅದ್ಧೂರಿಯಾಗಿ ಹೊಸ ವರ್ಷವನ್ನು ವೆಲ್‌ಕಮ್ ಮಾಡ್ಕೊಳ್ಳೋಕೆ ಸಾಕಷ್ಟು ಮಂದಿ ತುದಿಗಾಲಲ್ಲಿರುವ ಹೊತ್ತಿನಲ್ಲೇ, ಕೊರೊನಾ ಮತ್ತು ಒಮಿಕ್ರಾನ್ ವೈರಸ್ ತಡೆಗಟ್ಟುವ ಕಾರಣದಿಂದ ಸರ್ಕಾರ ಅದ್ಧೂರಿ ವರ್ಷಾಚರಣೆಗೆ ಬ್ರೇಕ್ ಹಾಕಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಜೊತೆಗೆ ಕ್ರೀಸ್ಮಸ್ ಹಬ್ಬಕ್ಕೆ ಯಾವುದೇ ನಿರ್ಭಂದ ಹೇರಿಲ್ಲ. ರೆಸ್ಟೋರೆಂಟ್, ಕ್ಲಬ್‌ಗಳಿಗೆ ಶೇಕಡಾ 50ರಷ್ಟು ಜನರಿಗೆ ಪ್ರವೇಶಸೀಮಿತ ಪ್ರಮಾಣದಲ್ಲಿ ಮ್ಯೂಸಿಕ್, ಡಿ.ಜೆಗೆ ಅವಕಾಶಎಂಜಿ ರಸ್ತೆ, ಬ್ರಿಗೇಡ್ ರಸ್ತೆ …
Read More »
admin
December 21, 2021
Breaking News, ಕರ್ನಾಟಕ, ಧಾರವಾಡ, ರಾಜಕೀಯ ಸುದ್ದಿ, ಸುದ್ದಿ
ಧಾರವಾಡ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಿತರಣೆ ಮಾಡುತ್ತಿರುವ ಮೊಟ್ಟೆ ನೀಡುವ ಯೋಜನೆಯನ್ನು ಮುಂದುವರೆಸಬೇಕು ಎಂದು ಅಗ್ರಹಿಸಿ ಹಾಗೂ ಮೊಟ್ಟೆ ವಿರೋಧ ಮಾಡುತ್ತಿರುವುದನ್ನು ಖಂಡಿಸಿ, ಧಾರವಾಡದಲ್ಲಿ ವಿವಿಧ ದಲಿತ ಸಂಘಟನೆಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸಮತಾ ಸೇನೆ ಹಾಗೂ ವಿವಿಧ ದಲಿತ ಸಂಘಟನೆಯ ನೇತೃತ್ವದಲ್ಲಿ, ನಗರದ ನಗರದ ಜನರು ಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ, ಕಾರ್ಯಕರ್ತರು ಮೊಟ್ಟೆ ಹಿಡಿದು ವಿರೋಧಿಗಳ ವಿರುದ್ಧ ಧಿಕ್ಕಾರ …
Read More »
admin
December 18, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಸುದ್ದಿ
– ಹಾಡುವಾಗ ಎದ್ದು ನಿಲ್ಲುವುದು ಕಡ್ಡಾಯ ಚೆನ್ನೈ: ತಮಿಳು ತಾಯಿಗೆ ವಂದಿಸುವ (ತಮಿಳ್ ತಾಯ್ ವಾಳ್ತ್) ತಮಿಳು ತಾಯಿಯೇ ನಿನಗೆ ವಂದನೆ ಗೀತೆಯನ್ನು ತಮಿಳುನಾಡು ತನ್ನ ನಾಡಗೀತೆಯಾಗಿ ಫೋಷಿಸಿದೆ ಹಾಗೂ ಈ ಗೀತೆ ಹಾಡುವಾಗ ಎಲ್ಲರೂ ಎದ್ದು ಗೌರವ ಕೊಡಬೇಕು ಎಂಬ ಸುತ್ತೋಲೆ ಹೊರಡಿಸಿದೆ. ಇತ್ತೀಚೆಗಷ್ಟೇ ಮದ್ರಾಸ್ ಹೈಕೋರ್ಟ್ ತಮಿಳ್ ತಾಯ್ ವಾಳ್ತ್ ಕೇವಲ ಪ್ರಾರ್ಥನಾ ಗೀತೆಯೇ ಹೊರತು ರಾಷ್ಟ್ರ ಗೀತೆಯಲ್ಲ, ಹೀಗಾಗಿ ಈ ಹಾಡಿನ ವೇಳೆ ಯಾರೂ ಎದ್ದು ನಿಲ್ಲುವ …
Read More »